40 ಅವಿವಾಹಿತ ಹೆಣ್ಣುಮಕ್ಕಳನ್ನು ಗರ್ಭಿಣಿಯರೆಂದು ನಮೂದಿಸಿದ ಅಂಗನವಾಡಿ ಕಾರ್ಯಕರ್ತೆ

Date:

ಅಂಗನವಾಡಿ ಕಾರ್ಯಕರ್ತೆ ಸರ್ಕಾರದ ಹಣ ದುರ್ಬಳಕೆ ಮಾಡಿಕೊಳ್ಳುವ ಉದ್ದೇಶದಿಂದ 40 ಅವಿವಾಹಿತ ಹೆಣ್ಣುಮಕ್ಕಳನ್ನು ಗರ್ಭಿಣಿಯರು ಎಂದು ಉಲ್ಲೇಖಿಸಿರುವ ಪ್ರಕರಣ ಉತ್ತರಪ್ರದೇಶದಲ್ಲಿ ಬೆಳಕಿಗೆ ಬಂದಿದೆ.

- Advertisement -

ಪ್ರಧಾನಿ ಮೋದಿ ಅವರು ಪ್ರತಿನಿಧಿಸುವ ವಾರಣಾಸಿಯ ಮಲ್ಹಿಯಾ ಗ್ರಾಮದಲ್ಲಿ ಪ್ರಕರಣ ಬೆಳಕಿಗೆ ಬಂದಿದೆ. ಕೇಂದ್ರ ಸರ್ಕಾರದ ಮಕ್ಕಳು ಮತ್ತು ತಾಯಂದಿರ ಅಭಿವೃದ್ಧಿ ಸಚಿವಾಲಯದ ‘ಪೋಷಣ್ ಅಭಿಯಾನ ಯೋಜನೆ’ಯಡಿ ಅಂಗನವಾಡಿ ಕಾರ್ಯಕರ್ತೆ ಈ ಅವ್ಯವಹಾರ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಅವಿವಾಹಿತ ಹೆಣ್ಣುಮಕ್ಕಳನ್ನು ಗರ್ಭಿಣಿಯರೆಂದು ಅಂಗನವಾಡಿ ಕಾರ್ಯಕರ್ತೆ ಸುಮನಲತಾ ಉಲ್ಲೇಖಿಸಿದ್ದಾರೆ. ಆ ಹೆಣ್ಣುಮಕ್ಕಳ ಫೋನ್‌ ನಂಬರ್‌ಅನ್ನೂ ಕೂಡ ನಮೂದಿಸಿದ್ದಾರೆ.

ಆ ಎಲ್ಲ ಹೆಣ್ಣುಮಕ್ಕಳಿಗೆ, “ಪೋಷಣ್ ಟ್ರ್ಯಾಕರ್​ಗೆ ಸುಸ್ವಾಗತ, ಹಾಲುಣಿಸುವ ತಾಯಂದಿರು ಬಿಸಿಯೂಟ ಅಥವಾ ಪಡಿತರ, ಸಮಾಲೋಚನೆ, ಮಕ್ಕಳ ಆರೋಗ್ಯ ಮೇಲ್ವಿಚಾರಣೆ ಹಾಗೂ ಸ್ತನ್ಯಪಾನಕ್ಕೆ ಸಂಬಂಧಿಸಿದ ಸಲಹೆಯನ್ನು ಪಡೆಯಬಹುದು” ಎಂಬ ಸಂದೇಶಗಳು ಬಂದಿವೆ. ಆ ಸಂದೇಶಗಳನ್ನು ನೋಡಿ ಹೆಣ್ಣುಮಕ್ಕಳು ಮತ್ತು ಅವರ ಪೋಷಕರು ಆತಂಕಗೊಂಡಿದ್ದಾರೆ.

ಅಂಗನವಾಡಿ ಕಾರ್ಯಕರ್ತೆ ಸುಮನಲತಾ ಅವರು ಮತದಾರರ ಗುರುತಿನ ಚೀಟಿಗೆ ಆಧಾರ್ ಲಿಂಕ್ ಮಾಡಿಸುವ ನೆಪದಲ್ಲಿ ಹೆಣ್ಣುಮಕ್ಕಳ ಆಧಾರ್ ಮತ್ತು ಫೋನ್ ನಂಬರ್ ಪಡೆದುಕೊಂಡಿದ್ದಾರೆ. ಅವುಗಳನ್ನು ಬಳಸಿಕೊಂಡು ಹೆಣ್ಣುಮಕ್ಕಳು ಗರ್ಭಿಣಿಯರೆಂದು ಪೋಷಣ್ ಯೋಜನೆಯಡಿ ಅಪ್‌ಲೋಡ್ ಮಾಡಿದ್ದಾರೆ ಎಂದು ವರದಿಯಾಗಿದೆ.

ಈ ಬಗ್ಗೆ ಹೆಣ್ಣುಮಕ್ಕಳು ಅಂಗನವಾಡಿ ಕಾರ್ಯಕರ್ತೆಯನ್ನು ಪ್ರಶ್ನಿಸಿದ್ದು, ಆಕೆ ಹಾರಿಕೆಯ ಉತ್ತರ ನೀಡಿದ್ದಾರೆ. ಬಳಿಕ, ಅಧಿಕಾರಿಗಳಿಗೆ ದೂರು ನೀಡಲಾಗಿದೆ.

ದೂರನ್ನು ಆಧರಿಸಿ ಪೋಷಣ್ ಅಭಿಯಾನದ ಮುಖ್ಯ ಅಭಿವೃದ್ಧಿ ಅಧಿಕಾರಿ ಹಿಮಾಂಶು ನಾಗ್ಪಾಲ್ ಅವರು ತನಿಖೆಗೆ ಆದೇಶಿಸಿದ್ದಾರೆ. ಬ್ಲಾಕ್ ಅಭಿವೃದ್ಧಿ ಅಧಿಕಾರಿ ತನಿಖೆ ನಡೆಸುತ್ತಿದ್ದಾರೆ. ತನಿಖಾ ವರದಿ ಬಂದ ಬಳಿಕ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹಿಮಾಂಶು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...

ಅಯೋಧ್ಯೆ ರಾಮಮಂದಿರ ಸಿಬ್ಬಂದಿಗೆ ಶೇ. 100ರಷ್ಟು ಪೊಲೀಸ್ ವೆರಿಫಿಕೇಷನ್; ಹಿನ್ನೆಲೆ ಪರಿಶೀಲನೆ ಕಡ್ಡಾಯ

ಉತ್ತರ ಪ್ರದೇಶದ ಅಯೋಧ್ಯೆಯ ರಾಮಮಂದಿರ ಆಡಳಿತ ಮತ್ತು ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು...

ಸಿಇಸಿ ಗ್ಯಾನೇಶ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ಅನುಮತಿ ನಿರಾಕರಣೆ; ಜಂತರ್ ಮಂತರ್‌ನಲ್ಲಿ ಬಿಗಿ ಭದ್ರತೆ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...