ದೆಹಲಿ ಪ್ರತಿಭಟನೆ ವೇಳೆ ಹಲವರ ಬಂಧನ: ಕೇಂದ್ರ ಸರ್ಕಾರಕ್ಕೆ ಸುಪ್ರೀಂ ನೋಟಿಸ್; 10 ದಿನಗಳಲ್ಲಿ ಸಮಗ್ರ ಉತ್ತರಕ್ಕೆ ಸೂಚನೆ

Date:

ಏಕಪಕ್ಷೀಯ ನಿರ್ಧಾರಗಳನ್ನು ಕೈಗೊಂಡ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ವಿರುದ್ಧ ಅಕ್ಟೋಬರ್‌ನಲ್ಲಿ ದೆಹಲಿಯಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ರಾಜಕೀಯ ನಾಯಕರು ಮತ್ತು ಪ್ರತಿಭಟನಾಕಾರರನ್ನು ಬಂಧಿಸಲಾಗಿದೆ. ಇದನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳಿಗೆ ಸಂಬಂಧಿಸಿದಂತೆ, ಸಮಗ್ರ ಪ್ರತಿಕ್ರಿಯೆ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರ ಮತ್ತು ದೆಹಲಿ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

- Advertisement -

ಚುನಾವಣಾ ಆಯೋಗದ ಕಾರ್ಯವೈಖರಿ ಮತ್ತು ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ಅಕ್ರಮಗಳು ನಡೆದಿವೆ ಎಂದು ಆರೋಪಿಸಿ ಸಿಜೆಪಿ ಮತ್ತು ಕೆಲವು ವಿದ್ಯಾರ್ಥಿ ಸಂಘಟನೆಗಳು ಅಕ್ಟೋಬರ್ 10 ರಂದು ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆಗೆ ಕರೆ ನೀಡಿದ್ದವು. ಈ ಸಂದರ್ಭದಲ್ಲಿ ಭಾರಿ ಭದ್ರತಾ ನಿಯೋಜನೆ ಮಾಡಿದ್ದ ಪೊಲೀಸರು, ವಿರೋಧ ಪಕ್ಷಗಳ ಪ್ರಮುಖ ನಾಯಕರು ಸೇರಿದಂತೆ 7,000 ಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದಿದ್ದರು. ಈ ಬಂಧನಗಳನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಕೈಗೆತ್ತಿಕೊಂಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ರೇಣುಕಾಸ್ವಾಮಿ ಕೊಲೆ ಪ್ರಕರಣ: ಸಾಕ್ಷಿಗಳು ಉಲ್ಟಾ ಹೊಡೆದ ಮಾತ್ರಕ್ಕೆ...

ಪಟ್ಟಣಗೆರೆ ಶೆಡ್‌ನಲ್ಲಿದ್ದ ನಾಲ್ವರು ಪ್ರಮುಖ ಸಾಕ್ಷಿಗಳು ನ್ಯಾಯಾಲಯದಲ್ಲಿ ಉಲ್ಟಾ ಹೊಡೆದಿರುವುದು ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಹೊಸ ತಿರುವು ನೀಡಿದೆ. ಪ್ರತ್ಯಕ್ಷದರ್ಶಿಗಳು ಉಲ್ಟಾ ಹೊಡೆದ ಮಾತ್ರಕ್ಕೆ ದರ್ಶನ್‌ಗೆ ಕಾನೂನು ಕುಣಿಕೆಯಿಂದ ಮುಕ್ತಿ ಸಿಗುತ್ತದೆಯೇ? ಪೊಲೀಸರು...

ರಾಯಚೂರು | ಅವ್ಯವಸ್ಥೆಯ ಆಗರವಾದ ವಸತಿ ನಿಲಯ: ಜೀವ...

ಡಾ. ಬಿ.ಆರ್ ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯದಲ್ಲಿ ಮೂಲಸೌಕರ್ಯಗಳ ಕೊರತೆ ತೀವ್ರವಾಗಿದ್ದು, ವಿದ್ಯಾರ್ಥಿಗಳು ಪ್ರತಿದಿನ ತೊಂದರೆ ಅನುಭವಿಸುವಂತಾಗಿದೆ. ವಿದ್ಯಾರ್ಥಿಗಳ ಸುರಕ್ಷತೆ ಮತ್ತು ಕನಿಷ್ಠ ಅಗತ್ಯಗಳ ಬಗ್ಗೆಯೂ ಸಂಬಂಧಪಟ್ಟ ಅಧಿಕಾರಿಗಳು ನಿರ್ಲಕ್ಷ್ಯ...

ರಾಜರ ಆಳ್ವಿಕೆಯ ವಿರೋಧ ಕೇವಲ ಟ್ರಂಪ್‌ಗೆ ಮಾತ್ರ ಸೀಮಿತವಲ್ಲ

2026ರ ಪರಿಸ್ಥಿತಿ ಭಿನ್ನವಾಗಿದೆ. ಈಗ ಪರಮಾಣು ಅಸ್ತ್ರಗಳು ನಮ್ಮಿಂದ ಪ್ರಜಾಸತ್ತಾತ್ಮಕವಾಗಿ ಆಯ್ಕೆಯಾದ ಸರ್ಕಾರದ ಕೈಯಲ್ಲಿಲ್ಲ. ಬದಲಾಗಿ ಅವು ಲಾಕ್‌ಹೀಡ್, ಬೋಯಿಂಗ್, ಜನರಲ್ ಡೈನಾಮಿಕ್ಸ್‌ನಂತಹ ಖಾಸಗಿ ಕಂಪನಿಗಳ ಸಿಇಒಗಳ ಸಂಪೂರ್ಣ ನಿಯಂತ್ರಣದಲ್ಲಿವೆ... ನಾನು ಬರವಣಿಗೆಯನ್ನೇ ವೃತ್ತಿಯಾಗಿಸಿಕೊಂಡವನು;...

ಇದನ್ನೂ ಓದಿ: ದೆಹಲಿ ಪ್ರತಿಭಟನೆ | ವಶಕ್ಕೆ ಪಡೆದ ನೂರಾರು ಪ್ರತಿಭಟನಾಕಾರರನ್ನು ಸ್ಟೇಡಿಯಂಗೆ ದಬ್ಬಿದ ಪೊಲೀಸರು

ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಪೀಠವು, ಕೇಂದ್ರ ಮತ್ತು ದೆಹಲಿ ಸರ್ಕಾರಗಳಿಗೆ ತಮ್ಮ ವಿವರವಾದ ಉತ್ತರವನ್ನು ಸಲ್ಲಿಸಲು 10 ದಿನಗಳ ಕಾಲಾವಕಾಶ ನೀಡಿದೆ. ಅಲ್ಲದೆ, ಸರ್ಕಾರಗಳು ಪ್ರತಿಕ್ರಿಯೆ ಸಲ್ಲಿಸಿದ ನಂತರ ಒಂದು ವಾರದೊಳಗೆ ಮರು-ಉತ್ತರಗಳನ್ನು (rejoinders) ಸಲ್ಲಿಸುವಂತೆ ಅರ್ಜಿದಾರರಿಗೆ ನ್ಯಾಯಾಲಯ ಸೂಚಿಸಿದೆ.

ಅಕ್ರಮ ಬಂಧನ ಮತ್ತು ಪ್ರತಿಭಟನಾಕಾರರ ಮೇಲಿನ ಪೊಲೀಸ್ ಕ್ರಮಗಳನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳಿಗೆ ಸಂಬಂಧಿಸಿದಂತೆ ಸರ್ಕಾರಗಳಿಂದ ಇನ್ನೂ ಪ್ರತಿಕ್ರಿಯೆ ಸಲ್ಲಿಕೆಯಾಗಿಲ್ಲ ಎಂಬುದನ್ನು ನ್ಯಾಯಾಲಯದ ಗಮನಕ್ಕೆ ತಂದ ನಂತರ ಪೀಠವು ಈ ನಿರ್ದೇಶನವನ್ನು ಹೊರಡಿಸಿದೆ. ಅಕ್ಟೋಬರ್ ಪ್ರತಿಭಟನೆಯ ವೇಳೆ ಸುಪ್ರೀಂ ಕೋರ್ಟ್‌ನ ಹಿಂದಿನ ನಿರ್ದೇಶನಗಳ ಹೊರತಾಗಿಯೂ ಪ್ರತಿಭಟನಾಕಾರರು, ವಕೀಲರು ಮತ್ತು ಪತ್ರಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಆರೋಪಿಸಿ ಹಲವಾರು ಅರ್ಜಿಗಳನ್ನು ಸಲ್ಲಿಸಲಾಗಿತ್ತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜರ ಆಳ್ವಿಕೆಯ ವಿರೋಧ ಕೇವಲ ಟ್ರಂಪ್‌ಗೆ ಮಾತ್ರ ಸೀಮಿತವಲ್ಲ

2026ರ ಪರಿಸ್ಥಿತಿ ಭಿನ್ನವಾಗಿದೆ. ಈಗ ಪರಮಾಣು ಅಸ್ತ್ರಗಳು ನಮ್ಮಿಂದ ಪ್ರಜಾಸತ್ತಾತ್ಮಕವಾಗಿ ಆಯ್ಕೆಯಾದ...

ಉಮರ್ ಖಾಲಿದ್, ಶರ್ಜೀಲ್‌ಗೆ ಮತ್ತೆ ಜಾಮೀನು ನಿರಾಕರಣೆ; ತ್ರಿಸದಸ್ಯ ಪೀಠ ರಚಿಸಲಿದೆ ಸುಪ್ರೀಂ ಕೋರ್ಟ್

2020ರ ಈಶಾನ್ಯ ದೆಹಲಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನುಬಾಹಿರ ಚಟುವಟಿಕೆಗಳ (ತಡೆ)...

ವಿಚ್ಛೇದನ ಪಡೆಯದೆ ಬೇರೊಬ್ಬರೊಂದಿಗೆ ‘ಲಿವ್-ಇನ್’ ಸಂಬಂಧ ಕಾನೂನುಬಾಹಿರ: ಅಲಹಾಬಾದ್ ಹೈಕೋರ್ಟ್

ವಯಸ್ಕರು ತಮ್ಮ ಸಂಗಾತಿಯನ್ನು ಆಯ್ಕೆ ಮಾಡಿಕೊಳ್ಳುವಾಗ ಗೋತ್ರ, ಜಾತಿ ಅಥವಾ ಧರ್ಮಕ್ಕೆ...

ಕುಡಿಯುವ ನೀರಿನ ಸಮಸ್ಯೆಯಾದರೆ ಅಧಿಕಾರಿಗಳ ವಿರುದ್ಧ ಕ್ರಮ : ಸಚಿವ ಚಲುವರಾಯಸ್ವಾಮಿ ಎಚ್ಚರಿಕೆ

ಯಾವುದೇ ಗ್ರಾಮದಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾದರೆ ಸಂಬಂಧಪಟ್ಟ ತಹಸೀಲ್ದಾರ್...