ಅಂಕಿತಾ ಭಂಡಾರಿ ಕೊಲೆ ಪ್ರಕರಣ: ಧರಣಿ ಕುಳಿತ ಪೋಷಕರನ್ನು ರಾಜ್‌ಘಾಟ್‌ನಿಂದ ತೆರವುಗೊಳಿಸಿದ ಪೊಲೀಸರು!

Date:

ಅಂಕಿತಾ ಭಂಡಾರಿ ಹತ್ಯೆ ಪ್ರಕರಣದಲ್ಲಿ ‘ವಿಐಪಿ’ ಕೋನದ ಸಿಬಿಐ ತನಿಖೆಗೆ ಆಗ್ರಹಿಸಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸುದೀರ್ಘ ಹೋರಾಟ ನಡೆಸುತ್ತಿರುವ ಸಂತ್ರಸ್ತೆಯ ಪೋಷಕರನ್ನು, ಬುಧವಾರ (ನವೆಂಬರ್ 4) ರಾಜ್‌ಘಾಟ್ ಬಳಿ ಧರಣಿ ನಡೆಸುತ್ತಿದ್ದ ವೇಳೆ ದೆಹಲಿ ಪೊಲೀಸರು ತೆರವುಗೊಳಿಸಿದ್ದಾರೆ.

- Advertisement -

ಉತ್ತರಾಖಂಡದ ರಿಷಿಕೇಶದ ವನಂತರಾ ರೆಸಾರ್ಟ್‌ನಲ್ಲಿ ರಿಸೆಪ್ಷನಿಸ್ಟ್ ಆಗಿ ಕಾರ್ಯನಿರ್ವಹಿಸುತ್ತಿದ್ದ 19 ವರ್ಷದ ಅಂಕಿತಾ ಭಂಡಾರಿ 2022ರ ಸೆಪ್ಟೆಂಬರ್ 18ರಂದು ನಾಪತ್ತೆಯಾಗಿದ್ದರು. ನಾಲ್ಕು ದಿನಗಳ ನಂತರ ಆಕೆಯ ಮೃತದೇಹ ಚಿಲ್ಲಾ ಕಾಲುವೆಯಲ್ಲಿ ಪತ್ತೆಯಾಗಿತ್ತು. ಈ ಭೀಕರ ಹತ್ಯೆ ಪ್ರಕರಣದಲ್ಲಿ ರೆಸಾರ್ಟ್ ಮಾಲೀಕ, ಮಾಜಿ ಬಿಜೆಪಿ ನಾಯಕ ವಿನೋದ್ ಆರ್ಯ ಅವರ ಪುತ್ರ ಪುಲ್ಕಿತ್ ಆರ್ಯ ಹಾಗೂ ಆತನ ಇಬ್ಬರು ಸಹಚರರಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಆದರೆ, ಘಟನೆಯ ಹಿಂದೆ ಪ್ರಭಾವಿ ‘ವಿಐಪಿ’ಯೊಬ್ಬರ ಕೈವಾಡವಿದೆ ಎಂಬ ಆರೋಪ ಸಾಬೀತಾಗಬೇಕಿದ್ದು, ಕುಟುಂಬಸ್ಥರು ತನಿಖೆಗೆ ಪಟ್ಟು ಹಿಡಿದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘Quockerwodger’: ಶಶಿ ತರೂರ್ ಸೂಚಿಸಿದ ಹೊಸ ರಾಜಕೀಯ ಪದ!

ಇದು 19ನೇ ಶತಮಾನದ ಇಂಗ್ಲಿಷ್ ಭಾಷೆಯಲ್ಲಿ ಬಳಕೆಯಲ್ಲಿದ್ದ ಅಪರೂಪದ ಪದ. ಮೂಲತಃ ದಾರಗಳ ಮೂಲಕ ನಿಯಂತ್ರಿಸಲ್ಪಡುವ ಮರದ ಗೊಂಬೆಯನ್ನು ಸೂಚಿಸುತ್ತಿತ್ತು. ಗೊಂಬೆಯಾಟದಲ್ಲಿ ಸೂತ್ರಧಾರ ದಾರ ಎಳೆದಂತೆ ಗೊಂಬೆ ಕೈಕಾಲು ಆಡಿಸುತ್ತದೆ. ಗೊಂಬೆ ಚಲಿಸುತ್ತದೆಯೇ...

ರಾಷ್ಟ್ರೀಯವಾದ ಹೊಟ್ಟೆ ತುಂಬಿಸುವುದಿಲ್ಲ; ಟ್ರಂಪ್‌ಗೆ ಅಮೆರಿಕನ್ನರು ಕಲಿಸಿದ ಪಾಠ...

ಬೆಲೆ ಏರಿಕೆ, ದುಬಾರಿ ಜೀವನ, ಕುಸಿಯುತ್ತಿರುವ ಖರೀದಿ ಸಾಮರ್ಥ್ಯ ಹಾಗೂ ಆರ್ಥಿಕ ಅನಿಶ್ಚಿತತೆ—ಇವು ಇತ್ತೀಚೆಗೆ ನಡೆದ ಅಮೆರಿಕದ ಮಧ್ಯಂತರ ಚುನಾವಣಾ ವಿಷಯಗಳಾಗಿದ್ದವು. ಇದು ರಾಷ್ಟ್ರೀಯತೆಯ ಆವೇಶ, ಬಲಿಷ್ಠ ನಾಯಕತ್ವವೆಂಬ ಪ್ರಚಾರ ಹಾಗೂ ರಾಜಕೀಯ...

ಕ್ಯಾಂಪಸ್ ರಾಜಕಾರಣದ ಹರಣ: ಎಎಂಯು, ಜಾಮಿಯಾದಲ್ಲಿ ಸೊಲ್ಲಡಗಿದ್ದರ ಆಂತರ್ಯವೇನು?

ಸ್ವಾತಂತ್ರ್ಯ ಸಂಗ್ರಾಮದ ಗರಡಿಯಾಗಿ, ದೇಶಕ್ಕೆ ಕ್ರಾಂತಿಕಾರಿ ನಾಯಕರನ್ನು ನೀಡಿದ್ದ ಅಲೀಗಢ ಮತ್ತು ಜಾಮಿಯಾ ಅಂಗಳಗಳು ಇಂದು ಮೌನಕ್ಕೆ ಜಾರಿವೆ. 2006ರ ನಿರ್ಬಂಧಗಳಿಂದ ಹಿಡಿದು ಮೋದಿ ಸರ್ಕಾರದ ಅವಧಿಯ ತನಿಖೆಗಳವರೆಗೆ - ಮುಸ್ಲಿಂ ವಿಶ್ವವಿದ್ಯಾಲಯಗಳ...

ಬುಧವಾರ ಮಹಾತ್ಮ ಗಾಂಧಿ ಸ್ಮಾರಕವಾದ ರಾಜ್‌ಘಾಟ್‌ಗೆ ಆಗಮಿಸಿದ್ದ ಅಂಕಿತಾ ಅವರ ತಂದೆ ವೀರೇಂದ್ರ ಸಿಂಗ್ ಭಂಡಾರಿ ಮತ್ತು ತಾಯಿ ಸೋನಿ ದೇವಿ, ಪ್ರಾರ್ಥನೆ ಸಲ್ಲಿಸಿ ಮಾಧ್ಯಮಗಳೊಂದಿಗೆ ಮಾತನಾಡಿದರು. ಬಳಿಕ ಸ್ಮಾರಕದ ಸಾರ್ವಜನಿಕ ಪ್ರವೇಶ ದ್ವಾರದ ಬಳಿ ಮತ್ತಿಬ್ಬರೊಂದಿಗೆ ಕುಳಿತು ಪ್ರತಿಭಟನೆ ಆರಂಭಿಸಿದರು.

ಸದರಿ ಸ್ಥಳವು ನಿಗದಿತ ಪ್ರತಿಭಟನಾ ಸ್ಥಳವಲ್ಲದ ಕಾರಣ ಜಾಗವನ್ನು ತೆರವುಗೊಳಿಸುವಂತೆ ಪೊಲೀಸರು ಹಲವು ಬಾರಿ ಮನವಿ ಮಾಡಿದರು. ಆದರೆ, ಪೋಷಕರು ಜಾಗದಿಂದ ಕದಲುವುದಕ್ಕೆ ನಿರಾಕರಿಸಿದಾಗ ಪೊಲೀಸರು ಅವರನ್ನು ಬಲವಂತವಾಗಿ ತೆರವುಗೊಳಿಸಿದರು. ಯಾರನ್ನೂ ವಶಕ್ಕೆ ಪಡೆದಿಲ್ಲ ಎಂದು ಪೊಲೀಸ್ ಮೂಲಗಳು ಸ್ಪಷ್ಟಪಡಿಸಿವೆ.

ಪೋಲಿಸರ ತೆರವು ಕಾರ್ಯಾಚರಣೆಯ ಸಂದರ್ಭದಲ್ಲಿ ಸೋನಿ ದೇವಿ ಅವರ ಆರೋಗ್ಯ ಸ್ಥಿತಿ ಹದಗೆಟ್ಟಿತು. ಕೆಲವು ವರದಿಗಳ ಪ್ರಕಾರ ಅವರು ಮೂರ್ಛೆ ಬಿದ್ದಿದ್ದರು. ತಕ್ಷಣವೇ ಅವರನ್ನು ಬುರಾರಿಯ ಸರ್ಕಾರಿ ಆಸ್ಪತ್ರೆಗೆ ಮೆಡಿಕೋ-ಲೀಗಲ್ ತಪಾಸಣೆಗೆ  ಕರೆದೊಯ್ಯಲಾಯಿತು. ಆದರೆ, ಪೋಷಕರಿಬ್ಬರೂ ವೈದ್ಯಕೀಯ ತಪಾಸಣೆಗೆ ಒಳಗಾಗಲು ನಿರಾಕರಿಸಿದರು. ಈ ಹಂತದಲ್ಲಿ ಸ್ಥಳಕ್ಕೆ ಆಗಮಿಸಿದ ಬುರಾರಿ ಕ್ಷೇತ್ರದ ಆಪ್‌ (AAP) ಶಾಸಕ ಸಂಜೀವ್ ಝಾ ಮತ್ತು ಅವರ ಬೆಂಬಲಿಗರೊಂದಿಗೆ ಪೋಷಕರು ಆಸ್ಪತ್ರೆಯಿಂದ ತೆರಳಿದರು.

ಇದಕ್ಕೂ ಮೊದಲು, ಅಂದರೆ ಅಕ್ಟೋಬರ್ 14 ರಂದು ಇಂಡಿಯಾ ಗೇಟ್ ಬಳಿ ಪ್ರತಿಭಟನೆ ನಡೆಸುತ್ತಿದ್ದಾಗಲೂ ಅಂಕಿತಾ ಪೋಷಕರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದರು. ಹಿರಿಯ ಬಿಜೆಪಿ ನಾಯಕ ದುಷ್ಯಂತ್ ಕುಮಾರ್ ಗೌತಮ್ ಅವರನ್ನು ಸಿಕ್ಕಿಂ ರಾಜ್ಯಪಾಲರಾಗಿ ನೇಮಕ ಮಾಡಿರುವುದನ್ನು ವಿರೋಧಿಸಿ ಅವರು ಧರಣಿ ನಡೆಸುತ್ತಿದ್ದರು.

ಅಂಕಿತಾ ಕೊಲೆ ಪ್ರಕರಣದಲ್ಲಿನ ‘ವಿಐಪಿ’ ಕೋನದ ಬಗ್ಗೆ ಸಿಬಿಐ ತನಿಖೆ ಪೂರ್ಣಗೊಳ್ಳುವವರೆಗೆ ಗೌತಮ್ ಅವರ ನೇಮಕಾತಿಯನ್ನು ತಡೆಹಿಡಿಯಬೇಕು ಎಂಬುದು ಕುಟುಂಬದ ಆಗ್ರಹವಾಗಿದೆ. ಸಂಸದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಪೋಷಕರನ್ನು ಭೇಟಿಯಾಗಿ ಸಾಂತ್ವನ ಹೇಳಿ ಬೆಂಬಲ ವ್ಯಕ್ತಪಡಿಸಿದ್ದರು.

ಮತ್ತೊಂದೆಡೆ, ತಮ್ಮ ವಿರುದ್ಧದ ಆರೋಪಗಳನ್ನು ಸಂಪೂರ್ಣವಾಗಿ ತಳ್ಳಿಹಾಕಿರುವ ಸಿಕ್ಕಿಂ ರಾಜ್ಯಪಾಲ ದುಷ್ಯಂತ್ ಕುಮಾರ್ ಗೌತಮ್, ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ. ಅಂಕಿತಾ ಪ್ರಕರಣದಲ್ಲಿ ಅವರನ್ನು ಎಫ್‌ಐಆರ್‌ನಲ್ಲಿ ಆರೋಪಿಯನ್ನಾಗಿ ಹೆಸರಿಸಲಾಗಿಲ್ಲ.

ಉತ್ತರಾಖಂಡ ಸರ್ಕಾರದ ಶಿಫಾರಸಿನಂತೆ 2026ರಲ್ಲಿ ಸಿಬಿಐ ಈ ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಂಡಿದ್ದು, ಮಗಳಿಗೆ ಸಂಪೂರ್ಣ ನ್ಯಾಯ ಸಿಗುವವರೆಗೂ ಹೋರಾಟ ಮುಂದುವರಿಸುವುದಾಗಿ ಅಂಕಿತಾ ಭಂಡಾರಿ ಅವರ ಪೋಷಕರು ಸ್ಪಷ್ಟಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಫಾರಂ-7 ದುರುಪಯೋಗ, ಮತಗಳ್ಳತನದ ವಿರುದ್ಧ ಪೊಲೀಸ್ ತನಿಖೆ: ಸಿಎಂ ಡಿ ಕೆ ಶಿವಕುಮಾರ್ ಎಚ್ಚರಿಕೆ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವೇಳೆ ಮತದಾರರ ಪಟ್ಟಿಯಿಂದ...

ಶ್ವೇತಭವನ ಗೆಲ್ಲಲು 2028ರ ತನಕ ಕಾಯಬೇಕು ಡೆಮಾಕ್ರಟ್ಸ್!

ನವೆಂಬರ್ 3ರ ಅಮೆರಿಕದ ಮಧ್ಯಂತರ ಚುನಾವಣೆಯಲ್ಲಿ ಡೆಮಾಕ್ರಟರು ಭರ್ಜರಿ ಗೆಲುವು ಸಾಧಿಸಿದ್ದಾರೆ....

3 ತಿಂಗಳ ಬಳಿಕ ಐಟಿ ವಿಭಾಗದ ಮೇಲುಸ್ತುವಾರಿ ಹಿಂಪಡೆದ ಚು. ಆಯೋಗ!

ಕೇಂದ್ರ ಚುನಾವಣಾ ಆಯೋಗದಲ್ಲಿ (ECI) ಕಾರ್ಯ ಹಂಚಿಕೆ ಆದೇಶಕ್ಕೆ ಸಂಬಂಧಿಸಿದಂತೆ ಮುಖ್ಯ...

‘ಚಾಯ್ ಪೇ ಚರ್ಚಾ’ – ಕಾಂಗ್ರೆಸ್‌ನ ಹಿರಿಯ ನಾಯಕರಿಗೆ ರಾಹುಲ್ ಗಾಂಧಿ ಆಹ್ವಾನ

ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಕಾಂಗ್ರೆಸ್‌ನ ಪ್ರಮುಖ ಹಿರಿಯ...