ಎಐಡಿಎಂಕೆ – ಬಿಜೆಪಿ ಮೈತ್ರಿಯಲ್ಲಿ ಜಾತಿ ಸಮೀಕರಣ; ರಾಜ್ಯಾಧ್ಯಕ್ಷ ಸ್ಥಾನದಿಂದ ಅಣ್ಣಾಮಲೈ ಕೈಬಿಡುವ ಸಾಧ್ಯತೆ

Date:

2023ರಲ್ಲಿ ಎಐಎಡಿಎಂಕೆ ಮತ್ತು ಬಿಜೆಪಿ ವಿಭಜನೆಯಾಗಲು ಅಣ್ಣಾಮಲೈ ಕಾರಣ ಎನ್ನಲಾಗಿತ್ತು. ಆದರೆ ಈಗ ವಿಧಾನಸಭೆ ಚುನಾವಣೆ ಸಮೀಪಿಸುವ ಹೊತ್ತಿನಲ್ಲಿ ಎರಡೂ ಪಕ್ಷಗಳ ನಡುವೆ ಮೈತ್ರಿ ಮಾತುಕತೆಗಳು ಚುರುಕು ಪಡೆದುಕೊಳ್ಳುತ್ತಿದ್ದು, ತಮಿಳುನಾಡು ಬಿಜೆಪಿ ಅಧ್ಯಕ್ಷ ಸ್ಥಾನದಿಂದ ಕೆ ಅಣ್ಣಾಮಲೈ ಕೆಳಗಿಳಿಯಬಹುದು ಎನ್ನಲಾಗುತ್ತಿದೆ.

- Advertisement -

ಮುಂದಿನ ವರ್ಷ ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ಬಿಜೆಪಿ-ಎಐಎಡಿಎಂಕೆ ಮೈತ್ರಿಕೂಟ ರಚನೆಯಾಗುವ ಬಗ್ಗೆ ಚರ್ಚೆ ನಡೆಯುತ್ತಿರುವ ನಡುವೆಯೇ, ಕೆ ಅಣ್ಣಾಮಲೈ ಬಿಜೆಪಿ ತಮಿಳುನಾಡು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯುವ ಸಾಧ್ಯತೆ ಇದೆ.
ಚುನಾವಣೆ ಸಮೀಪಿಸುತ್ತಿರುವ ರಾಜ್ಯದಲ್ಲಿ ಬಿಜೆಪಿ ತನ್ನ ಪ್ರಾಬಲ್ಯವನ್ನು ಹೆಚ್ಚಿಸಲು ಪ್ರಯತ್ನಿಸುತ್ತಿರುವ ಜಾತಿ ಸಮೀಕರಣಗಳನ್ನು ಪರಿಗಣಿಸಿ ಈ ನಿರ್ಧಾರ ತೆಗೆದುಕೊಳ್ಳಲಾಗುತ್ತಿದೆ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಬಿಜೆಪಿಗೆ ಒಂದೇ ಗೌಂಡರ್ ಸಮುದಾಯದ ಎರಡೂ ಮಿತ್ರ ಪಾಲುದಾರರ (ಬಿಜೆಪಿ-ಎಐಎಡಿಎಂಕೆ) ಮುಖಗಳು ಬೇಕಾಗಿಲ್ಲ. ಕೆ ಅಣ್ಣಾಮಲೈ ಮತ್ತು ಕೆ ಪಳನಿಸ್ವಾಮಿ ಇಬ್ಬರೂ ಗೌಂಡರ್‌ ಸಮುದಾಯಕ್ಕೆ ಸೇರಿದವರು. ಇಬ್ಬರೂ ಗೌಂಡರ್‌ಗಳು ಪ್ರಾಬಲ್ಯ ಹೊಂದಿರುವ ತಮಿಳುನಾಡಿನ ಒಂದೇ ಪಶ್ಚಿಮ ಕೊಂಗು ಪ್ರದೇಶದಿಂದ ಬಂದವರು. ಇಬ್ಬರು ಒಂದೇ ಸಮುದಾಯದವರು ಅಧ್ಯಕ್ಷರಾಗಿ ಮುಂದುವರೆದರೆ ಇತರೆ ಹಿಂದುಳಿದ ಸಮುದಾಯಗಳನ್ನು ಕಡೆಗಣಿಸಿದಂತಾಗಿ ಮತಗಳು ಕೈತಪ್ಪುತ್ತವೆ ಎಂಬುದು ಬಿಜೆಪಿ ನಾಯಕರ ಆಲೋಚನೆಯಾಗಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪತ್ರಿಕೋದ್ಯಮದ ಪಾವಿತ್ರ್ಯವನ್ನು ಪಾತಾಳಕ್ಕಿಳಿಸಿದ ‘ಪತ್ರಕರ್ತರು’!

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ದೆಹಲಿಯಲ್ಲಿ ನಡೆದ ಸಭೆಯಲ್ಲಿ ಅಣ್ಣಾಮಲೈ ಅವರಿಗೆ ಬಿಜೆಪಿ ತನ್ನ ನಿರ್ಧಾರವನ್ನು ತಿಳಿಸಲಾಗಿದೆ. ರಾಷ್ಟ್ರ ರಾಜಧಾನಿಯಲ್ಲಿ ಅಮಿತ್‌ ಶಾ ಅವರು, ಪಳನಿಸ್ವಾಮಿ ಅವರನ್ನು ಭೇಟಿಯಾದ ಸ್ವಲ್ಪ ಸಮಯದ ನಂತರ ಈ ಸಭೆ ಕೂಡ ನಡೆಯಿತು.

ಅಣ್ಣಾಮಲೈ ಅವರ ಆಕ್ರಮಣಕಾರಿ ಮನೋಭಾವದ ಹೊರತಾಗಿಯೂ ತಮಿಳುನಾಡಿನಲ್ಲಿ ಬಿಜೆಪಿ ಉತ್ತಮ ಮನ್ನಣೆ ಗಳಿಸಲು ಸಾಧ್ಯವಾಗಿಲ್ಲ. ಹಿಂದಿನ ಯಾವುದೇ ಚುನಾವಣೆಗಳಲ್ಲೂ ಯಾವುದೇ ಸಾಧನೆ ಮಾಡಲಾಗಿಲ್ಲ.

ಅಣ್ಣಾಮಲೈ ಅವರನ್ನು ಅಧ್ಯಕ್ಷ ಸ್ಥಾನದಿಂದ ಕೈಬಿಡುವ ಬಗ್ಗೆ ಬಿಜೆಪಿಯ ಹಿರಿಯ ನಾಯಕರೊಬ್ಬರು ಮಾತನಾಡಿದ್ದು, ‘ಅಣ್ಣಾಮಲೈ ಅವರು ಪಕ್ಷದ ಬಗ್ಗೆ ತೋರಿಸುತ್ತಿರುವ ಬದ್ಧತೆಯ ಬಗ್ಗೆ ಯಾವುದೇ ಗೊಂದಲವಿಲ್ಲ. ಅಲ್ಲದೇ ಅವರು ಸಾಮಾನ್ಯ ಕಾರ್ಯಕರ್ತರಾಗಿ ಕಾರ್ಯನಿರ್ವಹಿಸಲು ಸಿದ್ಧರಿದ್ದಾರೆ’ ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...

ವಾಹನ ದಟ್ಟಣೆಯ ಸುಳಿಯಲ್ಲಿ ಮನಾಲಿ; ಪ್ರವಾಸೋದ್ಯಮದ ಒತ್ತಡಕ್ಕೆ ನಲುಗುತ್ತಿವೆಯೇ ಬೆಟ್ಟಗಳು?

ಮುಂಗಾರು ಮಳೆ ಕಡಿಮೆಯಾಗುತ್ತಿದ್ದಂತೆ ಹಿಮಾಚಲ ಪ್ರದೇಶದ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಆಗಮನ...