ಬಾಲಿವುಡ್ ಹಿರಿಯ ನಟ ಅಮಿತಾಬ್ ಬಚ್ಚನ್ ಭಾರತ ಮತ್ತು ಪಾಕಿಸ್ತಾನ ಸಂಘರ್ಷದ ಬಗ್ಗೆ ಮೌನ ಮುರಿದಿದ್ದಾರೆ. ಆಪರೇಷನ್ ಸಿಂಧೂರ ಕಾರ್ಯಾಚರಣೆಯನ್ನು ಶ್ಲಾಘಿಸಿದ್ದಾರೆ. ಭಾನುವಾರ ಮುಂಜಾನೆ ತಮ್ಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.
ಏಪ್ರಿಲ್ 22ರಿಂದ ಬರೀ ತನ್ನ ಟ್ವೀಟ್‌ನ ಅಂಕಿಯನ್ನು ಮಾತ್ರ ಪೋಸ್ಟ್ ಮಾಡುತ್ತಿದ್ದ ಅಮಿತಾಬ್ ಬಚ್ಚನ್, “ಎಕ್ಸ್ ಕ್ರೋಮೋಸೋಮ್ ಮೌನ” ಎಂದು ಕೊನೆಯದಾಗಿ ಟ್ವೀಟ್ ಮಾಡಿದ್ದರು. ಅದಾದ ಬಳಿಕ ಪಹಲ್ಗಾಮ್ ದಾಳಿ, ಆಪರೇಷನ್ ಸಿಂಧೂರ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ. ಪ್ರತಿ ದಿನ ಎಕ್ಸ್‌ನಲ್ಲಿ ಬರೀ ಅಂಕಿಯನ್ನು ಪೋಸ್ಟ್ ಮಾಡುತ್ತಿದ್ದರೂ ಸಂಘರ್ಷದ ಬಗ್ಗೆ ಏನೂ ಹೇಳಿರಲಿಲ್ಲ.
ಇದನ್ನು ಓದಿದ್ದೀರಾ? ಆಪರೇಷನ್ ಸಿಂಧೂರ | ಮಹಿಳಾ ಅಧಿಕಾರಿಗಳಾದ ಸೋಫಿಯಾ ಖುರೇಷಿ, ವ್ಯೋಮಿಕಾ ಸಿಂಗ್ ಯಾರು?
ಏಪ್ರಿಲ್ 22ರಂದು ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಭಯೋತ್ಪಾದಕ ದಾಳಿ ನಡೆದಿದ್ದು 26 ಮಂದಿ ಸಾವನ್ನಪ್ಪಿದ್ದಾರೆ. ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ಇತ್ತೀಚೆಗೆ ಪಾಕಿಸ್ತಾನ ಮತ್ತು ಪಿಒಕೆಯಲ್ಲಿನ ಒಂಬತ್ತು ಭಯೋತ್ಪಾದಕ ನೆಲೆಗಳ ಮೇಲೆ ಕ್ಷಿಪಣಿ ದಾಳಿ ನಡೆಸಿದೆ. ಇದಾದ ಬಳಿಕ ಭಾರತ ಪಾಕಿಸ್ತಾನದ ನಡುವಿನ ಉದ್ವಿಗ್ನತೆ ಹೆಚ್ಚಾಗಿದೆ. ಸದ್ಯ ಕದನ ವಿರಾಮ ಒಪ್ಪಂದ ನಡೆದಿದೆ.
ಇದ್ಯಾವುದರ ಬಗ್ಗೆಯೂ ಹಿರಿಯ ನಟ ತನ್ನ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರಲಿಲ್ಲ. ಇದೀಗ ಪಹಲ್ಗಾಮ್ ದಾಳಿ ಬಗ್ಗೆ 82 ವರ್ಷದ ಬಚ್ಚನ್ ದುಃಖ ವ್ಯಕ್ತಪಡಿಸಿದ್ದಾರೆ. ಹಾಗೆಯೇ ಆಪರೇಷನ್ ಸಿಂಧೂರ ಅನ್ನು ಪ್ರಾರಂಭಿಸಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವನ್ನು ತಮ್ಮ ಪೋಸ್ಟ್‌ನಲ್ಲಿ ಶ್ಲಾಘಿಸಿದ್ದಾರೆ.
आज भी @SrBachchan जी??
— डॉ रमाकान्त राय (@RamaKRoy) May 10, 2025
मगर क्यों??#IndiaPakistanWar #IndianArmy pic.twitter.com/GpXhXE8Jvf
“ಪಹಲ್ಗಾಮ್ ದಾಳಿಯಲ್ಲಿ ತಮ್ಮ ಕುಟುಂಬಗಳೊಂದಿಗೆ ಸಮಯ ಕಳೆಯುತ್ತಿದ್ದ 26 ಅಮಾಯಕ ಪ್ರವಾಸಿಗರನ್ನು ನಿರ್ದಯವಾಗಿ ಕೊಲ್ಲಲಾಗಿದೆ. ಮೂರು ದಿನಗಳ ಹಿಂದೆ ವಿವಾಹವಾದ ದಂಪತಿಗಳೂ ಇದರಲ್ಲಿ ಸೇರಿದ್ದಾರೆ. ಈ ಕೃತ್ಯವನ್ನು ಎಂದಿಗೂ ಮರೆಯಲಾಗದು. ನಮ್ಮ ದೇಶದಲ್ಲಿ ಭಯೋತ್ಪಾದಕ ಶಿಬಿರಗಳು ಮತ್ತು ಚಟುವಟಿಕೆಗಳನ್ನು ನಿಲ್ಲಿಸುವಂತೆ ನೆರೆಯ ಅಧಿಕಾರಿಗಳಿಗೆ (ಪಾಕಿಸ್ತಾನ ಅಧಿಕಾರಿಗಳು) ಸರ್ಕಾರ ಹೇಳುತ್ತಿತ್ತು. ಆದರೆ ಅವರು ನಿಲ್ಲಿಸಿಲ್ಲ” ಎಂದಿದ್ದಾರೆ.
“ಮೋದಿ ಮತ್ತು ಸರ್ಕಾರವು ನೆರೆಹೊರೆಯಲ್ಲಿರುವ ಭಯೋತ್ಪಾದಕ ಶಿಬಿರಗಳು ಮತ್ತು ಚಟುವಟಿಕೆಗಳನ್ನು ನಿಲ್ಲಿಸಲು ನಿರ್ಧರಿಸಿತು. ಮಿಲಿಟರಿ ಕಾರ್ಯವಿಧಾನವನ್ನು ಪ್ರಾರಂಭಿಸಿತು. ಅವರ 9 ಭಯೋತ್ಪಾದಕ ಶಿಬಿರಗಳು ಮತ್ತು ಸಂಘಟನೆಗಳನ್ನು ನಾಶಪಡಿಸಲಾಯಿತು. ಇದರ ಫಲಿತಾಂಶಗಳು ಎಲ್ಲರಿಗೂ ತಿಳಿದಿವೆ” ಎಂದು ಎಕ್ಸ್‌ನಲ್ಲಿ ಪೋಸ್ಟ್ ಮಾಡಲಾಗಿದೆ.
T 5375 –
— Amitabh Bachchan (@SrBachchan) May 10, 2025
छुट्टियाँ मानते हुए, उस राक्षस ने, निर्दोष पति पत्नी को बाहर खींच कर, पति को नग्न कर, उसके धर्म की पूर्ति करने के बाद , उसे जब गोली मारने लगा, तो पत्नी ने, घुटने पे गिर कर, रो रो अनुरोध करने के बाद भी, की उसके पति को न मारो ; उसके पति को उस बुज़दिल राक्षस ने, बेहद…
ಅಮಿತಾಬ್ ಬಚ್ಚನ್ ತಮ್ಮ ಪೋಸ್ಟ್‌ನಲ್ಲಿ ತಮ್ಮ ತಂದೆ, ಹಿಂದಿ ಕವಿ ಹರಿವಂಶ್ ರಾಯ್ ಬಚ್ಚನ್ ಅವರ ಜನಪ್ರಿಯ ಕವಿತೆ ‘ಅಗ್ನಿಪಥ್’ನ ಸಾಲುಗಳನ್ನೂ ಬರೆದಿದ್ದಾರೆ. “ಸೇನೆ ಮತ್ತು ಎಲ್ಲಾ ಭಾರತೀಯರಿಗೆ ಸ್ಫೂರ್ತಿ ಮತ್ತು ಹೋರಾಟವನ್ನು ಮುಂದುವರಿಸುವ ಬೇಡಿಕೆಯಾಗಿ” ಈ ಕವಿತೆಯ ಕೆಲವು ಸಾಲುಗಳನ್ನು ಆಯ್ಕೆ ಮಾಡಿಕೊಂಡಿದ್ದೇನೆ ಎಂದು ನಟ ಹೇಳಿಕೊಂಡಿದ್ದಾರೆ.
ಇನ್ನು ಕದನ ವಿರಾಮ ಒಪ್ಪಂದದ ಬಳಿಕ ಭಾರತ ಮತ್ತು ಪಾಕಿಸ್ತಾನವು ಭೂಮಿ, ವಾಯು ಮತ್ತು ಸಮುದ್ರದಲ್ಲಿ ಎಲ್ಲಾ ಗುಂಡಿನ ದಾಳಿ ಮತ್ತು ಮಿಲಿಟರಿ ಕ್ರಮಗಳನ್ನು ನಿಲ್ಲಿಸಲು ನಿರ್ಧರಿಸಿದೆ ಎಂದು ವಿದೇಶಾಂಗ ಕಾರ್ಯದರ್ಶಿ ಘೋಷಿಸಿದ ಐದು ಗಂಟೆಗಳ ನಂತರ ಪಾಕಿಸ್ತಾನ ಕದನ ವಿರಾಮ ಉಲ್ಲಂಘಿಸಿದೆ.
ಆದರೆ ಕಾಶ್ಮೀರ ಕಣಿವೆಯಲ್ಲಿ ರಾತ್ರಿ ವೇಳೆ ಯಾವುದೇ ಕದನ ವಿರಾಮ ಉಲ್ಲಂಘನೆ ವರದಿಯಾಗಿಲ್ಲ. ಜಮ್ಮು ಪ್ರದೇಶದಾದ್ಯಂತ ಶೆಲ್ ದಾಳಿ ಅಥವಾ ಡ್ರೋನ್ ಚಟುವಟಿಕೆ ಕಂಡುಬಂದಿಲ್ಲ ಎಂದು ಭಾನುವಾರ ಅಧಿಕಾರಿಗಳು ತಿಳಿಸಿದ್ದಾರೆ.
