6 ಕ್ಷೇತ್ರಗಳ ಉಸ್ತುವಾರಿ ಸ್ಥಾನಕ್ಕೆ ಅಣ್ಣಾಮಲೈ ಹಠಾತ್ ರಾಜೀನಾಮೆ; ಮುನಿಸು ಸ್ಫೋಟ?

Date:

ತಮಿಳುನಾಡು ಬಿಜೆಪಿಯ ಮಾಜಿ ಅಧ್ಯಕ್ಷ ಕೆ ಅಣ್ಣಾಮಲೈ ಅವರು, ತಮಗೆ ನೀಡಲಾಗಿದ್ದ ಆರು ವಿಧಾನಸಭಾ ಕ್ಷೇತ್ರಗಳ ಚುನಾವಣಾ ಉಸ್ತುವಾರಿ ಸ್ಥಾನಕ್ಕೆ ದಿಢೀರ್ ರಾಜೀನಾಮೆ ನೀಡಿದ್ದಾರೆ. ಈ ಬೆಳವಣಿಗೆಯು ರಾಜ್ಯ ಬಿಜೆಪಿ ಘಟಕದಲ್ಲಿನ ಆಂತರಿಕ ಅಸಮಾಧಾನವನ್ನು ಮತ್ತೊಮ್ಮೆ ಜಗಜ್ಜಾಹೀರು ಮಾಡಿದೆ.

- Advertisement -

ತಮ್ಮ ತಂದೆಯ ಆರೋಗ್ಯ ಹದಗೆಟ್ಟಿರುವ ಕಾರಣ, ಅವರನ್ನು ಆರೈಕೆ ಮಾಡಲು ತಾನು ಕೊಯಮತ್ತೂರಿನಲ್ಲಿಯೇ ಇರಬೇಕಾಗಿದೆ. ಹೀಗಾಗಿ ರಾಜ್ಯಾದ್ಯಂತ ಪ್ರವಾಸ ಮಾಡಲು ಅಥವಾ ಚುನಾವಣಾ ಜವಾಬ್ದಾರಿಯನ್ನು ನಿರ್ವಹಿಸಲು ಸಾಧ್ಯವಾಗುವುದಿಲ್ಲ ಎಂದು ಅಣ್ಣಾಮಲೈ ಪಕ್ಷದ ಹೈಕಮಾಂಡ್‌ಗೆ ತಿಳಿಸಿದ್ದಾರೆ. “ತಂದೆಯ ಆರೋಗ್ಯವೇ ನನಗೆ ಮೊದಲ ಆದ್ಯತೆ,” ಎಂದು ಅವರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಬಹಿರಂಗವಾಗಿ ಕೌಟುಂಬಿಕ ಕಾರಣ ನೀಡಿದ್ದರೂ, ಅಣ್ಣಾಮಲೈ ಅವರ ಈ ನಿರ್ಧಾರದ ಹಿಂದೆ ತೀವ್ರ ಅಸಮಾಧಾನವಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಎಐಎಡಿಎಂಕೆ ಜೊತೆಗಿನ ಮೈತ್ರಿಗೆ ಅನುವು ಮಾಡಿಕೊಡುವ ಸಲುವಾಗಿ ಅವರು ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಗಿಳಿದಿದ್ದರು. ಆದರೆ, ರಾಜ್ಯಾದ್ಯಂತ ಪ್ರಭಾವವಿರುವ ತಮ್ಮನ್ನು ಕೇವಲ ಆರು ಕ್ಷೇತ್ರಗಳಿಗೆ (ಕಾರೈಕುಡಿ, ಸಿಂಗಾನಲ್ಲೂರು, ಶ್ರೀವೈಕುಂಠಂ, ವಿರುಗಬಾಕ್ಕಂ, ಮದುರೈ ದಕ್ಷಿಣ ಮತ್ತು ಪದ್ಮನಾಭಪುರಂ) ಸೀಮಿತಗೊಳಿಸಿರುವುದಕ್ಕೆ ಅವರು ಬೇಸರಗೊಂಡಿದ್ದಾರೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಮೋದಿ ಇದ್ರೆ ಎಲ್ಲವೂ ಸಾಧ್ಯ- ಇದು ಬಿಜೆಪಿ ಮಂತ್ರ!

​ದ್ರಾವಿಡ ಪಕ್ಷಗಳ ವಿರುದ್ಧ ಸಮರ ಸಾರಿದ್ದ ಅಣ್ಣಾಮಲೈ ಅವರಿಗೆ, ಬಿಜೆಪಿ ನಾಯಕತ್ವವು ಎಐಎಡಿಎಂಕೆ ಬಗ್ಗೆ ತೋರುತ್ತಿರುವ ಮೃದು ಧೋರಣೆ ಮತ್ತು ಮೈತ್ರಿ ಕುರಿತ ನಿಲುವುಗಳು ರುಚಿಸುತ್ತಿಲ್ಲ ಎನ್ನಲಾಗಿದೆ.

ಪ್ರಸ್ತುತ ರಾಜ್ಯಾಧ್ಯಕ್ಷರಾಗಿರುವ ನೈನಾರ್ ನಾಗೇಂದ್ರನ್ ಅವರ ನಾಯಕತ್ವದಲ್ಲಿ ಅಣ್ಣಾಮಲೈ ಅವರನ್ನು ಈ ಸ್ಥಾನಕ್ಕೆ ನೇಮಿಸಲಾಗಿತ್ತು. ಜವಾಬ್ದಾರಿಯಿಂದ ಹಿಂದೆ ಸರಿದಿದ್ದರೂ, ಏಪ್ರಿಲ್-ಮೇ ತಿಂಗಳಲ್ಲಿ ನಡೆಯಲಿರುವ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲು ಸಿದ್ಧವಿರುವುದಾಗಿ ಅಣ್ಣಾಮಲೈ ತಿಳಿಸಿದ್ದಾರೆ. ಆದರೆ, ತಾವು ಚುನಾವಣೆಯಲ್ಲಿ ಸ್ಪರ್ಧಿಸುವ ಕುರಿತು ಇನ್ನೂ ಯಾವುದೇ ಅಂತಿಮ ನಿರ್ಧಾರ ಕೈಗೊಂಡಿಲ್ಲ ಎಂದು ಅವರು ಹೇಳಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕುಟುಂಬ ನ್ಯಾಯಾಲಯಗಳ ಮೇಲಿನ ಹೊರೆ ತಗ್ಗಿಸಲು ಮಧ್ಯಸ್ಥಿಕೆಗೆ ಆದ್ಯತೆ ನೀಡಿ: ಸುಪ್ರೀಂ ನ್ಯಾಯಮೂರ್ತಿ ನಾಗರತ್ನ

ದೇಶದ ಕೌಟುಂಬಿಕ ನ್ಯಾಯಾಲಯಗಳಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಪ್ರಕರಣಗಳ ಹೊರೆಯನ್ನು ಕಡಿಮೆ...

ಯುದ್ಧದ ಕರಾಳ ನೆರಳು: ರಷ್ಯಾ ಕನಸು ನಚ್ಚುನೂರಾಗಿ ಉಕ್ರೇನ್‌ನಲ್ಲಿ ಬಂಧಿಯಾದ ಭಾರತೀಯ ಯುವಕ!

ಉತ್ತಮ ಜೀವನ ರೂಪಿಸಿಕೊಳ್ಳಬೇಕು, ದೇಶ ವಿದೇಶ ಸುತ್ತಿ ಆರ್ಥಿಕವಾಗಿ ಕುಟುಂಬವನ್ನು ಬೆಂಬಲಿಸಬೇಕು...