ತಮಿಳುನಾಡಿನ ಕಾರ್ಖಾನೆಯಲ್ಲಿ ಅಮೋನಿಯಾ ಅನಿಲ ಸೋರಿಕೆ: 7 ಸಾವು, 40ಕ್ಕೂ ಹೆಚ್ಚು ಮಂದಿ ಗಂಭೀರ

Date:

ಖಾಸಗಿ ಸೀಫುಡ್ (ಕಡಲ ಆಹಾರ) ಮತ್ತು ಸೀಗಡಿ ಸಂಸ್ಕರಣಾ ಕಾರ್ಖಾನೆಯಲ್ಲಿ ಹಠಾತ್ ಅಮೋನಿಯಾ ಅನಿಲ ಸೋರಿಕೆಯಾಗಿದ್ದು, ಕನಿಷ್ಠ ಏಳು ಜನರು ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ತಿರುವಳ್ಳೂರು ಜಿಲ್ಲೆಯ ಪೆರಿಯಪಾಳ್ಯಂ ಬಳಿಯ ಮಂಜಂಕರಣೈನಲ್ಲಿ ನಡೆದಿದೆ. ದುರ್ಘಟನೆಯಲ್ಲಿ 40ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದು, ಅವರ ಪರಿಸ್ಥಿತಿ ಗಂಭೀರವಾಗಿದೆ. ಅವರೆಲ್ಲರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

- Advertisement -

ಅಧಿಕಾರಿಗಳು ನೀಡಿರುವ ಮಾಹಿತಿಯ ಪ್ರಕಾರ, ಭಾನುವಾರ ಕಾರ್ಖಾನೆಯಲ್ಲಿ ಕೆಲಸ ನಡೆಯುತ್ತಿದ್ದಾಗ ಇದ್ದಕ್ಕಿದ್ದಂತೆ ಅಮೋನಿಯಾ ಅನಿಲ ಸೋರಿಕೆಯಾಗಿದೆ. ಆ ಸಮಯದಲ್ಲಿ ಘಟಕದಲ್ಲಿದ್ದ ಕಾರ್ಮಿಕರು ಮತ್ತು ಇತರ ಸಿಬ್ಬಂದಿ ಈ ತೀವ್ರ ವಿಷಕಾರಿ ಅನಿಲವನ್ನು ಉಸಿರಾಡಿದ್ದರಿಂದ, ಉಸಿರುಗಟ್ಟಿ ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಈ ಲೇಖನ ಓದಿದ್ದೀರಾ?: ಕಾಂಗ್ರೆಸ್ ಕಾಲಾಳು ಹರಿಪ್ರಸಾದ್ ಈಗ ಪಿಸಿಸಿ ತಲೆಯಾಳು; ಕುತೂಹಲ ಮೂಡಿಸಿದ ನೇಮಕ

ಪ್ರಜ್ಞಾಹೀನರಾಗಿದ್ದವರನ್ನು ತಕ್ಷಣವೇ ಹತ್ತಿರದ ವಿವಿಧ ಆಸ್ಪತ್ರೆಗಳಿಗೆ ಸಾಗಿಸಲಾಗಿದೆ. ಆದರೂ, ಆಸ್ಪತ್ರೆಗೆ ತಲುಪಿಸುವಷ್ಟರಲ್ಲೇ ಇಬ್ಬರು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ. ಆನಂತರ ಸಾವಿನ ಸಂಖ್ಯೆ 7ಕ್ಕೆ ಏರಿಕೆಯಾಗಿದೆ. ಸದ್ಯ 40ಕ್ಕೂ ಹೆಚ್ಚು ಜನರು ಆಸ್ಪತ್ರೆಗಳಲ್ಲಿ ತುರ್ತು ಚಿಕಿತ್ಸೆ ಪಡೆಯುತ್ತಿದ್ದಾರೆ.

Advertisements

ಘಟನಾ ಸ್ಥಳಕ್ಕೆ ಜಿಲ್ಲಾಡಳಿತದ ಹಿರಿಯ ಅಧಿಕಾರಿಗಳು, ಪೊಲೀಸರು, ಅಗ್ನಿಶಾಮಕ ಹಾಗೂ ತುರ್ತು ಸೇವಾ ಸಿಬ್ಬಂದಿ ತಕ್ಷಣವೇ ಧಾವಿಸಿದ್ದಾರೆ. ಮುನ್ನೆಚ್ಚರಿಕಾ ಕ್ರಮವಾಗಿ ಇಡೀ ಕಾರ್ಖಾನೆ ಮತ್ತು ಸುತ್ತಮುತ್ತಲಿನ ಪ್ರದೇಶವನ್ನು ಸಾರ್ವಜನಿಕರ ಪ್ರವೇಶ ರಹಿತ ವಲಯವನ್ನಾಗಿ ಘೋಷಿಸಲಾಗಿದೆ. ಅನಿಲ ಸೋರಿಕೆಯಾಗುತ್ತಿರುವ ಮೂಲವನ್ನು ಪತ್ತೆಹಚ್ಚಿ ಅದನ್ನು ನಿಯಂತ್ರಿಸಲು ಮತ್ತು ವಿಷಗಾಳಿ ಮತ್ತಷ್ಟು ಹರಡದಂತೆ ತಡೆಯಲು ಅಧಿಕಾರಿಗಳು ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುಂಬೈ ಗರ್ಬಾ ಉತ್ಸವಕ್ಕೆ ಮುಸ್ಲಿಮರ ಪ್ರವೇಶಕ್ಕೆ ನಿರ್ಬಂಧ: ತಿಲಕ, ಆಧಾರ್ ಕಾರ್ಡ್ ಹಾಗೂ ಕುಟುಂಬ ಸಮೇತ ಆಗಮನ ಕಡ್ಡಾಯ!

ಮುಂಬೈನ ಬೋರಿವಲಿಯಲ್ಲಿ ಆಯೋಜಿಸಲಾಗುತ್ತಿರುವ ಮುಂಬರುವ ನವರಾತ್ರಿ ಗರ್ಬಾ ಮತ್ತು ದಾಂಡಿಯಾ ಉತ್ಸವದಲ್ಲಿ...

ಯುಪಿ ಚುನಾವಣೆ | ಪ್ರತಿ ಕ್ಷೇತ್ರದಲ್ಲೂ ಬಿಜೆಪಿ ಮತಗಳನ್ನು 27,000 ಕಡಿತಗೊಳಿಸುತ್ತೇವೆ: ಅಖಿಲೇಶ್ ಪ್ರತಿಜ್ಞೆ

2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಎಲ್ಲ ಪಕ್ಷಗಳು ಸಿದ್ದತೆಯಲ್ಲಿ ತೊಡಗಿವೆ....

ಅಮೃತಸರದಲ್ಲಿ ಕಳೆದುಹೋಗಿ ಗಯಾದಲ್ಲಿ ಪತ್ತೆ; ಎಐ ತಂತ್ರಜ್ಞಾನದ ನೆರವಿನಿಂದ ಕುಟುಂಬವನ್ನು ಸೇರಿದ ವ್ಯಕ್ತಿ

ಪಂಜಾಬ್‌ನಿಂದ ದಾರಿ ತಪ್ಪಿ 1,200 ಕಿಲೋಮೀಟರ್‌ಗೂ ಹೆಚ್ಚು ದೂರದ ಬಿಹಾರ ತಲುಪಿದ್ದ...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...