ಮಣಿಪುರ ಹಿಂಸಾಚಾರ | 1500 ಮಹಿಳೆಯರ ಗುಂಪಿನ ಒತ್ತಾಯಕ್ಕೆ ಮಣಿದು 12 ಬಂಡುಕೋರರ ಬಿಡುಗಡೆ ಮಾಡಿದ ಸೇನೆ

Date:

  • ಮೀತೀ- ಕುಕಿ ಸಮುದಾಯಗಳ ಘರ್ಷಣೆಯಿಂದ ಮೇ 3 ರಿಂದ ನಡೆಯುತ್ತಿರುವ ಹಿಂಸಾಚಾರ
  • ಹಿಂಸಾಚಾರ ಘಟನೆಗಳಿಂದ ರಾಜ್ಯದಲ್ಲಿ ಇದುವರೆಗೆ 60 ಸಾವಿರ ಮಂದಿ ಸ್ಥಳಾಂತರ

ಮಣಿಪುರದ ಹಿಂಸಾಚಾರ ಪೀಡಿತ ಇಂಫಾಲ ಜಿಲ್ಲೆಯಲ್ಲಿ ಬಂಧನಕ್ಕೊಳಗಾಗಿದ್ದ ನಿಷೇಧಿತ ಬಂಡಾಯ ಗುಂಪು ಕೆವೈಕೆಎಲ್‌ನ 12 ಕಾರ್ಯಕರ್ತರನ್ನು 1,200 ರಿಂದ 1,500 ಮಹಿಳೆಯರ ನೇತೃತ್ವದ ಜನಸಮೂಹದ ಒತ್ತಾಯದ ಮೇರೆಗೆ ಹಸ್ತಾಂತರಿಸಲಾಗಿದೆ ಎಂದು ಸೇನೆ ಭಾನುವಾರ (ಜೂನ್‌ 25) ತಿಳಿಸಿದೆ.

- Advertisement -

ಸೇನಾ ಯೋಧರು ಶನಿವಾರ (ಜೂನ್‌ 24) ನಡೆಸಿದ ಕಾರ್ಯಾಚರಣೆಯಲ್ಲಿ 12 ಬಂಡುಕೋರರನ್ನು ಬಂಧಿಸಿದ್ದರು. ಮಹಿಳೆಯರ ಪ್ರತಿಭಟನೆಗೆ ಮಣಿದು ಈ ಬಂಡುಕೋರರನ್ನು ಬಿಡುಗಡೆ ಮಾಡಲಾಗಿದೆ ಎಂದು ಸೇನೆ ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು ಗ್ರಹಿಸಲು ಅವರ ದಿನಚರಿಯ ಭಾಗವೇ ಆಗಿದ್ದ ಕೆಲವು ತುಣುಕುಗಳು ನಿಮ್ಮ ಓದಿಗಾಗಿ... ಆರೆಸ್ಸೆಸ್‌ಗೊಂದು ಕಿವಿಮಾತುಅದು ದೇಶ ವಿಭಜನೆಯ ಕಾಲ. ಎಲ್ಲೆಲ್ಲೂ ಹಿಂದೂ-ಮುಸ್ಲಿಂ...

ಕಪ್ಪತಗುಡ್ಡದ ಮಡಿಲಲ್ಲಿ ಗಾಂಧಿ ತತ್ವಗಳ ಪ್ರೇರಣಾ ಕೇಂದ್ರ ‘ಸಬರಮತಿ...

ಗದಗ ನಗರದ ಕಪ್ಪತಗುಡ್ಡದ ಸೆರಗಿನಲ್ಲಿರುವ 'ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ'ದ ಆವರಣದಲ್ಲಿ ನಿರ್ಮಿಸಲಾಗಿರುವ ಸಬರಮತಿ ಆಶ್ರಮವು ಗಾಂಧೀಜಿಯವರ ತತ್ವ ಮತ್ತು ಆದರ್ಶಗಳನ್ನು ಇಂದಿನ ಪೀಳಿಗೆಗೆ ತಲುಪಿಸುವ ಪ್ರೇರಣಾ ಕೇಂದ್ರವಾಗಿ...

ಇಂಫಾಲದ ಇಥಾಮ್ ಗ್ರಾಮದಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿದ್ದ ಸೇನಾ ಯೋಧರು ಶನಿವಾರ ಮಣಿಪುರ ಹಿಂಸಾಚಾರ ಸಂಬಂಧ 12 ಬಂಡುಕೋರರನ್ನು ಬಂಧಿಸಿ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿದ್ದರು.

12 ಬಂಡುಕೋರರಲ್ಲಿ ಸ್ವಯಂ ಘೋಷಿತ ಲೆಫ್ಟಿನೆಂಟ್‌ ಕರ್ನಲ್‌ ಮೊಯಿರಾಂಗ್ತೆಮ್‌ ತಾಂಬಾ ಕೂಡ ಸೇರಿದ್ದಾನೆ. ಈತ 2015ರಲ್ಲಿ 6 ಡೋಗ್ರಾ ಪಡೆಯ ಮೇಲೆ ದಾಳಿ ಮಾಡಿದ್ದ ಪ್ರಮುಖ ಸಂಚುಕೋರನಾಗಿದ್ದ.

ಮಣಿಪುರ ಹಿಂಸಾಚಾರ ಸಂಬಂಧ ಬಂಡುಕೋರರ ಬಂಧನ ಮಾಹಿತಿ ತಿಳಿಯುತ್ತಿದ್ದಂತೆ 1200ಕ್ಕೂ ಹೆಚ್ಚು ಮಹಿಳೆಯರು ಮತ್ತು ಸ್ಥಳೀಯ ನಾಯಕರು ಬಂಡುಕೋರರನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿ ಸೇನಾ ಠಾಣೆಯ ಮುಂದೆ ಪ್ರತಿಭಟನೆ ನಡೆಸಿದ್ದರು.

“ಮಹಿಳಾ ಜನಸಮೂಹ ಮಾಡಿದ ಪುನರಾವರ್ತಿತ ಮನವಿಗಳಿಂದ ಸೇನೆಯು ಮತ್ತೆ ಕಾರ್ಯಾಚರಣೆಯನ್ನು ಮುಂದುವರಿಸಲು ಸಾಧ್ಯವಾಗಲಿಲ್ಲ. ಮಹಿಳೆಯರ ಆಕ್ರೋಶಿತ ಸಮೂಹದ ನಿಗ್ರಹಕ್ಕೆ ಭದ್ರತಾ ಪಡೆ ಬಳಸುವುದು ತರವಲ್ಲ ಎಂದು ಅರಿತು 12 ಬಂಡುಕೋರರನ್ನು ಸ್ಥಳೀಯ ನಾಯಕರಿಗೆ ಹಸ್ತಾಂತರಿಸಲಾಯಿತು” ಎಂದು ಭಾನುವಾರ ಬೆಳಿಗ್ಗೆ ಹೊರಡಿಸಿದ ಪ್ರಕಟಣೆಯೊಂದರಲ್ಲಿ ಸೇನೆ ತಿಳಿಸಿದೆ.

“ಮಣಿಪುರದಲ್ಲಿನ ಹಿಂಸಾಚಾರ ನಿಗ್ರಹಕ್ಕೆ ರಾಜ್ಯದಲ್ಲಿ ಶಾಂತಿ ಮತ್ತು ಸ್ಥಿರತೆಯನ್ನು ಕಾಪಾಡಲು ಜನರು ಭದ್ರತಾ ಪಡೆಗಳಿಗೆ ಸಹಕರಿಸಬೇಕು” ಎಂದು ಸೇನೆ ಪ್ರಕಟಣೆಯಲ್ಲಿ ಹೇಳಿದೆ.

ಕಾಂಗ್ಪೋಕ್ಪಿ ಮತ್ತು ಇಂಫಾಲ ಪೂರ್ವ ಜಿಲ್ಲೆಯ ಎರಡು ಗ್ರಾಮಗಳಲ್ಲಿ ಶಸ್ತ್ರಸಜ್ಜಿತ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ ನಂತರ ಪ್ರದೇಶದಲ್ಲಿ ಹೆಚ್ಚುವರಿ ಭದ್ರತಾ ಸಿಬ್ಬಂದಿ ಶುಕ್ರವಾರ ನಡೆಸಿದ ಕಾರ್ಯಾಚರಣೆಗೆ ಮಹಿಳೆಯರ ದೊಡ್ಡ ಗುಂಪೊಂದು ತಡೆ ಒಡ್ಡಿತ್ತು.

ಈ ಸುದ್ದಿ ಓದಿದ್ದೀರಾ? ಈ ಸಭೆ ದೆಹಲಿ ಸುಗ್ರೀವಾಜ್ಞೆ ವಿಚಾರ ಚರ್ಚಿಸಲು ಅಲ್ಲ ಎಂದು ಆಪ್-ಕಾಂಗ್ರೆಸ್‌ಗೆ ಬುದ್ಧಿ ಹೇಳಿದ ಮಮತಾ ಬ್ಯಾನರ್ಜಿ

ಈ ಮೊದಲು ಈ ಮಹಿಳೆಯರು ಹಿಂಸಾಚಾರ ಪೀಡಿತ ಪ್ರದೇಶಗಳಲ್ಲಿ ಸೇನೆಯ ಕಾರ್ಯಾಚರಣೆ ತಡೆಯಲು ರಸ್ತೆಗಳನ್ನು ನಿರ್ಬಂಧಿಸಿದ್ದರು.

ಮೇ 3 ರಂದು ಮಣಿಪುರ ಹಿಂಸಾಚಾರ ಪ್ರಾರಂಭವಾದಾಗಿನಿಂದ ಸೇನೆಯು ರಾಜ್ಯದಲ್ಲಿ ಕಾರ್ಯಾಚರಣೆ ನಡೆಸುತ್ತಿದೆ. ಪರಿಶಿಷ್ಟ ಪಂಗಡ (ಎಸ್‌ಟಿ) ಸ್ಥಾನಮಾನ ವಿಚಾರದಲ್ಲಿ ಮೀತೀ ಹಾಗೂ ಕುಕಿ ಸಮುದಾಯಗಳ ನಡೆಯುತ್ತಿರುವ ಘರ್ಷಣೆಯಲ್ಲಿ ಇದುವರೆಗೆ ಸುಮಾರು 155 ಮಂದಿ ಮೃತಪಟ್ಟಿದ್ದಾರೆ. 60 ಸಾವಿರ ಮಂದಿಯನ್ನು ಸ್ಥಳಾಂತರಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಇಸಿ ಗ್ಯಾನೇಶ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ಅನುಮತಿ ನಿರಾಕರಣೆ; ಜಂತರ್ ಮಂತರ್‌ನಲ್ಲಿ ಬಿಗಿ ಭದ್ರತೆ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಉತ್ತರ ಪ್ರದೇಶ: ಪ್ರಜಾಪ್ರಭುತ್ವ ಹೋರಾಟಗಾರರಿಗೆ ಅಖಿಲೇಶ್ ಮಾಸಿಕ ₹51,000 ಪಿಂಚಣಿ ಭರವಸೆ

ಉತ್ತರ ಪ್ರದೇಶದಲ್ಲಿ 2027ರಲ್ಲಿ ಸಮಾಜವಾದಿ ಪಕ್ಷ (ಎಸ್‌ಪಿ) ಸರ್ಕಾರ ರಚಿಸಿದರೆ, 1975ರ...

ಎಐ ಸೃಷ್ಟಿಸುವ ಕೃತಕ ಪ್ರೋಟೀನ್‌ಗಳಿಗೆ ಗೂಗಲ್‌ನಿಂದ ‘ಡಿಜಿಟಲ್ ಮುದ್ರೆ’: ಜೈವಿಕ ಅಪಾಯ ತಡೆಯಲು ಹೊಸ ಅಸ್ತ್ರ

ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನವನ್ನು ಬಳಸಿ ಲ್ಯಾಬ್‌‌ಗಳಲ್ಲಿ ಹೊಸ ಬಗೆಯ ಪ್ರೋಟೀನ್‌ಗಳನ್ನು...

ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಬೆಂಗಳೂರು, ಗೋವಾ, ಕೋಲ್ಕತ್ತದಲ್ಲಿ ಸಿಜೆಪಿ ‘ಮೋರ್ಚಾ’

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...