ಆಂಧ್ರಪ್ರದೇಶ ವಿಧಾನಸಭಾ ಚುನಾವಣೆ | ಟಿಡಿಪಿ ಸರ್ಕಾರ ರಚಿಸುವುದು ಬಹುತೇಕ ಖಚಿತ

Date:

ಆಂಧ್ರಪ್ರದೇಶದಲ್ಲಿ ಲೋಕಸಭೆ ಚುನಾವಣೆ ಜತೆಗೆ ವಿಧಾನಸಭೆ ಚುನಾವಣೆ ಕೂಡ ನಡೆದಿದೆ. ಜನಸೇನಾ ಪಕ್ಷದಿಂದ ಖ್ಯಾತ ತೆಲುಗು ನಟ ಪವನ್ ಕಲ್ಯಾಣ ಸ್ಪರ್ಧೆ ಮಾಡಿದ್ದಾರೆ. ಈಗಾಗಲೇ ಮತ ಎಣಿಕೆ ಆರಂಭವಾಗಿದ್ದು, ಪವನ್ ಮುನ್ನಡೆ ಸಾಧಿಸಿದ್ದಾರೆ. ವೈಎಸ್‌ಆರ್‌ಪಿ ಕಾಂಗ್ರೆಸ್ ಪಕ್ಷದಿಂದ ವಂಗಾ ಗೀತಾ ಪೈಪೋಟಿ ನೀಡುತ್ತಿದ್ದಾರೆ.

- Advertisement -

ಆಂಧ್ರಪ್ರದೇಶದಲ್ಲಿ ಆಡಳಿತಾರೂಢ ವೈಎಸ್‌ಆರ್‌ಸಿಪಿ ಪಕ್ಷ, ಕಾಂಗ್ರೆಸ್ ನೇತೃತ್ವದ ಇಂಡಿಯಾ ಒಕ್ಕೂಟ ಮತ್ತು ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟದ ನಡುವೆ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ. ತೆಲುಗು ದೇಶಂ (ಟಿಡಿಪಿ) 131 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಜನಸೇನಾ ಪಾರ್ಟಿ 20 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ವೈಎಸ್‌ಆರ್‌ಸಿಪಿ 17 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಬಿಜೆಪಿ 7 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ರಾಜಕೀಯದಲ್ಲಿ ಮಹಿಳೆಯರ ಮೇಲೆ ಗಂಡಾಳ್ವಿಕೆಯ ಸಾಂಸ್ಕೃತಿಕ ರಾಜಕಾರಣ

ರಾಜಕೀಯದ ಮೇಲೆ ಪುರುಷ ಪ್ರಧಾನ ಹಿಡಿತ ಹೇಗೆ ನಿರ್ಮಾಣವಾಯಿತು? ರಾಜಕೀಯವೆಂದರೆ, ಜನರ ಬದುಕಿನ ಮೇಲೆ ನಿರ್ಧಾರ ತೆಗೆದುಕೊಳ್ಳುವ ಸಾರ್ವಜನಿಕ ಕ್ಷೇತ್ರ. ಆದರೆ ಶತಮಾನಗಳ ಕಾಲ ನಮ್ಮ ಸಾಮಾಜಿಕ ಮತ್ತು ಸಾಂಸ್ಕೃತಿಕ ವ್ಯವಸ್ಥೆ ಅದನ್ನು...

ಸಾಫ್ಟ್‌ವೇರ್ ಕೈಗೊಂಬೆಯಾದ ಚುನಾವಣಾ ವ್ಯವಸ್ಥೆ: ದೆಹಲಿಯಿಂದಲೇ ಇಡೀ ದೇಶದ...

ತಂತ್ರಜ್ಞಾನವು ಚುನಾವಣಾ ಪ್ರಕ್ರಿಯೆಯನ್ನು ಸುಲಭ ಮತ್ತು ಪಾರದರ್ಶಕಗೊಳಿಸಲು ಇರಬೇಕೇ ವಿನಃ, ಪ್ರಜಾಪ್ರಭುತ್ವವನ್ನು ಉಸಿರುಗಟ್ಟಿಸಲು ಅಲ್ಲ. ಒಬ್ಬ ಐಟಿ ಅಧಿಕಾರಿಯ ವಿವೇಚನಾರಹಿತ ನಿರ್ಧಾರಗಳು ಹಾಗೂ ಅದಕ್ಕೆ ಕುಮ್ಮಕ್ಕು ನೀಡುತ್ತಿರುವ ಸಾಂಸ್ಥಿಕ ಮೌನವು ಇಡೀ ಚುನಾವಣಾ...

ಅಂಚೆ ಮತಗಳ ಎಣಿಕೆ ಮುಗಿದಿದೆ. ಇವಿಎಂ ಮತಗಳ ಎಣಿಕೆ ನಡೆಯುತ್ತಿದೆ. ಆದರೆ, ಪಿಠಾಪುರಂ ವಿಧಾನಸಭಾ ಕ್ಷೇತ್ರದಲ್ಲಿ ಪವನ್ ಕಲ್ಯಾಣ್ 4300 ಮತಗಳ ಮುನ್ನಡೆ ಸಾಧಿಸಿದ್ದಾರೆ. ತೆನಾಲಿ ಲೋಕಸಭಾ ಕ್ಷೇತ್ರದಲ್ಲಿ ಜನಸೇನಾ ಮುಖಂಡ ನಾದೆಂದ್ಲ ಮನೋಹರ್ ಮುನ್ನಡೆ ಸಾಧಿಸಿದ್ದಾರೆ. ಸದ್ಯದ ಮಾಹಿತಿಯಂತೆ ಚಂದ್ರಬಾಬು ನಾಯ್ಡು ಅವರ ಟಿಡಿಪಿ ಮತ್ತು ಪವನ್ ಕಲ್ಯಾಣ್ ನೇತೃತ್ವದ ಜನ ಸೇನಾ ಪಕ್ಷ  ಹಾಗೂ ಬಿಜೆಪಿ ಮೈತ್ರಿ ಮುನ್ನಡೆ ಕಾಯ್ದುಕೊಂಡಿದೆ.

ಈ ಸುದ್ದಿ ಓದಿದ್ದೀರಾ? ಗುಜರಾತ್ ಗಾಂಧಿನಗರ ಕ್ಷೇತ್ರ | 5 ಲಕ್ಷ ಮತಗಳ ಅಂತರದಿಂದ ಗೃಹ ಸಚಿವ ಅಮಿತ್ ಶಾ ಗೆಲುವು

ಜನಸೇನಾ ಪಕ್ಷ ಕಟ್ಟಿ ಕಳೆದ ಚುನಾವಣೆಯಲ್ಲಿ ಪವನ್ ಸೋತಿದ್ದರು. ತಮ್ಮ ಕ್ಷೇತ್ರದಲ್ಲೇ ಪವರ್ ಸ್ಟಾರ್ ಗೆಲ್ಲಲು ಸಾಧ್ಯವಾಗಿರಲಿಲ್ಲ. ಹಾಗಾಗಿ, ಈ ಬಾರಿ ಗೆದ್ದೇ ಗೆಲ್ಲಬೇಕು ಎಂದು ಬಿಜೆಪಿ, ಟಿಡಿಪಿ ಜೊತೆ ಮೈತ್ರಿ ಮಾಡಿಕೊಂಡು ಕಣಕ್ಕಿಳಿದಿದ್ದರು. ಪವನ್ ಎದುರು ವಂಗಾ ಗೀತಾ ಪರ ಆಂಧ್ರ ಸಿಎಂ ಜಗನ್ ಮೋಹನ್ ರೆಡ್ಡಿ ಸಹ ಪ್ರಚಾರ ನಡೆಸಿದ್ದರು. ಚುಣಾವಣೋತ್ತರ ಸಮೀಕ್ಷೆಗಳಲ್ಲಿ ಕೂಡ ಪವನ್ ಕಲ್ಯಾಣ್ ಗೆಲುವು ನಿಶ್ಚಿತ ಎನ್ನಲಾಗಿತ್ತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಇನ್‌ಸ್ಟಾಗ್ರಾಮ್ ಚಾಟ್ ವಿವಾಹೇತರ ಸಂಬಂಧಕ್ಕೆ ಪುರಾವೆಯಲ್ಲ: ಅಲಹಾಬಾದ್ ಹೈಕೋರ್ಟ್

ಪತ್ನಿಯು ಮತ್ತೊಬ್ಬ ವ್ಯಕ್ತಿಯೊಂದಿಗೆ ಇನ್‌ಸ್ಟಾಗ್ರಾಮ್‌ನಲ್ಲಿ ನಡೆಸಿದ ಸಂಭಾಷಣೆಗಳ ಪ್ರಿಂಟ್‌ಔಟ್‌ಗಳನ್ನು ಮಾತ್ರವೇ ಆಧಾರವಾಗಿಟ್ಟುಕೊಂಡು...

ಆದಿವಾಸಿ ಕಲಾವಿದನ ನಿಧನದ 25 ವರ್ಷಗಳ ನಂತರ ₹18 ಕೋಟಿಗೆ ಹರಾಜಾಯಿತು ಆತನ ಕಲಾಕೃತಿ!

ಈ ಚಿತ್ರಕಲಾಕೃತಿಯಲ್ಲಿ ಚಿತ್ರಿತವಾಗಿರುವ ನಾಗ, ಭೂಮಿತಾಯಿಯ ಪ್ರತೀಕ. ನಾಗನ ಮೇಲೆ ನಿಂತಿರುವ...