ವಿರಳಾತಿ ವಿರಳ ಪ್ರಕರಣ: ಮಾಲೆಗಾಂವ್ ಅಪ್ರಾಪ್ತೆಯ ಅತ್ಯಾಚಾರ, ಕೊಲೆ ಅಪರಾಧಿಗೆ ಮರಣದಂಡನೆ ಶಿಕ್ಷೆ

Date:

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಮಾಲೆಗಾಂವ್ ತಾಲೂಕಿನ ಡೋಂಗರಾಳೆ ಗ್ರಾಮದಲ್ಲಿ ಸಾಡೇನಾಲ್ಕು ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕ್ರೂರವಾಗಿ ಹತ್ಯೆ ಮಾಡಿದ ಪ್ರಕರಣದಲ್ಲಿ, ಮಾಲೆಗಾಂವ್ ಜಿಲ್ಲಾ ಮತ್ತು ಹೆಚ್ಚುವರಿ ಸತ್ರ ನ್ಯಾಯಾಲಯವು ಶುಕ್ರವಾರ ಅಪರಾಧಿಗೆ ಮರಣದಂಡನೆ (ಗಲ್ಲು ಶಿಕ್ಷೆ) ವಿಧಿಸಿ ತೀರ್ಪು ನೀಡಿದೆ.

- Advertisement -

ಈ ಪ್ರಕರಣವನ್ನು ‘ವಿರಳಾತಿ ವಿರಳ’ (Rarest of the Rare) ಎಂದು ಪರಿಗಣಿಸಿರುವ ನ್ಯಾಯಾಲಯವು, ಅಪರಾಧಿ ವಿಜಯ್ ಖೈರ್ನಾರ್‌ಗೆ ಗಲ್ಲು ಶಿಕ್ಷೆಯ ಜೊತೆಗೆ ಪೀಡಿತ ಬಾಲಕಿಯ ಕುಟುಂಬಕ್ಕೆ 10 ಲಕ್ಷ ರೂಪಾಯಿ ಪರಿಹಾರ ನೀಡುವಂತೆಯೂ ಆದೇಶಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಗನಕ್ಕೇರಿದ ಅಕ್ಕಿ ಬೆಲೆ: ತತ್ತರಿಸಿದ ಬಡ, ಮಧ್ಯಮ ವರ್ಗದ...

ರಾಜ್ಯಾದ್ಯಂತ ತೀವ್ರ ಮಳೆ ಕೊರತೆ ಮತ್ತು ಬರಗಾಲದ ಕರಿಛಾಯೆ ಕೃಷಿ ಕ್ಷೇತ್ರವನ್ನು ತತ್ತರಿಸುವಂತೆ ಮಾಡಿದೆ. ಅನ್ನದಾತನ ಬದುಕನ್ನು ಸಂಕಷ್ಟಕ್ಕೆ ನೂಕಿದ್ದ ಈ ಬರಗಾಲದ ಬಿಸಿ ಇದೀಗ ನೇರವಾಗಿ ಜನಸಾಮಾನ್ಯರ ತಟ್ಟೆಗೆ ತಟ್ಟಿದ್ದು, ಅಕ್ಕಿಯ...

ಬೆಳಗಾವಿ | ಬಿಸಿಲಿಗೂ ಕುಗ್ಗದೆ ಕಬ್ಬಿಗೆ ₹5500 ಬೆಲೆಗಾಗಿ...

ಕಬ್ಬಿಗೆ ಪ್ರತಿ ಟನ್‌ಗೆ ₹5,500 ಬೆಲೆ ನೀಡಬೇಕು, ಸಕ್ಕರೆಗೆ ಪ್ರತಿ ಕೆ.ಜಿ.ಗೆ ₹60 ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ನಿಗದಿಪಡಿಸಬೇಕು ಹಾಗೂ ಸ್ವಾಮಿನಾಥನ್‌ ಆಯೋಗದ ಶಿಫಾರಸುಗಳನ್ನು ಜಾರಿಗೊಳಿಸಬೇಕು ಎಂದು ಆಗ್ರಹಿಸಿ ಬೆಳಗಾವಿ ಜಿಲ್ಲೆಯ...

ಈ ದಿನ ಕವಿತೆ | ನನ್ನವ್ವನ ನೋಟ್ ಪುಸ್ತಕ...

ವಾರಕ್ಕೊಂದು ಅನುವಾದಿತ ಕವಿತೆ ಮಾಲಿಕೆಯಲ್ಲಿ ಈ ಬಾರಿ ಗುಜರಾತಿನ ಕವಿ, ಕಲಾವಿದರಾದ ಜಯಂತ್ ಪರ್ಮಾರ್ ಅವರ ಒಂದು ಉರ್ದು ಕವನದ ಇಂಗ್ಲಿಷ್ ಅನುವಾದವನ್ನು ಕನ್ನಡಕ್ಕೆ ತಂದಿದ್ದಾರೆ ಹಿರಿಯ ಅನುವಾದಕಿ ಸಿ ಎಚ್‌ ಭಾಗ್ಯ ಬೇವಿನ...

ಇದನ್ನೂ ಓದಿ: ಬೀದರ್‌ | ದಲಿತ ಯುವತಿಯ ಅತ್ಯಾಚಾರ, ಕೊಲೆ : ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಲು ಆಗ್ರಹ

ಪ್ರಕರಣದ ತನಿಖೆ ನಡೆಸಿದ ಪೊಲೀಸರು ಸಲ್ಲಿಸಿದ ಚಾರ್ಜ್‌ಶೀಟ್ ಪ್ರಕಾರ, ದಿನಗೂಲಿ ನೌಕರನಾಗಿದ್ದ ವಿಜಯ್ ಖೈರ್ನಾರ್, ಬಾಲಕಿಗೆ ಚಾಕೊಲೇಟ್ ಕೊಡುವುದಾಗಿ ಆಮಿಷ ಒಡ್ಡಿ ಕರೆದೊಯ್ದು ಈ ಘೋರ ಕೃತ್ಯ ಎಸಗಿದ್ದ.

ನೇರ ಪ್ರತ್ಯಕ್ಷದರ್ಶಿಗಳು ಇಲ್ಲದಿದ್ದರೂ, ಪೊಲೀಸರು ಮತ್ತು ವಕೀಲರು, ವಿಧಿವಿಜ್ಞಾನ ಸಾಕ್ಷ್ಯಗಳು (DNA ಪರೀಕ್ಷೆ), ಸಂದರ್ಭೋಚಿತ ಸಾಕ್ಷ್ಯಾಧಾರಗಳು ಹಾಗೂ ಶಾಸ್ತ್ರೀಯ ತನಿಖೆಯ ಆಧಾರದ ಮೇಲೆ ಬಲವಾದ ವಾದ ಮಂಡಿಸಿದ್ದರು. ನ್ಯಾಯಾಲಯದಲ್ಲಿ ಒಟ್ಟು 24 ಸಾಕ್ಷಿಗಳ ವಿಚಾರಣೆ ವಿಚಾರಣೆ ನಡೆದ ಬಳಿಕ ಈ ಮಹತ್ವದ ತೀರ್ಪು ಹೊರಬಿದ್ದಿದೆ.

ನಿಯಮಗಳ ಪ್ರಕಾರ, ಸತ್ರ ನ್ಯಾಯಾಲಯ ವಿಧಿಸಿರುವ ಈ ಮರಣದಂಡನೆ ಶಿಕ್ಷೆಯು ಜಾರಿಯಾಗಲು ಮುಂಬೈ ಹೈಕೋರ್ಟ್‌ನಿಂದ ಅಂತಿಮ ಅನುಮೋದನೆ ದೊರೆಯಬೇಕಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಂಟಾರ್ಕ್ಟಿಕದಲ್ಲಿ ಪೆಂಗ್ವಿನ್ ಎಣಿಸುವ ಅಪರೂಪದ ಉದ್ಯೋಗ: ಲಕ್ಷಗಳ ಸಂಭಾವನೆ, ಹೇಗಿರುತ್ತದೆ ಹಿಮದ ನಾಡಿನ ಬದುಕು?

ಜನಜಂಗುಳಿ, ಟ್ರಾಫಿಕ್ ಕಿರಿಕಿರಿ ಹಾಗೂ ದೈನಂದಿನ ಯಾಂತ್ರಿಕ ಬದುಕಿನಿಂದ ದೂರ ಸರಿದು,...

ಲಡಾಖ್ ನಾಯಕರ ಜೊತೆ ಕೇಂದ್ರದ ಮಾತುಕತೆ ಅಪೂರ್ಣ: ಅಕ್ಟೋಬರ್ 22ಕ್ಕೆ ಮುಂದಿನ ಸಭೆ

ಕೇಂದ್ರ ಗೃಹ ಸಚಿವಾಲಯ ಹಾಗೂ ಲಡಾಖ್‌ನ ಪ್ರಾತಿನಿಧಿಕ ಸಂಸ್ಥೆಗಳ ನಡುವೆ ಲೇಹ್‌ನಲ್ಲಿ...

ಶಿವಮೊಗ್ಗ | ವಿಮಾ ಪಾಲಿಸಿ ಪುನರಾರಂಭಿಸದ ಕಂಪನಿಗೆ ದಂಡ: ಗ್ರಾಹಕ ಆಯೋಗ ಆದೇಶ

ನಿಯಮಾನುಸಾರ ಕಂತು ಪಾವತಿಸಿದರೂ ಜೀವ ವಿಮಾ ಪಾಲಿಸಿಯನ್ನು ಪುನರಾರಂಭಿಸದೆ ಸೇವಾ ನ್ಯೂನತೆ...