ಮೋದಿ, ಶಾ, ಯೋಗಿಗೆ ಕೊಲೆ ಬೆದರಿಕೆ ಆರೋಪ; ಜಾರ್ಖಂಡ್ ವ್ಯಕ್ತಿ ವಿರುದ್ಧ FIR

Date:

ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ‘ಕೊಲೆ ಬೆದರಿಕೆ’ ಹಾಕಿದ ಆರೋಪದ ಮೇಲೆ ವ್ಯಕ್ತಿಯೊಬ್ಬನ ವಿರುದ್ಧ ಜಾರ್ಖಂಡ್ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

- Advertisement -

ಜಾರ್ಖಂಡ್ ಬಿಜೆಪಿಯ ನಗ್ರಿ ಮಂಡಲ ಅಧ್ಯಕ್ಷ ರಿತೇಶ್ ರಾಜ್ ಮಹತೋ ನೀಡಿದ ದೂರಿನ ಆಧಾರದ ಮೇಲೆ ರಾಂಚಿ ಜಿಲ್ಲೆಯ ನಗ್ರಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಸಾಕ್ಷ್ಯ ಚಿತ್ರಗಳಿರದ ದೇಶವು ಚರಿತ್ರೆ ಇರದ ರಾಷ್ಟ್ರದಂತೆ ಎಂದಿದ್ದ...

ಚಿಲಿ ದೇಶದ ಜನರ ಸಾಮಾಜಿಕ ಬದುಕು ಹಾಗೂ ರಾಜಕೀಯ ಬೆಳವಣಿಗೆಗಳು ಹೆಣೆದುಕೊಂಡ ಘನವಾದ ಚರಿತ್ರೆಯ ಸಂಪುಟವಾಗಿ ಕಟ್ಟಿದ ಧೀಮಂತ ಸಿನೆಮಾ ಕಲಾವಿದ ಪ್ಯಾಟ್ರಿಷಿಯೊ ಗುಜ್ಮಾನ್, ಇತ್ತೀಚಿಗೆ ಇಲ್ಲವಾದರು. ಅವರ ಸೃಜನಶೀಲತೆ, ತುಡಿತ ಮತ್ತು...

ಸೂಕ್ತ ಸಮಯಕ್ಕಾಗಿ ಕಾಯುತ್ತಲೇ ಇರುವ ಕುಮಾರಸ್ವಾಮಿ!

“ರಾಜ್ಯದಲ್ಲಿ ನಡೆಯುತ್ತಿರುವ ಅಕ್ರಮ, ಅವ್ಯವಹಾರದ ಬಗ್ಗೆ ಜನರ ಮುಂದೆ ಇಡುವುದರಲ್ಲಿ ಯಾವುದೇ ರಾಜಿಯಿಲ್ಲ. ರಾಜ್ಯದಲ್ಲಿನ ಘಟನೆ ಬಗ್ಗೆ ಬಾಯಿ ಮುಚ್ಚಿಕೊಂಡಿರಲು ಆಗಲ್ಲ" ಎಂದಿದ್ದಾರೆ ಕುಮಾರಸ್ವಾಮಿ. ಈ ಬಾರಿಯಾದರೂ ಅಲ್ಲೋಲ ಕಲ್ಲೋಲ ಸೃಷ್ಟಿಸುತ್ತಾರೆಯೇ? ‘ಸ್ಪೋಟಕ ಹೇಳಿಕೆ’,...

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ ಹೊರತು, ಮತ್ತೊಬ್ಬರ ಧರ್ಮವನ್ನು ಕೆಣಕಿ, ರಾಜಕೀಯ ಲಾಭಕ್ಕಾಗಿ ಬೀದಿಯಲ್ಲಿ ಬೆಂಕಿ ಹಚ್ಚುವ ಪ್ರವೃತ್ತಿ ಧರ್ಮವೂ ಅಲ್ಲ, ಭಾರತೀಯ ಸಂಸ್ಕೃತಿಯೂ ಅಲ್ಲ....

ದೂರಿನ ಪ್ರಕಾರ, ಅದೇ ಪೊಲೀಸ್ ಠಾಣೆ ವ್ಯಾಪ್ತಿಯ ಶಹೇರ್ ಗ್ರಾಮದ ನಿವಾಸಿ ಆಲಿಮ್ ಅನ್ಸಾರಿ ಎಂಬಾತ ಸೋಶಿಯಲ್ ಮೀಡಿಯಾದಲ್ಲಿ ಆಕ್ಷೇಪಾರ್ಹ ವೀಡಿಯೊ ಪೋಸ್ಟ್ ಮಾಡಿದ್ದು, ಅದರಲ್ಲಿ ಮೋದಿ, ಶಾ ಮತ್ತು ಆದಿತ್ಯನಾಥ್ ವಿರುದ್ಧ ಅವಾಚ್ಯ ಶಬ್ದಗಳನ್ನು ಬಳಸಿ ಕೊಲೆ ಬೆದರಿಕೆ ಹಾಕಿದ್ದಾನೆ ಎಂದು ಅರೋಪಿಸಲಾಗಿದೆ.

ಪ್ರಕರಣದ ಬಗ್ಗೆ ಮಾಹಿತಿ ನೀಡಿರುವ‌ ನಗ್ರಿ ಪೊಲೀಸ್ ಠಾಣೆಯ ಉಸ್ತುವಾರಿ ಅಧಿಕಾರಿ ಅಭಿಷೇಕ್ ರಾಯ್, “ನಾವು ಆರೋಪಿಯ ವಿರುದ್ಧ ಎಫ್‌ಐಆರ್ ದಾಖಲಿಸಿಕೊಂಡಿದ್ದು, ಪ್ರಕರಣದ ಕುರಿತು ಕೂಲಂಕಷ ತನಿಖೆ ಆರಂಭಿಸಿದ್ದೇವೆ. ಆರೋಪಿಯು ಆಕ್ಷೇಪಾರ್ಹ ವಿಡಿಯೋ ಪೋಸ್ಟ್ ಮಾಡುವ ಮೂಲಕ ಸಾಮಾಜಿಕ ಸಾಮರಸ್ಯವನ್ನು ಕದಡಲು ಯತ್ನಿಸಿದ್ದಾನೆ‌. ಸಾಂವಿಧಾನಿಕ ಹುದ್ದೆಗಳನ್ನು ಬಹಿರಂಗವಾಗಿ ಅಪಮಾನಿಸಿದ್ದಾನೆಂದು ದೂರುದಾರರು ಆರೋಪಿಸಿದ್ದಾರೆ,” ಎಂದು ತಿಳಿಸಿದ್ದಾರೆ.

ಆರೋಪಿಯ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ (BNS) ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪ್ರಕರಣದ ತನಿಖೆ ಪೂರ್ಣಗೊಂಡ ನಂತರ ಆರೋಪಿಯನ್ನು ಬಂಧಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಇಸ್ಲಾಂಗೆ ಯುವಕ ಮತಾಂತರ; ‘ಬ್ರೇನ್‌ವಾಶ್’ ಆರೋಪ: ಇಷ್ಟದ ಧರ್ಮ ಅನುಸರಿಸುವ ಸ್ವಾತಂತ್ರ್ಯವಿದೆ ಎಂದ ಹೈಕೋರ್ಟ್

ವಯಸ್ಕನಾದ ವ್ಯಕ್ತಿಗೆ ತನ್ನಿಷ್ಟದ ಧರ್ಮವನ್ನು ಅನುಸರಿಸುವ ಹಾಗೂ ಜೀವನಸಂಗಾತಿಯನ್ನು ಆಯ್ಕೆ ಮಾಡಿಕೊಳ್ಳುವ...

ಧಾರವಾಡ | ಲೋಕಾಯುಕ್ತ ದಾಳಿ; 50 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದಾಗಲೇ ಸಿಕ್ಕಿಬಿದ್ದ ತಹಶೀಲ್ದಾರ್ ಸಚ್ಚಿದಾನಂದ

ಭೂ ದಾಖಲೆಗಳ ತಿದ್ದುಪಡಿ ಮತ್ತು 'ಖರಾಬು' ಜಮೀನಿನ ಮಾರ್ಪಾಟು ಮಾಡಿಕೊಡಲು ಬರೋಬ್ಬರಿ...

ಅಂತಾರಾಷ್ಟ್ರೀಯ ಜಲಸೀಮೆಯಲ್ಲಿ ಭಾರತ- ಪಾಕ್ ಯುದ್ಧನೌಕೆಗಳು ಢಿಕ್ಕಿ ಹೊಡೆದ ಕತೆಯೇನು?

ಅರಬ್ಬಿ ಸಮುದ್ರದ ಉತ್ತರ ಭಾಗದ ಅಂತಾರಾಷ್ಟ್ರೀಯ ಜಲಸೀಮೆಯಲ್ಲಿ ಭಾರತ ಮತ್ತು ಪಾಕಿಸ್ತಾನದ...

ವಿಜಯಪುರ | ವಿದ್ಯಾರ್ಥಿನಿಯರು ಆರೋಗ್ಯ ಕಾಳಜಿ ಮಾಡಬೇಕು: ಪ್ರೊ. ವಿಜಯಾ ಬಿ ಕೊರಿಶೆಟ್ಟಿ

ವಿದ್ಯಾರ್ಥಿನಿಯರು ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು. ಕಣ್ಣಿನ ಆರೋಗ್ಯವನ್ನು...