ವೈ ಎಸ್ ಶರ್ಮಿಳಾ ಜನವರಿ 4 ರಂದು ಕಾಂಗ್ರೆಸ್ ಸೇರ್ಪಡೆ !

Date:

ವೈಎಸ್‌ಆರ್‌ ತೆಲಂಗಾಣ ಪಕ್ಷದ ಮಾಜಿ ಅಧ್ಯಕ್ಷೆ ಹಾಗೂ ಆಂಧ್ರ ಪ್ರದೇಶ ಮುಖ್ಯಮಂತ್ರಿ ಜಗನ್‌ಮೋಹನ್‌ ರೆಡ್ಡಿ ಸಹೋದರಿ ವೈ ಎಸ್ ಶರ್ಮಿಳಾ ಜನವರಿ 4ರಂದು ಕಾಂಗ್ರೆಸ್ ಸೇರ್ಪಡೆಯಾಗುವ ಸಾಧ್ಯತೆಯಿದೆ.

- Advertisement -

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಆಂಧ್ರ ಪ್ರದೇಶದ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಗಿಡುಗು ರುದ್ರ ರಾಜು, ಕಾಂಗ್ರೆಸ್‌ನ ಸಿದ್ದಾಂತ ಹಾಗೂ ನಾಯಕತ್ವವನ್ನು ಗೌರವಿಸಿ ಪಕ್ಷಕ್ಕೆ ಬರುವ ಯಾರಿಗಾದರೂ ಸ್ವಾಗತ. ಕಾಂಗ್ರೆಸ್ ಸೇರ್ಪಡೆಯಾಗುತ್ತಿರುವ ವೈ ಎಸ್ ಶರ್ಮಿಳಾ ಅವರಿಗೂ ಆಂಧ್ರ ಕಾಂಗ್ರೆಸ್ ಪರವಾಗಿ ಆತ್ಮೀಯ ಸ್ವಾಗತ ಎಂದು ಶುಭ ಕೋರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ದಕ್ಷಿಣ ಆಫ್ರಿಕಾದಲ್ಲಿ ಗಾಂಧಿ ಮೊಳಗಿಸಿದ್ದ ಮತ ಹಕ್ಕಿನ ಕೂಗಿಗೆ...

ಮತದಾನ ಕೇವಲ ಹಕ್ಕಲ್ಲ, ಅದು ಪ್ರಜೆಯೊಬ್ಬನ ಘನತೆ ಹಾಗೂ ಅಸ್ತಿತ್ವದ ಸಂಕೇತ. 131 ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಇದೇ ಮತಾಧಿಕಾರಕ್ಕಾಗಿ ಗಾಂಧೀಜಿ ಬ್ರಿಟಿಷರ ವಿರುದ್ಧ ಸಿಡಿದೆದ್ದಿದ್ದರು. ಆದರೆ, ಇಂದು ಸ್ವತಂತ್ರ ಭಾರತದಲ್ಲಿ...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅತ್ತ ಅತಿಥಿ ಉಪನ್ಯಾಸಕರು ಇತ್ತ ಸರಕಾರ; ನಡುವೆ ನಲುಗದಿರಲಿ ವಿದ್ಯಾರ್ಥಿಗಳು

ಮುಂಬರುವ ಆಂಧ್ರ ವಿದಾನಸಭೆ ಹಾಗೂ ಲೋಕಸಭೆ ಚುನಾವಣೆಯ ಹಿನ್ನೆಲೆಯಲ್ಲಿ ವೈಎಸ್‌ ಶರ್ಮಿಳಾ ಗಮನಾರ್ಹ ಪಾತ್ರ ವಹಿಸುವ ಕಾರಣದಿಂದ ಆಯಕಟ್ಟಿನ ಹುದ್ದೆ ನೀಡುವ ಕುರಿತು ಕಾಂಗ್ರೆಸ್‌ ಹೈಕಮಾಂಡ್ ಯೋಚಿಸಿದೆ ಎನ್ನಲಾಗಿದೆ. ಅಲ್ಲದೆ ಆಂಧ್ರದಲ್ಲಿ ಪ್ರಬಲವಾಗಿರುವ ವೈಎಸ್‌ಆರ್‌ ಕಾಂಗ್ರೆಸ್‌, ಟಿಡಿಪಿಗೆ ಪೈಪೋಟಿ ನೀಡಲು ಹಾಗೂ ಅಲ್ಲಿನ ಕಾಂಗ್ರೆಸ್‌ಅನ್ನು ಬಲಪಡಿಸಲು ಶರ್ಮಿಳಾ ಸೇರ್ಪಡೆ ಬಹುಮುಖ್ಯ ಪಾತ್ರ ವಹಿಸಲಿದೆ.

ವೈಎಸ್‌ಆರ್‌ ತೆಲಂಗಾಣ ಪಕ್ಷದ ಅಧ್ಯಕ್ಷೆಯಾಗಿದ್ದ ಶರ್ಮಿಳಾ ತೆಲಂಗಾಣದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಬೆಂಬಲ ನೀಡಿದ್ದರು. ಅಲ್ಲದೆ 9 ವರ್ಷಗಳ ಆಡಳಿತದ ಅವಧಿಯಲ್ಲಿ ಕೆಸಿಆರ್‌ ಪಕ್ಷ ರಾಜ್ಯದ ಜನತೆಯ ಭರವಸೆ ಈಡೇರಿಸಲು ವಿಫಲವಾಗಿದೆ ಎಂದು ಟೀಕಿಸಿದ್ದರು.

1974ರಲ್ಲಿ ಜನಿಸಿದ್ದ ವೈಎಸ್‌ ಶರ್ಮಿಳಾ ಅವರು ಸಹೋದರ ವೈಎಸ್‌ಆರ್‌ ಜಗನ್‌ ಮೋಹನ್ ರೆಡ್ಡಿ ಅವರೊಂದಿಗೆ ರಾಜಕೀಯ ಸಂಬಂಧ ಕಡಿದುಕೊಂಡು ತೆಲಂಗಾಣದಲ್ಲಿ ತಮ್ಮದೇ ಪಕ್ಷ ಸ್ಥಾಪಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ ರಾಮಮಂದಿರ ಸಿಬ್ಬಂದಿಗೆ ಶೇ. 100ರಷ್ಟು ಪೊಲೀಸ್ ವೆರಿಫಿಕೇಷನ್; ಹಿನ್ನೆಲೆ ಪರಿಶೀಲನೆ ಕಡ್ಡಾಯ

ಉತ್ತರ ಪ್ರದೇಶದ ಅಯೋಧ್ಯೆಯ ರಾಮಮಂದಿರ ಆಡಳಿತ ಮತ್ತು ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು...

ಸಿಇಸಿ ಗ್ಯಾನೇಶ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ಅನುಮತಿ ನಿರಾಕರಣೆ; ಜಂತರ್ ಮಂತರ್‌ನಲ್ಲಿ ಬಿಗಿ ಭದ್ರತೆ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಉತ್ತರ ಪ್ರದೇಶ: ಪ್ರಜಾಪ್ರಭುತ್ವ ಹೋರಾಟಗಾರರಿಗೆ ಅಖಿಲೇಶ್ ಮಾಸಿಕ ₹51,000 ಪಿಂಚಣಿ ಭರವಸೆ

ಉತ್ತರ ಪ್ರದೇಶದಲ್ಲಿ 2027ರಲ್ಲಿ ಸಮಾಜವಾದಿ ಪಕ್ಷ (ಎಸ್‌ಪಿ) ಸರ್ಕಾರ ರಚಿಸಿದರೆ, 1975ರ...

ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಬೆಂಗಳೂರು, ಗೋವಾ, ಕೋಲ್ಕತ್ತದಲ್ಲಿ ಸಿಜೆಪಿ ‘ಮೋರ್ಚಾ’

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...