CJPಯ ತಿರಂಗಾ ಯಾತ್ರೆಗೆ ಮುನ್ನ ಬಂಧನ; ಅಭಿಜೀತ್ ದೀಪ್ಕೆಗೆ ಷರತ್ತುಬದ್ಧ ಜಾಮೀನು

Date:

ಕನ್ನಾಟ್ ಪ್ಲೇಸ್‌ನಲ್ಲಿ ಆಯೋಜಿಸಲಾಗಿದ್ದ ‘ಲೇಹ್ರಾ ದೋ ತಿರಂಗಾ’ ಪ್ರತಿಭಟನೆಯಲ್ಲಿ ಭಾಗವಹಿಸಲು ತೆರಳುತ್ತಿದ್ದ ವೇಳೆ ಬಂಧನಕ್ಕೊಳಗಾಗಿದ್ದ CJP ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರಿಗೆ ದೆಹಲಿಯ ನ್ಯಾಯಾಲಯ ಷರತ್ತುಬದ್ಧ ಜಾಮೀನು ನೀಡಿದೆ. ಬಿಡುಗಡೆಗೂ ಮುನ್ನ ಶಾಂತಿ ಕಾಪಾಡುವ ಬಾಂಡ್‌ಗೆ ಸಹಿ ಹಾಕುವಂತೆ ಅವರಿಗೆ ಸೂಚಿಸಲಾಗಿದೆ ಎಂದು ವರದಿಯಾಗಿದೆ.

- Advertisement -

ಶನಿವಾರ ದೆಹಲಿಯ ಮಂದಿರ್ ಮಾರ್ಗ್ ಪೊಲೀಸ್ ಠಾಣೆಯಲ್ಲಿರುವ ವಿಶೇಷ ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್ (SEM) ಮುಂದೆ ದೀಪ್ಕೆ ಅವರನ್ನು ಹಾಜರುಪಡಿಸಲಾಯಿತು. ಅಕ್ಟೋಬರ್ 10ರಂದು ಅವರು ಸಲ್ಲಿಸಿದ್ದ ಶಾಂತಿ ಬಾಂಡ್‌ನ ಷರತ್ತುಗಳನ್ನು ಉಲ್ಲಂಘಿಸಿದ ಆರೋಪದ ಹಿನ್ನೆಲೆಯಲ್ಲಿ ಅವರನ್ನು ಬಂಧಿಸಲಾಗಿತ್ತು ಎಂದು ಅವರ ಕಾನೂನು ಸಲಹೆಗಾರರನ್ನು ಉಲ್ಲೇಖಿಸಿ ವರದಿಗಳು ತಿಳಿಸಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಶಿವಮೊಗ್ಗ | ಅಸುರಕ್ಷತೆಯ ತಾಣವಾದ ರೈಲ್ವೆ ನಿಲ್ದಾಣ: ಪ್ರಯಾಣಿಕರ...

ಕುಡಿಯುವ ನೀರಿಲ್ಲದಿರುವುದು, ಹಾಳಾದ ಶೌಚಾಲಯಗಳು, ರಾತ್ರಿ ವೇಳೆ ಬೀದಿದೀಪ ಹಾಗೂ ಕಾವಲುಗಾರರ ಕೊರತೆಯಿಂದಾಗಿ ಈ ನಿಲ್ದಾಣವು ನಿರ್ಜನ ಪ್ರದೇಶದಂತೆ ಭಾಸವಾಗುತ್ತಿದೆ. ಇದರೊಂದಿಗೆ ಕಳ್ಳತನ, ಅನೈತಿಕ ಚಟುವಟಿಕೆಗಳು ಹೆಚ್ಚಾಗಿರುವುದು ಜೊತೆಗೆ ಸಿಸಿಟಿವಿ ಕ್ಯಾಮೆರಾಗಳೂ ಇಲ್ಲದಿರುವುದು...

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ದೆಹಲಿಯ ಝಂಡೇವಾಲನ್ ಪ್ರದೇಶದಲ್ಲಿರುವ ತಮ್ಮ ನಿವಾಸದಿಂದ ಕನ್ನಾಟ್ ಪ್ಲೇಸ್‌ನಲ್ಲಿ ನಡೆಯಬೇಕಿದ್ದ CJPಯ ‘ಲೇಹ್ರಾ ದೋ ತಿರಂಗಾ’ ಪ್ರತಿಭಟನೆಯಲ್ಲಿ ಭಾಗವಹಿಸಲು ಹೊರಬಂದ ಕೆಲವೇ ಕ್ಷಣಗಳಲ್ಲಿ ಶುಕ್ರವಾರ ದೀಪ್ಕೆ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಬಳಿಕ ಶನಿವಾರ ಬೆಳಗ್ಗೆ ಅವರನ್ನು ಬಂಧಿಸಲಾಯಿತು.

ಪ್ರತಿಭಟನೆಯನ್ನು ಮುನ್ನಡೆಸುವ ನಿರೀಕ್ಷೆಯಿದ್ದ ದೀಪ್ಕೆ ಮತ್ತು ಅಖಿಲ ಭಾರತ ವಿದ್ಯಾರ್ಥಿ ಸಂಘದ (AISA) ರಾಷ್ಟ್ರೀಯ ಅಧ್ಯಕ್ಷೆ ನೇಹಾ ಬೋರಾ ಅವರನ್ನು ಶುಕ್ರವಾರವೇ ಮುನ್ನೆಚ್ಚರಿಕಾ ಕ್ರಮಗಳ ಅಡಿಯಲ್ಲಿ ಬಂಧಿಸಲಾಗಿತ್ತು. ಪ್ರತಿಭಟನೆಯ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿದ್ದುದರಿಂದ ಪೊಲೀಸರು ಈ ಕ್ರಮ ಕೈಗೊಂಡಿದ್ದರು.

“ಶಾಂತಿ ಬಾಂಡ್‌ನಲ್ಲಿ ನೀಡಿದ ಭರವಸೆಯ ಆಧಾರದ ಮೇಲೆ ಅವರನ್ನು ಬಿಡುಗಡೆ ಮಾಡಲಾಗಿದೆ. ಹೆಚ್ಚಿನ ವಿವರಗಳಿಗಾಗಿ ಲಿಖಿತ ಆದೇಶಕ್ಕಾಗಿ ಕಾಯುತ್ತಿದ್ದೇವೆ,” ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ.

ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (BNSS)ಯ ಸೆಕ್ಷನ್ 163ರ ಅಡಿಯಲ್ಲಿ ವಿಧಿಸಲಾಗಿದ್ದ ನಿಷೇಧಾಜ್ಞೆಯನ್ನು ಉಲ್ಲೇಖಿಸಿ ದೆಹಲಿ ಪೊಲೀಸರು ದೀಪ್ಕೆ ಅವರನ್ನು ಅವರ ನಿವಾಸದಿಂದಲೇ ಮುನ್ನೆಚ್ಚರಿಕಾ ಬಂಧನಕ್ಕೆ ಒಳಪಡಿಸಿದ್ದರು. ಅವರನ್ನು ವಕೀಲರನ್ನು ತಕ್ಷಣ ಸಂಪರ್ಕಿಸಲು ಅವಕಾಶ ನೀಡದೆ, ತಿಳಿಯದ ಸ್ಥಳಕ್ಕೆ ಕರೆದೊಯ್ಯಲಾಗಿದೆ ಎಂದು CJP ಪ್ರತಿನಿಧಿಗಳು ಆರೋಪಿಸಿದ್ದಾರೆ.

ಇದನ್ನೂ ಓದಿ: ತಿಹಾರ್ ಜೈಲಿನಲ್ಲಿ ಸಿಜೆಪಿ ನಾಯಕರಿಗೆ ಹೈ ಸೆಕ್ಯುರಿಟಿ; ಇತರ ಕೈದಿಗಳಿಂದ ಪ್ರತ್ಯೇಕ ವಾಸ

ಇದೇ ವೇಳೆ, ಶುಕ್ರವಾರ ಕನ್ನಾಟ್ ಪ್ಲೇಸ್‌ ಮತ್ತು ನವದೆಹಲಿಯ ಇತರ ಪ್ರದೇಶಗಳಲ್ಲಿ ಜಾರಿಯಲ್ಲಿದ್ದ ನಿಷೇಧಾಜ್ಞೆಗಳನ್ನು ಉಲ್ಲಂಘಿಸಿದ ಆರೋಪದ ಮೇಲೆ ದೆಹಲಿ ಪೊಲೀಸರು ಹಲವು ಎಫ್‌ಐಆರ್‌ಗಳನ್ನು ದಾಖಲಿಸಿದ್ದಾರೆ. ಪದೇಪದೇ ಪ್ರಕಟಣೆಗಳನ್ನು ನೀಡಿ ಜನರು ಗುಂಪುಗೂಡದಂತೆ ಎಚ್ಚರಿಕೆ ನೀಡಿದ್ದರೂ, ಕನ್ನಾಟ್ ಪ್ಲೇಸ್‌ ಸುತ್ತ ಜನರು ಜಮಾಯಿಸಿದ್ದರು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ನಿಷೇಧಾಜ್ಞೆ ಉಲ್ಲಂಘಿಸಿದವರ ವಿರುದ್ಧ BNSS ಸೆಕ್ಷನ್ 163ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗುವುದು. ನಿಯಮಗಳನ್ನು ಪುನರಾವರ್ತಿತವಾಗಿ ಉಲ್ಲಂಘಿಸುವವರ ವಿರುದ್ಧವೂ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಎಚ್ಚರಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ ಸಿಗದ ಎಬಿವಿಪಿ ಪಾತ್ರದ ಪ್ರಶ್ನೆಗಳು

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ...

ಶಿವಮೊಗ್ಗ | ಮಾದಕ ದ್ರವ್ಯಗಳ ಸೇವನೆ ವಿರುದ್ದ ಪ್ರತಿಜ್ಞೆಗೆ ಕರೆ

ಮಾದಕ ದ್ರವ್ಯಗಳ ದುರುಪಯೋಗವು ವ್ಯಕ್ತಿಯ ಆರೋಗ್ಯ, ಕುಟುಂಬ ಹಾಗೂ ಸಮಾಜದ ಮೇಲೆ...

ಪತ್ರಕರ್ತರ ಮೇಲಿನ ಪೊಲೀಸ್‌ ದಾಳಿಗೆ ಡಿಎಸ್‌ಜೆಎ ಖಂಡನೆ; ಪ್ರೆಸ್ ಕೌನ್ಸಿಲ್‌ನಿಂದ ಮಾರ್ಗಸೂಚಿ ಪ್ರಕಟ

ದೆಹಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಗಳು ಮತ್ತು ಪೊಲೀಸ್ ಕ್ರಮಗಳನ್ನು ವರದಿ ಮಾಡುತ್ತಿರುವ ಪತ್ರಕರ್ತರ...

ಶಿವಮೊಗ್ಗ | ಅಸುರಕ್ಷತೆಯ ತಾಣವಾದ ರೈಲ್ವೆ ನಿಲ್ದಾಣ: ಪ್ರಯಾಣಿಕರ ಸುರಕ್ಷತೆಗೆ ಬೇಕಿದೆ ತುರ್ತು ಕ್ರಮ

ಕುಡಿಯುವ ನೀರಿಲ್ಲದಿರುವುದು, ಹಾಳಾದ ಶೌಚಾಲಯಗಳು, ರಾತ್ರಿ ವೇಳೆ ಬೀದಿದೀಪ ಹಾಗೂ ಕಾವಲುಗಾರರ...