ಬಿಹಾರದಲ್ಲಿ ಮತ್ತೊಂದು ಸೇತುವೆ ಕುಸಿತ; ಗಂಗಾ ನದಿ ಮೇಲೆ ನಿರ್ಮಾಣವಾಗುತ್ತಿದ್ದ ಬ್ರಿಡ್ಜ್‌

Date:

ಬಿಹಾರದಲ್ಲಿ ಗಂಗಾ ನದಿಯ ಮೇಲೆ ನಿರ್ಮಿಸಲಾಗುತ್ತಿದ್ದ ಸೇತುವೆಯ ಒಂದು ಭಾಗವು ಶನಿವಾರ ಕುಸಿದು ಬಿದ್ದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

- Advertisement -

ಅಗುವಾನಿ-ಸುಲ್ತಂಗಂಜ್ ನಡುವೆ ಸಂಪರ್ಕ ಒದಗಿಸುವ ಉದ್ದೇಶದಿಂದ ಸೇತುವೆಯನ್ನು ನಿರ್ಮಾಣ ಮಾಡಲಾಗುತ್ತಿತ್ತು. ಸೇತುವೆಯ ಸ್ಲ್ಯಾಬ್ ಬೆಳಿಗ್ಗೆ 8 ಗಂಟೆ ಸುಮಾರಿಗೆ ಕುಸಿದುಬಿದ್ದಿದೆ ಎಂದು ಖಗಾರಿಯಾ ಜಿಲ್ಲಾ ಮ್ಯಾಜಿಸ್ಟ್ರೇಟ್ ಅಮಿತ್ ಕುಮಾರ್ ಪಾಂಡೆ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

“ನಿರ್ಮಾಣ ಹಂತದಲ್ಲಿರುವ ಸೇತುವೆಯ ಸಂಪೂರ್ಣ ರಚನೆಯು ದೋಷಪೂರಿತವಾಗಿದೆ. ಅದನ್ನು ಗುತ್ತಿಗೆದಾರರು ಕೆಡವಬೇಕೆಂದು ನಾವು ಸೂಚಿಸಿದ್ದೇವೆ. ಈಗಾಗಲೇ ಅಲ್ಲಿ ನಿರ್ಮಾಣ ಕಾಮಗಾರಿಯನ್ನು ನಿಲ್ಲಿಸಲಾಗಿದೆ. ಗುತ್ತಿಗೆದಾರರು ಸೇತುವೆಯನ್ನು ಕೆಡವುತ್ತಿದ್ದಾರೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ” ಎಂದು ಹೈಕೋರ್ಟ್ ಹೇಳಿದೆ.

ಕಳೆದ ವರ್ಷ, ಸೇತುವೆಯ ನಾಲ್ಕೈದು ಪಿಲ್ಲರ್‌ಗಳು ಕುಸಿದು ಇಡೀ ಭಾಗವು ನದಿಗೆ ಉರುಳಿತ್ತು.

ಕಳೆದ ತಿಂಗಳು ಬಿಹಾರದಲ್ಲಿ ಭಾರೀ ಮಳೆಯಾಗಿದ್ದು, ಬರೋಬ್ಬರಿ 17 ಸೇತುವೆಗಳು ಕುಸಿದು ಬಿದ್ದಿವೆ. ಎಲ್ಲ ಪ್ರಕರಣಗಳಲ್ಲಿ ಬಿಹಾರ ಸರ್ಕಾರ ಕನಿಷ್ಠ 15 ಎಂಜಿನಿಯರ್‌ಗಳನ್ನು ಅಮಾನತುಗೊಳಿಸಿವೆ.

ಜೂನ್ 18 ರಂದು ನೇಪಾಳದ ಗಡಿಯಲ್ಲಿರುವ ಅರಾರಿಯಾ ಜಿಲ್ಲೆಯ ಸಿಕ್ತಿ ಪ್ರದೇಶದ ಪಾಡ್ಕಿಯಾ ಘಾಟ್‌ನಲ್ಲಿ ಮೊದಲ ಸೇತುವೆ ಕುಸಿದಿದೆ. ಅದಾದ ಬಳಿಕ, ಸಿವಾನ್, ಸರನ್, ಮಧುಬನಿ, ಅರಾರಿಯಾ, ಪೂರ್ವ ಚಂಪಾರಣ್ ಮತ್ತು ಕಿಶನ್‌ಗಂಜ್ ಜಿಲ್ಲೆಗಳಲ್ಲಿ ಕಳೆದ ಎರಡು ವಾರಗಳಲ್ಲಿ 17 ಸೇತುವೆಗಳು ಕುಸಿದಿದೊದ್ದವು. ಅವುಗಳಲ್ಲಿ ನಿರ್ಮಾಣ ಹಂತದಲ್ಲಿದ್ದ ಮೂರು ಸೇತುವೆಗಳು ಸೇರಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು | ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಯೋಜನೆ ಪ್ರಶ್ನಿಸಿ ಮದ್ರಾಸ್ ಹೈಕೋರ್ಟ್‌ಗೆ ಅರ್ಜಿ

ತಮಿಳುನಾಡು ಸರ್ಕಾರವು ಮಹಿಳೆಯರು ಮತ್ತು ಲಿಂಗತ್ವ ಅಲ್ಪಸಂಖ್ಯಾತರಿಗೆ ಸರ್ಕಾರಿ ಬಸ್‌ಗಳಲ್ಲಿ ಜಾರಿಗೆ...

ಉತ್ತರಾಖಂಡ | ₹135.95 ಕೋಟಿ ಸಂಸದರ ನಿಧಿಯಲ್ಲಿ ಬಳಕೆಯಾಗಿದ್ದು ಕೇವಲ ಶೇ.18 ಮಾತ್ರ

ಉತ್ತರಾಖಂಡದ ಲೋಕಸಭೆ ಮತ್ತು ರಾಜ್ಯಸಭೆಯ ಹಾಲಿ ಸಂಸದರು ತಮಗೆ ಅಭಿವೃದ್ಧಿ ಕಾಮಗಾರಿಗಳಿಗಾಗಿ...