ಬಿಹಾರ ಚುನಾವಣೆ | ಜೆಎಸ್‌ಪಿ ನಾಯಕನ ಹತ್ಯೆ ಪ್ರಕರಣ: ಎನ್‌ಡಿಎ ಅಭ್ಯರ್ಥಿ ಅನಂತ್‌ ಸಿಂಗ್‌ ಬಂಧನ

Date:

ಬಿಹಾರ ಚುನಾವಣೆ ಕೆಲವೇ ದಿನಗಳು ಬಾಕಿ ಇರುವಾಗ, ಬಿಹಾರದಲ್ಲಿ ಜೆಎಸ್‌ಪಿ ನಾಯಕ ದುಲಾರ್‌ ಚಂದ್ ಹತ್ಯೆಯಾಗಿದೆ. ಅವರ ಹತ್ಯೆ‌ ಪ್ರಕರಣದಲ್ಲಿ ಎನ್‌ಡಿಎ ಅಭ್ಯರ್ಥಿ ಅನಂತ್‌ ಸಿಂಗ್‌ ಅವರನ್ನು ಪೊಲೀಸರು ಬಂಧಿಸಿದ್ದಾರೆ.

- Advertisement -

ದುಲಾರ್‌ ಚಂದ್ ಯಾದವ್‌ ಅವರು ಗುರುವಾರ ಮೊಕಾಮಾದಲ್ಲಿ ತಮ್ಮ ಸೋದರಳಿಯ ಪ್ರಿಯದರ್ಶಿ ಪಿಯೂಷ್ ಪರ ಪ್ರಚಾರ ನಡೆಸುತ್ತಿದ್ದರು. ಆ ವೇಳೆ, ಎನ್‌ಡಿಎ ಅಭ್ಯರ್ಥಿ ಅನಂತ್ ಸಿಂಗ್ ಬೆಂಬಲಿಗರು ಯಾದವ್ ಮೇಲೆ ಗುಂಡು ಹಾರಿಸಿ, ಕಾರಿನಿಂದ ಗುದ್ದಿ ಹತ್ಯೆಗೈದಿದ್ದಾರೆ ಎಂದು ಆರೋಪಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ ಕೋಟ್ಯಂತರ ಭಾರತೀಯರಿಗೆ ವಿರಾಟ್ ಕೊಹ್ಲಿ ಕೇವಲ ಒಬ್ಬ ಆಟಗಾರನಲ್ಲ; ಬದಲಾಗಿ ಅದ್ಭುತ ಕಾವ್ಯದಂತಿರುವ ಒಂದು ಸುವರ್ಣ ಶಕೆ. ನವೆಂಬರ್ 5,...

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

ಘಟನೆಗೆ ಸಂಬಂಧಿಸಿದಂತೆ ಪೊಲೀಸರು ನಾಲ್ಕು ಎಫ್‌ಐಆರ್‌ಗಳನ್ನು ದಾಖಲಿಸಿದ್ದರು. ಮೃತನ ಮೊಮ್ಮಗ ಸಲ್ಲಿಸಿದ ದೂರಿನ ಆಧಾರದ ಮೇಲೆ ದಾಖಲಾಗಿರುವ ಎಫ್‌ಐಆರ್‌ಗಳ ಪೈಕಿ ಒಂದರಲ್ಲಿ ಅನಂತ್ ಸಿಂಗ್ ಸೇರಿದಂತೆ ಇತರ ನಾಲ್ವರನ್ನು ಆರೋಪಿಗಳೆಂದು ಹೆಸರಿಸಲಾಗಿದೆ.

2020 ರ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಅನಂತ್ ಸಿಂಗ್ ಅವರು ಆರ್‌ಜೆಡಿ ಅಭ್ಯರ್ಥಿಯಾಗಿ ಗೆದ್ದಿದ್ದರು. ಆದರೆ, ನಂತರ 2022 ರಲ್ಲಿ ಶಸ್ತ್ರಾಸ್ತ್ರ ಕಾಯ್ದೆಯಡಿಯಲ್ಲಿ ಶಿಕ್ಷೆಗೊಳಗಾದ ನಂತರ ಅನರ್ಹಗೊಳಿಸಲಾಯಿತು. ನಂತರ ಅವರ ಪತ್ನಿ ನೀಲಂ ದೇವಿ ಉಪಚುನಾವಣೆಯಲ್ಲಿ ಗೆದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪಂಜಾಬ್: ಎಲ್‌ಪಿಯು ‘ವಿವಿ’ಯಲ್ಲಿ ಅತ್ಯಾಚಾರ ಆರೋಪ; ಭುಗಿಲೆದ್ದ ಪ್ರತಿಭಟನೆ, ತರಗತಿಗಳು ರದ್ದು

ಪಂಜಾಬ್‌ನ ಫಗ್ವಾರಾದಲ್ಲಿರುವ ಲವ್ಲಿ ಪ್ರೊಫೆಷನಲ್ ಯೂನಿವರ್ಸಿಟಿಯಲ್ಲಿ (ಎಲ್‌ಪಿಯು) ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ...

3 ದಿನಗಳ ಬ್ಯಾಂಕ್ ಮುಷ್ಕರ ವಾಪಸ್: ವಾರಕ್ಕೆ 5 ದಿನ ಕೆಲಸದ ಪರಿಶೀಲನೆಗೆ ಸಮಿತಿ

ಸಾರ್ವಜನಿಕ ವಲಯದ ಬ್ಯಾಂಕ್‌ ನೌಕರರ ಒಕ್ಕೂಟವು (ಯುಎಫ್‌ಬಿಯು) ಸೋಮವಾರದಿಂದ ಹಮ್ಮಿಕೊಂಡಿದ್ದ ಮೂರು...

2017ರಲ್ಲಿ ಚುನಾವಣಾ ಆಯೋಗವನ್ನು ನಂಬಿದ್ದೆವು, ಆದರೆ 2022ರಲ್ಲಿ ಎಸ್‌ಪಿ ಮತಗಳನ್ನು ಇಸಿ ಅಳಿಸಿದೆ: ಅಖಿಲೇಶ್ ಆರೋಪ

2022ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಸಮಾಜವಾದಿ ಪಕ್ಷದ (ಎಸ್‌ಪಿ) ಬೆಂಬಲಿಗರ...

ಪಶ್ಚಿಮ ಬಂಗಾಳ | ಸುವೇಂದು ಅಧಿಕಾರಿಗೆ ‘ಅಲ್ಲಾಹ್ ಮೇಲಕ್ಕೆ ಟಿಕೆಟ್ ಕಾಯ್ದಿರಿಸಲಿ’ – ಹುಮಾಯೂನ್ ವಿವಾದಾತ್ಮಕ ಹೇಳಿಕೆ

ಪಶ್ಚಿಮ ಬಂಗಾಳದ ರೇಜಿನಗರ ಉಪಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ವಾಗ್ದಾಳಿಗಳು ತೀವ್ರ ಸ್ವರೂಪ...