ಬಸ್‌ಗಳನ್ನೇ ಜೈಲುಗಳನ್ನಾಗಿ ಪರಿವರ್ತಿಸಲಾಗುತ್ತಿದೆಯೇ? – ಕಸ್ಟಡಿ ವಾಹನದ ಪರಿಸ್ಥಿತಿ ಬಿಚ್ಚಿಟ್ಟ ನೇಹಾ ಬೋರಾ

Date:

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ದೆಹಲಿಯ ಜಂತರ್ ಮಂತರ್, ವಿಜಯ್ ಚೌಕ್ ಸುತ್ತಮುತ್ತ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿ ನಾಯಕರು, ರಾಜಕೀಯ ಕಾರ್ಯಕರ್ತರನ್ನು ದೆಹಲಿ ಪೊಲೀಸರು ಮತ್ತು ಸಿಆರ್‌ಪಿಎಫ್ ಸಿಬ್ಬಂದಿ ವಶಕ್ಕೆ ಪಡೆದುಕೊಂಡಿದ್ದಾರೆ. ಈ ವೇಳೆ ವಶಕ್ಕೆ ಪಡೆದವರನ್ನು ಕರೆದೊಯ್ಯಲು ಪೊಲೀಸರು ಬಳಸಿದ ‘ಡಿಟೆಂಷನ್ ಬಸ್‌’ಗಳ ಸ್ವರೂಪ ಮತ್ತು ಸ್ಥಿತಿಯ ಬಗ್ಗೆ ಆಲ್ ಇಂಡಿಯಾ ಸ್ಟೂಡೆಂಟ್ಸ್ ಅಸೋಸಿಯೇಷನ್ (AISA) ರಾಷ್ಟ್ರೀಯ ಅಧ್ಯಕ್ಷೆ ನೇಹಾ ಬೋರಾ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -

ತಮ್ಮ ಸಾಮಾಜಿಕ ಜಾಲತಾಣ ‘X’ (ಟ್ವಿಟರ್) ಖಾತೆಯಲ್ಲಿ ಕಸ್ಟಡಿ ಬಸ್ ಒಳಗಿನಿಂದ ವಿಡಿಯೋ ತುಣುಕೊಂದನ್ನು ಹಂಚಿಕೊಂಡಿರುವ ನೇಹಾ ಬೋರಾ, ಪೊಲೀಸರ ಈ ನಡೆ ಮತ್ತು ವಾಹನಗಳ ವಿನ್ಯಾಸವನ್ನು ಕಟುವಾಗಿ ಪ್ರಶ್ನಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಇದನ್ನೂ ಓದಿ: ಗ್ಯಾನೂ ವಿರುದ್ಧ ಪ್ರತಿಭಟನೆ: ವಿದ್ಯಾರ್ಥಿ ನಾಯಕಿ ನೇಹಾ ಬೋರಾ ಬಂಧನ

“ಈ ಬಸ್ಸಿನೊಳಗೆ ಜೈಲಿನ ಸೆಲ್‌ಗಳಂತೆ ನಾಲ್ಕು ಸಣ್ಣ ಸಣ್ಣ ಕೊಠಡಿಗಳನ್ನು ಮಾಡಲಾಗಿದೆ, ಅವುಗಳಿಗೆ ಚಿಲಕಗಳಿರುವ ಬಾಗಿಲುಗಳಿವೆ. ಇಲ್ಲಿ ಉಸಿರಾಡಲು ಸಹ ಸರಿಯಾಗಿ ಸ್ಥಳವಿಲ್ಲ. ಒಂದು ಬದಿಯಲ್ಲಿ ಸರಳುಗಳು ಮತ್ತು ಗಾಜಿನ ಫಲಕಗಳನ್ನು ಅಳವಡಿಸಲಾಗಿದೆ. ಪ್ರತಿಭಟನಾಕಾರರನ್ನು ಇಲ್ಲಿ ನೆಲದ ಮೇಲೆಯೇ ಕೂಡಿಸಲಾಗಿದೆ. ವಿಚಾರಣೆಗೆ ಅಥವಾ ಕಸ್ಟಡಿಗೆ ಕರೆದೊಯ್ಯುವ ಮುನ್ನವೇ ಈ ಡಿಟೆಂಷನ್ ಬಸ್‌ಗಳನ್ನು ಜೈಲುಗಳನ್ನಾಗಿ ಪರಿವರ್ತಿಸುವುದು ದೆಹಲಿ ಪೊಲೀಸ್ ಮತ್ತು ಸಿಆರ್‌ಪಿಎಫ್‌ನ ಉದ್ದೇಶವೇ? ಈ ಡಿಟೆಂಷನ್ ಬಸ್‌ಗಳೇ ಹೊಸ ಜೈಲುಗಳೇ?” ಎಂದು ನೇಹಾ ಬೋರಾ ಪ್ರಶ್ನಿಸಿದ್ದಾರೆ.

ಅಲ್ಲದೆ, ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ಸಾಮಾನ್ಯ ಜನರ ವಿರುದ್ಧ ಪೊಲೀಸರು ಅತಿಯಾದ ಬಲಪ್ರಯೋಗ ಮತ್ತು ಹಿಂಸಾಚಾರ ನಡೆಸುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ರಾಜಧಾನಿ ದೆಹಲಿಯಲ್ಲಿ ಜಂತರ್ ಮಂತರ್ ಕಡೆಗೆ ಮೆರವಣಿಗೆ ಸಾಗದಂತೆ ತಡೆಯಲು ದೆಹಲಿ ಪೊಲೀಸರು ಬ್ಯಾರಿಕೇಡ್‌ಗಳನ್ನು ಹಾಕಿ ಬಿಗಿ ಭದ್ರತೆ ಕೈಗೊಂಡಿದ್ದರು. ಈ ವೇಳೆ ಸಿಪಿಐ(ಎಂ) ಸಂಸದ ಜಾನ್ ಬ್ರಿಟ್ಟಾಸ್, ಸಿಪಿಐ(ಎಮ್‌ಎಲ್) ಪ್ರಧಾನ ಕಾರ್ಯದರ್ಶಿ ದೀಪಂಕರ್ ಭಟ್ಟಾಚಾರ್ಯ, ಯೋಗೇಂದ್ರ ಯಾದವ್, ಪ್ರಶಾಂತ್ ಭೂಷಣ್ ಸೇರಿದಂತೆ ಹಲವು ನಾಯಕರು ಮತ್ತು ವಿದ್ಯಾರ್ಥಿ ಸಂಘಟನೆಗಳ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಜೆಪಿ ಪ್ರತಿಭಟನೆ ಯಶಸ್ವಿ; 40 ಸಾವಿರ ಅರೆಸೇನಾ ಯೋಧರ ನಿಯೋಜನೆಯೇ ಸಾಕ್ಷಿ:‌ ಪ್ರಶಾಂತ್ ಕಿಶೋರ್

ಭಾರತದ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ವಿರುದ್ಧ ಸಿಜೆಪಿ ಕರೆಕೊಟ್ಟಿದ್ದ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳು, ಮಹಿಳೆಯರ ಮೇಲೆ ಹಲ್ಲೆ ಮಾಡಿದ ಹಿಂದೂ ರಕ್ಷಾ ದಳದ ನಾಲ್ವರ ಬಂಧನ

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ರಾಜೀನಾಮೆಗೆ...

NTA ಒಂದು ‘ಖಾಲಿ ಸಂಸ್ಥೆ’, ಮೋದಿ ಸರ್ಕಾರ ಅಹಂಕಾರ ಬಿಟ್ಟು ವರದಿ ಪರಿಗಣಿಸಲಿ: ಕಾಂಗ್ರೆಸ್

ರಾಷ್ಟ್ರೀಯ ಪರೀಕ್ಷಾ ಸಂಸ್ಥೆ‌ (ಎನ್‌ಟಿಎ) ಮತ್ತು ಶಿಕ್ಷಣ ಸಚಿವಾಲಯದಲ್ಲಿ ಗಂಭೀರ ಸ್ವರೂಪದ...