ಅಸಾಧಾರಣ ಪ್ರಕರಣಗಳಲ್ಲಿ ಮಾತ್ರ ನಿರೀಕ್ಷಣಾ ಜಾಮೀನು ನೀಡಬೇಕು: ದೆಹಲಿ ಹೈಕೋರ್ಟ್

Date:

ನಿರೀಕ್ಷಣಾ ಜಾಮೀನು ಮಂಜೂರು ಮಾಡುವ ಅಧಿಕಾರವು ಅಸಾಧಾರಣ ಅಧಿಕಾರವಾಗಿದೆ ಮತ್ತು ಅಸಾಧಾರಣ ಪ್ರಕರಣಗಳಲ್ಲಿ ಮಾತ್ರ ಅದನ್ನು ಚಲಾಯಿಸಬೇಕು ಎಂದು ದೆಹಲಿ ಹೈಕೋರ್ಟ್ ಹೇಳಿದೆ.

- Advertisement -

ಆಸ್ತಿ ವಿವಾದದ ವಿಷಯದಲ್ಲಿ ತನ್ನ ಸೋದರ ಸಂಬಂಧಿಯ ಮೇಲೆ ಹಲ್ಲೆ ನಡೆಸಿದ ಆರೋಪವನ್ನು ಎದುರಿಸುತ್ತಿರುವ ಆಶಿಷ್ ಕುಮಾರ ಎಂಬವರಿಗೆ ನಿರೀಕ್ಷಣಾ ಜಾಮೀನನ್ನು ನಿರಾಕರಿಸಿದ ಸಂದರ್ಭದಲ್ಲಿ ನ್ಯಾ.ರವೀಂದ್ರ ಡುಡೇಜಾ ಅವರು ಈ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಕಾನೂನನ್ನು ಪಾಲಿಸುವವರಿಗೆ ಮಾತ್ರ ಕಾನೂನು ನೆರವಾಗುತ್ತದೆ ಎಂದು ಅವರು ತನ್ನ ಜು.1ರ ಆದೇಶದಲ್ಲಿ ಒತ್ತಿ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಕಸ್ಟಡಿ ವಿಚಾರಣೆಗಾಗಿ ಮತ್ತು ಅಪರಾಧ ಕೃತ್ಯಕ್ಕೆ ಬಳಸಿದ ಆಯುಧವನ್ನು ವಶಪಡಿಸಿಕೊಳ್ಳಲು ಆರೋಪಿಯ ಅಗತ್ಯವಿದೆ ಎಂದು ನ್ಯಾಯಾಧೀಶರು ತಿಳಿಸಿದರು.

ದೂರುದಾರರ ಕುಟುಂಬ ಮತ್ತು ಕುಮಾರ ನಡುವಿನ ಹಿಂದಿನ ಆಸ್ತಿ ವಿವಾದದಿಂದಾಗಿ ಅವರನ್ನು ಪ್ರಕರಣದಲ್ಲಿ ಸುಳ್ಳೇ ಸಿಲುಕಿಸಲಾಗಿದೆ ಎಂದು ಹೇಳಿರುವ ಅರ್ಜಿಯು,ಕುಮಾರ ತನಿಖೆಗೆ ಹಾಜರಾಗಿರಲಿಲ್ಲ ಮತ್ತು ಅವರ ವಿರುದ್ಧ ಜಾಮೀನು ರಹಿತ ವಾರಂಟ್‌ಗಳನ್ನು ಹೊರಡಿಸಲಾಗಿದೆ ಎಂದು ತಿಳಿಸಿದೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಮೋದಿ ‘ಅಚ್ಛೇ ದಿನ’ದಲ್ಲಿ ಸಾಮಾನ್ಯರಿಗೆ ಸಾಲದ ಹೊರೆ

ಪ್ರಾಸಿಕ್ಯೂಷನ್ ಪ್ರಕರಣದಲ್ಲಿ ಸಲ್ಲಿಸಿರುವ ಸ್ಥಿತಿಗತಿ ವರದಿಯಲ್ಲಿ ದೂರುದಾರರು ಗಾಯಗೊಂಡಿದ್ದಾರೆ ಎಂದು ಹೇಳಿರುವುದನ್ನು ಗಮನಕ್ಕೆ ತೆಗೆದುಕೊಂಡ ನ್ಯಾ.ಡುಡೇಜಾ, ನಿಸ್ಸಂದೇಹವಾಗಿ ಗಾಯಾಳುವನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ಮತ್ತು ಗಾಯಗಳು ಸರಳ ಸ್ವರೂಪದ್ದಾಗಿವೆ ಎಂದು ಹೇಳಲಾಗಿದೆ,ಆದರೆ ಅಪರಾಧ ಕೃತ್ಯದಲ್ಲಿ ಬಳಸಿದ ಆಯುಧವನ್ನು ವಶಪಡಿಸಿಕೊಳ್ಳಲು ಆರೋಪಿಯ ಕಸ್ಟಡಿ ವಿಚಾರಣೆ ಅಗತ್ಯವಾಗಿದೆ. ಕಾನೂನನ್ನು ಪಾಲಿಸುವವರಿಗೆ ಮಾತ್ರ ಕಾನೂನು ನೆರವಾಗುತ್ತದೆ ಎಂದು ಹೇಳಿದರು.

ಘಟನೆಗೆ ದೂರುದಾರರ ಪ್ರಚೋದನೆಯು ಕಾರಣವಾಗಿತ್ತು ಎಂದು ಅರ್ಜಿಯಲ್ಲಿ ಹೇಳಲಾಗಿದ್ದು,ದೂರುದಾರರು ಯಾವುದೇ ಅನುಮತಿಯಿಲ್ಲದೆ ವಿವಾದಿತ ಆಸ್ತಿಯಲ್ಲಿ ಅಡುಗೆಮನೆಯನ್ನು ನಿರ್ಮಿಸುತ್ತಿದ್ದನ್ನು ಅರ್ಜಿದಾರರು ಆಕ್ಷೇಪಿಸಿದ್ದರು ಮತ್ತು ದೂರುದಾರರು ಅರ್ಜಿದಾರರ ಸೋದರನ ಮೇಲೆ ಹಲ್ಲೆ ನಡೆಸಿದ್ದರು ಎಂದು ವಾದಿಸಲಾಗಿದೆ.

ಘಟನೆಯಲ್ಲಿ ಅರ್ಜಿದಾರರು ಮತ್ತು ಅವರ ತಾಯಿ ಗಾಯಗೊಂಡಿದ್ದರೂ ದೂರುದಾರರ ವಿರುದ್ಧ ಯಾವುದೇ ಪ್ರತಿದೂರನ್ನು ದಾಖಲಿಸಿಕೊಂಡಿಲ್ಲ ಎಂದೂ ಅರ್ಜಿಯಲ್ಲಿ ತಿಳಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುಂಬೈ ಪ್ರತಿಭಟನೆ: ಸಿಜೆಪಿ ಆಯೋಜಕರು, 500ಕ್ಕೂ ಹೆಚ್ಚು ಜನರ ವಿರುದ್ಧ ಎಫ್‌ಐಆರ್ ದಾಖಲು

ಮುಂಬೈನ ಪ್ರಸಿದ್ಧ ಶಿವಾಜಿ ಪಾರ್ಕ್‌ನಲ್ಲಿ ಅನುಮತಿಯಿಲ್ಲದೆ ಪ್ರತಿಭಟನೆ ನಡೆಸಿದ ಆರೋಪದ ಮೇಲೆ...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್ ದೀಪ್ಕೆ ಕುರಿತು ನಡೆದಿದೆ ಚರ್ಚೆ!

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ...

ಅಸ್ಸಾಂ ಉಪಚುನಾವಣೆ ಅಖಾಡ: ಸಿಎಂ ಶರ್ಮಾ ಮತ್ತು ಕಾಂಗ್ರೆಸ್ ಸಂಸದರ ನಡುವೆ ‘ಬಿರಿಯಾನಿ vs ರಸ್ಕ್’ ವಾಕ್ಸಮರ!

ಅಸ್ಸಾಂನ ನಗಾಂವ್ ಲೋಕಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಯ ಪ್ರಚಾರ ಕಣದಲ್ಲಿ ರಾಜಕೀಯ...

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...