ಕಸ್ಟಡಿಯಲ್ಲಿ ಮೂವರು ನಾಗರಿಕರ ಸಾವು: ಆಂತರಿಕ ತನಿಖೆಗೆ ಸೇನೆ ನಿರ್ಧಾರ

Date:

ಜಮ್ಮು ಕಾಶ್ಮೀರದ ಪೂಂಚ್‌ ಜಿಲ್ಲೆಯಲ್ಲಿ ಸೇನಾ ಕಸ್ಟಡಿಯಲ್ಲಿರುವಾಗಲೆ ಮೂವರು ನಾಗರಿಕರು ಸಾವನ್ನಪ್ಪಿರುವ ಬಗ್ಗೆ ಭಾರತೀಯ ಸೇನೆ ಆಂತರಿಕ ತನಿಖೆಗೆ ಆದೇಶಿಸಿದೆ.

ಡಿಸೆಂಬರ್‌ 21ರಂದು ಪೂಂಚ್‌ ಜಿಲ್ಲೆಯಲ್ಲಿ ಅಪರಿಚಿತ ಉಗ್ರಗಾಮಿಗಳ ದಾಳಿಯಿಂದ ಮೃತಪಟ್ಟ ಭಾರತೀಯ ಸೈನಿಕರ ಸಾವಿನ ಕುರಿತು ತನಿಖೆ ನಡೆಸಲು ಅನುಮಾನ ವ್ಯಕ್ತವಾದ ಮೂವರು ನಾಗರಿಕರನ್ನು ಕಸ್ಟಡಿಗೆ ತೆಗೆದುಕೊಳ್ಳಲಾಗಿತ್ತು. 27 ರಿಂದ 42 ವಯಸ್ಸಿನ ಮೂವರು ನಾಗರಿಕರು ಡಿ.22 ರಂದು ಮೃತಪಟ್ಟಿದ್ದರು.

ಮೃತ ಯುವಕರ ಸಂಬಂಧಿಕರು ಹಾಗೂ ಸ್ಥಳೀಯ ರಾಜಕೀಯ ನಾಯಕರು ಸೇನಾಧಿಕಾರಿಗಳ ವಿಚಾರಣೆ ಸಮಯದಲ್ಲಿ ಕಸ್ಟಡಿಯಲ್ಲಿಯೇ ಚಿತ್ರಹಿಂಸೆಗೊಳಗಾಗಿ ಮೂವರು ಯುವಕರು ಮೃತಪಟ್ಟಿದ್ದಾರೆ ಎಂದು ಆರೋಪಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸರ್ವಾಧಿಕಾರದ ಸಾಂಸ್ಥೀಕರಣದತ್ತ ಭಾರತ, ಇನ್ನೊಂದು ಗುಲಾಮಗಿರಿಯತ್ತ ದೇಶ

ಈ ಹಿನ್ನೆಲೆಯಲ್ಲಿ ಪ್ರಮಾಣಿತ ಕಾರ್ಯಾಚರಣಾ ವಿಧಾನದ ಭಾಗವಾಗಿ ಮೂವರ ನಾಗರಿಕರ ಸಾವಿನ ಬಗ್ಗೆ ಸಮಗ್ರವಾಗಿ ತನಿಖೆಗೊಳಪಡಿಸಲು ಭಾರತೀಯ ಸೇನೆ ಆದೇಶಿಸಿದೆ ಎನ್ನಲಾಗಿದೆ. ಇದರ ಜೊತೆ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಕೂಡ ಸಾವಿನ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

ತನಿಖೆ ಕೈಗೊಳ್ಳುವ ಸಂದರ್ಭದಲ್ಲಿ ಸಂಪೂರ್ಣ ಬೆಂಬಲ ಹಾಗೂ ಸಹಕಾರ ನೀಡುವುದಾಗಿ ಸೇನೆ ಬದ್ಧವಾಗಿರುವುದಾಗಿ ತಿಳಿಸಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಂಪೂರ್ಣ ನಿಷ್ಕ್ರಿಯತೆಯಿಂದ ಮೇಕ್ ಇನ್ ಇಂಡಿಯಾ ಅನುಷ್ಠಾನಗೊಳಿಸಲು ಕೇಂದ್ರ ವಿಫಲ: ಖರ್ಗೆ

ಉದ್ಯೋಗ ಸೃಷ್ಟಿ ಹಾಗೂ ಅನುದಾನ ಬಳಕೆಯಲ್ಲಿನ ಸಂಪೂರ್ಣ ನಿಷ್ಕ್ರಿಯತೆಯಿಂದ ಮೇಕ್‌ ಇನ್‌...

ಗೌತಮ್ ಗಂಭೀರ್ ನಂತರ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ ಎಂದ ಮತ್ತೊಬ್ಬ ಬಿಜೆಪಿ ಸಂಸದ ಜಯಂತ್ ಸಿನ್ಹಾ

ಬಿಜೆಪಿಯ ಎಲ್ಲ ಕೆಲಸಗಳಿಂದ ತಮ್ಮನ್ನ ಮುಕ್ತಗೊಳಿಸುವಂತೆ ಬಿಜೆಪಿ ಸಂಸದ ಗೌತಮ್ ಗಂಭೀರ್...

ಜಾರ್ಖಂಡ್ | ಪ್ರವಾಸಕ್ಕೆಂದು ಬಂದಿದ್ದ ಸ್ಪೇನ್ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ

ಸ್ಪೇನ್‌ ದೇಶದಿಂದ ಪ್ರವಾಸಕ್ಕೆಂದು ಬಂದಿದ್ದ ಮಹಿಳೆಯೊಬ್ಬರ ಮೇಲೆ ಜಾರ್ಖಂಡ್‌ನ ದುಮ್ಕಾ ಜಿಲ್ಲೆಯಲ್ಲಿ...

ಸುದ್ದಿ ವಿವರ | ಜಸ್ಟೀಸ್ ಖಾನ್ವಿಲ್ಕರ್‌ಗೆ ಲೋಕಪಾಲ ಹುದ್ದೆ; ಮೋದಿ ಸರ್ಕಾರದ ಗಿಫ್ಟ್?

ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಾಧೀಶ ಎ.ಎಂ ಖಾನ್ವಿಲ್ಕರ್‌ರನ್ನು ಭಾರತದ ನೂತನ ಲೋಕಪಾಲರಾಗಿ...