ಜಾಮೀನು ಸಿಕ್ಕ ಬೆನ್ನಲ್ಲೇ ಮತ್ತೆ ಇಡಿಯಿಂದ ಬಂಧನ: ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಅಜಂ ಖಾನ್

Date:

ಜಾಮೀನು ಪಡೆದ ಕೆಲವೇ ನಿಮಿಷಗಳಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಹೊಸ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ (ಎಸ್‌ಪಿ) ಹಿರಿಯ ನಾಯಕ, ಉತ್ತರ ಪ್ರದೇಶದ ಮಾಜಿ ಸಚಿವ ಅಜಂ ಖಾನ್ ಅವರನ್ನು ಬಂಧಿಸಿದೆ. ಈ ಬಂಧನವನ್ನು ಪ್ರಶ್ನಿಸಿ ಅಜಂ ಖಾನ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.

- Advertisement -

ನಕಲಿ ಪ್ಯಾನ್ ಕಾರ್ಡ್ ಪ್ರಕರಣ ಸೇರಿದಂತೆ ವಿವಿಧ ಪ್ರಕರಣಗಳಲ್ಲಿ ಬಂಧಿತರಾಗಿದ್ದ ಅಜಂ ಖಾನ್ ಮತ್ತು ಅವರ ಮಗ ಅಬ್ದುಲ್ಲಾ ಅಜಂ ಅಲಹಾಬಾದ್ ಹೈಕೋರ್ಟ್‌ನಿಂದ ಜಾಮೀನು ಪಡೆದು, ರಾಮ್‌ಪುರ ಜೈಲಿನಿಂದ ಹೊರಬಂದಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗೆಲ್ಲಬಹುದಾಗಿದ್ದ ಪಶ್ಚಿಮ ಪದವೀಧರ ಕ್ಷೇತ್ರದಲ್ಲಿ ಕಾಂಗ್ರೆಸ್ ಪಲ್ಟಿ ಹೊಡೆದದ್ದು...

ಪದವೀಧರ ಮತ್ತು ಶಿಕ್ಷಕ ಕ್ಷೇತ್ರಗಳಿಂದ ವಿಧಾನ ಪರಿಷತ್ತಿಗೆ ನಡೆದ ನಾಲ್ಕು ಎಮ್ಮೆಲ್ಸಿ ಸ್ಥಾನಗಳ ಚುನಾವಣೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಒಂದೇ ಒಂದು ಸೀಟನ್ನೂ ಪಡೆಯಲಾಗದೆ ಮುಗ್ಗರಿಸಿರುವುದು ರಾಜಕೀಯ ಪಡಸಾಲೆಯಲ್ಲಿ ನಾನಾ ನಮೂನೆಯ ವ್ಯಾಖ್ಯಾನ-ವಿಶ್ಲೇಷಣೆ ಹುಟ್ಟುಹಾಕಿದೆ....

ಗ್ರಾಮೀಣ ಜಾನಪದ ಪರಂಪರೆಯನ್ನು ಜೀವಂತವಾಗಿರಿಸಿದ ಚಾಮರಾಜನಗರದ ಗೌರಮ್ಮ

ಹಳ್ಳಿಗಳ ಮಣ್ಣಿನ ಸೊಗಡು, ಮಹಿಳೆಯರ ಬದುಕಿನ ಅನುಭವ, ಕುಟುಂಬದ ಸಂಪ್ರದಾಯ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಹಾಡಿನ ಮೂಲಕ ಅಭಿವ್ಯಕ್ತಿಸುವ ಸೋಬಾನೆ ಪದಗಳ ಗಾಯನಕ್ಕೆ ದಶಕಗಳಿಂದ ತಮ್ಮ ಬದುಕನ್ನೇ ಮುಡಿಪಾಗಿಟ್ಟಿರುವ ಚಾಮರಾಜನಗರದ ಹಿರಿಯ ಜಾನಪದ...

ನವೆಂಬರ್ 1 | ಕರ್ನಾಟಕ ರಾಜ್ಯೋತ್ಸವ ಮಾತ್ರವಲ್ಲ; ಭಾರತದ...

ನವೆಂಬರ್ 1 ಕನ್ನಡಿಗರ ಹೆಮ್ಮೆಯ ಕರ್ನಾಟಕ ರಾಜ್ಯೋತ್ಸವ. ಇದೇ ದಿನ ದೇಶದ ಎಂಟು ರಾಜ್ಯಗಳು ಮತ್ತು ಐದು ಕೇಂದ್ರಾಡಳಿತ ಪ್ರದೇಶಗಳ ರಚನೆ, ಮರುರಚನೆ ಹಾಗೂ ವಿಮೋಚನೆಯ ಇತಿಹಾಸವೂ ಇದೆ. ಭಾಷಾವಾರು ರಾಜ್ಯಗಳಿಗಾಗಿ ನಡೆದ...

ಆದರೆ ಜೈಲಿನಿಂದ ಹೊರಬಂದ ಕೆಲವೇ ನಿಮಿಷಗಳಲ್ಲಿ, ಅಲ್ಲಿಯೇ ಸಿದ್ಧವಾಗಿ ನಿಂತಿದ್ದ ಇಡಿ ಅಧಿಕಾರಿಗಳ ತಂಡ ಅಜಂ ಖಾನ್ ಅವರನ್ನು ನೂತನ ಹಣ ಅಕ್ರಮ ವರ್ಗಾವಣೆ ತನಿಖೆಯ ಭಾಗವಾಗಿ ಮತ್ತೆ ಬಂಧಿಸಿದೆ. ಇದನ್ನು ಪ್ರಶ್ನಿಸಿ ಅಜಂ ಖಾನ್ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.

ಇದನ್ನೂ ಓದಿ: ನಕಲಿ ಜನನ ಪ್ರಮಾಣಪತ್ರ ಪ್ರಕರಣ: ಎಸ್ಪಿ ನಾಯಕ ಆಜಂ ಖಾನ್, ಪತ್ನಿ, ಪುತ್ರಗೆ 7 ವರ್ಷ ಜೈಲು

ಇಡಿ ಅಧಿಕಾರಿಗಳು ಅಜಂ ಖಾನ್ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಿ ಆದೇಶಿಸಿದೆ.

ಜೌಹರ್ ವಿಶ್ವವಿದ್ಯಾಲಯದ ಅಕ್ರಮ ಹಣ ಪ್ರಕರಣವು ಮುಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯಕ್ಕೆ ಸಂಬಂಧಿಸಿದ ಹಣಕಾಸು ಅಕ್ರಮಗಳು ಮತ್ತು ಅಕ್ರಮ ಹಣ ರವಾನೆಗೆ ಸಂಬಂಧಿಸಿದೆ. ಇಡಿ ಅಧಿಕಾರಿಗಳ ಪ್ರಕಾರ, ವಿಶ್ವವಿದ್ಯಾಲಯ ನಿರ್ಮಾಣ ಮತ್ತು ಆಡಳಿತಕ್ಕೆ ಸಂಬಂಧಿಸಿದಂತೆ ಸುಮಾರು ₹426.46 ಕೋಟಿ ರೂಪಾಯಿಗಳ ಅಕ್ರಮ ಹಣದ ವಹಿವಾಟು ನಡೆದಿದೆ. ಈ ಸಂಬಂಧಿತ ಆಸ್ತಿಗಳನ್ನು ಈಗಾಗಲೇ ಜಪ್ತಿ ಮಾಡಲಾಗಿದೆ.

ಅಜಂ ಖಾನ್ ಅವರ ಕಾನೂನು ತಂಡವು ಇಡಿ ನಡೆಸಿರುವ ಬಂಧನವನ್ನು ಕಾನೂನುಬಾಹಿರ ಎಂದು ಹೇಳಿದೆ. “ಸೂಕ್ತ ಕಾನೂನು ಪ್ರಕ್ರಿಯೆಯನ್ನು ಪಾಲಿಸದೇ ಬಿಡುಗಡೆಯಾಗುತ್ತಿದ್ದಂತೆ ಬಂಧಿಸಲಾಗಿದೆ. ಜಾಮೀನು ಸಿಕ್ಕ ತಕ್ಷಣ ರಾಜಕೀಯ ಪ್ರೇರಿತವಾಗಿ ಈ ಹೊಸ ಪ್ರಕರಣದಲ್ಲಿ ಬಂಧಿಸಲಾಗಿದೆ. ಆದ್ದರಿಂದ ಇಡಿ ಕೈಗೊಂಡಿರುವ ಈ ಕಸ್ಟಡಿ ಆದೇಶವನ್ನು ರದ್ದುಗೊಳಿಸಬೇಕು ಎಂದು ಸುಪ್ರೀಂ ಕೋರ್ಟ್‌ನಲ್ಲಿ ಮನವಿ ಮಾಡಲಾಗಿದೆ.

ಇನ್ನು ತಮ್ಮ ಬಂಧನದ ವೇಳೆ ಭಾವುಕರಾಗಿ ಪ್ರತಿಕ್ರಿಯಿಸಿದ್ದ ಅಜಂ ಖಾನ್, “ನಾನು ವಿಶ್ವವಿದ್ಯಾಲಯ ಕಟ್ಟಿದ್ದೇ ತಪ್ಪಾಯಿತೇ?” ಎಂದು ಮಾಧ್ಯಮಗಳ ಮುಂದೆ ಪ್ರಶ್ನಿಸಿದ್ದಾರೆ. ಈ ಬಂಧನವು ರಾಜಕೀಯ ದ್ವೇಷದ ಭಾಗವಾಗಿದೆ ಎಂದು ಎಸ್‌ಪಿ ನಾಯಕ ಅಖಿಲೇಶ್ ಯಾದವ್ ಸೇರಿದಂತೆ ಪಕ್ಷದ ಪ್ರಮುಖ ನಾಯಕರು ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಮರ್ ಅಬ್ದುಲ್ಲಾ – ನಿಧಿ ರಾಜ್ದಾನ್ ವಿವಾಹದ ವಿರುದ್ಧ ಫತ್ವಾ ಹೊರಡಿಸಿದ ಮೌಲ್ವಿ!

ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಮತ್ತು ಹಿರಿಯ ಪತ್ರಕರ್ತೆ...

ಸಮಾಜ ಪ್ರಶ್ನಿಸಲು ಭಯಪಟ್ಟಾಗ, ಸರ್ವಾಧಿಕಾರ ಕವಿಯುತ್ತದೆ- ಸುಪ್ರೀಮ್ ಜಸ್ಟಿಸ್ ಭೂಂಯಾ

ಯಾವ ಸಮಾಜ ಪ್ರಶ್ನಿಸುವುದನ್ನು ನಿಲ್ಲಿಸುತ್ತದೆಯೋ ಅದು ಸುಲಭವಾಗಿ ಸರ್ವಾಧಿಕಾರಕ್ಕೆ ಬಲಿಯಾಗುತ್ತದೆ. ಅಜ್ಞಾನ,...

ಚೈನ್ ಸಾ ದಾಳಿ ಪ್ರಕರಣ: ಆರೋಪಿ ಹೇಮಂತ್‌ಗೆ ಪೊಲೀಸರ ಗುಂಡೇಟು; ಸಂತ್ರಸ್ತ ವಿದ್ಯಾರ್ಥಿನಿ ಸ್ಥಿತಿ ಚಿಂತಾಜನಕ

ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ‌ ರಾಪ್ತಾಡು ಜಿಲ್ಲಾ ಪರಿಷತ್ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿನಿ ಮೇಲೆ‌...

ದೆಹಲಿ | ʼವಿಂಟರ್ ಆಕ್ಷನ್ ಪ್ಲಾನ್ʼ ಮೊದಲ ದಿನವೇ 68.4 ಲಕ್ಷ ರೂ. ದಂಡ ವಸೂಲು!

ದೆಹಲಿಯಲ್ಲಿ ವಾಯು ಮಾಲಿನ್ಯ ತಾಂಡವವಾಡುತ್ತಿರುವ ಹಿನ್ನೆಲೆಯಲ್ಲಿ ಜಾರಿಗೆ ತಂದಿರುವ 'ವಿಂಟರ್ ಆಕ್ಷನ್...