ಕರಾಟೆ ಶೈಲಿಯಲ್ಲಿ ಕ್ಯಾಂಟೀನ್‌ ಸಿಬ್ಬಂದಿಗೆ ಥಳಿಸಿದ ಶಾಸಕ; ವಿಡಿಯೋ ವೈರಲ್

Date:

Advertisements

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಬಣದ ಶಾಸಕ ಸಂಜಯ್ ಗಾಯಕ್ವಾಡ್ ಮುಂಬೈನ ಎಂಎಲ್​ಎ ಗೆಸ್ಟ್​ಹೌಸ್​ನಲ್ಲಿರುವ ಕ್ಯಾಂಟೀನ್​​ನ ಸಿಬ್ಬಂದಿಯೊಬ್ಬರಿಗೆ ಕರಾಟೆ ಶೈಲಿಯಲ್ಲಿ ಥಳಿಸಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಶಾಸಕ ಸಂಜಯ್​ಗೆ ನೀಡಿರುವ ದಾಲ್ ಚೆನ್ನಾಗಿಲ್ಲವೆಂದು ಕ್ಯಾಂಟೀನ್​ ನಿರ್ವಾಹಕರನ್ನು ಥಳಿಸಿದ್ದಾರೆ ಎನ್ನಲಾಗಿದೆ. ಪದಾರ್ಥಕ್ಕೆ ಹಾಕಿದ್ದ ಬೇಳೆಗಳಿಂದ ವಾಸನೆ ಬರುತ್ತಿತ್ತು ಎಂದು ಶಾಸಕರು ಆರೋಪಿಸಿದ್ದಾರೆ. ಇದರಿಂದ ಕೋಪಗೊಂಡ ಅವರು ಕ್ಯಾಂಟೀನ್ ನಿರ್ವಾಹಕರ ಮೇಲೆ ಹಲ್ಲೆ ನಡೆಸಿದ್ದಾರೆ.

ಶಾಸಕರ ಬಳಿ ಜಗಳವಾಡದಂತೆ ಮನವೊಲಿಸಲು ಹಲವರು ಪ್ರಯತ್ನಿಸುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಈ ಘಟನೆ ಮಂಗಳವಾರ ರಾತ್ರಿ ನಡೆದಿದೆ ಎಂದು ಹೇಳಲಾಗುತ್ತಿದೆ. ಮಹಾರಾಷ್ಟ್ರದಲ್ಲಿ ವಿಧಾನಸಭಾ ಅಧಿವೇಶನ ನಡೆಯುತ್ತಿರುವುದರಿಂದ ಎಲ್ಲ ಶಾಸಕರು ಮುಂಬೈಗೆ ಬಂದಿದ್ದಾರೆ.

Advertisements

ಬುಲ್ದಾನ ಕ್ಷೇತ್ರದ ಶಾಸಕ ಸಂಜಯ್ ಗಾಯಕ್ವಾಡ್ ಕೂಡ ಶಾಸಕರ ವಸತಿಗೃಹಕ್ಕೆ ಹೋಗಿ, ಅಲ್ಲಿನ ಕ್ಯಾಂಟೀನ್​​ನಲ್ಲಿ ಆಹಾರವನ್ನು ಆರ್ಡರ್ ಮಾಡಿದ್ದರು. ಈ ಸಮಯದಲ್ಲಿ ಅನೇಕ ಮಂದಿ ದಾಲ್ ಕೆಟ್ಟದಾಗಿದೆ ಮತ್ತು ಅದರಿಂದ ದುರ್ವಾಸನೆ ಬೀರುತ್ತಿದೆ ಎಂದು ದೂರಿದ್ದರು. ದೂರು ನೀಡಿದ ನಂತರವೂ ಕ್ಯಾಂಟೀನ್ ನಿರ್ವಾಹಕ ಅದರ ಬಗ್ಗೆ ಹೆಚ್ಚು ಗಮನಕೊಡಲಿಲ್ಲ ಎಂದು ಆರೋಪಿಸಲಾಗಿದೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ವಿಶ್ವಾಸಾರ್ಹತೆ ಕಳೆದುಕೊಂಡ ಚುನಾವಣಾ ಆಯೋಗದ ಅವಶ್ಯಕತೆ ಇದೆಯೇ?

ಆದರೆ ಅದೇ ದಾಲ್ ಅನ್ನು ಶಾಸಕ ಗಾಯಕ್ವಾಡ್ ಅವರಿಗೆ ಬಡಿಸಿದಾಗ, ಅವರು ಕ್ಯಾಂಟೀನ್ ನಿರ್ವಾಹಕರ ಬಳಿಗೆ ಹೋಗಿ ಆಹಾರ ಸರಿಯಾಗಿಲ್ಲ ಎಂದು ಹೇಳಿ ಹಲ್ಲೆ ನಡೆಸಿದ್ದಾರೆ. ಶಾಸಕರು ಕರಾಟೆ ಶೈಲಿಯಲ್ಲಿ ಹಲ್ಲೆ ನಡೆಸಿರುವ ವಿಡಿಯೋ ವೈರಲ್ ಆಗುತ್ತಿದೆ. ಈ ವಿಷಯದ ಬಗ್ಗೆ ಆಹಾರ ಮತ್ತು ಆಡಳಿತ ಇಲಾಖೆಯಲ್ಲಿ ಕ್ಯಾಂಟೀನ್ ನಿರ್ವಾಹಕರ ವಿರುದ್ಧ ದೂರು ದಾಖಲಿಸಲಾಗುವುದು ಎಂದು ಶಾಸಕರು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

Download Eedina App Android / iOS

X