‘ದುರಹಂಕಾರ’ ಪಕ್ಷವನ್ನೇ ನಾಶ ಮಾಡುತ್ತೆ: ಉದ್ಧವ್ ವಿರುದ್ಧ ಶಿವಸೇನೆ ವಕ್ತಾರ ಸಂಜಯ್ ವಾಗ್ದಾಳಿ

Date:

ಶಿವಸೇನೆ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ವಿರುದ್ಧ ಶಿವಸೇನೆ ವಕ್ತಾರ ಸಂಜಯ್ ನಿರುಪಮ್ ಮತ್ತೆ ವಾಗ್ದಾಳಿ ನಡೆಸಿದ್ದಾರೆ. “ನಾಯಕರಲ್ಲಿರುವ ದುರಹಂಕಾರ ಪಕ್ಷವನ್ನೇ ನಾಶ ಮಾಡುತ್ತದೆ. ಕಾರ್ಯಕರ್ತರು ಮತ್ತು ಚುನಾಯಿತ ಪ್ರತಿನಿಧಿಗಳೊಂದಿಗಿನ ಸಂಪರ್ಕ ಕಡಿತವಾಗಿರುವುದು ಪಕ್ಷವನ್ನು ಮತ್ತಷ್ಟು ಅವನತಿಯತ್ತ ತಳ್ಳುತ್ತಿದೆ” ಎಂದು ಹೇಳಿದ್ದಾರೆ.

- Advertisement -

ಮಹಾರಾಷ್ಟ್ರ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿರುವ “ಆಪರೇಷನ್ ಟೈಗರ್” ಊಹಾಪೋಹಗಳಿಂದಾಗಿ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ) ಪಕ್ಷವು ಪ್ರಸ್ತುತ ಅತ್ಯಂತ ಅತಂತ್ರ ಸ್ಥಿತಿಯಲ್ಲಿದೆ. ಪಕ್ಷದ ಲೋಕಸಭಾ ಸಂಸದರು ಮತ್ತು ಶಾಸಕರು ಮುಖ್ಯಮಂತ್ರಿ ಏಕನಾಥ್ ಶಿಂದೆ ನೇತೃತ್ವದ ಆಡಳಿತಾರೂಢ ಶಿವಸೇನೆ ಬಣಕ್ಕೆ ಸೇರ್ಪಡೆಯಾಗಲಿದ್ದಾರೆ ಎಂಬ ಸುದ್ದಿಗಳು ಹರಿದಾಡುತ್ತಿದೆ. ಈ ನಡುವೆ ಶಿವಸೇನೆ ವಕ್ತಾರ, ಉದ್ಧವ್ ಠಾಕ್ರೆ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗುಳಿಯದೆ, ಕರಾವಳಿ ಭಾಗದ ದಶಕಗಳ ಬೇಡಿಕೆಗಳಿಗೆ ಜೀವ ನೀಡುವ ಪ್ರಮುಖ ವೇದಿಕೆಯಾಗುವ ನಿರೀಕ್ಷೆಯಿದೆ. ರಸ್ತೆ ಮತ್ತು ಹೆದ್ದಾರಿಗಳ ದುರಸ್ತಿ, ಮಂಗಳೂರು...

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ...

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇಸ್ರೇಲ್ ಮೇಲೆ ದಾಳಿ ನಡೆಸುವ ಉದ್ದೇಶದಿಂದ ಯೆಮೆನ್‌ನ ಹೌತಿ ಪಡೆಗಳು (ಅನ್ಸಾರ್ ಅಲ್ಲಾ) ಉಡಾವಣೆ ಮಾಡುತ್ತಿರುವ ಕ್ಷಿಪಣಿಗಳು ಹಾಗೂ ಡ್ರೋನ್‌ಗಳು...

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ ಅರೇಬಿಯಾ ಮತ್ತು ಕೆಂಪು ಸಮುದ್ರದ ಭದ್ರತಾ ಸಮೀಕರಣಗಳ ಕೇಂದ್ರದಲ್ಲಿ ನಿಂತಿದ್ದಾರೆ. ಮೆಕ್ಕಾವನ್ನೇ ಗುರಿಯಾಗಿಸಿ ಡ್ರೋನ್ ಕಳುಹಿಸಲಾಗಿದೆ ಎಂಬ ಸೌದಿ ಆರೋಪದ...

ಇದನ್ನು ಓದಿದ್ದೀರಾ? ಮಹಾರಾಷ್ಟ್ರ | ಶಿಂದೆ ಬಣದಿಂದ ‘ಆಪರೇಷನ್ ಟೈಗರ್’ – ಸಂಸದರ ಸಭೆ ಕರೆದ ಉದ್ಧವ್ ಠಾಕ್ರೆ

“ಇತ್ತೀಚೆಗೆ ಶಿವಸೇನೆ(ಯುಬಿಟಿ)ಯ ಹಲವಾರು ಸಂಸದರು ಮತ್ತು ಕಾರ್ಯಕರ್ತರು ನಾಯಕರ ಬಗ್ಗೆ ಸಾರ್ವಜನಿಕವಾಗಿ ಅತೃಪ್ತಿಯನ್ನು ವ್ಯಕ್ತಪಡಿಸಿದ್ದಾರೆ. ಉದ್ಧವ್ ಠಾಕ್ರೆ ಮತ್ತು ಆದಿತ್ಯ ಠಾಕ್ರೆ ಅವರು ಪಕ್ಷದ ನಾಯಕರು. ಆದರೆ ಕಾರ್ಯಕರ್ತರಿಗೆ ಮಾತ್ರ ಸಿಗುತ್ತಿಲ್ಲ” ಎಂದು ಆರೋಪಿಸಿದ್ದಾರೆ.

ಇತ್ತೀಚಿನ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಸಹ ನಿರುಪಮ್ ಉಲ್ಲೇಖಿಸಿ, “ಶಿವಸೇನೆ (ಯುಬಿಟಿ) ನಾಯಕತ್ವವು ತಳಮಟ್ಟದ ಕಾರ್ಯಕರ್ತರನ್ನು ಸಕ್ರಿಯವಾಗಿ ತಲುಪುವಲ್ಲಿ ಅಥವಾ ಬೆಂಬಲಿಸಲು ವಿಫಲವಾಗಿದೆ. ಇದು ಪಕ್ಷದ ಕಾರ್ಯಕರ್ತರು, ಶಾಸಕರು ಮತ್ತು ಪದಾಧಿಕಾರಿಗಳಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ” ಎಂದು ಹೇಳಿದ್ದಾರೆ.

ಇನ್ನು ಆಪರೇಷನ್ ಟೈಗರ್ ಬಗ್ಗೆಯೂ ನಿರುಪಮ್ ಮಾತನಾಡಿದ್ದು, ಅದು ಬರೀ ರಾಜಕೀಯ. ಈ ಊಹಾಪೋಹದಿಂದಾಗಿ ಶಿವಸೇನೆ (ಯುಬಿಟಿ) ನಾಯಕತ್ವ ಅಸ್ಥಿರಗೊಂಡಿದೆ ಎಂದು ಪ್ರತಿಪಾದಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

6ನೇ ತರಗತಿಯಿಂದ ಮೂರು ಭಾಷಾ ನೀತಿ ಅನುಷ್ಠಾನ ಪರಿಶೀಲಿಸಿ: ಸಿಬಿಎಸ್‌ಇಗೆ ಸುಪ್ರೀಂ ಕೋರ್ಟ್‌ ಸೂಚನೆ

ಸಿಬಿಎಸ್‌ಇ ಶಾಲೆಗಳಲ್ಲಿ ಮೂರು ಭಾಷಾ ನೀತಿಯನ್ನು ಜಾರಿಗೆ ತರುವ ವಿಷಯಕ್ಕೆ ಸಂಬಂಧಿಸಿದಂತೆ...

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ...

ಬರಗಾಲದಿಂದ ನಾಡಿಗೆ ಮುಕ್ತಿ ಸಿಗಲಿ: ಗಾಣಗಾಪುರ ದತ್ತಾತ್ರೇಯನ ಮೊರೆ ಹೋದ ಸಿಎಂ ಡಿ.ಕೆ. ಶಿವಕುಮಾರ್

ರಾಜ್ಯದಲ್ಲಿ ತಲೆದೋರಿರುವ ಭೀಕರ ಬರಗಾಲದಿಂದ ಜನತೆಗೆ ಶೀಘ್ರವೇ ಮುಕ್ತಿ ಸಿಗಲಿ ಹಾಗೂ...

ಕಾನೂನುಬಾಹಿರ ನೇಮಕದ ಆರೋಪ: ಚಂದ್ರಶೇಖರನ್ ಬೆನ್ನಿಗೆ ನಿಂತ ಮಂಡಳಿ, ವಿರೋಧಿಸಿದ ನೊಯೆಲ್ ಟಾಟಾ

ಟಾಟಾ ಸನ್ಸ್ ಕಂಪನಿಯ ಆಡಳಿತ ಮಂಡಳಿಯು ಎನ್. ಚಂದ್ರಶೇಖರನ್ ಅವರನ್ನು ಅಧ್ಯಕ್ಷರನ್ನಾಗಿ...