ಉತ್ತರ ಪ್ರದೇಶ | ಹಣದ ವಿಚಾರಕ್ಕೆ ಜಗಳ; ಕುಟುಂಬದ ನಾಲ್ವರನ್ನು ಕೊಂದ ಕ್ರೂರಿ

Date:

ಹಣದ ವಿಚಾರವಾಗಿ ಕುಟುಂಬದೊಳಗೆ ಜಗಳ ನಡೆದಿದ್ದು, ವ್ಯಕ್ತಿಯೊಬ್ಬ ತನ್ನ ತಂದೆ, ತಾಯಿ, ಅಜ್ಜಿ ಹಾಗೂ ಸಹೋದರಿಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಉತ್ತರ ಪ್ರದೇಶದ ಬಹ್ರೈಚ್‌ ಜಿಲ್ಲೆಯಲ್ಲಿ ನಡೆದಿದೆ.

- Advertisement -

ಜಿಲ್ಲೆಯ ರಾಮಗಾಂವ್ ಹಳ್ಳಿಯಲ್ಲಿ ಭಾನುವಾರ ಮಧ್ಯರಾತ್ರಿ ಈ ಆಘಾತಕಾರಿ ಘಟನೆ ನಡೆದಿದೆ ಎಂದು ವರದಿಯಾಗಿದೆ. ಆರೋಪಿ ತನ್ನ ಅಣ್ಣ ಗುರುದೇವ್‌ ಮೇಲೆಯೂ ಹಲ್ಲೆ ನಡೆಸಿದ್ದಾನೆ ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಮೃತರನ್ನು ಆರೋಪಿ ತಂದೆ ಬದ್ಲು ರಾಮ್ (60), ತಾಯಿ ಸಂಜು ದೇವಿ (56), ಸಹೋದರಿ ಪಾರ್ವತಿ(ಸುಮಾರು 42) ಹಾಗೂ ಅಜ್ಜಿ ಸಿತಾಲಾ (80) ಎಂದು ಗುರುತಿಸಲಾಗಿದೆ. ಆರೋಪಿಯನ್ನು ನಿರಂಕರ್ (30) ಎಂದು ಹೆಸರಿಸಲಾಗಿದೆ.

ನಿರಂಕರ್‌ ವಿರುದ್ಧ ಆತನ ಅಣ್ಣ ಗುರುದೇವ್ ಅವರು ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಅವರ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಭೂಮಿ ಮತ್ತು ಆಭರಣಗಳ ಮಾರಾಟದಿಂದ ಬಂದ ಹಣಕ್ಕಾಗಿ ತನ್ನ ತಂದೆಯೊಂದಿಗೆ ಗಲಾಟೆ ಮಾಡಿದ್ದಾನೆ. ಗಲಾಟೆ ತಾರಕ್ಕೇರಿದ್ದು, ನಿರಂಕರ್ ತನ್ನ ಕುಟುಂಬದ ನಾಲ್ವರನ್ನು ಕೊಂದಿದ್ದಾನೆ ಎಂದು ಬಹ್ರೈಚ್‌ನ ಹೆಚ್ಚುವರಿ ಪೊಲೀಸ್ ಅಧೀಕ್ಷಕ (ಗ್ರಾಮೀಣ) ದುರ್ಗಾ ಪ್ರಸಾದ್ ತಿವಾರಿ ತಿಳಿಸಿದ್ದಾರೆ.

“ಗಲಾಟೆ ವೇಳೆ ಕುಪಿತಗೊಂಡ ಆರೋಪಿ ತನ್ನ ಕುಟುಂಬ ಸದಸ್ಯರ ಮೇಲೆ ಕೊಡಲಿಯಿಂದ ಹಲ್ಲೆ ನಡೆಸಿದ್ದಾನೆ. ಘಟನೆಯಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ” ಎಂದು ಅವರು ವಿವರಿಸಿದ್ದಾರೆ.

ಘಟನೆಯ ಸಮಯದಲ್ಲಿ, ಆರೋಪಿ ತನಗೆ ತಾನೇ ಹಲವು ಬಾರಿ ಇಟ್ಟಿಗೆಯಿಂದ ಹೊಡೆದುಕೊಂಡಿದ್ದಾನೆ. ಆತನಿಗೂ, ಗಂಭೀರವಾಗಿ ಗಾಯಗಳಾಗಿವೆ. ಆತನನ್ನು ವಶಕ್ಕೆ ಪಡೆಯಲಾಗಿದ್ದು, ಆಸ್ಪತ್ರೆಗೆ ದಾಖಲಿಸಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪತ್ರಕರ್ತರ ಮೇಲಿನ ಪೊಲೀಸ್‌ ದಾಳಿಗೆ ಡಿಎಸ್‌ಜೆಎ ಖಂಡನೆ; ಪ್ರೆಸ್ ಕೌನ್ಸಿಲ್‌ನಿಂದ ಮಾರ್ಗಸೂಚಿ ಪ್ರಕಟ

ದೆಹಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಗಳು ಮತ್ತು ಪೊಲೀಸ್ ಕ್ರಮಗಳನ್ನು ವರದಿ ಮಾಡುತ್ತಿರುವ ಪತ್ರಕರ್ತರ...

ದೇಶದ ಜನತೆ ಅಧಿಕಾರ ಬದಲಾವಣೆ ಬಯಸಿದ್ದಾರೆ, ನೀವು ಹೊರಡುವ ಸಮಯ ಬಂದಿದೆ; ರಾಜ್‌ನಾಥ್‌ಗೆ ಸಿಬಲ್‌ ಎಚ್ಚರಿಕೆ

ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳು ಬಾಂಗ್ಲಾದೇಶ ಮಾದರಿಯಲ್ಲಿ ದೇಶದಲ್ಲಿ 'ಸರ್ಕಾರ ಬದಲಾವಣೆ'ಯ...

ಖ್ಯಾತ ಹಿರಿಯ ಸಂಗೀತ ನಿರ್ದೇಶಕ ದೇವ ಇನ್ನಿಲ್ಲ

ಕನ್ನಡ ಸೇರಿದಂತೆ ದಕ್ಷಿಣ ಭಾರತದ ಹಲವು ಭಾಷೆಗಳ ಚಿತ್ರಗಳಿಗೆ ಸುಮಧುರ ಸಂಗೀತ...

‘ಮಕ್ಕಳಿಗೂ ಇಂಟರ್‌ನೆಟ್ ಬಳಕೆ ಮೂಲಭೂತ ಹಕ್ಕು; ಸಂಪೂರ್ಣ ನಿಷೇಧ ಪರಿಹಾರವಲ್ಲ’: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ವಯಸ್ಕರಂತೆ ಮಕ್ಕಳಿಗೂ ಇಂಟರ್‌ನೆಟ್ ಸಂಪರ್ಕ ಪಡೆಯುವ ಮತ್ತು ಅದನ್ನು ಬಳಸುವ ಮೂಲಭೂತ...