ತಮಿಳುನಾಡು | ರಾಜೀನಾಮೆ ನಿರ್ಧಾರ ಪ್ರಕಟಿಸಿದ ಕೆ ಅಣ್ಣಾಮಲೈ

Date:

Advertisements

ತಮಿಳುನಾಡು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಹುದ್ದೆಗೆ ರಾಜೀನಾಮೆ ನೀಡುವುದಾಗಿ ಕೆ. ಅಣ್ಣಾಮಲೈ ಘೋಷಿಸಿದ್ದಾರೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಬಿಜೆಪಿಯಲ್ಲಿ ಪಕ್ಷದ ನಾಯಕನ ಹುದ್ದೆಗೆ ಸ್ಪರ್ಧಿಸುವುದಿಲ್ಲ. ನಾವೆಲ್ಲರೂ ಒಟ್ಟಾಗಿ ಅಧ್ಯಕ್ಷರನ್ನು ಆಯ್ಕೆ ಮಾಡುತ್ತೇವೆ. ಅಧ್ಯಕ್ಷ ಹುದ್ದೆಗೆ ನಾನು ಸ್ಪರ್ಧಿಯಲ್ಲ. ನಾನು ಪಕ್ಷ ಉಜ್ವಲ ಭವಿಷ್ಯ ಹೊಂದುವುದಾಗಿ ಬಯಸುತ್ತೇನೆ. ಹಲವು ಮಂದಿ ಪಕ್ಷದ ಅಭಿವೃದ್ಧಿಗೆ ಪ್ರಾಣ ನೀಡಿದ್ದಾರೆ. ನಾನು ಪಕ್ಷಕ್ಕೆ ಸದಾ ಶುಭ ಹಾರೈಸುತ್ತೇನೆ ಎಂದು ತಿಳಿಸಿದ್ದಾರೆ.

ಮುಂದಿನ ವರ್ಷ ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ಬಿಜೆಪಿ-ಎಐಎಡಿಎಂಕೆ ಮೈತ್ರಿಕೂಟ ರಚನೆಯಾಗುವ ಬಗ್ಗೆ ಚರ್ಚೆ ನಡೆಯುತ್ತಿರುವ ನಡುವೆಯೇ, ಕೆ. ಅಣ್ಣಾಮಲೈ ಬಿಜೆಪಿ ತಮಿಳುನಾಡು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯುವ ಸಾಧ್ಯತೆಯಿತ್ತು. ಚುನಾವಣೆ ಸಮೀಪಿಸುತ್ತಿರುವ ರಾಜ್ಯದಲ್ಲಿ ಬಿಜೆಪಿ ತನ್ನ ಪ್ರಾಬಲ್ಯವನ್ನು ಹೆಚ್ಚಿಸಲು ಪ್ರಯತ್ನಿಸುತ್ತಿರುವ ಜಾತಿ ಸಮೀಕರಣಗಳನ್ನು ಪರಿಗಣಿಸಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎನ್ನಲಾಗಿದೆ.

Advertisements

ಬಿಜೆಪಿಗೆ ಒಂದೇ ಗೌಂಡರ್ ಸಮುದಾಯದ ಎರಡೂ ಮಿತ್ರ ಪಾಲುದಾರರ (ಬಿಜೆಪಿ-ಎಐಎಡಿಎಂಕೆ) ಮುಖಗಳು ಬೇಕಾಗಿಲ್ಲ. ಕೆ ಅಣ್ಣಾಮಲೈ ಮತ್ತು ಕೆ ಪಳನಿಸ್ವಾಮಿ ಇಬ್ಬರೂ ಗೌಂಡರ್‌ ಸಮುದಾಯಕ್ಕೆ ಸೇರಿದವರು. ಇಬ್ಬರೂ ಗೌಂಡರ್‌ಗಳು ಪ್ರಾಬಲ್ಯ ಹೊಂದಿರುವ ತಮಿಳುನಾಡಿನ ಒಂದೇ ಪಶ್ಚಿಮ ಕೊಂಗು ಪ್ರದೇಶದಿಂದ ಬಂದವರು. ಇಬ್ಬರು ಒಂದೇ ಸಮುದಾಯದವರು ಅಧ್ಯಕ್ಷರಾಗಿ ಮುಂದುವರೆದರೆ ಇತರೆ ಹಿಂದುಳಿದ ಸಮುದಾಯಗಳನ್ನು ಕಡೆಗಣಿಸಿದಂತಾಗಿ ಮತಗಳು ಕೈತಪ್ಪುತ್ತವೆ ಎಂಬುದು ಬಿಜೆಪಿ ನಾಯಕರ ಆಲೋಚನೆಯಾಗಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪತ್ರಿಕೋದ್ಯಮದ ಪಾವಿತ್ರ್ಯವನ್ನು ಪಾತಾಳಕ್ಕಿಳಿಸಿದ ‘ಪತ್ರಕರ್ತರು’!

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ದೆಹಲಿಯಲ್ಲಿ ನಡೆದ ಸಭೆಯಲ್ಲಿ ಅಣ್ಣಾಮಲೈ ಅವರಿಗೆ ಬಿಜೆಪಿ ತನ್ನ ನಿರ್ಧಾರವನ್ನು ತಿಳಿಸಿದೆ. ರಾಷ್ಟ್ರ ರಾಜಧಾನಿಯಲ್ಲಿ ಅಮಿತ್‌ ಶಾ ಅವರು, ಪಳನಿಸ್ವಾಮಿ ಅವರನ್ನು ಭೇಟಿಯಾದ ಸ್ವಲ್ಪ ಸಮಯದ ನಂತರ ಈ ಸಭೆ ಕೂಡ ನಡೆದಿದೆ.

ಅಣ್ಣಾಮಲೈ ಅವರ ಆಕ್ರಮಣಕಾರಿ ಮನೋಭಾವದ ಹೊರತಾಗಿಯೂ ತಮಿಳುನಾಡಿನಲ್ಲಿ ಬಿಜೆಪಿ ಜನಮನ್ನಣೆ ಗಳಿಸಲು ಸಾಧ್ಯವಾಗಿಲ್ಲ. ಹಿಂದಿನ ಯಾವುದೇ ಚುನಾವಣೆಗಳಲ್ಲೂ ಯಾವುದೇ ಸಾಧನೆ ಮಾಡಲಾಗಿಲ್ಲ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

‘ನನ್ನ ಜೀವಕ್ಕೆ ಅಪಾಯವಾದರೆ ಸರ್ಕಾರವೇ ಹೊಣೆ’ ಎಂದು ಹೇಳಿ ಠಾಣೆಗೆ ತೆರಳಿದ ಮಹೇಶ್ ಶೆಟ್ಟಿ ತಿಮರೋಡಿ

ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್‌ ಅವರ ತೇಜೋವಧೆ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

Download Eedina App Android / iOS

X