ಡಿಎಂಕೆ ಸರ್ಕಾರವನ್ನು ಕಿತ್ತೊಗೆಯುವವರೆಗೆ ಪಾದರಕ್ಷೆ ಧರಿಸಲ್ಲ ಎಂದ ಅಣ್ಣಾಮಲೈ

Date:

Advertisements

ಡಿಎಂಕೆ ಸರ್ಕಾರವನ್ನು ಅಧಿಕಾರದಿಂದ ಕಿತ್ತೊಗೆಯುವವರೆಗೆ ಕಾಲಿಗೆ ಪಾದರಕ್ಷೆ ಧರಿಸುವುದಿಲ್ಲ ಎಂದು ಬಿಜೆಪಿ ಅಧ್ಯಕ್ಷ ಕೆ ಅಣ್ಣಾಮಲೈ ಅವರು ಶಪಥ ಮಾಡಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಕೊಯಮತ್ತೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅಣ್ಣಾಮಲೈ, ಅಣ್ಣಾ ವಿಶ್ವವಿದ್ಯಾನಿಲಯದ ಲೈಂಗಿಕ ಕಿರುಕುಳ ಪ್ರಕರಣವನ್ನು ಪೊಲೀಸರು ನಿಭಾಯಿಸಿದ ರೀತಿಯನ್ನು ವಿರೋಧಿಸಿದ್ದಾರೆ.

ಪ್ರಕರಣದಲ್ಲಿ ಸಂತ್ರಸ್ತೆಯ ಹೆಸರು, ಫೋನ್ ಸಂಖ್ಯೆ ಮತ್ತು ಇತರ ವೈಯಕ್ತಿಕ ವಿವರಗಳನ್ನು ಬಹಿರಂಗಪಡಿಸಿದ್ದಕ್ಕಾಗಿ ರಾಜ್ಯ ಪೊಲೀಸರನ್ನು ತರಾಟೆಗೆ ತೆಗೆದುಕೊಂಡ ಅವರು,“ಎಫ್‌ಐಆರ್ ಹೇಗೆ ಸಾರ್ವಜನಿಕ ಡೊಮೇನ್ ಅನ್ನು ಪ್ರವೇಶಿಸಿತು? ಎಫ್‌ಐಆರ್ ಸೋರಿಕೆ ಮಾಡುವ ಮೂಲಕ ಸಂತ್ರಸ್ತೆಯ ಗುರುತನ್ನು ಬಹಿರಂಗಪಡಿಸಿದ್ದೀರಿ.ಇಂತಹ ಎಫ್‌ಐಆರ್ ಬರೆದು ಸೋರಿಕೆ ಮಾಡಿದ್ದಕ್ಕೆ ಪೊಲೀಸರು ಮತ್ತು ಡಿಎಂಕೆಗೆ ನಾಚಿಕೆಯಾಗಬೇಕು,’’ ಎಂದು ಕಾನೂನು ಸಚಿವ ಎಸ್ ರೇಗುಪತಿ ವಿರುದ್ಧ ವಾಗ್ದಾಳಿ ನಡೆಸಿದರು.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಾಬರಿ ಮಸೀದಿ ಕೆಡವಿದಾಗಲೇ ‘ಸಾಮರಸ್ಯ’ ಸಮಾಧಿಯಾಗಿತ್ತಲ್ಲವೇ?

ನಿರ್ಭಯಾ ನಿಧಿ ಎಲ್ಲಿಗೆ ಹೋಯಿತು? ಅಣ್ಣಾ ವಿಶ್ವವಿದ್ಯಾಲಯದ ಆವರಣದಲ್ಲಿ ಸಿಸಿಟಿವಿ ಕ್ಯಾಮೆರಾ ಏಕೆ ಇರಲಿಲ್ಲ?” ಎಂದು ಅವರನ್ನು ಪ್ರಶ್ನಿಸಿದ್ದಾರೆ.“ಇನ್ನು ಮುಂದೆ ಸಾರ್ವಜನಿಕ ಪ್ರತಿಭಟನೆಗಳಿಲ್ಲ, ಏಕೆಂದರೆ ನೀವು ಪ್ರತಿಭಟನೆಗೆ ಸೇರುವ ಎಲ್ಲ ಬಿಜೆಪಿ ಕಾರ್ಯಕರ್ತರನ್ನು ಬಂಧಿಸಿ ಮದುವೆ ಮಂಟಪದಲ್ಲಿ ಇರಿಸುತ್ತೀರಿ. ಹೀಗಾಗಿ ನಾಳೆಯಿಂದ ಕಾರ್ಯಕರ್ತರು ಮನೆ ಮುಂದೆ ಪ್ರತಿಭಟನೆ ನಡೆಸಲಿದ್ದಾರೆ,’’ ಎಂದು ಅವರು ಹೇಳಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X