ಅರುಣಾಚಲ ಗಡಿ ವಿವಾದ: ಭಾರತ-ಚೀನಾ ಸೇನಾಧಿಕಾರಿಗಳ ಮಹತ್ವದ ಸಭೆ

Date:

ಅರುಣಾಚಲ ಪ್ರದೇಶದ ವಾಸ್ತವ ಗಡಿ ರೇಖೆಯ (LAC) ಉದ್ದಕ್ಕೂ ಉಂಟಾಗಿರುವ ಉದ್ವಿಗ್ನತೆಯನ್ನು ಶಮನಗೊಳಿಸಲು ಮತ್ತು ಚಳಿಗಾಲ ಆರಂಭವಾಗುವ ಮುನ್ನ ಗಡಿಯಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲು ಭಾರತ ಹಾಗೂ ಚೀನಾ ಸೇನಾಧಿಕಾರಿಗಳು ಎರಡನೇ ಸುತ್ತಿನ ಕಾರ್ಪ್ಸ್ ಕಮಾಂಡರ್ ಮಟ್ಟದ ಮಾತುಕತೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿವೆ.

- Advertisement -

ನವೆಂಬರ್ 8ರಂದು ದೀಪಾವಳಿಯ ಬೆನ್ನಲ್ಲೇ ಆರಂಭವಾದ ಈ ಸುದೀರ್ಘ ಮಾತುಕತೆಗಳು ಸಣ್ಣ ವಿರಾಮದೊಂದಿಗೆ ಸುಮಾರು 10 ದಿನಗಳ ಕಾಲ ನಡೆದಿವೆ. ಈ ಸಭೆಯಲ್ಲಿ ಭಾರತೀಯ ನಿಯೋಗದ ನೇತೃತ್ವವನ್ನು ನಾಗಾಲ್ಯಾಂಡ್‌ನ ದಿಮಾಪುರ ಮೂಲದ ಭಾರತೀಯ ಸೇನೆಯ 3ನೇ ಕಾರ್ಪ್ಸ್ ಜನರಲ್ ಆಫೀಸರ್ ಕಮಾಂಡಿಂಗ್ ಲೆಫ್ಟಿನೆಂಟ್ ಜನರಲ್ ಗಿರೀಶ್ ಕಾಲಿಯಾ ವಹಿಸಿದ್ದರು. ಅವರೊಂದಿಗೆ ಭಾರತೀಯ ವಿದೇಶಾಂಗ ಸಚಿವಾಲಯದ (MEA) ಪ್ರತಿನಿಧಿಗಳೂ ಭಾಗವಹಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಇಂದು ಭಗತ್ ಸಿಂಗ್ ಹೆಸರು ಬಳಸುವ ಆರ್‌ಎಸ್‌ಎಸ್ ನಾಯಕರಿಗೆ...

ಜಾತ್ಯತೀತತೆ ಮತ್ತು ಸಮಾಜವಾದದ ಬಗ್ಗೆ ಗಟ್ಟಿಯಾಗಿ ಮಾತನಾಡುತ್ತಿದ್ದ, ಕೋಮುವಾದಿ ಧೋರಣೆಗಳನ್ನು ಕಟುವಾಗಿ ವಿಮರ್ಶಿಸುತ್ತಿದ್ದ ಭಗತ್ ಸಿಂಗ್ ಅವರನ್ನು ಇಂದು ಅದೇ ಸಿದ್ಧಾಂತಗಳ ವಿರುದ್ಧ ನಿಂತಿರುವ ಬಿಜೆಪಿ, ಆರ್‌ಎಸ್‌ಎಸ್, ಎಬಿವಿಪಿ ನಾಯಕರು ತಮ್ಮ 'ಸ್ವಂತ...

ಬರಗಾಲ | ಕಾಡಿನ ಮೌನದ ಹಿಂದೆ ಅಡಗಿದೆ ಜೀವಸಂಕುಲದ...

ಒಂದು ಆನೆಗೆ ದಿನಕ್ಕೆ ನೂರಾರು ಲೀಟರ್ ನೀರು ಮತ್ತು ನೂರಾರು ಕೆ.ಜಿ. ಆಹಾರ ಬೇಕಾಗುತ್ತದೆ. ಇನ್ನು ಕಾಡಿನಲ್ಲಿರುವ ಸಾವಿರಾರು ಆನೆಗಳು, ಹುಲಿಗಳು, ಚಿರತೆಗಳು, ಜಿಂಕೆಗಳು, ಕಾಡೆಮ್ಮೆಗಳು ಸೇರಿದಂತೆ ವಿವಿಧ ವನ್ಯಜೀವಿಗಳ ಅಗತ್ಯವನ್ನು ಲೆಕ್ಕಹಾಕಿದರೆ...

ಬಾಗಲಕೋಟೆ | ಸರ್ಕಾರಿ ಮೆಡಿಕಲ್ ಕಾಲೇಜಿನಲ್ಲಿ ತರಗತಿ ಆರಂಭ;...

ಬಾಗಲಕೋಟೆ ಜಿಲ್ಲೆಯ ಜನರ ಬಹುದಿನಗಳ ನಿರೀಕ್ಷೆಗೆ ಕೊನೆಗೂ ಕಾಲ ಕೂಡಿಬಂದಿದೆ. ಬಾಗಲಕೋಟೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಯಾಗಬೇಕು ಎಂಬ ದಶಕಗಳ ಬೇಡಿಕೆಗೆ ಸಾಕಾರ ರೂಪ ಸಿಕ್ಕಿದ್ದು, ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ನಗರದ ಬಹುನಿರೀಕ್ಷಿತ...

ಇದನ್ನೂ ಓದಿ: ಅರುಣಾಚಲ ಗಡಿಯ ಹಲವೆಡೆ ಚೀನಾ ಸೇನೆ ಜೊತೆ ಸಂಘರ್ಷ ಮುಂದುವರಿಕೆ: ಐಟಿಬಿಪಿ ಮಹಾನಿರ್ದೇಶಕ

ಗಡಿಯಲ್ಲಿ ಎರಡೂ ದೇಶಗಳ ಸೈನಿಕರ ನಡುವೆ ಸಂಘರ್ಷ ಏರ್ಪಡದಂತೆ ತಡೆಯುವುದು. ಸಂವಹನ ಮಾರ್ಗಗಳನ್ನು ಸದಾ ತೆರೆದಿಡುವ ಮೂಲಕ ತಪ್ಪು ತಿಳುವಳಿಕೆಗಳನ್ನು ನಿವಾರಿಸುವುದು ಮತ್ತು ತೀವ್ರ ಚಳಿಗಾಲ ಹಾಗೂ ಹಿಮಪಾತ ಆರಂಭವಾಗುವ ಮುನ್ನ ಗಡಿಯಲ್ಲಿ ನಿಯೋಜನೆಗೊಂಡಿರುವ ಸೇನಾ ಪಡೆಗಳ ನಡುವಿನ ಒತ್ತಡವನ್ನು ಕಡಿಮೆ ಮಾಡುವುದು ಈ ಸಭೆಯ ಮುಖ್ಯ ಉದ್ದೇಶವಾಗಿದೆ.

2020ರ ಗಾಲ್ವಾನ್ ಸಂಘರ್ಷದ ನಂತರ ಪೂರ್ವ ಲಡಾಖ್‌ನಲ್ಲಿ ಆರಂಭಿಸಲಾಗಿದ್ದ ಕಾರ್ಪ್ಸ್ ಕಮಾಂಡರ್ ಮಟ್ಟದ ಮಾತುಕತೆಯ ಕಾರ್ಯವಿಧಾನವನ್ನು ಕಳೆದ ಸೆಪ್ಟೆಂಬರ್‌ನಲ್ಲಿ ಮೊದಲ ಬಾರಿಗೆ ಪೂರ್ವ ವಲಯಕ್ಕೆ (ಅರುಣಾಚಲ ಪ್ರದೇಶ) ವಿಸ್ತರಿಸಲಾಗಿತ್ತು. ಅರುಣಾಚಲ ಪ್ರದೇಶದ ಕಿಬಿತೂ ವಲಯದ ವಾಚಾ-ದಮಾಯಿ ಗಡಿ ಸಿಬ್ಬಂದಿ ಸಭೆಯ ಸ್ಥಳದಲ್ಲಿ ಸೆಪ್ಟೆಂಬರ್ 6 ಮತ್ತು 7ರಂದು ಮೊದಲ ಸುತ್ತಿನ ಮಾತುಕತೆ ನಡೆದಿತ್ತು.

ಇದನ್ನೂ ಓದಿ: ಚೀನಾ ಭೂಪಟ ಸೇರಿದ ಅರುಣಾಚಲ ಪ್ರದೇಶ: ಏನಂತಾರೆ ಪ್ರಧಾನಿ ಮೋದಿ?

ಇತ್ತೀಚೆಗೆ ಅರುಣಾಚಲ ಪ್ರದೇಶದ ಅಪ್ಪರ್ ಸುಬನ್ಸಿರಿ ಜಿಲ್ಲೆಯ ಟಕ್ಸಿಂಗ್ ಪ್ರದೇಶ ಸೇರಿದಂತೆ ಹಲವು ಕಡೆಗಳಲ್ಲಿ ಭಾರತ ಮತ್ತು ಚೀನಾ ಸೈನಿಕರು ಮುಖಾಮುಖಿಯಾಗಿದ್ದರು ಎಂದು ನಿವೃತ್ತ ಐಟಿಬಿಪಿ ಮಹಾನಿರ್ದೇಶಕ ಶತ್ರುಜೀತ್ ಕಪೂರ್ ಬಹಿರಂಗಪಡಿಸಿದ್ದರು. ಅಲ್ಲದೆ, ಅರುಣಾಚಲ ಮುಖ್ಯಮಂತ್ರಿ ಪೆಮಾ ಖಂಡು ಅವರು ಕೂಡ ಗಡಿಯಲ್ಲಿ ಚೀನಾದಿಂದ ಅತಿಕ್ರಮಣ ಪ್ರಯತ್ನಗಳು ನಡೆಯುತ್ತಿರುವುದನ್ನು ಒಪ್ಪಿಕೊಂಡಿದ್ದು, ಭಾರತೀಯ ಸೇನೆ ಗಡಿಯನ್ನು ಸಮರ್ಥವಾಗಿ ಕಾಯುತ್ತಿದೆ ಎಂದು ತಿಳಿಸಿದ್ದರು. ಆದರೆ ಕೇಂದ್ರ ಸರ್ಕಾರ ಮಾತ್ರ ನಿರಂತರವಾಗಿ ಅರುಣಾಚಲ ಪ್ರದೇಶದಲ್ಲಿ ಚೀನಾ ಆಕ್ರಮಿಸಿಕೊಂಡಿಲ್ಲ ಎಂದು ಹೇಳಿಕೊಳ್ಳುತ್ತಾ ಬಂದಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ಮೊಗೇರರಿಗೆ ಎಸ್‌ಸಿ ಪ್ರಮಾಣಪತ್ರ ನೀಡಬೇಡಿ: ಅರ್ಜುನ್ ಮಿಂಟಿ

ಉತ್ತರ ಕನ್ನಡ ಜಿಲ್ಲೆಯ ಮೀನುಗಾರ ಮೊಗೇರ್ ಸಮುದಾಯಕ್ಕೆ ಪರಿಶಿಷ್ಟ ಜಾತಿ (ಎಸ್‌ಸಿ)...

ಅನಾರೋಗ್ಯದಿಂದ 2.5 ತಿಂಗಳ ಮಗು ಸಾವು; ಮೃತದೇಹ ಮನೆಗೆ ಬರುವಷ್ಟರಲ್ಲಿ 10 ವರ್ಷದ ಅಕ್ಕ ಆತ್ಮಹತ್ಯೆ!

ಅನಾರೋಗ್ಯದಿಂದ ಬಳಲುತ್ತಿದ್ದ ತನ್ನ ಎರಡೂವರೆ ತಿಂಗಳ ಪುಟ್ಟ ತಂಗಿ ಆಸ್ಪತ್ರೆಯಲ್ಲಿ ಮೃತಪಟ್ಟ...

2027ರ ಪಂಜಾಬ್ ಚುನಾವಣೆ: ಅಮೃತಪಾಲ್ ಸಿಂಗ್ ಪಕ್ಷ, ಬಿಎಸ್‌ಪಿ ನಡುವೆ ಮೈತ್ರಿ ಕಸರತ್ತು

ಮುಂಬರುವ 2027ರ ಪಂಜಾಬ್ ವಿಧಾನಸಭಾ ಚುನಾವಣೆಗೆ ಪೂರ್ವಭಾವಿಯಾಗಿ ರಾಜ್ಯ ರಾಜಕೀಯದಲ್ಲಿ ಹೊಸ...

ಬಸವಣ್ಣನವರ ಅವಹೇಳನ; ರವಿ ಹಂಜ್ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಬಸವಪರ ಸಂಘಟನೆಗಳ ಆಗ್ರಹ

ಕರ್ನಾಟಕ ಸಾಂಸ್ಕೃತಿಕ ನಾಯಕ "ವಿಶ್ವಗುರು" ಬಸವಣ್ಣನವರನ್ನು ಅವಹೇಳನ ಮಾಡಿದ ಇಂಗ್ಲಿಷ್ ಲೇಖಕ...