ವಿಚ್ಛೇದಿತ ಪತ್ನಿ ಜೀವನಾಂಶ ಪಡೆಯುವುದು ದಾನವಲ್ಲ, ಹಕ್ಕು; ಹೈಕೋರ್ಟ್

Date:

ನ್ಯಾಯಾಲಯದ ಮೂಲಕ‌ ದಂಪತಿ‌ ವಿಚ್ಛೇದನ ಪಡೆದಾಗ, ಪತ್ನಿಯು ಗಂಡನಿಂದ ಜೀವನಾಂಶ ಪಡೆಯುವುದು ಆಕೆಯ ಹಕ್ಕು. ಆಕೆಗೆ ನೀಡುವುದು ದಾನವಲ್ಲ, ಪತಿಯ ಕರ್ತವ್ಯ ಎಂದು ಆಂಧ್ರಪ್ರದೇಶ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.

- Advertisement -

ಚಿನ್ನಂ ಕಿರಣ್ಮಯಿ ಸ್ಮೈಲಿ ಮತ್ತು ಅವರ ಪತಿ ಚಿನ್ನನ್ ಕಿಶೋರ್ ಕುಮಾರ್ ನಡುವಿನ‌ ಜೀವನಾಂಶ ಸಂಬಂಧಿತ‌ ಪ್ರಕರಣವನ್ನು ಆಂಧ್ರ ಹೈಕೋರ್ಟ್ ನ್ಯಾಯಮೂರ್ತಿ ವೈ. ಲಕ್ಷ್ಮಣ ರಾವ್ ವಿಚಾರಣೆ ನಡೆಸಿದ್ದಾರೆ. “ಪತಿಯು ಪತ್ನಿಗೆ ಜೀವನಾಂಶ ನೀಡಬೇಕು. ಅದು ಯಾವುದೇ‌ರೀತಿಯ ದಾನವಲ್ಲ, ಕರ್ತವ್ಯ. ಸ್ಮೈಲಿ ಅವರಿಗೆ ಆಕೆಯ ಪತಿ ಮಾಸಿಕ 7,500 ರೂ. ಮತ್ತು ಅವರ ಅಪ್ರಾಪ್ತ ವಯಸ್ಕ ಮಗನಿಗೆ ತಿಂಗಳಿಗೆ 5,000‌ ರೂ. ನಿರ್ವಹಣಾ ವೆಚ್ಚ ನೀಡಬೇಕು” ಎಂದು ಆದೇಶಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

“ಜೀವನಾಂಶ ಕೊಡುವುದೆಂದರೆ ಅದು ದಾನವಲ್ಲ, ಬದಲಾಗಿ ಒಂದು ಹಕ್ಕು ಎಂದು ನ್ಯಾಯಾಲಯಗಳು ಸತತವಾಗಿ ಪುನರುಚ್ಚರಿಸಿವೆ. ಸಮಾನತೆ, ನ್ಯಾಯ ಮತ್ತು ಉತ್ತಮ ಆತ್ಮಸಾಕ್ಷಿಯನ್ನು ಎತ್ತಿಹಿಡಿಯಲು ಅದರ ಜಾರಿ ಅತ್ಯಗತ್ಯ. ಹೀಗಾಗಿ, ಭಾರತದ ಕಾನೂನಿನ ಪ್ರಕಾರ ಪೋಷಣೆ ಮಾಡಬೇಕಾದವರ ನಿರ್ಲಕ್ಷ್ಯದಿಂದಾಗಿ ಯಾವುದೇ ಹೆಂಡತಿ, ಮಗು ಅಥವಾ ಅವಲಂಬಿತ ಪೋಷಕರು ಬಡತನದಲ್ಲಿ ಕೊಳೆಯಬಾರದು ಎಂಬುದು ನ್ಯಾಯಾಂಗದ ದೃಢ ಸಂಕಲ್ಪವಾಗಿದೆ” ಎಂದು ಹೇಳಿದ್ದಾರೆ.

2018ರ ಮಾರ್ಚ್‌ನಲ್ಲಿ ಸ್ಮೈಲಿ ಅವರಿಗೆ‌ ಕಿಶೋರ್ ಜೀವನಾಂಶ ನೀಡಬೇಕೆಂದು ಕೌಟುಂಬಿಕ ನ್ಯಾಯಾಲಯ ಆದೇಶಿಸಿತ್ತು. ಆದೇಶವನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದ ಚಿನ್ನನ್ ಕಿಶೋರ್ ಕುಮಾರ್, “ಜೀವನಾಂಶ ನೀಡುವುದು ವಿಕೃತ ಮತ್ತು ತಾರತಮ್ಯದಿಂದ ಕೂಡಿದೆ” ಎಂದು ವಾದಿಸಿದ್ದರು. ಅವರ ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR ನಲ್ಲಿ ದೊಡ್ಡ ಪ್ರಮಾಣದ Form 7 ಅರ್ಜಿಗಳ ಸಲ್ಲಿಕೆ  ಆರೋಪ; ಕ್ರಮಕ್ಕೆ ತೆಲಂಗಾಣ ಚುನಾವಣಾ ಆಯುಕ್ತರ ಆದೇಶ

ಹೈದರಾಬಾದ್: ಪ್ರಸ್ತುತ ನಡೆಯುತ್ತಿರುವ SIR ಪ್ರಕ್ರಿಯೆಯಲ್ಲಿ  ದೊಡ್ಡ ಪ್ರಮಾಣದಲ್ಲಿ ನಕಲಿ Form...

Form 6 ಬದಲಾಯಿಸಿದ್ದು ಯಾರು, ದಾಖಲೆ ಕೊಡಿ; ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಹೊಸ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಲು ಬಳಸುವ Form 6ನಲ್ಲಿ...

ಬಂಗಾಳ SIR | ನೋಟಿಸ್ ನೀಡಲು, ಹೆಸರು ಮರು ಸೇರಿಸಲು ಸಾಧ್ಯವಿಲ್ಲ: EC ಪೋರ್ಟಲ್ ವಿರುದ್ಧ ನ್ಯಾಯಾಧೀಶರ ದೂರು

ಪಶ್ಚಿಮ ಬಂಗಾಳದಲ್ಲಿ SIR ವೇಳೆ ಮತದಾರರ ಪಟ್ಟಿಯಿಂದ ಹೊರಗಿಡಲಾದವರ ಮೇಲ್ಮನವಿಗಳ ವಿಚಾರಣೆ...

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌ ಪ್ರಶಸ್ತಿ ಪಡೆದ ಸಂಶೋಧನೆಯ ಸುತ್ತ ಒಂದು ನೋಟ

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ...