ಬಿಐಟಿಎಸ್ ಕ್ಯಾಂಪಸ್‌ನಲ್ಲಿ ಮತ್ತೋರ್ವ ವಿದ್ಯಾರ್ಥಿ ಸಾವು; 10 ತಿಂಗಳಲ್ಲಿ 5ನೇ ಪ್ರಕರಣ

Date:

ಗೋವಾದಲ್ಲಿರುವ ಬಿಐಟಿಎಸ್‌ ಪಿಲಾನಿ ಕ್ಯಾಂಪಸ್‌ನಲ್ಲಿ 2ನೇ ವರ್ಷದ ವಿದ್ಯಾರ್ಥಿಯೊಬ್ಬರು ಹಾಸ್ಟೆಲ್‌ನ ಕೊಠಡಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಶಂಕಿಸಲಾಗಿದೆ. ಆದಾಗ್ಯೂ, ಕ್ಯಾಂಪಸ್‌ನಲ್ಲಿ ಕಳೆದ 10 ತಿಂಗಳಲ್ಲಿ ನಡೆದಿರುವ 5ನೇ ಸಾವು ಪ್ರಕರಣ ಇದಾಗಿದೆ.

- Advertisement -

ಪೊಲೀಸ್ ಮೂಲಗಳ ಪ್ರಕಾರ, ವಿದ್ಯಾರ್ಥಿಯ ಮೃತದೇಹವು ಹಾಸ್ಟೆಲ್ ಕೋಣೆಯ ಹಾಸಿಗೆ ಮೇಲೆ ಪತ್ತೆಯಾಗಿದೆ. ಆತನ ದೇಹದ ಮೇಲೆ ಯಾವುದೇ ಗಾಯದ ಗುರುತುಗಳಿಲ್ಲ. ಪೊಲೀಸರು ತಿನಿಖೆ ನಡೆಸುತ್ತಿದ್ದಾರೆ. ಮರಣೋತ್ತರ ಪರೀಕ್ಷೆಯ ನಂತರ ಸಾವಿಗೆ ಕಾರಣವೇನು ಎಂಬುದು ಗೊತ್ತಾಗಲಿದೆ ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಸೌಜನ್ಯಳನ್ನು ಕೊಂದವರು ಯಾರು? ಹೊಸ ತನಿಖೆಯಲ್ಲಿ ಉತ್ತರ ಸಿಗುವ...

14 ವರ್ಷಗಳು... 3 ತನಿಖಾ ಸಂಸ್ಥೆಗಳಾದ ಪೊಲೀಸ್, ಸಿಐಡಿ, ಸಿಬಿಐ ತನಿಖೆಗಳು... ಅಮಾಯಕನಾದ ಒಬ್ಬನೇ ಆರೋಪಿಯ ಸುತ್ತಲಿನ ತನಿಖೆ-... ಕೊನೆಗೆ ಆತ ನಿರಪರಾಧಿ ಎಂದು ಸಾಬೀತು, ಆತನ ಖುಲಾಸೆ. ಹಾಗಾದರೆ 17 ವರ್ಷದ...

ಕತ್ತಲೆಯಿಂದ ಬೆಳಕಿನತ್ತ ಸೌಜನ್ಯ ಹೋರಾಟ: ಸುಪ್ರೀಂ ಆದೇಶದೊಂದಿಗೆ ಮೂಡಿದ...

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣವು ಕೇವಲ ಒಂದು ಕಾನೂನು ಪ್ರಕ್ರಿಯೆಯಾಗಿ ಉಳಿಯದೆ, ಸಾರ್ವಜನಿಕ ಜಾಗೃತಿ ಮತ್ತು ನ್ಯಾಯದ ಪರವಾದ ಗಟ್ಟಿಯಾದ ಧ್ವನಿಯಾಗಿ ಮಾರ್ಪಟ್ಟಿದೆ. ಸುಪ್ರೀಂ ಕೋರ್ಟ್‌ನ ಈ ಹೊಸ ಆದೇಶವು ಸೌಜನ್ಯ ಕುಟುಂಬಕ್ಕೆ...

ವಿಜಯಪುರ | ಮಳೆ ಕೊರತೆಯಿಂದ ಮೇವಿಗೂ ಬರ: ಜಾನುವಾರು...

ಹಸಿರು ಮೇವು ಕಡಿಮೆಯಾಗಿ, ಸಂಗ್ರಹಿತ ಒಣಮೇವು ಖಾಲಿಯಾಗುತ್ತಿರುವುದರಿಂದ ಹೈನುಗಾರಿಕೆ ಮತ್ತು ಕುರಿ-ಮೇಕೆ ಸಾಕಾಣಿಕೆ ಅವಲಂಬಿತ ಕುಟುಂಬಗಳ ಆದಾಯಕ್ಕೆ ಹೊಡೆತ ಬೀಳುವ ಭೀತಿ ಎದುರಾಗಿದೆ. ಬೋರ್‌ವೆಲ್‌ಗಳಲ್ಲಿನ ನೀರಿನ ಮಟ್ಟ ಕುಸಿತ ಮತ್ತು ಹೊರ ಜಿಲ್ಲೆ/ರಾಜ್ಯಗಳಿಂದ...

ಅವರು ಖಿನ್ನತೆಗೆ ಒಳಗಾಗಿದ್ದರು. ಅದಕ್ಕಾಗಿ, ಖಿನ್ನತೆ ನಿವಾರಣೆಗೆ ಚಿಕಿತ್ಸೆ ಮತ್ತು ಔಷಧ ತೆಗೆದುಕೊಳ್ಳುತ್ತಿದ್ದರು ಎಂದು ಹೇಳಲಾಗಿದೆ.

“ಅವರ ಸಾವು ಇದು ಆತ್ಮಹತ್ಯೆ ಪ್ರಕರಣವೇ ಎಂದು ಖಚಿತವಾಗಿಲ್ಲ. ಯಾವುದೇ ಡೆತ್‌ನೋಟ್‌ ಪತ್ತೆಯಾಗಿಲ್ಲ. ಪ್ರಾಥಮಿಕ ತನಿಖೆಯ ಪ್ರಕಾರ, ವಿದ್ಯಾರ್ಥಿಯ ಸಂಗಾತಿ ಕೆಲವು ತಿಂಗಳ ಹಿಂದೆ ಹೈದರಾಬಾದ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ವಿದ್ಯಾರ್ಥಿಯ ಕುಟುಂಬವೂ ಕೂಡ ಇತ್ತೀಚೆಗಷ್ಟೇ ಗೋವಾಕ್ಕೆ ಸ್ಥಳಾಂತರಗೊಂಡಿತ್ತು” ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕಳೆದ ವರ್ಷ ವಿದ್ಯಾರ್ಥಿಯು ಬಿಐಟಿಎಸ್‌ ಹೈದರಾಬಾದ್ ಕ್ಯಾಂಪಸ್‌ನಲ್ಲಿ ಪ್ರವೇಶ ಪಡೆದಿದ್ದರು. ಬಳಿಕ, 2025ರಲ್ಲಿ ಗೋವಾ ಗೋವಾ ಕ್ಯಾಂಪಸ್‌ಗೆ ವರ್ಗಾವಣೆ ಪಡೆದು ಇಂಟಿಗ್ರೇಟೆಡ್ ಎಂಎಸ್ಸಿ ಭೌತಶಾಸ್ತ್ರ ವಿಭಾಗದಲ್ಲಿ ಅಧ್ಯಕ್ಷಯ ನಡೆಸುತ್ತಿದ್ದರು.

ಕಳೆದ ತಿಂಗಳು, ಇದೇ ಕ್ಯಾಂಪಸ್‌ನಲ್ಲಿ 20 ವರ್ಷದ ವಿದ್ಯಾರ್ಥಿಯೊಬ್ಬ ತನ್ನ ಹಾಸ್ಟೆಲ್ ಕೋಣೆಯಲ್ಲಿ ಶವವಾಗಿ ಪತ್ತೆಯಾಗಿದ್ದರು. ಇನ್ನು, 2024ರ ಡಿಸೆಂಬರ್‌ನಿಂದ 2025ರ ಮೇ ನಡುವೆ ಮೂರು ಆತ್ಮಹತ್ಯೆ ಪ್ರಕರಣಗಳು ನಡೆದಿದ್ದವು. ಆ ಸಮಯದಲ್ಲಿ, ಸಂಸ್ಥೆಯು ಆಂತರಿಕ ತನಿಖೆಗೆ ಮುಂದಾಗಿತ್ತು. ಆದಾಗ್ಯೂ, ಕ್ಯಾಂಪಸ್‌ನಲ್ಲಿ ಸಾವಿನ ಪ್ರಕರಣಗಳು ಮುಂದುವರೆದಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ ರಾಮಮಂದಿರ ದೇಣಿಗೆ ಕಳ್ಳತನ: ಸಿಸಿಟಿವಿಯಲ್ಲಿ 105 ಕೃತ್ಯ ಸೆರೆ

ಅಯೋಧ್ಯೆಯ ರಾಮಮಂದಿರದಲ್ಲಿ ದೇಣಿಗೆ ಹಣ ದುರ್ಬಳಕೆ ಹಾಗೂ ಕಳ್ಳತನ ನಡೆದಿದೆ ಎನ್ನಲಾದ...

ಕೇರಳದಲ್ಲಿ ಮತ್ತೆ ಭೂಕುಸಿತ; 9 ಮಂದಿ ಸಾವು, ಹಲವರು ನಾಪತ್ತೆ

ಕೇರಳ ರಾಜ್ಯದಾದ್ಯಂತ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಸಂಭವಿಸಿದ ಭೂಕುಸಿತ ಮತ್ತು ಪ್ರವಾಹದಿಂದ...

ಜಾರ್ಖಂಡ್ ಸಿಎಂ ಸೊರೇನ್ ವಿರುದ್ಧ ಹೇಳಿಕೆ: ಮಾಜಿ ಸಚಿವ ಯೋಗೇಂದ್ರ ಸಾವ್‌ಗೆ ಕಾಂಗ್ರೆಸ್‌ ಶೋಕಾಸ್ ನೋಟಿಸ್

ಜಾರ್ಖಂಡ್‌ ಮುಖ್ಯಮಂತ್ರಿ ಹೇಮಂತ್ ಸೊರೆನ್ ವಿರುದ್ಧ ಮಾಜಿ ಸಚಿವ ಹಾಗೂ ಹಿರಿಯ...

ನಾಳೆ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭ; ಅನಂತ್ ನಾಗ್‌ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ

72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ನಾಳೆ, 2026ರ ಸೆಪ್ಟೆಂಬರ್...