ವಿದ್ಯಾರ್ಥಿಗಳ ಬೆನ್ನಟ್ಟಿರುವ ದೆಹಲಿ ಪೊಲೀಸರಿಗೆ ತಮ್ಮದೇ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳಲು ʼಕೈʼ ಬರುತ್ತಿಲ್ಲವೇ?

Date:

ದೆಹಲಿಯ ಜಂತರ್‌ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಬಳಿಕ ದೆಹಲಿ ಪೊಲೀಸರು ಪ್ರತಿಭಟನಾಕಾರರ ವಿರುದ್ಧ ಕೈಗೊಂಡಿರುವ ಕ್ರಮಗಳು ಹಾಗೂ ಅದೇ ವೇಳೆ ಪ್ರತಿಭಟನೆಯಲ್ಲಿ ಅತಿಯಾದ ಬಲಪ್ರಯೋಗ ನಡೆಸಿದ ತಮ್ಮದೇ ಸಿಬ್ಬಂದಿಯ ವಿರುದ್ಧ ಕ್ರಮ ಕೈಗೊಳ್ಳದೆ ನಡೆದುಕೊಳ್ಳುತ್ತಿರುವ ರೀತಿ ಈಗ ದೇಶಾದ್ಯಂತ ಚರ್ಚೆಗೆ ಗ್ರಾಸವಾಗಿದೆ.

- Advertisement -

ಒಂದು ಕಡೆ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳನ್ನು ಮುಖ ಗುರುತಿಸುವ ತಂತ್ರಜ್ಞಾನ ಸೇರಿದಂತೆ ವಿವಿಧ ನಿಗಾ ವ್ಯವಸ್ಥೆಗಳ ಮೂಲಕ ಪತ್ತೆಹಚ್ಚಿ ಪ್ರಕರಣ ದಾಖಲಿಸಲು ಪ್ರತಿಭಟನಾಕಾರರ ಬೆನ್ನು ಬಿದ್ದಿದ್ದಾರೆ. ಆದರೆ ಮತ್ತೊಂದೆಡೆ ಮಹಿಳಾ ವಿದ್ಯಾರ್ಥಿನಿಯರು ಸೇರಿದಂತೆ ಪ್ರತಿಭಟನಾಕಾರರ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿದ ಪೊಲೀಸರ ವಿರುದ್ಧ ಇದುವರೆಗೆ ಯಾವುದೇ ಕ್ರಮವಾಗಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ಪ್ರತಿಭಟನೆಯ ವೇಳೆ ಮಹಿಳಾ ವಿದ್ಯಾರ್ಥಿನಿಯರಿಗೆ ಕಪಾಳಮೋಕ್ಷ ಮಾಡುವುದು, ಯುವತಿಯೊಬ್ಬಳ ಖಾಸಗಿ ಅಂಗದತ್ತ ಲಾಠಿ ಬೀಸಲು ಯತ್ನಿಸುವುದು, ನಿರಾಯುಧ ಪ್ರತಿಭಟನಾಕಾರರ ಮೇಲೆ ಅತಿಯಾದ ಬಲಪ್ರಯೋಗ ನಡೆಸುವುದು ಸೇರಿದಂತೆ ಹಲವು ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ದೇಶವೇ ಆ ದೃಶ್ಯಗಳನ್ನು ನೋಡಿದೆ. ಆದರೆ ಆ ವಿಡಿಯೊಗಳಲ್ಲಿ ಕಾಣಿಸಿಕೊಂಡ ಪೊಲೀಸ್ ಸಿಬ್ಬಂದಿಯನ್ನು ಗುರುತಿಸಿ ಅವರ ವಿರುದ್ಧ ಇಲಾಖೆ ಯಾವುದೇ ಕಠಿಣ ಕ್ರಮ ಕೈಗೊಂಡಿರುವ ಮಾಹಿತಿಯೇ ಇಲ್ಲ. ಮತ್ತೊಂದೆಡೆ, ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳನ್ನು ಪತ್ತೆಹಚ್ಚಲು ಮುಖ ಗುರುತಿಸುವ ತಂತ್ರಜ್ಞಾನ, ಸಿಸಿಟಿವಿ ದೃಶ್ಯಗಳು ಮತ್ತು ಇತರ ನಿಗಾ ವ್ಯವಸ್ಥೆಗಳನ್ನು ಬಳಸುವ ಅಮಾನವೀಯ ಕ್ರಮ ಮುಂದುವರೆದಿದೆ.

ದೆಹಲಿ ಪೊಲೀಸರು ಪ್ರತಿಭಟನೆಯಲ್ಲಿ ದುಷ್ಕರ್ಮಿಗಳು ನುಸುಳಿದ್ದರು ಎಂದು ಹೇಳುತ್ತಿದ್ದಾರೆ. ಹಿಂಸಾಚಾರದಲ್ಲಿ ಭಾಗಿಯಾದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದು ಪೊಲೀಸರ ಕರ್ತವ್ಯವೇ ಸರಿ. ಆದರೆ ಅದೇ ಕಾನೂನು ಸಮವಸ್ತ್ರ ಧರಿಸಿದ ಪೊಲೀಸರಿಗೂ ಅನ್ವಯಿಸಬೇಕಲ್ಲವೇ ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ. ಸಾರ್ವಜನಿಕವಾಗಿ ಲಭ್ಯವಿರುವ ವಿಡಿಯೊಗಳಿದ್ದರೂ, ತಮ್ಮದೇ ಸಿಬ್ಬಂದಿಯನ್ನು ಗುರುತಿಸಲು ವಿಫಲವಾಗಿರುವಂತೆ ಕಾಣುತ್ತಿರುವುದು ಪೊಲೀಸ್ ವ್ಯವಸ್ಥೆಯ ವಿಶ್ವಾಸಾರ್ಹತೆಯನ್ನೇ ಪ್ರಶ್ನಿಸುವಂತಾಗಿದೆ.

ಇದರ ನಡುವೆಯೇ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳು, ಅವರ ಕುಟುಂಬದವರು, ಸರ್ಕಾರವನ್ನು ಟೀಕಿಸಿದ ಸಾಮಾಜಿಕ ಜಾಲತಾಣ ಬಳಕೆದಾರರ ವಿರುದ್ಧವೂ ಪ್ರಕರಣಗಳು ದಾಖಲಾಗುತ್ತಿರುವ ವರದಿಗಳಿವೆ. ಆದರೆ ಪ್ರತಿಭಟನಾಕಾರರಿಗೆ ಬೆದರಿಕೆ ಹಾಕಿದವರು ಅಥವಾ ದ್ವೇಷಪೂರಿತ ಪೋಸ್ಟ್‌ಗಳನ್ನು ಹಾಕಿದವರ ವಿರುದ್ಧ ಅಷ್ಟೇ ಚುರುಕಿನ ಕ್ರಮ ಗೋಚರಿಸುತ್ತಿಲ್ಲ ಎಂಬ ಆರೋಪಗಳೂ ಕೇಳಿಬರುತ್ತಿವೆ. ಇದರಿಂದ ಕಾನೂನು ಎಲ್ಲರಿಗೂ ಸಮಾನವೇ, ಅಥವಾ ಆಯ್ದವರ ವಿರುದ್ಧ ಮಾತ್ರ ಜಾರಿಯಾಗುತ್ತಿದೆಯೇ ಎಂಬ ಅನುಮಾನ ಮೂಡುತ್ತಿದೆ. ವಿದ್ಯಾರ್ಥಿಗಳ ಬೇಡಿಕೆಗಳನ್ನು ಒಪ್ಪಿಕೊಂಡ ನಂತರ ಪ್ರತಿಭಟನೆ ಹಿಂಪಡೆಯಲಾಗಿತ್ತು. ಅಂತಹ ಸಂದರ್ಭದಲ್ಲಿ ಮತ್ತೆ ಅವರ ವಿರುದ್ಧ ಪ್ರಕರಣಗಳು, ವಿಚಾರಣೆಗಳು ಮತ್ತು ಬೆನ್ನಟ್ಟುವ ಕ್ರಮಗಳು ಮುಂದುವರಿದಿವೆ.

ಇದನ್ನೂ ಓದಿ: ‘ರೀಲ್ಸ್‌ನಲ್ಲಿ ಅಷ್ಟೇ ಕ್ಷಮಿಸುವುದೋ, ಎಫ್‌ಐಆರ್ ವಾಪಸ್ ಪಡೆಯುತ್ತೀರೋ’: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಈ ನಡುವೆ, ಜುಲೈ 20ರಂದು ಜಂತರ್‌ ಮಂತರ್‌ನಿಂದ ಸಂಸತ್‌ ಚಲೋ ಪ್ರತಿಭಟನೆಯ ವೇಳೆ ಗಾಯಗೊಂಡ ದೆಹಲಿ ಪೊಲೀಸ್ ಸಿಬ್ಬಂದಿಯ ಕುಟುಂಬಸ್ಥರು ಕೂಡ ಸಂಸತ್ತಿನಲ್ಲಿ ತಮ್ಮ ನೋವಿನ ಬಗ್ಗೆ ಚರ್ಚೆಯಾಗಬೇಕು ಎಂದು ಆಗ್ರಹಿಸಿದ್ದಾರೆ. ಕರ್ತವ್ಯ ನಿರ್ವಹಿಸುವ ವೇಳೆ ಗಾಯಗೊಂಡ ಪೊಲೀಸರ ನೋವು, ಅವರ ಕುಟುಂಬಗಳ ಆತಂಕ ಮುಖ್ಯ. ಅವರ ಧ್ವನಿಗೂ ನ್ಯಾಯ ದೊರೆಯಬೇಕು ಎಂಬ ಬೇಡಿಕೆ ಸಹಜ ಮತ್ತು ನ್ಯಾಯಸಮ್ಮತವೇ. ಆದರೆ ಪ್ರಶ್ನೆ ಇರುವುದು ಅಲ್ಲಲ್ಲ. ಪೊಲೀಸರ ಮೇಲಿನ ಹಲ್ಲೆ ಖಂಡನೀಯವಾಗಿದ್ದರೆ, ಪ್ರತಿಭಟನೆಯ ವೇಳೆ ವಿದ್ಯಾರ್ಥಿಗಳು, ವಿಶೇಷವಾಗಿ ಮಹಿಳಾ ಪ್ರತಿಭಟನಾಕಾರರ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿದ ಪೊಲೀಸರ ವರ್ತನೆಯೂ ಅಷ್ಟೇ ಖಂಡನೀಯ. ವಿದ್ಯಾರ್ಥಿನಿಯರಿಗೆ ಕಪಾಳಮೋಕ್ಷ ಮಾಡುವುದು, ಲಾಠಿಯಿಂದ ಹಲ್ಲೆ ನಡೆಸುವುದು, ಅತಿಯಾದ ಬಲಪ್ರಯೋಗ ನಡೆಸಿರುವ ದೃಶ್ಯಗಳು ಕಣ್ಣ ಮುಂದಿದ್ದರೂ, ಆ ಪೊಲೀಸ್ ಸಿಬ್ಬಂದಿಯ ವಿರುದ್ಧ ಯಾವ ಕ್ರಮ ಕೈಗೊಳ್ಳಲಾಗಿದೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.

ಹೀಗಾಗಿ, ಗಾಯಗೊಂಡ ಪೊಲೀಸರ ಕುಟುಂಬಗಳು ನ್ಯಾಯ ಕೇಳುತ್ತಿರುವಂತೆ, ಅದೇ ಧ್ವನಿಯಲ್ಲಿ ಕಾನೂನು ಮೀರಿದ ಪೊಲೀಸ್ ಸಿಬ್ಬಂದಿಯ ವಿರುದ್ಧವೂ ನಿಷ್ಪಕ್ಷಪಾತ ತನಿಖೆ ಮತ್ತು ಕ್ರಮಕ್ಕೆ ಆಗ್ರಹಿಸಬೇಕಲ್ಲವೇ ಎಂಬ ಪ್ರಶ್ನೆಯೂ ಸಹಜವಾಗಿಯೇ ಮೂಡುತ್ತದೆ. ಏಕೆಂದರೆ ನ್ಯಾಯ ಎನ್ನುವುದು ಸಮವಸ್ತ್ರ ಧರಿಸಿದವರಿಗೆ ಒಂದು, ವಿದ್ಯಾರ್ಥಿಗಳಿಗೆ ಮತ್ತೊಂದು ಆಗಲು ಸಾಧ್ಯವಿಲ್ಲ. ಪ್ರಜಾಪ್ರಭುತ್ವದಲ್ಲಿ ಕಾನೂನು ಎಲ್ಲರಿಗೂ ಒಂದೇ ಆಗಿರಬೇಕು. ಪೊಲೀಸರ ಮೇಲೆ ಹಲ್ಲೆ ನಡೆಸಿದವರನ್ನು ಕಾನೂನು ಶಿಕ್ಷಿಸಬೇಕು; ಅದೇ ರೀತಿ ಕಾನೂನಿನ ಮಿತಿಯನ್ನು ಮೀರಿ ಅಮಾನುಷವಾಗಿ ವರ್ತಿಸಿದ ಪೊಲೀಸ್ ಸಿಬ್ಬಂದಿಯನ್ನೂ ಹೊಣೆಗಾರರನ್ನಾಗಿ ಮಾಡಬೇಕು ಎಂಬ ಆಗ್ರಹ ಕೇಳಿಬರುತ್ತಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಷ್ಯಾದಿಂದ ತೈಲ ಖರೀದಿಸುತ್ತಿರುವ ಭಾರತಕ್ಕೆ ಅಮೆರಿಕದ ಶೇ.100ರಷ್ಟು ಸುಂಕದ ಬೆದರಿಕೆ

ರಷ್ಯಾ ವಿರುದ್ಧದ ನಿರ್ಬಂಧಗಳ ಮಸೂದೆಗೆ ತಿದ್ದುಪಡಿ ತಂದು, ಭಾರತ ಸೇರಿದಂತೆ ಹಲವು...

ಸಂಜೆ ಮಳೆಗೆ ಬೆಂಗಳೂರು ತತ್ತರ: ಟ್ರಾಫಿಕ್‌ನಲ್ಲಿ ಸಿಲುಕಿದ ಜನರು, 11 ಜಿಲ್ಲೆಗಳಲ್ಲಿ ಭಾರಿ ಮಳೆ ಎಚ್ಚರಿಕೆ

ಬೆಂಗಳೂರಿನಲ್ಲಿ ಸಂಜೆಯಾಗುತ್ತಿದ್ದಂತೆ ದಿಢೀರನೆ ಶುರುವಾದ ಭಾರೀ ಮಳೆಯಿಂದಾಗಿ ಸಿಲಿಕಾನ್ ಸಿಟಿಯ ಜನಜೀವನ...

ಪತಂಜಲಿ ಪ್ರಕರಣ: ಕಣ್ಣುಮುಚ್ಚಿಕೊಂಡು ಆದೇಶ ಹೊರಡಿಸಿದ ‘ಐಟಿಎಟಿ’ಗೆ ದೆಹಲಿ ಹೈಕೋರ್ಟ್ ತರಾಟೆ, 7 ಆದೇಶಗಳು ರದ್ದು

ಪತಂಜಲಿ ಆಯುರ್ವೇದ ಲಿಮಿಟೆಡ್‌ಗೆ ಸಂಬಂಧಿಸಿದಂತೆ 'ಆದಾಯ ತೆರಿಗೆ ಮೇಲ್ಮನವಿ ನ್ಯಾಯಾಧೀಕರಣ' (ITAT)...

ದುಬೈಗೆ ತೆರಳಬೇಕಿದ್ದ ಸ್ಪೈಸ್‌ಜೆಟ್‌ ವಿಮಾನಗಳ ವಿಳಂಬ: ದೆಹಲಿ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಪ್ರತಿಭಟನೆ

ದುಬೈಗೆ ತೆರಳಬೇಕಿದ್ದ ಸ್ಪೈಸ್‌ಜೆಟ್‌ನ ಎರಡು ವಿಮಾನಗಳು ಪದೇಪದೇ ವಿಳಂಬಗೊಂಡ ಹಿನ್ನೆಲೆಯಲ್ಲಿ ಅಸಮಾಧಾನಗೊಂಡ...