ಮಹಾರಾಷ್ಟ್ರದಲ್ಲಿ ಮತ್ತೊಂದು ಹಿಟ್ ಅಂಡ್ ರನ್ ಪ್ರಕರಣ: ಯುವಕನನ್ನು ಬಲಿ ಪಡೆದ ಅಪರಿಚಿತ ವಾಹನ

Date:

ಮಹಾರಾಷ್ಟ್ರದಲ್ಲಿ ಮತ್ತೊಂದು ಹಿಟ್ ಅಂಡ್ ರನ್ ಪ್ರಕರಣ ನಡೆದಿದ್ದು, ನಾಗ್ಪುರದಲ್ಲಿ ಅಪರಿಚಿತ ವಾಹನವೊಂದು ಢಿಕ್ಕಿ ಹೊಡೆದ ಪರಿಣಾಮ 23 ವರ್ಷದ ಯುವಕ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

- Advertisement -

ನಾಗ್ಪರದ ಕಟೋಲ್ ರಸ್ತೆ ಬೈಪಾಸ್‌ನಲ್ಲಿ ಭಾನುವಾರ ರಾತ್ರಿ 11.20ರ ಸುಮಾರಿಗೆ ಅಪಘಾತ ಸಂಭವಿಸಿದೆ ಎಂದು ಗಿತ್ತಿಖಾಡನ್ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್‌ ಪ್ರಭಾರಿ ತಿಳಿಸಿದ್ದಾರೆ. ಅಪಘಾತ ಸ್ಥಳದ ಬಳಿ ಯಾವುದೇ ಸಿಸಿಟಿವಿ ಕ್ಯಾಮೆರಾ ಇರಲಿಲ್ಲ. ಅಪಘಾತ ಎಸಗಿದವರು ಯಾರೆಂಬುದು ಇನ್ನೂ ಗೊತ್ತಾಗಿಲ್ಲ ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಮೃತರನ್ನು ಮಧ್ಯಪ್ರದೇಶ ಮೂಲದ ರಾಹುಲ್ ಖೈರ್ವಾರ್ ಎಂದು ಗುರುತಿಸಲಾಗಿದೆ. ಅಪರಿಚಿತ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.

ಎರಡು ದಿನಗಳ ಹಿಂದೆ (ಭಾನುವಾರ), ಮುಂಬೈನ ವರ್ಲಿ ಪ್ರದೇಶದಲ್ಲಿ ಮಹಿಳೆಯೊಬ್ಬರು ಪ್ರಯಾಣಿಸುತ್ತಿದ್ದ ದ್ವಿಚಕ್ರ ವಾಹನಕ್ಕೆ ಬಿಎಂಡಬ್ಲ್ಯು ಕಾರೊಂದು ಢಿಕ್ಕಿ ಹೊಡೆದು ಮಹಿಳೆ ಸಾವನ್ನಪ್ಪಿದ್ದರು. ಢಿಕ್ಕಿ ಹೊಡೆದ ಕಾರು ಆಕೆಯನ್ನು 1 ಕಿ.ಮೀ ವರೆಗೆ ಎಳೆದೊಯ್ದಿತ್ತು. ಕಾರಿನಲ್ಲಿದ್ದವರು ಪರಾರಿಯಾಗುವ ಭರದಲ್ಲಿ ಆಕೆಯನ್ನು ಎಳೆದೊಯ್ದಿದ್ದರು ಎಂದು ಆರೋಪಿಸಲಾಗಿದೆ.

ಘಟನೆ ಸಂಬಂಧ ಇಬ್ಬರನ್ನು ಬಂಧಿಸಲಾಗಿದ್ದು, ಪ್ರಮುಖ ಆರೋಪಿಗಾಗಿ ಶೋಧ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಣಿಪುರ | ಮತ್ತೆ ಭುಗಿಲೆದ್ದ ಹಿಂಸಾಚಾರ: ಗುಂಡಿನ ದಾಳಿಗೆ ಮೂವರ ಬಲಿ, 7 ಮನೆಗಳಿಗೆ ಬೆಂಕಿ

ದೀರ್ಘಕಾಲದಿಂದ ಜನಾಂಗೀಯ ಸಂಘರ್ಷಕ್ಕೆ ಈಡಾಗಿರುವ ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಕಾಂಗ್‌ಪೋಕ್ಪಿ...

ದೆಹಲಿ ಪ್ರತಿಭಟನೆ | ವಶಕ್ಕೆ ಪಡೆದ ನೂರಾರು ಪ್ರತಿಭಟನಾಕಾರರನ್ನು ಸ್ಟೇಡಿಯಂಗೆ ದಬ್ಬಿದ ಪೊಲೀಸರು

ದೆಹಲಿಯ ವಿವಿಧ ಪ್ರದೇಶಗಳಿಂದ CJP ನೂರಾರು ಕಾರ್ಯಕರ್ತರು ಸೇರಿದಂತೆ ಹಲವು ನಾಗರಿಕರು...

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ದೆಹಲಿಯಲ್ಲಿ ಮೂವರು ಮಾಜಿ ಸಿಎಂ – ಮಮತಾ, ಪಿಣರಾಯಿ, ಕೇಜ್ರಿವಾಲ್ – ಬಂಧನ

ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ರಾಜೀನಾಮೆ ಮತ್ತು ಎಸ್‌ಐಆರ್‌ ರದ್ದತಿಗೆ ಆಗ್ರಹಿಸಿ...

ಅ.12ರಂದು ದೆಹಲಿಯಲ್ಲಿ ಇಂಡಿಯಾ ಒಕ್ಕೂಟದ ಪ್ರತಿಭಟನೆ: ಕೆ.ಸಿ. ವೇಣುಗೋಪಾಲ್

ಜನರ ಮತದಾನದ ಹಕ್ಕನ್ನು ರಕ್ಷಿಸುವ ಉದ್ದೇಶದಿಂದ ಇಂಡಿಯಾ ಮೈತ್ರಿಕೂಟವು ಸೋಮವಾರ ನವದೆಹಲಿಯಲ್ಲಿ...