ಮಹಾರಾಷ್ಟ್ರ | ಕೆಮಿಕಲ್ ಫ್ಯಾಕ್ಟರಿಯಲ್ಲಿ ಸ್ಫೋಟ; ಕಾರ್ಮಿಕ ಸಾವು

Date:

ರಾಸಾಯನಿಕಗಳನ್ನು ತಯಾರಿಸುವ ಕಾರ್ಖಾನೆಯೊಂದರಲ್ಲಿ ಬೆಂಕಿ ಕಾಣಿಸಿಕೊಂಡು ಸರಣಿ ಸ್ಫೋಟ ನಡೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ನಡೆದಿದೆ. ನಡೆದ ಘಟನೆಯಲ್ಲಿ ಒಬ್ಬ ಕಾರ್ಮಿಕ ಸಾವನ್ನಪ್ಪಿದ್ದಾರೆ. ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

- Advertisement -

ಖಾರ್ವೈ ಪ್ರದೇಶದ ಎಂಐಡಿಸಿ ಕಾರ್ಖಾನೆಯಲ್ಲಿ ಗುರುವಾರ ಮುಂಜಾನೆ 4.30ರ ಸುಮಾರಿಗೆ ಘಟನೆ ಸಂಭವಿಸಿದೆ. ಘಟನೆಯಲ್ಲಿ ಗಾಯಗೊಂಡ ಕಾರ್ಮಿಕರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಕೆಲವು ರಾಸಾಯನಿಕಗಳನ್ನು ತುಂಬಿದ ಡ್ರಮ್‌ಗಳು ಸ್ಫೋಟಗೊಂಡು, ಡ್ರಮ್‌ಗಳಲ್ಲಿದ್ದ ರಾಸಾಯನಿಕ ಕಾರ್ಖಾನೆಯ ಹೊರಗಿದ್ದ ಟೆಂಪೋಗಳು ಮತ್ತು ವಾಹನಗಳ ಮೇಲೆ ಬಿದ್ದಿವೆ. ಇದರಿಂದಾಗಿ ವಾಹನಗಳು ಬೆಂಕಿಗೆ ಆಹುತಿಯಾಗಿವೆ ಎಂದು ಕುಲಗಾಂವ್-ಬದ್ಲಾಪುರ್ ಅಗ್ನಿಶಾಮಕ ಘಟಕದ ಮುಖ್ಯ ಅಗ್ನಿಶಾಮಕ ಅಧಿಕಾರಿ ಭಾಗವತ್ ಸೋನಾವಾನೆ ತಿಳಿಸಿದ್ದಾರೆ.

ಘಟನೆಯಲ್ಲಿ ಒಬ್ಬ ಕಾರ್ಮಿಕ ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಅಂಬರನಾಥ್, ಬದ್ಲಾಪುರ ಮತ್ತು ಉಲ್ಲಾಸನಗರದಿಂದ ನಾಲ್ಕು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿವೆ. ಅಕ್ಕಪಕ್ಕದ ಎರಡು ಘಟಕಗಳಿಗೆ ವ್ಯಾಪಿಸಿದ ಬೆಂಕಿಯನ್ನು ಸುಮಾರು ಎರಡು ಗಂಟೆಗಳ ಕಾರ್ಯಾಚರಣೆ ನಡೆಸಿ ನಂದಿಸಲಾಗಿದೆ ಎಂದು ಸೋನಾವಾನೆ ತಿಳಿಸಿದ್ದಾರೆ.

ಮೃತ ಕಾರ್ಮಿಕ ಯಾರು ಎಂಬುದನ್ನು ಇನ್ನೂ ಗುರುತಿಸಲಾಗಿಲ್ಲ. ಸ್ಫೋಟಕ್ಕೆ ಕಾರಣವೇನು ಎಂಬ ಬಗ್ಗೆ ತನಿಖೆ ನಡೆಯಬೇಕಿದೆ ಎಂದು ಅವರು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಣಿಪುರ | ಮತ್ತೆ ಭುಗಿಲೆದ್ದ ಹಿಂಸಾಚಾರ: ಗುಂಡಿನ ದಾಳಿಗೆ ಮೂವರ ಬಲಿ, 7 ಮನೆಗಳಿಗೆ ಬೆಂಕಿ

ದೀರ್ಘಕಾಲದಿಂದ ಜನಾಂಗೀಯ ಸಂಘರ್ಷಕ್ಕೆ ಈಡಾಗಿರುವ ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಕಾಂಗ್‌ಪೋಕ್ಪಿ...

ದೆಹಲಿ ಪ್ರತಿಭಟನೆ | ವಶಕ್ಕೆ ಪಡೆದ ನೂರಾರು ಪ್ರತಿಭಟನಾಕಾರರನ್ನು ಸ್ಟೇಡಿಯಂಗೆ ದಬ್ಬಿದ ಪೊಲೀಸರು

ದೆಹಲಿಯ ವಿವಿಧ ಪ್ರದೇಶಗಳಿಂದ CJP ನೂರಾರು ಕಾರ್ಯಕರ್ತರು ಸೇರಿದಂತೆ ಹಲವು ನಾಗರಿಕರು...

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ದೆಹಲಿಯಲ್ಲಿ ಮೂವರು ಮಾಜಿ ಸಿಎಂ – ಮಮತಾ, ಪಿಣರಾಯಿ, ಕೇಜ್ರಿವಾಲ್ – ಬಂಧನ

ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ರಾಜೀನಾಮೆ ಮತ್ತು ಎಸ್‌ಐಆರ್‌ ರದ್ದತಿಗೆ ಆಗ್ರಹಿಸಿ...

ಅ.12ರಂದು ದೆಹಲಿಯಲ್ಲಿ ಇಂಡಿಯಾ ಒಕ್ಕೂಟದ ಪ್ರತಿಭಟನೆ: ಕೆ.ಸಿ. ವೇಣುಗೋಪಾಲ್

ಜನರ ಮತದಾನದ ಹಕ್ಕನ್ನು ರಕ್ಷಿಸುವ ಉದ್ದೇಶದಿಂದ ಇಂಡಿಯಾ ಮೈತ್ರಿಕೂಟವು ಸೋಮವಾರ ನವದೆಹಲಿಯಲ್ಲಿ...