ಪ್ರೇಮಾನಂದ ಮಹಾರಾಜ್ ಆಶ್ರಮ ಭೇಟಿಗೆ ಅನುಷ್ಕಾ-ಕೊಹ್ಲಿ ದಂಪತಿ 5 ಕೋಟಿ ರೂ. ಪಡೆದರೆ; ವಿರಾಟ್ ಹೇಳಿದ್ದೇನು?

Date:

ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ ಮತ್ತು ಅವರ ಪತ್ನಿ, ನಟಿ ಅನುಷ್ಕಾ ಶರ್ಮಾ ವೃಂದಾವನದಲ್ಲಿರುವ ಆಧ್ಯಾತ್ಮಿಕ ಗುರು ಪ್ರೇಮಾನಂದ ಮಹಾರಾಜ್ ಅವರ ರಾಧಾ ಕೇಲಿ ಕುಂಜ್ ಆಶ್ರಮಕ್ಕೆ ಭೇಟಿ ನೀಡಲು ಐದು ಕೋಟಿ ರೂಪಾಯಿ ಪಡೆದುಕೊಂಡಿದ್ದಾರೆ ಎಂಬ ಸುದ್ದಿ ಸದ್ಯ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಈ ಬಗ್ಗೆ ಕೊಹ್ಲಿ ಪರ ವಕ್ತಾರರು ಸ್ಪಷ್ಟನೆ ನೀಡಿದ್ದು “ಈ ಆರೋಪಗಳು ಕಟ್ಟುಕಥೆ ಮತ್ತು ಆಧಾರರಹಿತವಾದವು” ಎಂದು ತಿಳಿಸಿದ್ದಾರೆ.

- Advertisement -

ಶ್ರೀ ಕೃಷ್ಣ ಜನ್ಮಭೂಮಿ ಸಂಘರ್ಷ ನ್ಯಾಸದ ಮುಖ್ಯಸ್ಥರಾದ ಫಲಾಹಾರಿ ಮಹಾರಾಜ್ (ದಿನೇಶ್ ಶರ್ಮಾ) ಎಂಬುವವರು ವಿರಾಟ್ ಕೊಹ್ಲಿ ಆಶ್ರಮಕ್ಕೆ ಆಗಮಿಸಲು ₹5 ಕೋಟಿ ರೂಪಾಯಿ ಪಾವತಿಸಲಾಗಿದೆ ಎಂದು ಆರೋಪಿಸಿದ್ದರು. ಈ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್ ಆಗಿ ತೀವ್ರ ಚರ್ಚೆಗೆ ಗ್ರಾಸವಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕ್ರೀಡೆ, ವ್ಯಾಪಾರ ಮತ್ತು ಮೌನ: ಲಿಯೋನೆಲ್ ಮೆಸ್ಸಿ ಎಂಬ...

2013ರ ಪ್ರವಾಸದ ವೇಳೆ ಅವರು ಇಸ್ರೇಲ್‌ನ ವೆಸ್ಟರ್ನ್ ವಾಲ್‌ನಲ್ಲಿ 'ಕಿಪ್ಪಾ' (ಯಹೂದಿಗಳ ಸಾಂಪ್ರದಾಯಿಕ ಟೋಪಿ) ಧರಿಸಿ ನಿಂತಿದ್ದ ಚಿತ್ರವು, ಅವರ ಇಸ್ರೇಲ್ ಪರ ಒಲವಿಗೆ ಅಳಿಸಲಾಗದ ಸಾಕ್ಷಿಯಾಗಿ ಉಳಿದುಕೊಂಡಿದೆ. ಶಾಂತಿ ಪ್ರವಾಸದ ಹೆಸರಿನಲ್ಲಿ...

ಆಪ್ಟೋಜೆನೆಟಿಕ್ಸ್ ಸಂಶೋಧನೆಗೆ ವೈದ್ಯಕೀಯ ನೊಬೆಲ್ ಪ್ರಶಸ್ತಿ: ನರಕೋಶಗಳಿಗೆ ಸಂಜೀವಿನಿಯಾಗಲಿರುವ...

ಸ್ಟಾನ್‌ಫೋರ್ಡ್ ವಿಶ್ವವಿದ್ಯಾಲಯದ ಕಾರ್ಲ್ ಡಿಸೆರೋತ್, ಜರ್ಮನಿಯ ಬರ್ಲಿನ್ನಿನ ಹಮ್‌ಬೋಲ್ಟ್ ವಿಶ್ವವಿದ್ಯಾಲಯದ ಪೀಟರ್ ಹೆಗೆಮನ್ ಮತ್ತು ಜರ್ಮನಿಯ ವೂರ್ಜ್ಬರ್ಗ್ ವಿಶ್ವವಿದ್ಯಾಲಯದ ಜಾರ್ಜ್ ನಾಗೆಲ್ ಅವರಿಗೆ ವೈದ್ಯಕೀಯ ನೊಬೆಲ್ ಪ್ರಶಸ್ತಿಯನ್ನು ಅಕ್ಟೋಬರ್ 5ರಂದು ಭಾರತೀಯ ಕಾಲಮಾನ...

ಶಿಕಾರಿಪುರ | ಬೀಗರೂಟ ಹಾಕಿದ್ರೆ 1 ಲಕ್ಷ, ಉಂಡ್ರೆ...

ಮದುವೆ ಅಂದರೆ ಕೇವಲ ಎರಡು ಮನಸುಗಳ ಮಿಲನ ಮಾತ್ರವಲ್ಲ, ಬಂಧು-ಬಳಗದ ಸಂಭ್ರಮ. ಆದರೆ ಇತ್ತೀಚಿನ ದಿನಗಳಲ್ಲಿ ಮದುವೆ ಮತ್ತು ಆದಾದ ಬಳಿಕ ಅದ್ದೂರಿಯಾಗಿ ಹಮ್ಮಿಕೊಳ್ಳುವ 'ಬೀಗರ ಊಟ' (ಬಾಡೂಟ) ಕೇವಲ ಸಂಪ್ರದಾಯವಾಗಿ ಉಳಿಯದೆ,...

ಇದನ್ನೂ ಓದಿ: ಮೋದಿ ಭಜನೆಗೆ ಓಕೆ, ಹೋರಾಟಕ್ಕೆ ಹಿಂಜರಿಕೆ: ಇದು ‘ಅನುಕೂಲಕರ’ ದೇಶಭಕ್ತಿ! 

ಈ ವದಂತಿಗಳಿಗೆ ತೆರೆ ಎಳೆದಿರುವ ಕೊಹ್ಲಿ ಅವರ ವಕ್ತಾರರು, “ಕೊಹ್ಲಿ ಹಾಗೂ ಅವರ ಪತ್ನಿ ಅನುಷ್ಕಾ ಶರ್ಮಾ ಅವರು ಆಶ್ರಮಕ್ಕೆ ಭೇಟಿ ನೀಡುವುದು ಕೇವಲ ತಮ್ಮ ಆಧ್ಯಾತ್ಮಿಕ ನಂಬಿಕೆ, ಶ್ರದ್ಧೆ ಮತ್ತು ಭಕ್ತಿಯಿಂದ ಮಾತ್ರವೇ ಹೊರತು ಯಾವುದೇ ವಾಣಿಜ್ಯಿಕ ಉದ್ದೇಶಕ್ಕಲ್ಲ. ₹5 ಕೋಟಿ ಸಂಭಾವನೆ ಪಡೆದಿದ್ದಾರೆ ಎನ್ನುವ ಆರೋಪ ಸಂಪೂರ್ಣ ಸುಳ್ಳು ಹಾಗೂ ಆಧಾರರಹಿತ,” ಎಂದು ಸ್ಪಷ್ಟನೆ ನೀಡಿದ್ದಾರೆ.

ಸೆಪ್ಟೆಂಬರ್ 25ರಂದು ಪ್ರೇಮಾನಂದ ಮಹಾರಾಜರ ಆಶ್ರಮದ ನಾಲ್ಕನೇ ಮಹಡಿಯಿಂದ ಬಿದ್ದು ರಸಿಕ್ ದುಲಾರಿ ಎಂಬ ಶಿಷ್ಯ ಮೃತಪಟ್ಟಿದ್ದ ಘಟನೆ ನಡೆದಿತ್ತು. ಮಥುರಾ ಪೊಲೀಸರು ಪ್ರಸ್ತುತ ಈ ಪ್ರಕರಣದ ತನಿಖೆ ನಡೆಸುತ್ತಿದ್ದು, ಸುಮಾರು 85ಕ್ಕೂ ಹೆಚ್ಚು ಜನರ ಹೇಳಿಕೆಗಳನ್ನು ದಾಖಲಿಸಿಕೊಂಡಿದ್ದಾರೆ. ಈ ಘಟನೆಯ ತನಿಖೆ ನಡೆಯುತ್ತಿರುವ ಮಧ್ಯೆಯೇ ಆಶ್ರಮದ ಸುತ್ತ ಇಂತಹ ಆರೋಪಗಳು ಹೊರಬಂದಿದ್ದವು. ಈ ನಡುವೆ ಕೊಹ್ಲಿ ಆಶ್ರಮ ಭೇಟಿಗೆ ಸಂಭಾವನೆ ಪಡೆದಿದ್ದಾರೆ ಎಂದು ಫಲಾಹಾರಿ ಮಹಾರಾಜ್ ಆರೋಪ ಮಾಡಿದ್ದಾರೆ. ವಿರಾಟ್, ಅನುಷ್ಕಾ ಭೇಟಿಯ ಚಿತ್ರವೂ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಲು ಶುರುವಾಗಿದ್ದವು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಸವಕಲ್ಯಾಣ | ಬೌದ್ಧ ವಿಹಾರ, ಅಂಬೇಡ್ಕರ್ ಭವನಕ್ಕೆ 25 ಎಕರೆ ಜಮೀನು ನೀಡಲು ಆಗ್ರಹ

ಬಸವಕಲ್ಯಾಣ ನಗರದಲ್ಲಿ ಬೌದ್ಧ ವಿಹಾರ ಹಾಗೂ ಡಾ. ಬಿ.ಆರ್.ಅಂಬೇಡ್ಕರ್ ಭವನ ನಿರ್ಮಾಣಕ್ಕಾಗಿ...

ಶಿಕಾರಿಪುರ | ಬೀಗರೂಟ ಹಾಕಿದ್ರೆ 1 ಲಕ್ಷ, ಉಂಡ್ರೆ 50 ಸಾವಿರ ದಂಡ!

ಮದುವೆ ಅಂದರೆ ಕೇವಲ ಎರಡು ಮನಸುಗಳ ಮಿಲನ ಮಾತ್ರವಲ್ಲ, ಬಂಧು-ಬಳಗದ ಸಂಭ್ರಮ....

ಜಾಗತಿಕ ಕೌಶಲ್ಯ ರಾಜಧಾನಿಯಾಗುವತ್ತ ಕರ್ನಾಟಕದ ದಿಟ್ಟ ಹೆಜ್ಜೆ: ನ. 3ರಿಂದ ‘ಬೆಂಗಳೂರು ಕೌಶಲ್ಯ ಶೃಂಗಸಭೆ’

"ಕೃತಕ ಬುದ್ಧಿಮತ್ತೆ (AI) ಹಾಗೂ ಹೊಸ ತಂತ್ರಜ್ಞಾನಗಳಿಂದ ಕೌಶಲ್ಯ ಕ್ಷೇತ್ರವು ಅತಿವೇಗವಾಗಿ...