ಪ್ರಕಟಣೆ ಪ್ರಕ್ರಿಯೆ ಚಾಲ್ತಿಯಲ್ಲಿದೆ: ಮೌನ ಮುರಿದ ಜನರಲ್ ನರವಣೆ

Date:

ಭಾರತೀಯ ಭೂಸೇನೆಯ ಮಾಜಿ ಮುಖ್ಯಸ್ಥ ಜನರಲ್ ಎಂ ಎಂ ನರವಣೆ ಅವರ ಬಹುನಿರೀಕ್ಷಿತ ಆತ್ಮಕಥೆ ‘ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ’ (Four Stars of Destiny) ಬಿಡುಗಡೆಯ ಕುರಿತು ಎದ್ದಿದ್ದ ಊಹಾಪೋಹಗಳಿಗೆ ಇದೀಗ ತೆರೆಬಿದ್ದಿದೆ. ಪುಸ್ತಕದ ಪ್ರಕಟಣೆಯನ್ನು ನಿಲ್ಲಿಸಲಾಗಿದೆ ಎಂಬ ವರದಿಗಳ ಬೆನ್ನಲ್ಲೇ, ಸ್ವತಃ ನರವಣೆ ಅವರು ಪ್ರಕಾಶಕರ ಹೇಳಿಕೆಯನ್ನು ಹಂಚಿಕೊಂಡು ಸ್ಪಷ್ಟನೆ ನೀಡಿದ್ದಾರೆ.

- Advertisement -

​ಪುಸ್ತಕದಲ್ಲಿ ಅಗ್ನಿಪಥ್ ಯೋಜನೆ ಹಾಗೂ 2020ರ ಗಲ್ವಾನ್ ಸಂಘರ್ಷದ ಸಂದರ್ಭದ ಕೆಲವು ಸೂಕ್ಷ್ಮ ಸೇನಾ ವಿಚಾರಗಳನ್ನು ಉಲ್ಲೇಖಿಸಲಾಗಿದೆ ಎಂಬ ಕಾರಣಕ್ಕೆ ರಕ್ಷಣಾ ಸಚಿವಾಲಯವು ಆಕ್ಷೇಪ ವ್ಯಕ್ತಪಡಿಸಿದೆ ಎನ್ನಲಾಗಿತ್ತು. ಈ ಕಾರಣದಿಂದಾಗಿ ಪುಸ್ತಕ ಬಿಡುಗಡೆಗೆ ತಡೆ ಬಿದ್ದಿದೆ ಎಂಬ ಸುದ್ದಿಗಳು ಹರಿದಾಡಿದ್ದವು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ನಕ್ಸಲ್ ನಿಗ್ರಹದ ನೆಪದಲ್ಲಿ ಪ್ರಕೃತಿ ಸಂಪತ್ತಿನ ಲೂಟಿಗಿಳಿಯಿತೇ ಸರ್ಕಾರ?

​ಆದರೆ, ಈ ಕುರಿತು ಪ್ರತಿಕ್ರಿಯಿಸಿರುವ ಪ್ರಕಾಶಕ ಸಂಸ್ಥೆ ‘ಪೆಂಗ್ವಿನ್ ರಾಂಡಮ್ ಹೌಸ್ ಇಂಡಿಯಾ’, “ಪುಸ್ತಕದ ಪ್ರಕಟಣಾ ಪ್ರಕ್ರಿಯೆಯು ಇನ್ನೂ ಪ್ರಗತಿಯಲ್ಲಿದೆ” ಎಂದು ಅಧಿಕೃತ ಹೇಳಿಕೆ ನೀಡಿದೆ. ಜನರಲ್ ನರವಣೆ ಅವರು ಸಾಮಾಜಿಕ ಜಾಲತಾಣ ‘ಎಕ್ಸ್’ (X) ನಲ್ಲಿ ಈ ಹೇಳಿಕೆಯನ್ನು ಹಂಚಿಕೊಳ್ಳುವ ಮೂಲಕ ಪುಸ್ತಕ ರದ್ದಾಗಿಲ್ಲ ಎಂಬುದನ್ನು ಖಚಿತಪಡಿಸಿದ್ದಾರೆ.

​ನಿಯಮಗಳ ಪ್ರಕಾರ, ನಿವೃತ್ತ ಸೇನಾ ಅಧಿಕಾರಿಗಳು ಸೇವಾವಧಿಯ ಸೂಕ್ಷ್ಮ ವಿಚಾರಗಳನ್ನು ಬರೆಯುವಾಗ ರಕ್ಷಣಾ ಇಲಾಖೆಯ ಪೂರ್ವಾನುಮತಿ (NOC) ಪಡೆಯುವುದು ಕಡ್ಡಾಯವಾಗಿದೆ. ಪ್ರಸ್ತುತ ಪುಸ್ತಕವು ಇಲಾಖೆಯ ಪರಿಶೀಲನಾ ಹಂತದಲ್ಲಿದ್ದು, ತಾಂತ್ರಿಕ ಪ್ರಕ್ರಿಯೆಗಳು ಮುಗಿದ ಬಳಿಕವಷ್ಟೇ ಮಾರುಕಟ್ಟೆಗೆ ಬಿಡುಗಡೆಯಾಗಲಿದೆ ಎಂದು ವರದಿಗಳು ತಿಳಿಸಿವೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬಳಿಕ ಬಂಧನವಾಗಿದ್ದ ಕಾಂಗ್ರೆಸ್‌ ಅಭ್ಯರ್ಥಿ ಪ್ರಧಾನ್‌ಗೆ ಮಧ್ಯಂತರ ಜಾಮೀನು

2007ರ ನಂದಿಗ್ರಾಮ್ ಭೂಸ್ವಾಧೀನ ವಿರೋಧಿ ಹೋರಾಟಕ್ಕೆ ಸಂಬಂಧಿಸಿದ ಕೊಲೆ ಪ್ರಕರಣಗಳಲ್ಲಿ ಆರೋಪಿಯಾಗಿ...

1929ರ ಸೈಮನ್ ವಿರುದ್ಧದ ಹೋರಾಟದಂತೆ ‘SIR ಗೋ ಬ್ಯಾಕ್’ ಆಂದೋಲನ ನಡೆಯಬೇಕು: ಸಿಎಂ ರೇವಂತ್ ರೆಡ್ಡಿ ಕರೆ

ಮತದಾರರ ಪಟ್ಟಿಯ ಮೇಲೆ ಮೋದಿ-ಶಾ ಜೋಡಿ ಮತ್ತು ಗ್ಯಾನೇಶ್‌ ಕುಮಾರ್‌ ನಡೆಸುತ್ತಿರುವ...

‘ನಥಿಂಗ್ ನೈಸ್’: ಸಿಎಂ ವಿರುದ್ಧ ಎಚ್.ಡಿ. ಕುಮಾರಸ್ವಾಮಿ ಭೂಕಬಳಿಕೆ ಆರೋಪ

ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ...

ಅಮೇಥಿ ಸೋಲಿನ ಬಳಿಕ ಯುಪಿ ರಾಜ್ಯಸಭೆ ರೇಸ್‌ನಲ್ಲಿ ಸ್ಮೃತಿ ಇರಾನಿ; ಸಂಭಾವ್ಯ ಪಟ್ಟಿಯಲ್ಲಿ ಯಾರ್ಯಾರಿದ್ದಾರೆ?

ಉತ್ತರ ಪ್ರದೇಶದಿಂದ ಅಕ್ಟೋಬರ್ 16ರಂದು ನಡೆಯಲಿರುವ 10 ರಾಜ್ಯಸಭಾ ಸ್ಥಾನಗಳ ಚುನಾವಣೆಗೆ...