ಬಾಬಾ ಸಿದ್ದೀಕಿ ಹತ್ಯೆ ಪ್ರಕರಣ: ಅನ್ಮೋಲ್ ಬಿಷ್ಣೋಯಿ ಅಮೆರಿಕದಿಂದ ಭಾರತಕ್ಕೆ ಗಡೀಪಾರು

Date:

ಮಹಾರಾಷ್ಟ್ರದ ಎನ್‌ಸಿಪಿ ಮುಖಂಡ ಬಾಬಾ ಸಿದ್ದೀಕಿ ಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಅನ್ಮೋಲ್ ಬಿಷ್ಣೋಯಿಯನ್ನು ಅಮೆರಿಕದಿಂದ ಭಾರತಕ್ಕೆ ಗಡೀಪಾರು ಮಾಡಲಾಗಿದೆ.

- Advertisement -

ಈ ಬಗ್ಗೆ ಅಧಿಕೃತ ದೃಢೀಕರಣ ಬಂದಿಲ್ಲವಾದರೂ, ಮಂಗಳವಾರ ಆರೋಪಿಯನ್ನು ಅಮೆರಿಕದಿಂದ ಗಡೀಪಾರು ಮಾಡಲಾಗಿದ್ದು, ಬುಧವಾರ ಬೆಳಿಗ್ಗೆ 10 ಗಂಟೆ ವೇಳೆಗೆ ದೆಹಲಿ ವಿಮಾನ ನಿಲ್ದಾಣಕ್ಕೆ ಕರೆತರಲಾಗುವುದು ಎಂದು ಉನ್ನತ ಮೂಲಗಳು ಹೇಳಿವೆ. ರಾಷ್ಟ್ರೀಯ ತನಿಖಾ ಸಂಸ್ಥೆ ಗಡೀಪಾರು ಪ್ರಕ್ರಿಯೆಯನ್ನು ಸಂಯೋಜಿಸುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

‘ಪಿತೃಪ್ರಭುತ್ವವನ್ನು ಧ್ವಂಸ ಮಾಡಿ’: ಮನುವಾದ ಮತ್ತು ಫ್ಯಾಸಿಸಂ ವಿರುದ್ಧ...

ಸ್ವತಂತ್ರ ಭಾರತ 80 ವರ್ಷಗಳನ್ನು ಪೂರೈಸುತ್ತಿರುವಾಗ, ನಾವು ಕೇಳಬೇಕಾಗಿದೆ, ಆ ಮನಸ್ಥಿತಿ ಹೋಗಿದೆಯೇ? ಇಲ್ಲ. ಪುಸ್ತಕವನ್ನು ಸುಡಲಾಗಿರಬಹುದು, ಆದರೆ ಮನುಸ್ಮೃತಿಯ ಮನಸ್ಥಿತಿ, ಮನುವಾದ, ಹೆಚ್ಚು ಅತ್ಯಾಧುನಿಕ ಮತ್ತು ಅದೃಶ್ಯ ರೂಪಗಳಲ್ಲಿ ಅಸ್ತಿತ್ವದಲ್ಲಿದೆ.  ಪುಣೆಯಲ್ಲಿ ನಡೆದ...

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಅಮೆರಿಕದಿಂದ ಗಡೀಪಾರು ಮಾಡಲಾಗಿರುವ 200 ಮಂದಿ ಅಕ್ರಮ ವಾಸಿಗಳನ್ನು ಹೊತ್ತ ವಿಶೇಷ ವಿಮಾನದಲ್ಲಿ ಬಿಷ್ಣೋಯಿ ಕೂಡಾ ಇದ್ದಾನೆ ಎಂದು ಮೂಲಗಳು ಹೇಳಿದ್ದು, ಭಾರತದ ಪೊಲೀಸರಿಗೆ ಬೇಕಿದ್ದ ಪಂಜಾಬ್‌ನ ಇಬ್ಬರು ದೇಶಭ್ರಷ್ಟರು ಕೂಡಾ ಇದರಲ್ಲಿ ಸೇರಿದ್ದಾರೆ ಎನ್ನಲಾಗಿದೆ. ಮೃತ ಬಾಬಾ ಸಿದ್ದೀಕಿ ಅವರ ಮಗ ಝೀಷಾನ್ ಈ ಗಡೀಪಾರನ್ನು ದೃಢಪಡಿಸಿದ್ದು, ಅಮೆರಿಕದ ಹೋಮ್ ಲ್ಯಾಂಡ್ ಸೆಕ್ಯುರಿಟಿ ಇಲಾಖೆ ಇ-ಮೇಲ್ ಮೂಲಕ ಅಧಿಕೃತವಾಗಿ ಗಡೀಪಾರನ್ನು ದೃಢಪಡಿಸಿದೆ ಎಂದು ಹೇಳಿದ್ದಾರೆ.

ಇದನ್ನು ಓದಿದ್ದೀರಾ? ಗುಜರಾತ್‌ | ನ. 21 ರಿಂದ ಕಾಂಗ್ರೆಸ್‌ ಜನಾಕ್ರೋಶ ಯಾತ್ರೆ

ರಹಸ್ಯ ವೆಬ್ ಆಧರಿತ ಡಿಎಚ್ಎಸ್-ವಿಐಎನ್ಇ ಎಂಬ ವ್ಯವಸ್ಥೆ ಮೂಲಕ ಈ ಇ-ಮೇಲ್ ಕಳುಹಿಸಲಾಗಿದ್ದು, ಅಮೆರಿಕದ ವಶದಲ್ಲಿರುವ ಅಕ್ರಮ ವಲಸೆಯವರು ಎಸಗಿದ ಅಪರಾಧಗಳಿಂದ ಸಂತ್ರಸ್ತರಾಗಿ ನೋಂದಾಯಿತರಾದವರಿಗೆ ಅಧಿಕೃತ ಅಧಿಸೂಚನೆಯನ್ನು ಈ ವ್ಯವಸ್ಥೆ ಮೂಲಕ ಕಳುಹಿಸಲಾಗುತ್ತದೆ.

ಬಿಷ್ಣೋಯಿ ಚಲನ ವಲನಗಳ ಬಗ್ಗೆ ಮುಂಬೈ ಪೊಲೀಸರಿಂದ ಯಾವುದೇ ಮಾಹಿತಿ ದೊರಕದ ಹಿನ್ನೆಲೆಯಲ್ಲಿ ಝೀಷಾನ್ ಸಿದ್ದೀಕಿ ಅವರು ಅಮೆರಿಕದ ಅಧಿಕಾರಿಗಳಿಂದ ಮಾಹಿತಿ ಕೋರಿದ್ದರು. ಅಮೆರಿಕದ ಫೆಡರಲ್ ಸರ್ಕಾರ ಅನ್ಮೋಲ್ ಬಿಷ್ಣೋಯಿಯನ್ನು ಅಮೆರಿಕದ ನೆಲದಿಂದ ಕಳುಹಿಸಿದೆ ಎಂಬ ಮಾಹಿತಿಯನ್ನು ಒಳಗೊಂಡ ಇ-ಮೇಲ್ ಸಂದೇಶವನ್ನು ಸಿದ್ದೀಕಿ ಹಂಚಿಕೊಂಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸೊಹ್ರಾಬುದ್ದೀನ್ ಪ್ರಕರಣ: ಅಮಿತ್ ಶಾ ಬಿಡುಗಡೆ ಮರುಪರಿಶೀಲನೆಗೆ ಸುಪ್ರೀಂ ಕೋರ್ಟ್ ನಕಾರ

ತೀವ್ರ ಕುತೂಹಲ ಕೆರಳಿಸಿರುವ ಸೊಹ್ರಾಬುದ್ದೀನ್ ಶೇಖ್ ನಕಲಿ ಎನ್‌ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ,...

ಪ್ರಚೋದನಕಾರಿ ಭಾಷಣದಿಂದ ಹಲ್ಲೆಯವರೆಗೆ: ಪರ್ವೇಶ್ ವರ್ಮಾ ಎಂಬ ಪರಮ ದುರಹಂಕಾರಿಯ ಕತೆ

ಪ್ರಜಾಪ್ರಭುತ್ವದಲ್ಲಿ ಜನಪ್ರತಿನಿಧಿಗಳು ಜನರಿಗೆ ಉತ್ತರದಾಯಿಗಳಾಗಿರಬೇಕು. ಆದರೆ, ದೆಹಲಿಯ ಲೋಕೋಪಯೋಗಿ ಸಚಿವ ಪರ್ವೇಶ್...

ದೆಹಲಿಯಲ್ಲಿ ಮಹಿಳೆಯರ ಸುರಕ್ಷತೆ ಬಗ್ಗೆ ಪ್ರಾಧಿಕಾರಗಳ ನಿರ್ಲಕ್ಷ್ಯ: ಸುಪ್ರೀಂ ಕೋರ್ಟ್ ತೀವ್ರ ಅಸಮಾಧಾನ

ದೆಹಲಿ ಮತ್ತು ರಾಷ್ಟ್ರೀಯ ರಾಜಧಾನಿ ವಲಯದಲ್ಲಿ (NCR) ಅಪ್ರಾಪ್ತರು ಹಾಗೂ ಮಹಿಳೆಯರ...