ನಟ ಸೋನು ಸೂದ್ ವಿರುದ್ಧ ಬಂಧನ ವಾರಂಟ್ ಜಾರಿ

Date:

10 ಲಕ್ಷ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟ ಸೋನು ಸೂದ್ ಅವರ ವಿರುದ್ಧ ಪಂಜಾಬ್‌ನ ಲೂಧಿಯಾನ ನ್ಯಾಯಾಲಯವು ಬಂಧನ ವಾರೆಂಟ್‌ ಹೊರಡಿಸಿದೆ.

- Advertisement -

ವಕೀಲ ರಾಜೇಶ್ ಖನ್ನಾ ಎಂಬವರು ದಾಖಲಿಸಿರುವ ಪ್ರಕರಣದಲ್ಲಿ ಸಾಕ್ಷಿ ಹೇಳಲು ಸೋನು ಸೂದ್ ನ್ಯಾಯಾಲಯಕ್ಕೆ ಹಾಜರಾಗಬೇಕಿತ್ತು. ಅವರಿಗೆ ಹಲವು ಬಾರಿ ಸಮನ್ಸ್‌ ನೀಡಿದರೂ, ಅವರು ಕೋರ್ಟ್‌ಗೆ ಬಂದಿಲ್ಲ. ಹೀಗಾಗಿ, ಅವರ ವಿರುದ್ಧ ಬಂಧನ ವಾರೆಂಟ್‌ ಜಾರಿ ಮಾಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ತಮಗೆ ಮೋಹಿತ್ ಶುಕ್ಲಾ ಎಂಬವರು ವಂಚಿಸಿದ್ದಾರೆ. ನಕಲಿ ರಿಜಿಕಾ ನಾಣ್ಯದ ಮೇಲೆ ಹೂಡಿಕೆ ಮಾಡಿದರೆ, ಹೆಚ್ಚು ಲಾಭ ದೊರೆಯುತ್ತದೆ ಎಂದು ಹೇಳಿ 10 ಲಕ್ಷ ರೂ. ಪಡೆದಿದ್ದಾರೆ. ಆದರೆ, ಯಾವುದೇ ಹಣವನ್ನು ಮರುಪಾವತಿಸದೆ ವಂಚಿಸಿದ್ದಾರೆ ಎಂದು ರಾಜೇಶ್‌ ಖನ್ನಾ ಆರೋಪಿಸಿದ್ದಾರೆ.

ಪ್ರಕರಣದ ವಿಚಾರಣೆಯನ್ನು ಲೂಧಿಯಾನ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ನ್ಯಾಯಮೂರ್ತಿ ರಮಣಪ್ರೀತ್ ಕೌರ್ ಅವರು ನಡೆಸಿದ್ದಾರೆ. ಸಾಕ್ಷಿ ಹೇಳಲು ಕೋರ್ಟ್‌ಗೆ ಹಾಜರಾಗದ ಸೂದ್ ವಿರುದ್ಧ ವಾರೆಂಟ್ ಜಾರಿ ಮಾಡಿದ್ದಾರೆ. ಅವರನ್ನು ಬಂಧಿಸಿ, ನ್ಯಾಯಾಲಯಕ್ಕೆ ಕರೆತರುವಂತೆ ಮುಂಬೈನ ಓಶಿವಾರಾ ಪೊಲೀಸ್ ಠಾಣೆಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಪ್ರಕರಣದ ವಿಚಾರಣೆಯನ್ನು ಫೆಬ್ರವರಿ 10ಕ್ಕೆ ಮುಂದೂಡಲಾಗಿದೆ.

ನಟ ಸೋನು ಸೂದ್ ಅವರು ಕೊರೋನ ಆಕ್ರಮಣ ಸಮಯದಲ್ಲಿ ಹೆಚ್ಚು ಗಮನ ಸೆಳೆದಿದ್ದರು. ಕೇಂದ್ರ ಸರ್ಕಾರ ದೇಶಾದ್ಯಂತ ಲಾಕ್‌ಡೌನ್‌ ಹೇರಿದ್ದರಿಂದ, ವಲಸೆ ಕಾರ್ಮಿಕರು ತಮ್ಮೂರುಗಳಿಗೆ ನಡೆದುಕೊಂಡೇ ಹೊರಟಿದ್ದರು. ಅವರ ಸಂಕಷ್ಟಗಳನ್ನು ಕಂಡು, ಮರುಗಿದ್ದ ಸೋನು ಸೂದ್‌, ನೂರಾರು ವಲಸೆ ಕಾರ್ಮಿಕರಿಗೆ ತಮ್ಮ ಸ್ವಂತ ಹಣದಲ್ಲಿ ಬಸ್‌ ವ್ಯವಸ್ಥೆ ಒದಗಿಸಿ, ತಮ್ಮೂರುಗಳನ್ನು ತಲುಪಲು ಸಹಾಯ ಮಾಡಿದ್ದರು. ರೈತ ಹೋರಾಟದ ಸಮಯದಲ್ಲಿಯೂ ರೈತರ ಪರವಾಗಿ ದನಿ ಎತ್ತಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...

ಅಯೋಧ್ಯೆ ರಾಮಮಂದಿರ ಸಿಬ್ಬಂದಿಗೆ ಶೇ. 100ರಷ್ಟು ಪೊಲೀಸ್ ವೆರಿಫಿಕೇಷನ್; ಹಿನ್ನೆಲೆ ಪರಿಶೀಲನೆ ಕಡ್ಡಾಯ

ಉತ್ತರ ಪ್ರದೇಶದ ಅಯೋಧ್ಯೆಯ ರಾಮಮಂದಿರ ಆಡಳಿತ ಮತ್ತು ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು...

ಸಿಇಸಿ ಗ್ಯಾನೇಶ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ಅನುಮತಿ ನಿರಾಕರಣೆ; ಜಂತರ್ ಮಂತರ್‌ನಲ್ಲಿ ಬಿಗಿ ಭದ್ರತೆ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...