‘ಅಮಿತ್ ಶಾ ಕರೆಗೆ ನೈತಿಕತೆ ಬಲಿ?’: ಟಿಎಂಸಿ ಬಂಡಾಯ ಸಂಸದರ ವಿರುದ್ಧ ಸಾಗರಿಕಾ ಘೋಷ್ ಕಿಡಿ

Date:

ಚುನಾವಣೆಯಲ್ಲಿ ಒಂದು ಪಕ್ಷದ ಚಿಹ್ನೆಯಡಿ ಸ್ಪರ್ಧಿಸಿ ಗೆದ್ದು, ಸ್ವಾರ್ಥಕ್ಕಾಗಿ ಪಕ್ಷಾಂತರ ಮಾಡುವ ರಾಜಕಾರಣಿಗಳ ನಡವಳಿಕೆ ‘ಅತ್ಯಂತ ನಾಚಿಕೆಗೇಡಿನ ಸಂಗತಿ’ ಎಂದು ತೃಣಮೂಲ ಕಾಂಗ್ರೆಸ್ (TMC) ರಾಜ್ಯಸಭಾ ಸಂಸದೆ ಸಾಗರಿಕಾ ಘೋಷ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಸೋಲಿನ ಬೆನ್ನಲ್ಲೇ ಪಕ್ಷದ ಕೆಲವು ಸಂಸದರು ಬಂಡಾಯವೆದ್ದು ಬಿಜೆಪಿ ಜೊತೆ ಕೈಜೋಡಿಸಲು ಮುಂದಾಗಿದ್ದಾರೆ ಎಂಬ ವಿಚಾರವಾಗಿ ಅವರು ಆ ಸಂಸದರ ವಿರುದ್ಧ ಕಿಡಿಕಾರಿದ್ದಾರೆ.

- Advertisement -

 ‘ಎಕ್ಸ್’ನಲ್ಲಿ ಸುದೀರ್ಘ ಪೋಸ್ಟ್ ಹಂಚಿಕೊಂಡಿರುವ ಸಾಗರಿಕಾ ಘೋಷ್, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ನಾಯಕತ್ವದ ಮೇಲೆ ತಮಗಿರುವ ಅಚಲ ನಿಷ್ಠೆಯನ್ನು ಪುನರುಚ್ಚರಿಸಿದ್ದಾರೆ. ತಾವು ಪತ್ರಿಕೋದ್ಯಮವನ್ನು ಬಿಟ್ಟು ಸಾರ್ವಜನಿಕ ಜೀವನಕ್ಕೆ ಪ್ರವೇಶಿಸಿದ ಉದ್ದೇಶವನ್ನು ಮತ್ತೆ ನೆನಪಿಸಿದ್ದಾರೆ. “ನರೇಂದ್ರ ಮೋದಿ ನೇತೃತ್ವದ ಬಿಜೆಪಿ ದೇಶದ ಸಾಂವಿಧಾನಿಕ ಮೌಲ್ಯಗಳನ್ನು ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ವ್ಯವಸ್ಥಿತವಾಗಿ ದುರ್ಬಲಗೊಳಿಸುತ್ತಿದೆ ಎಂಬ ಆತಂಕದಿಂದಲೇ ನಾನು ರಾಜಕಾರಣಕ್ಕೆ ಬಂದಿದ್ದೇನೆ. ಧಾರ್ಮಿಕ ವಿಭಜನೆಯನ್ನು ಉತ್ತೇಜಿಸುವ ಇಂತಹ ರಾಜಕೀಯದ ವಿರುದ್ಧದ ಹೋರಾಟಕ್ಕೆ ಮಮತಾ ಬ್ಯಾನರ್ಜಿ ಅವರ ಧೈರ್ಯ ಮತ್ತು ಸಿದ್ಧಾಂತಗಳೇ ನಮಗೆ ಸದಾ ಸ್ಫೂರ್ತಿ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ಕೇವಲ ಚುನಾವಣಾ ಸೋಲಿನ ಕಾರಣಕ್ಕೆ ಪಕ್ಷ ಬದಲಾಯಿಸುವ ನಾಯಕರ ನಿಲುವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿರುವ ಸಾಗರಿಕಾ ಘೋಷ್, “ಒಂದು ನಿರ್ದಿಷ್ಟ ಸಿದ್ಧಾಂತ ಮತ್ತು ಪಕ್ಷದ ಚಿಹ್ನೆಯಡಿ ಜನರ ಮತ ಪಡೆದು ಗೆದ್ದ ಮೇಲೆ, ಕೇವಲ ಫಲಿತಾಂಶ ಪ್ರತಿಕೂಲ ಬಂದ ತಕ್ಷಣ ನಂಬಿಕೆಗಳನ್ನೇ ಬದಲಾಯಿಸಿಕೊಳ್ಳುವುದು ಅತ್ಯಂತ ವಿಚಿತ್ರ. ಹಾಗೆ ಪರಿಸ್ಥಿತಿಗೆ ತಕ್ಕಂತೆ ಬದಲಾಗುವ ನಂಬಿಕೆಗಳನ್ನು ನಿಜವಾದ ನಂಬಿಕೆಗಳು ಅನ್ನಲು ಸಾಧ್ಯವೇ” ಎಂದು ಪ್ರಶ್ನಿಸಿದ್ದಾರೆ.

ಈ ಲೇಖನ ಓದಿದ್ದೀರಾ?: ನೆಹರೂ ನಿಂದನೆ ಎಂಬುದು ಸೆರಗಿಗೆ ಕಟ್ಟಿಕೊಂಡ ಕೆಂಡ! ಪರಮವಿಕೃತಿಯ ಈ ಪ್ರಾಜೆಕ್ಟು ಫಲಿಸುವುದಿಲ್ಲ

ಕೇಂದ್ರ ಗೃಹ ಸಚಿವ ಅಮಿತ್ ಶಾ ಹೆಸರನ್ನು ಪ್ರಸ್ತಾಪಿಸಿರುವ ಅವರು, “ಈ ನಾಯಕರ ನಿಷ್ಠೆ ಕೇವಲ ಗೆಲುವು ಇರುವವರೆಗೆ ಮಾತ್ರವೇ? ಅಥವಾ ದೆಹಲಿಯಿಂದ ಅಮಿತ್ ಶಾ ಮತ್ತು ಅವರ ಸಹಚರರಿಂದ ಒಂದು ಫೋನ್ ಕರೆ ಬಂದರೆ ಸಾಕಾ, ಇವರ ರಾಜಕೀಯ ನೈತಿಕತೆಯೆಲ್ಲ ಅಲ್ಲಿಗೇ ಮುಕ್ತಾಯವಾಗಿಬಿಡುತ್ತದೆಯೇ? ಅಧಿಕಾರದ ಆಸೆಗೆ ಬೀಳುವ ಇಂತಹ ರಾಜಕಾರಣ ನಿಜಕ್ಕೂ ನಾಚಿಕೆಗೇಡಿನ ಸಂಗತಿ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಂಗಾಳದಲ್ಲಿ ಟಿಎಂಸಿಯ ಸುಮಾರು 20ಕ್ಕೂ ಹೆಚ್ಚು ಸಂಸದರು ಪಕ್ಷದ ನಾಯಕತ್ವದ ವಿರುದ್ಧ ಅಸಮಾಧಾನಗೊಂಡಿದ್ದು, ಸ್ಪೀಕರ್‌ಗೆ ಪತ್ರ ಬರೆದಿದ್ದಾರೆ. ತಾವು ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟಕ್ಕೆ ಬೆಂಬಲ ನೀಡಲು ಸಜ್ಜಾಗಿದ್ದಾರೆ ಎಂದು ವರದಿಯಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಹಲ್ಲೆಗೊಳಗಾಗಿ ರೈಲ್ವೆ ಹಳಿ ಮೇಲೆ ಬಿದ್ದಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

ಶಿವಮೊಗ್ಗ ರೈಲ್ವೆ ಹಳಿ ಬಳಿ ಗಂಭೀರ ಗಾಯಗಳೊಂದಿಗೆ ಪತ್ತೆಯಾಗಿದ್ದ 26 ವರ್ಷದ...

ನೇಣು ಬಿಗಿದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ; ತರಾತುರಿಯಲ್ಲಿ ಅಂತ್ಯಕ್ರಿಯೆ, ಕಾರಣ ನಿಗೂಢ!

ಸೊರಬ ತಾಲೂಕಿನ ಮುಟಗುಪ್ಪೆ ಗ್ರಾಮದಲ್ಲಿ 22 ವರ್ಷದ ಯುವತಿಯೊಬ್ಬರು ಮನೆಯಲ್ಲಿ ನೇಣು...

ಶಿವಮೊಗ್ಗ | ಗಾಂಜಾ ಮಾರಾಟ ಆರೋಪ: ಐವರು ಅರೆಸ್ಟ್‌, 1.23 ಕೆಜಿ ಮಾದಕ ವಸ್ತು ಜಪ್ತಿ

ಶಿವಮೊಗ್ಗ ನಗರದ ಅನುಪಿನಕಟ್ಟೆ ಸಮೀಪ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದಡಿ ತುಂಗಾನಗರ...