‘ಅಹಂಕಾರಿ, ಮಹಾ ಸುಳ್ಳುಗಾರ’: ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಮಮತಾ ಕಿಡಿ

Date:

ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ವಿರೋಧಿಸಿ ಸೋಮವಾರ ಚುನಾವಣಾ ಆಯೋಗದ ಕಚೇರಿಗೆ ಭೇಟಿ ನೀಡಿದ್ದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

- Advertisement -

ಸಿಇಸಿ ಒಬ್ಬ “ಅಹಂಕಾರಿ” ಮತ್ತು “ಮಹಾ ಸುಳ್ಳುಗಾರ” ಎಂದು ಜರಿದ ಮಮತಾ, ಆಯೋಗವು ಪಶ್ಚಿಮ ಬಂಗಾಳವನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊರಗೆ ‘ರಾಮ’-ಒಳಗೆ ‘ನಾಥೂರಾಮ’: ಗಾಂಧೀಜಿಯವರ ತಾತ್ವಿಕತೆಯ ಮುಂದೆ ಬಲಪಂಥೀಯ...

ಗಾಂಧೀಜಿಯವರನ್ನು ವಿರೋಧಿಸುವ ರಾಜಕೀಯ ಪ್ರಯತ್ನಗಳು ಅವರ ವ್ಯಕ್ತಿತ್ವವನ್ನು ಕುಗ್ಗಿಸುವ ಬದಲು, ಅವರ ಆದರ್ಶಗಳ ಪ್ರಸ್ತುತತೆಯನ್ನು ಮತ್ತಷ್ಟು ಮುನ್ನೆಲೆಗೆ ತರುತ್ತಿವೆ. ಸತ್ಯ, ಅಹಿಂಸೆ, ಮಾನವೀಯತೆ, ಸಾಮಾಜಿಕ ಸಮಾನತೆ ಮತ್ತು ಗ್ರಾಮ ಸ್ವರಾಜ್ಯದ ಪರಿಕಲ್ಪನೆಗಳು ಇಂದಿಗೂ...

ಎಲ್ಲವನ್ನೂ ಕಣ್ಣುಮುಚ್ಚಿ ಪಾಲಿಸುವ ವಿಭೀಷಣನೆ ಈ ಸಮಾಜಕ್ಕೆ ಸೂಕ್ತ,...

ರಾಮಾಯಣವನ್ನು ಗೌರವಿಸುವ ನಾವು ರಾವಣನ ದೃಷ್ಟಿಕೋನದಿಂದಲೂ ಕಥೆಯನ್ನು ಓದಬೇಕು. ಈ ಕಾಲಕ್ಕೆ ರಿಟೆಲ್ಲಿಂಗ್ಸ್, ಕೌಂಟರ್ ನರೇಟಿವ್ಸ್ ಹಾಗೂ ಹ್ಯೂಮನೈಸಿಂಗ್ ಸ್ಟೋರಿಸ್ ಅಗತ್ಯತೆ ಬಹಳವಾಗಿದೆ. ಶಿವ ನಮ್ಮ ಅಚ್ಚುಮೆಚ್ಚಿನ ದೇವನಾಗಿದ್ದ. ಅವನನ್ನ ನಾವು ಅತಿಯಾಗಿ ಪ್ರೀತಿಸುತಿದ್ದೆವು....

ರಾಷ್ಟ್ರೀಯ ಶಿಕ್ಷಣ ದಿನ | ಶಿಕ್ಷಣ ಕ್ರಾಂತಿಯ ಹರಿಕಾರ-ಮೌಲಾನ...

ಮೌಲಾನಾ ಅಬುಲ್ ಕಲಾಂ ಆಜಾದ್ ಇದು ಅಪರೂಪದ ರಾಷ್ಟ್ರೀಯ ವ್ಯಕ್ತಿತ್ವ. ಅವರ ಹೆಸರು ಆಜಾದ್. ಅವರ ಕನಸು ಸ್ವತಂತ್ರ ಭಾರತ. ಅವರ ಹೋರಾಟ ರಾಷ್ಟ್ರೀಯ ಏಕತೆ. ಅವರ ನಂಬಿಕೆ ಶಿಕ್ಷಣ. ಅವರ ವೈಚಾರಿಕ...

​ಆಯೋಗದ ಕಚೇರಿಯಿಂದ ಹೊರಬಂದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ನನ್ನ ದಶಕಗಳ ರಾಜಕೀಯ ಜೀವನದಲ್ಲಿ ಇಂತಹ ಅಹಂಕಾರಿ ಆಯುಕ್ತರನ್ನು ಕಂಡಿಲ್ಲ. ಸಭೆಯಲ್ಲಿ ನಮಗೆ ಅವಮಾನ ಮಾಡಲಾಯಿತು, ನಮ್ಮ ಪ್ರಶ್ನೆಗಳಿಗೆ ಸುಳ್ಳು ಉತ್ತರಗಳನ್ನು ನೀಡಲಾಯಿತು. ಹೀಗಾಗಿ ನಾವು ಸಭೆಯನ್ನು ಬಹಿಷ್ಕರಿಸಿದೆವು,” ಎಂದು ತಿಳಿಸಿದರು.

ಬಿಜೆಪಿ ಆಡಳಿತವಿರುವ ಅಸ್ಸಾಂನಲ್ಲಿ ಎಸ್‌ಐಆರ್ ನಡೆಸದ ಆಯೋಗ, ಕೇವಲ ಬಂಗಾಳ ಮತ್ತು ತಮಿಳುನಾಡಿನಲ್ಲಿ ಈ ಪ್ರಕ್ರಿಯೆ ನಡೆಸುತ್ತಿರುವುದೇಕೆ ಎಂದು ಅವರು ಪ್ರಶ್ನಿಸಿದರು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ |ಮುಂಬಯಿ TISS ವಿದ್ಯಾರ್ಥಿಗಳ ‘ಕ್ಯಾಂಪಸ್‌ ರಾಜಕೀಯ’ ದಮನ ಸಲ್ಲದು!

​ಪೋಷಕರ ಜನನ ದಾಖಲೆಗಳನ್ನು ಕೇಳುವ ಕ್ರಮವನ್ನು ‘ಅವಾಸ್ತವಿಕ’ ಮತ್ತು ‘ತಾರತಮ್ಯದ ನಡೆ’ ಎಂದು ಟೀಕಿಸಿದ ಅವರು, “ಅದಾನಿ ಜೀ ಅಥವಾ ಸ್ವತಃ ಪ್ರಧಾನಿಯವರೂ ತಮ್ಮ ಪೋಷಕರ ಜನನ ಪ್ರಮಾಣಪತ್ರ ನೀಡಲು ಸಾಧ್ಯವೇ? ಹಳೆಯ ಕಾಲದಲ್ಲಿ ಆಸ್ಪತ್ರೆಗಳಲ್ಲಿ ಹೆರಿಗೆಗಳಾಗುತ್ತಿರಲಿಲ್ಲ,” ಎಂದು ತೀಕ್ಷ್ಣವಾಗಿ ನುಡಿದರು.

​ಎಸ್‌ಐಆರ್ ನೆಪದಲ್ಲಿ ಅಲ್ಪಸಂಖ್ಯಾತರು, ಬುಡಕಟ್ಟು ಜನಾಂಗ ಮತ್ತು ದಲಿತರನ್ನು ಗುರಿಯಾಗಿಸಲಾಗುತ್ತಿದೆ. ಯಾವುದೇ ಮುನ್ಸೂಚನೆ ಅಥವಾ ವಿಚಾರಣೆಯಿಲ್ಲದೆ ಸುಮಾರು 58 ಲಕ್ಷ ಜನರ ಹೆಸರನ್ನು ಪಟ್ಟಿಯಿಂದ ತೆಗೆದುಹಾಕಲಾಗಿದೆ. ಈ ಪ್ರಕ್ರಿಯೆಯ ಗೊಂದಲ ಮತ್ತು ಒತ್ತಡದಿಂದಾಗಿ ಬಿಎಲ್‌ಒಗಳು ಸೇರಿದಂತೆ 150ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಎಂದು ಮಮತಾ ಗಂಭೀರ ಆರೋಪ ಮಾಡಿದರು.

​”ನಾವು ನ್ಯಾಯ ಕೇಳಲು ಬಂದಿದ್ದೆವು, ಆದರೆ ಆಯೋಗವು ಬಿಜೆಪಿ ನಿರ್ದೇಶನದಂತೆ ವರ್ತಿಸುತ್ತಿದೆ,” ಎಂದು ಆಕ್ರೋಶ ವ್ಯಕ್ತಪಡಿಸಿದ ಅವರು, ಮತದಾರರ ಪಟ್ಟಿಯಿಂದ ಅನ್ಯಾಯವಾಗಿ ಹೆಸರು ಕಳೆದುಕೊಂಡ ಲಕ್ಷಾಂತರ ಜನರನ್ನು ಕರೆತಂದು, ಯಾರ ಮುಂದೆಯಾದರೂ ಅವರನ್ನು ನಾನು ಮೆರವಣಿಗೆ ಮಾಡಿಸಬಲ್ಲೆ” ಎಂದು ಸಿಎಂ ಮಮತಾ ಬ್ಯಾನರ್ಜಿ ತಿಳಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೇಶದ ಜಲಾಶಯಗಳ ಸಂಗ್ರಹ ಕುಸಿತ; ಆಹಾರ, ವಿದ್ಯುತ್ ಉತ್ಪಾದನೆಯ ಮೇಲೆ ಭಾರೀ ಹೊಡೆತ- ಕಾದಿವೆಯೇ ಕೆಟ್ಟ ದಿನಗಳು?

ನೈರುತ್ಯ ಮುಂಗಾರಿನ ತೀವ್ರ ಅಭಾವದಿಂದಾಗಿ ದೇಶದ ಪ್ರಮುಖ ಜಲಾಶಯಗಳಲ್ಲಿ ನೀರಿನ ಸಂಗ್ರಹ...

ಎಲ್ಲವನ್ನೂ ಕಣ್ಣುಮುಚ್ಚಿ ಪಾಲಿಸುವ ವಿಭೀಷಣನೆ ಈ ಸಮಾಜಕ್ಕೆ ಸೂಕ್ತ, ಪ್ರಶ್ನಿಸುವ ನಾನಲ್ಲ- ರಾವಣ

ರಾಮಾಯಣವನ್ನು ಗೌರವಿಸುವ ನಾವು ರಾವಣನ ದೃಷ್ಟಿಕೋನದಿಂದಲೂ ಕಥೆಯನ್ನು ಓದಬೇಕು. ಈ ಕಾಲಕ್ಕೆ...

ಪ್ರಣವ್ ಮುಖರ್ಜಿಯ ಪ್ರಧಾನಿ ಆಸೆ ನನಗೆ ಆಘಾತ ತಂದಿತ್ತು: ಸೋನಿಯಾ ಗಾಂಧಿ!

ಭಾರತೀಯ ರಾಜಕಾರಣದ ಅತ್ಯಂತ ಪ್ರಭಾವಿ ಹಾಗೂ ಸುದೀರ್ಘ ರಾಜಕೀಯ ಅನುಭವ ಹೊಂದಿದ್ದ...

ನಗರ ಪ್ರದೇಶಗಳಲ್ಲಿ 6 ತ್ರೈಮಾಸಿಕಗಳ ಗರಿಷ್ಠ ಮಟ್ಟಕ್ಕೆ ಏರಿದ ಯುವ ನಿರುದ್ಯೋಗ ದರ

ದೇಶದ ನಗರ ಪ್ರದೇಶಗಳಲ್ಲಿ ಉದ್ಯೋಗದ ಕೊರತೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಯುವ...