ಅರಾವಳಿ | ಸಫಾರಿ ಯೋಜನೆ ತಿರಸ್ಕರಿಸಿದ ಸುಪ್ರೀಂ ಕೋರ್ಟ್

Date:

ಅರಾವಳಿ ಅರಣ್ಯ ಪ್ರದೇಶವನ್ನು ಮುಟ್ಟಲು ಯಾರಿಗೂ ಅವಕಾಶ ನೀಡುವುದಿಲ್ಲ ಎಂದು ಸುಪ್ರೀಂ ಕೋರ್ಟ್‌ ಹೇಳಿದೆ. ಅರಾವಳಿ ಶ್ರೇಣಿಯ ಅರಣ್ಯದಲ್ಲಿ ಸಫಾರಿ ಯೋಜನೆ ರೂಪಿಸಲು ಅನುಮತಿ ಕೋರಿ ಹರಿಯಾಣ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿದೆ.

- Advertisement -

ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್, ನ್ಯಾಯಮೂರ್ತಿಗಳಾದ ಜೋಯ್ಮಲ್ಯ ಬಾಗ್ಚಿ ಮತ್ತು ವಿಪುಲ್ ಎಂ ಪಾಂಚೋಲಿ ಅವರ ಪೀಠವು ಅರಾವಳಿ ಶ್ರೇಣಿಯ ಸೂಕ್ಷ್ಮತೆಯನ್ನು ಪರಿಗಣಿಸಿದರೆ, ಅರಣ್ಯ ಸಫಾರಿಯು ಪ್ರಮುಖ ಸಮಸ್ಯೆಯಾಗಿದೆ ಎಂದು ಗಮನಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

‘ಪಿತೃಪ್ರಭುತ್ವವನ್ನು ಧ್ವಂಸ ಮಾಡಿ’: ಮನುವಾದ ಮತ್ತು ಫ್ಯಾಸಿಸಂ ವಿರುದ್ಧ...

ಸ್ವತಂತ್ರ ಭಾರತ 80 ವರ್ಷಗಳನ್ನು ಪೂರೈಸುತ್ತಿರುವಾಗ, ನಾವು ಕೇಳಬೇಕಾಗಿದೆ, ಆ ಮನಸ್ಥಿತಿ ಹೋಗಿದೆಯೇ? ಇಲ್ಲ. ಪುಸ್ತಕವನ್ನು ಸುಡಲಾಗಿರಬಹುದು, ಆದರೆ ಮನುಸ್ಮೃತಿಯ ಮನಸ್ಥಿತಿ, ಮನುವಾದ, ಹೆಚ್ಚು ಅತ್ಯಾಧುನಿಕ ಮತ್ತು ಅದೃಶ್ಯ ರೂಪಗಳಲ್ಲಿ ಅಸ್ತಿತ್ವದಲ್ಲಿದೆ.  ಪುಣೆಯಲ್ಲಿ ನಡೆದ...

ಸರ್ಕಾರದ ಪರ ವಾದ ಮಂಡಿಸಿದ ವಕೀಲರು “ಸಫಾರಿ ಯೋಜನೆಯ ವಿವರವಾದ ಯೋಜನಾ ವರದಿಯನ್ನು (ಡಿಪಿಆರ್) 10,000 ಎಕರೆಗಳಿಂದ 3,300 ಎಕರೆಗಳಿಗೆ ಪರಿಷ್ಕರಿಸಲಾಗಿದೆ. ಯೋಜನೆಯ ಸಾಧಕ-ಬಾಧಕಗಳ ಪರಿಶೀಲನೆಗಾಗಿ ಡಿಪಿಆರ್‌ಅನ್ನು ಸಲ್ಲಿಸಲು ಕೇಂದ್ರ ಅಧಿಕಾರ ಸಮಿತಿಗೆ (ಸಿಇಸಿ) ಅವಕಾಶ ನೀಡಬೇಕೆಂಬುದನ್ನು ಮಾತ್ರವೇ ಸರ್ಕಾರವು ಬಯಸುತ್ತಿದೆ” ಎಂದು ಹೇಳಿದ್ದಾರೆ.

ಈ ಲೇಖನ ಓದಿದ್ದೀರಾ?: ಮೋದಿ-ಟ್ರಂಪ್ ವ್ಯಾಪಾರ ಒಪ್ಪಂದ: ರೈತರ ಬದುಕಿಗೆ ಕೊಡಲಿಯಾಗುವುದೇ?

ಅವರ ವಾದಕ್ಕೆ ಪ್ರತಿಕ್ರಿಯಿಸಿದ ಸಿಜೆಐ ಕಾಂತ್, “ನಾವು ತಜ್ಞರಲ್ಲ. ಅರಾವಳಿಯ ವ್ಯಾಖ್ಯಾನವನ್ನು ತಜ್ಞರು ನಿರ್ಧರಿಸುತ್ತಾರೆ. ಅರಾವಳಿ ಶ್ರೇಣಿಯ ವ್ಯಾಖ್ಯಾನವನ್ನು ಅಂತಿಮಗೊಳಿಸುವವರೆಗೆ, ನಾವು ಯಾರಿಗೂ ಅರಾವಳಿ ಪ್ರದೇಶವನ್ನು ಮುಟ್ಟಲು ಬಿಡುವುದಿಲ್ಲ. ಅರಾವಳಿ ಹರಿಯಾಣ ಅಥವಾ ರಾಜಸ್ಥಾನಕ್ಕೆ ಮಾತ್ರ ಸೀಮಿತವಾಗಿಲ್ಲ. ಇದು ಅನೇಕ ರಾಜ್ಯಗಳನ್ನು ಹಾದುಹೋಗುವ ಶ್ರೇಣಿಯಾಗಿದೆ” ಎಂದು ಹೇಳಿದ್ದಾರೆ.

ಹರಿಯಾಣ ಸರ್ಕಾರವು ವಿಶ್ವದ ಅತಿದೊಡ್ಡ ಸಫಾರಿ ಎಂದು ಹೇಳಲಾದ ಪ್ರಸ್ತಾವಿತ ಮೆಗಾ ‘ಅರಾವಳಿ ಮೃಗಾಲಯ ಸಫಾರಿ ಯೋಜನೆ’ಯನ್ನು ಸಿದ್ದಪಡಿಸಿತ್ತು. ಈ ಯೋಜನೆಯು ಗುರ್ಗಾಂವ್ ಮತ್ತು ನುಹ್ ಜಿಲ್ಲೆಗಳ ಪರಿಸರ-ದುರ್ಬಲ ಅರಾವಳಿ ಶ್ರೇಣಿಯ 10,000 ಎಕರೆ ಪ್ರದೇಶದಲ್ಲಿ ಸಫಾರಿ ನಡೆಸಲು ಉದ್ದೇಶಿಸಿತ್ತು. ಆದರೆ, ಈ ಯೋಜನೆಯನ್ನು ಕಳೆದ ವರ್ಷ ಅಕ್ಟೋಬರ್‌ನಲ್ಲಿ ಸುಪ್ರೀಂ ಕೋರ್ಟ್‌ ರದ್ದುಗೊಳಿಸಿತ್ತು.

WhatsApp Image 2023 06 13 at 1.10.34 PM e1686642227658
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಂಭಲ್ ಪ್ರಕರಣ: ಆರೋಪಿ ಮೇಲಿನ NSA ರದ್ದು, ಯೋಗಿ ಸರ್ಕಾರಕ್ಕೆ 10 ಲಕ್ಷ ರೂ. ದಂಡ ವಿಧಿಸಿದ ಸುಪ್ರೀಂ!

2024ರ ಸಂಭಲ್ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಮುಲ್ಲಾ ಅಫ್ರೋಜ್ ವಿರುದ್ಧ...

ಸೊಹ್ರಾಬುದ್ದೀನ್ ಪ್ರಕರಣ: ಅಮಿತ್ ಶಾ ಬಿಡುಗಡೆ ಮರುಪರಿಶೀಲನೆಗೆ ಸುಪ್ರೀಂ ಕೋರ್ಟ್ ನಕಾರ

ತೀವ್ರ ಕುತೂಹಲ ಕೆರಳಿಸಿರುವ ಸೊಹ್ರಾಬುದ್ದೀನ್ ಶೇಖ್ ನಕಲಿ ಎನ್‌ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ,...

ಪ್ರಚೋದನಕಾರಿ ಭಾಷಣದಿಂದ ಹಲ್ಲೆಯವರೆಗೆ: ಪರ್ವೇಶ್ ವರ್ಮಾ ಎಂಬ ಪರಮ ದುರಹಂಕಾರಿಯ ಕತೆ

ಪ್ರಜಾಪ್ರಭುತ್ವದಲ್ಲಿ ಜನಪ್ರತಿನಿಧಿಗಳು ಜನರಿಗೆ ಉತ್ತರದಾಯಿಗಳಾಗಿರಬೇಕು. ಆದರೆ, ದೆಹಲಿಯ ಲೋಕೋಪಯೋಗಿ ಸಚಿವ ಪರ್ವೇಶ್...