ಕೇರಳ | ಮೆದುಳು ತಿನ್ನುವ ಅಮೀಬಾ ಸೋಂಕು: 2025ರಲ್ಲಿ 170 ಪ್ರಕರಣ ದಾಖಲು, 40 ಮಂದಿ ಸಾವು

Date:

ಕೇರಳದ ಕೋಝಿಕ್ಕೋಡ್ ಜಿಲ್ಲೆಯ 58 ವರ್ಷದ ಮಹಿಳೆಯೊಬ್ಬರು ಶನಿವಾರ ಮೆದುಳು ತಿನ್ನುವ ಅಮೀಬಾ ಸೋಂಕಿನಿಂದಾಗಿ ಸಾವನ್ನಪ್ಪಿದ್ದಾರೆ. ಇದರಿಂದಾಗಿ ಕೇರಳದಲ್ಲಿ 2025ರಲ್ಲಿ ಈ ಸೋಂಕಿನಿಂದ ಮೃತಪಟ್ಟವರ ಸಂಖ್ಯೆಯು 40ಕ್ಕೆ ಏರಿಕೆಯಾಗಿದೆ. ಹಾಗೆಯೇ ಈವರೆಗೆ ರಾಜ್ಯದಲ್ಲಿ 170 ಅಮೀಬಿಕ್ ಮೆನಿಂಗೊಎನ್ಸೆಫಾಲಿಟಿಸ್‌ ಪ್ರಕರಣಗಳು ದಾಖಲಾಗಿದೆ.

- Advertisement -

ಕೋಝಿಕ್ಕೋಡ್‌ನ ಮೃತ ಮಹಿಳೆ ಸರಸು ಪಯ್ಯೋಲಿಯ ತುರಾಯೂರಿನವರಾಗಿದ್ದು, ಕಳೆದ ಒಂದು ತಿಂಗಳಿನಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ವರದಿಗಳ ಪ್ರಕಾರ, ಕೋಝಿಕ್ಕೋಡ್ ಮೂಲದ ಮತ್ತೊಬ್ಬರು ಸೇರಿದಂತೆ ಇನ್ನೂ ಇಬ್ಬರು ರೋಗಿಗಳು ಪ್ರಸ್ತುತ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಇದನ್ನು ಓದಿದ್ದೀರಾ? ಕೇರಳ: ಮೆದುಳು ತಿನ್ನುವ ಅಮೀಬಾ ರೋಗದಿಂದ 14 ವರ್ಷದ ಬಾಲಕ ಸಾವು

ಮೆದುಳು ತಿನ್ನುವ ಅಮೀಬಾ ಎಂಬುದು ನೇಗ್ಲೇರಿಯಾ ಫೌಲೆರಿ (Naegleria fowleri) ಎಂಬ ಏಕ-ಕೋಶ ಜೀವಿಯಿಂದ ಉಂಟಾಗುವ ಪ್ರಾಥಮಿಕ ಅಮೀಬಿಕ್ ಮೆನಿಂಜೊಎನ್ಸೆಫಾಲಿಟಿಸ್ (primary amoebic meningoencephalitis) ಎಂಬ ಅಪರೂಪದ ಮೆದುಳಿನ ಸೋಂಕಾಗಿದೆ. ಮೆದುಳಿಗೆ ಸೋಂಕು ತಗುಲಿ ಹಾನಿ ಉಂಟಾಗುವುದರಿಂದ ಈ ಸೋಂಕನ್ನು ಮೆದುಳು ತಿನ್ನುವ ಅಮೀಬಾ ಸೋಂಕು ಎಂದು ಕರೆಯಲಾಗುತ್ತದೆ. ತಲೆನೋವು, ವಾಕರಿಕೆ ಮತ್ತು ಜ್ವರದಂತಹ ಲಕ್ಷಣಗಳನ್ನು ಇದರಲ್ಲಿ ಕಂಡು ಬರುತ್ತದೆ.

ಕೇರಳದಲ್ಲಿ ಇತ್ತೀಚಿನ ತಿಂಗಳುಗಳಲ್ಲಿ ಪ್ರಕರಣಗಳಲ್ಲಿ ಹೆಚ್ಚಳ ಕಂಡುಬಂದಿದೆ. ಆರೋಗ್ಯ ಇಲಾಖೆ ಪ್ರಕಾರ ನವೆಂಬರ್‌ನಲ್ಲಿಯೇ 17 ಪ್ರಕರಣಗಳು ದಾಖಲಾಗಿದ್ದು 7 ಮಂದಿ ಸಾವನ್ನಪ್ಪಿದ್ದಾರೆ. ಒಟ್ಟಾರೆಯಾಗಿ ರಾಜ್ಯದಲ್ಲಿ 2025ರಲ್ಲಿ 40 ಮಂದಿ ಈ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯಾಂಗದ ಮೇಲೆ ಗೌರವವಿದೆ, ತಪ್ಪಾಗಿದ್ದರೆ ಕ್ಷಮೆಯಾಚಿಸುವೆ: ಸಂಜಯ್ ರಾವತ್

ಸುಪ್ರೀಂ ಕೋರ್ಟ್ ಕುರಿತು ತಾವು ನೀಡಿರುವ ಹೇಳಿಕೆಗಳು ಸೂಕ್ತವಲ್ಲ ಅಥವಾ ಅನುಚಿತ...

ವಿರಳಾತಿ ವಿರಳ ಪ್ರಕರಣ: ಮಾಲೆಗಾಂವ್ ಅಪ್ರಾಪ್ತೆಯ ಅತ್ಯಾಚಾರ, ಕೊಲೆ ಅಪರಾಧಿಗೆ ಮರಣದಂಡನೆ ಶಿಕ್ಷೆ

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಮಾಲೆಗಾಂವ್ ತಾಲೂಕಿನ ಡೋಂಗರಾಳೆ ಗ್ರಾಮದಲ್ಲಿ ಸಾಡೇನಾಲ್ಕು ವರ್ಷದ...

ತಿರಂಗಾ ಮಾರ್ಚ್ ನಡೆಸದಂತೆ ಅಭಿಜೀತ್ ದೀಪ್ಕೆಗೆ ದೆಹಲಿ ಪೊಲೀಸರಿಂದ ನೋಟಿಸ್: ಮನೆಯ ಬಳಿ ಬಿಗಿ ಭದ್ರತೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ದೆಹಲಿಯ...

​ಪ್ರತಿಭಟನೆಗಳ ವರದಿಗಾರಿಕೆಗೆ ಭಾರತೀಯ ಪ್ರೆಸ್ ಕೌನ್ಸಿಲ್‌ನಿಂದ ನೂತನ ಮಾರ್ಗದರ್ಶಿ ಸೂತ್ರಗಳ ಬಿಡುಗಡೆ

ಪ್ರತಿಭಟನೆಗಳು ಮತ್ತು ಧರಣಿ ಸತ್ಯಾಗ್ರಹಗಳ ಸಂದರ್ಭದಲ್ಲಿ ಪತ್ರಕರ್ತರ ಸುರಕ್ಷತೆಯನ್ನು ಕಾಯ್ದುಕೊಳ್ಳಲು, ಜವಾಬ್ದಾರಿಯುತ...