​’ಅಮಿತ್ ಶಾ ಒಂದೋ ಅಪರಾಧಿ, ಇಲ್ಲವೇ ಅಸಮರ್ಥ’: ಪೊಲೀಸ್ ದೌರ್ಜನ್ಯದ ಬಗ್ಗೆ ಹೇಳಿಕೆಗೆ ರಾಹುಲ್ ಪಟ್ಟು

Date:

‘ನೀಟ್’ (NEET) ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯವನ್ನು ಖಂಡಿಸಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಕೇಂದ್ರ ಸರ್ಕಾರದ ವಿರುದ್ಧ ತಮ್ಮ ಟೀಕಾಸ್ತ್ರವನ್ನು ತೀವ್ರಗೊಳಿಸಿದ್ದು, ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರನ್ನು ನೇರವಾಗಿ ಗುರಿಯಾಗಿಸಿದ್ದಾರೆ.

- Advertisement -

ವಿದ್ಯಾರ್ಥಿಗಳ ನಿರಂತರ ಹೋರಾಟದ ಫಲವಾಗಿ ಅವರ ಪ್ರಮುಖ ಬೇಡಿಕೆಗಳಲ್ಲಿ ಒಂದಾಗಿದ್ದ ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಆದಾಗ್ಯೂ, ಪ್ರತಿಭಟನಾಕಾರರ ಮೇಲಿನ ಪೊಲೀಸ್ ದೌರ್ಜನ್ಯವನ್ನು ಖಂಡಿಸಿ ದಿನಪತ್ರಿಕೆಯೊಂದರಲ್ಲಿ ಪ್ರಕಟವಾದ ತಮ್ಮ ಲೇಖನವನ್ನು ಹಂಚಿಕೊಂಡಿರುವ ರಾಹುಲ್ ಗಾಂಧಿ, ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಮುಂದುವರಿಸಿದ್ದಾರೆ. ಬಲಪ್ರಯೋಗದ ವರದಿಗಳನ್ನು ಉಲ್ಲೇಖಿಸಿರುವ ಅವರು, ಭವಿಷ್ಯದ ಬಗ್ಗೆ ಪ್ರಶ್ನಿಸುತ್ತಿರುವ ಯುವಜನತೆಗೆ ಮೋದಿ ಸರ್ಕಾರವು ಉತ್ತರಿಸುವ ಪರಿ ಇದೇನಾ ಎಂದು ಪ್ರಶ್ನಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘ಹಾಸ್ಟೆಲ್‌’ ಇಲ್ಲದ ಶಿಕ್ಷಣದ ಸ್ವರೂಪ ಹೇಗಿರಲಿದೆ?

ಸಾಮಾನ್ಯವಾಗಿ ʼಶಿಕ್ಷಣʼ ಎಂದರೆ ʼತರಗತಿ, ಪಠ್ಯಪುಸ್ತಕ ಮತ್ತು ಪರೀಕ್ಷೆಗಳʼ ಸುತ್ತ ಹೆಣೆದುಕೊಂಡಿರುವ ಕಲ್ಪನೆ. ಆದರೆ ಒಬ್ಬ ವಿದ್ಯಾರ್ಥಿ ದಿನದ ಬಹುಪಾಲು ಕಳೆಯುವ ಜಾಗ ʼಹಾಸ್ಟೆಲ್‌ʼ. ಹೆಚ್ಚಾಗಿ ಚರ್ಚೆಗೆ ಬಾರದ ಈ ʼಹಾಸ್ಟೆಲ್‌ʼ ಎಂಬ...

ಬರದ ಬೇಗೆಯಲ್ಲಿ ರಾಜ್ಯ ಬೆಂದರೂ ಅನುದಾನಕ್ಕ ದನಿ ಎತ್ತದ...

ಸದಾ ಕಾಲ 'ಮೋದಿ ಜಪ' ಮಾಡುತ್ತಾ, ಕೇವಲ ರಾಜಕೀಯಕ್ಕಾಗಿ ಮತ್ತು ಪಕ್ಷದ ಅಜೆಂಡಾಗಳಿಗಾಗಿ ರಾಜ್ಯಾದ್ಯಂತ ಸುತ್ತುವ ಈ ಸಂಸದರಿಗೆ, ನಾಡಿನ ಜನತೆ ಬರಗಾಲದ ತೀವ್ರ ಸಂಕಷ್ಟದಲ್ಲಿ ಬೆಂದು ಹೋಗುತ್ತಿರುವಾಗ ಅದೇ ಪ್ರಧಾನಿ ನರೇಂದ್ರ...

SIR ಅಕ್ರಮ | ಗ್ಯಾನೇಶ್‌ ಕುಮಾರ್ ‘ಅಪರಾಧಿ’ಯಾದ್ರೆ, ಮೋದಿ-ಅಮಿತ್...

ಭಾರತೀಯ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ಅತ್ಯಂತ ಕರಾಳ ಅಧ್ಯಾಯವೊಂದು ಈಗ ಜಗಜ್ಜಾಹೀರಾಗಿದೆ. ಪ್ರತಿಯೊಬ್ಬ ನಾಗರಿಕನ ಅತಿ ದೊಡ್ಡ ರಾಜಕೀಯ ಶಕ್ತಿಯಾಗಿರುವ 'ಮತದಾನದ ಹಕ್ಕು' ಮತ್ತು ಅದನ್ನು ಕಾಯಬೇಕಾದ ಸಾಂವಿಧಾನಿಕ ಸಂಸ್ಥೆಯನ್ನೇ ಆಡಳಿತಾರೂಢ ಮೋದಿ-ಅಮಿತ್ ಶಾ...

ಅವರು ‘ಎಕ್ಸ್’ (X) ಜಾಲತಾಣದಲ್ಲಿ ಈ ಬಗ್ಗೆ ಪೋಸ್ಟ್ ಮಾಡಿದ್ದು, “ತಮ್ಮ ಭವಿಷ್ಯದ ಬಗ್ಗೆ ಶಾಂತಿಯುತವಾಗಿ ಪ್ರಶ್ನಿಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್‌, ಮೊಳೆ ಜಡಿದ ಲಾಠಿಗಳು ಹಾಗೂ ಅಶ್ರುವಾಯು ಪ್ರಯೋಗಿಸಲಾಗಿದೆ. ಯುವತಿಯರ ಮೇಲೆ ಪೊಲೀಸರು ಹಲ್ಲೆ ನಡೆಸಿದ್ದು, ಹಲವರ ಗುಪ್ತಾಂಗಗಳಿಗೆ ಗಾಯಗಳಾಗಿವೆ. ಅಪ್ರಾಪ್ತರ ಮೂಳೆಗಳು ಮುರಿದಿವೆ. ಒಂದು ಪ್ರಶ್ನೆಗೆ ಮೋದಿ ಸರ್ಕಾರ ಉತ್ತರಿಸುವ ರೀತಿ ಇದು,” ಎಂದು ಕಿಡಿಕಾರಿದ್ದಾರೆ.

ರಾಯ್‌ಬರೇಲಿ ಸಂಸದರೂ ಆಗಿರುವ ರಾಹುಲ್ ಗಾಂಧಿ, ಗೃಹ ಸಚಿವ ಅಮಿತ್ ಶಾ ಅವರ ಸಂಸತ್ತಿನ ಗೈರುಹಾಜರಿಯನ್ನು ಪ್ರಶ್ನಿಸಿದ್ದು, ಈ ಘಟನೆಯ ಬಗ್ಗೆ ಮೌನ ವಹಿಸಿರುವುದಾಗಿ ಆರೋಪಿಸಿದ್ದಾರೆ. “ಇನ್ನು ಗೃಹ ಸಚಿವರ ವಿಚಾರಕ್ಕೆ ಬಂದರೆ, ಸುಮಾರು 20 ದಿನಗಳೇ ಕಳೆದರೂ ಅಮಿತ್ ಶಾ ಅವರು ಈ ಬಗ್ಗೆ ಉತ್ತರಿಸಲು ಸಂಸತ್ತಿಗೆ ಬಂದಿಲ್ಲ. ಚರ್ಚೆಗೆ ಕೋರಿ ವಿರೋಧ ಪಕ್ಷಗಳು ಮಂಡಿಸಿದ ಪ್ರತಿಯೊಂದು ನಿರ್ಣಯವನ್ನೂ ತಿರಸ್ಕರಿಸಲಾಗಿದೆ. ಅವರ ಮೌನವು ಕೇವಲ ನಿರ್ಲಕ್ಷ್ಯವಲ್ಲ, ಅದು ಹಿಂಸಾಚಾರಕ್ಕೆ ನೀಡಿದ ಸಮ್ಮತಿಯಾಗಿದೆ. ಅವರು ಈ ಕೃತ್ಯದ ಅಪರಾಧಿ ಅಥವಾ ಸಂಪೂರ್ಣ ಅಸಮರ್ಥರು,” ಎಂದು ವಾಗ್ದಾಳಿ ನಡೆಸಿದ್ದಾರೆ.

“ಈ ಘಟನೆಯ ಕುರಿತು ಸುಪ್ರೀಂ ಕೋರ್ಟ್ ಉಸ್ತುವಾರಿಯಲ್ಲಿ ತನಿಖೆಯಾಗಬೇಕು ಎಂದು ನಾವು ಒತ್ತಾಯಿಸುತ್ತೇವೆ. ಗೃಹ ಸಚಿವರನ್ನು ಹೊಣೆಗಾರರನ್ನಾಗಿ ಮಾಡುವವರೆಗೂ ನಾವು ನಮ್ಮ ಹೋರಾಟವನ್ನು ನಿಲ್ಲಿಸುವುದಿಲ್ಲ,” ಎಂದು ಅವರು ಎಚ್ಚರಿಸಿದ್ದಾರೆ.

ಪ್ರತಿಭಟನೆ ವೇಳೆ ಗಾಯಗೊಂಡ ವಿದ್ಯಾರ್ಥಿಗಳನ್ನು ತಾವು ಭೇಟಿಯಾಗಿದ್ದನ್ನು ತಮ್ಮ ಲೇಖನದಲ್ಲಿ ಸ್ಮರಿಸಿರುವ ರಾಹುಲ್, ಘಟನೆಯನ್ನು ಕೇಂದ್ರ ಸರ್ಕಾರ ನಿಭಾಯಿಸಿದ ರೀತಿಯನ್ನು ಪ್ರಶ್ನಿಸಿದ್ದಾರೆ. ಸರ್ಕಾರದಲ್ಲಿ ಅಧಿಕಾರವು ಸಂಪೂರ್ಣ “ಕೇಂದ್ರೀಕೃತವಾಗಿದೆ” ಎಂದು ವಾದಿಸಿರುವ ಅವರು, “ನರೇಂದ್ರ ಮೋದಿ ಸರ್ಕಾರವು ತನ್ನ ಕೇಂದ್ರೀಕೃತ ನಿಯಂತ್ರಣದ ಬಗ್ಗೆ ಹೆಮ್ಮೆಪಡುತ್ತದೆ. ಮಂಗಳಯಾನವೇ ಆಗಿರಲಿ ಅಥವಾ ಒಲಿಂಪಿಕ್ ಪದಕವೇ ಆಗಿರಲಿ, ಅದರ ಸಂಪೂರ್ಣ ಶ್ರೇಯಸ್ಸು ಪ್ರಧಾನಿ ಹಾಗೂ ಗೃಹ ಸಚಿವರಿಗೆ ಸಲ್ಲಬೇಕು ಎಂದು ಪದೇಪದೇ ಬಿಂಬಿಸಿಕೊಳ್ಳುತ್ತದೆ. ಅವರ ಒಪ್ಪಿಗೆಯಿಲ್ಲದೆ ಏನೂ ಚಲಿಸುವುದಿಲ್ಲ,” ಎಂದಿದ್ದಾರೆ.

“ಸಂಸತ್ತಿನಿಂದ ಕೇವಲ 500 ಮೀಟರ್ ದೂರದಲ್ಲಿ ದೆಹಲಿಯ ಹೃದಯಭಾಗದಲ್ಲೇ ಈ ಹಿಂಸಾಚಾರ ನಡೆದಿದೆ. ಜುಲೈ 20ರಂದು ಜಂತರ್ ಮಂತರ್‌ನಲ್ಲಿ ನಿಯೋಜನೆಗೊಂಡಿದ್ದ ಎರಡೂ ಭದ್ರತಾ ಪಡೆಗಳಾದ ದೆಹಲಿ ಪೊಲೀಸ್ ಮತ್ತು ಕ್ಷಿಪ್ರ ಕಾರ್ಯಪಡೆ (RAF) ನೇರವಾಗಿ ಗೃಹ ಸಚಿವರಿಗೆ ವರದಿ ಮಾಡುತ್ತವೆ,” ಎಂದು ಅವರು ಉಲ್ಲೇಖಿಸಿದ್ದಾರೆ.

ಈ ಘಟನೆಗೆ ಸಂಬಂಧಿಸಿದಂತೆ ಸಂಸತ್ತಿನಲ್ಲಿ ಉತ್ತರಿಸಲು ಅಮಿತ್ ಶಾ ವಿಫಲವಾಗಿರುವುದು ಗೃಹ ಸಚಿವರಾಗಿ ಅವರ ಹೊಣೆಗಾರಿಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ ಎಂದು ರಾಹುಲ್ ಹೇಳಿದ್ದಾರೆ. “ಇದರಲ್ಲಿ ಕೇವಲ ಎರಡೇ ಸಾಧ್ಯತೆಗಳಿವೆ. ಮೊದಲನೆಯದು, ವಿದ್ಯಾರ್ಥಿಗಳ ಮೇಲಿನ ದಾಳಿಗೆ ಸ್ವತಃ ಅವರೇ ಆದೇಶಿಸಿರಬೇಕು- ಹಾಗಿದ್ದಲ್ಲಿ ಅವರು ಅಪರಾಧಿ. ಎರಡನೆಯದು, ಅಲ್ಲಿ ಏನು ನಡೆಯುತ್ತಿದೆ ಎಂಬ ಬಗ್ಗೆ ಅವರಿಗೆ ಯಾವುದೇ ಮಾಹಿತಿಯೇ ಇರಲಿಲ್ಲ- ಹಾಗಿದ್ದಲ್ಲಿ ಅವರು ಸಂಪೂರ್ಣ ಅಸಮರ್ಥರು. ಏನೇ ಆದರೂ, ಅಂದು ನಡೆದ ಘಟನೆಗೆ ಅವರೇ ಹೊಣೆಗಾರರು ಮತ್ತು ಅವರು ತಕ್ಷಣವೇ ರಾಜೀನಾಮೆ ನೀಡಬೇಕು,” ಎಂದು ಆಗ್ರಹಿಸಿದ್ದಾರೆ.

“ಯಾವುದೇ ತನಿಖೆಗೆ ಆದೇಶಿಸದಿರುವುದು ಮತ್ತು ಹೇಳಿಕೆಯನ್ನೂ ನೀಡದಿರುವುದು ಅವರು ವಿದ್ಯಾರ್ಥಿಗಳ ಮೇಲಿನ ದಾಳಿಯನ್ನು ಒಪ್ಪಿಕೊಂಡಿದ್ದಾರೆ ಎಂಬುದನ್ನು ಸಾಬೀತುಪಡಿಸುತ್ತದೆ,” ಎಂದು ಲೇಖನದಲ್ಲಿ ಉಲ್ಲೇಖಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ ಸಹಕಾರ ಸಕ್ಕರೆ ಕಾರ್ಖಾನೆ ಹರಾಜು ರದ್ದು, ಲೀಸ್‌ಗೆ ನೀಡಲು ಸಿಎಂ ಭರವಸೆ : ಶ್ರೀಮಂತ ಬಿರಾದರ್

ಬೀದರ್ ಜಿಲ್ಲೆಯ ರೈತರು‌, ಕಾರ್ಮಿಕರ ಜೀವನಾಡಿಯಾಗಿರುವ ಬೀದರ್‌ ಸಹಕಾರ ಸಕ್ಕರೆ ಕಾರ್ಖಾನೆ...

‘ದೇವರೇ ಈ ದೇಶವನ್ನು ಕಾಪಾಡಬೇಕು’: ರೈಲು ಪ್ರಯಾಣದ ಗದ್ದಲಕ್ಕೆ ಬೇಸತ್ತ ತೇಜಸ್ವಿ ಸೂರ್ಯ ಪತ್ನಿ

ರೈಲು ಪ್ರಯಾಣದ ವೇಳೆ ಸಹಪ್ರಯಾಣಿಕರ ಗದ್ದಲದಿಂದ ತೀವ್ರ ಕಿರಿಕಿರಿ ಅನುಭವಿಸಿರುವುದಾಗಿ ಬಿಜೆಪಿ...

ಬೀದರ್ | ಬರ ಪರಿಸ್ಥಿತಿ : ವಿಶೇಷ ಪ್ಯಾಕೇಜ್ ಘೋಷಿಸಲು ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಮಳೆಯ ಕೊರತೆಯಿಂದ ಕೃಷಿ ಚಟುವಟಿಕೆಗಳಿಗೆ ತೀವ್ರ ಹಿನ್ನಡೆಯಾಗಿದ್ದು, ಬೆಳೆ...