ಅರುಣಾಚಲ ಪ್ರದೇಶದ ಇಟಾನಗರದಲ್ಲಿ ಹಲವು ಶಾಲಾ ಮತ್ತು ಕಾಲೇಜು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ 37 ವರ್ಷದ ಕಾಮುಕನನ್ನು ಬಂಧಿಸಿರುವುದಾಗಿ ಪೊಲೀಸರು ಗುರುವಾರ ತಿಳಿಸಿದ್ದಾರೆ. ಆದರೆ ಆರೋಪಿಯ ಹೆಸರನ್ನು ಬಹಿರಂಗಪಡಿಸಿಲ್ಲ.
ಆರೋಪಿಯು ಪಶ್ಚಿಮ ಕಮೆಂಗ್ ಜಿಲ್ಲೆಯ ದಿರಾಂಗ್‌ನ ನೂನಾ ಕ್ಯಾಂಪ್ ಗ್ರಾಮದವನಾಗಿದ್ದು, ಇಟಾನಗರ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾದ ಬಳಿಕ ಆತನನ್ನು ಬಂಧಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ರೋಹಿತ್ ರಾಜ್‌ಬೀರ್ ಸಿಂಗ್ ತಿಳಿಸಿದ್ದಾರೆ.
ಸೆಪ್ಟೆಂಬರ್ 7ರಂದು 14 ವರ್ಷದ ಬಾಲಕಿಗೆ ಆರೋಪಿ ಲೈಂಗಿಕ ಕಿರುಕುಳ ನೀಡಿದ್ದನು. ಇದಾದ ಬಳಿಕ ಆತನನ್ನು ಬಂಧಿಸಲಾಗಿದೆ. ಬಾಲಕಿಯು ಶಾಲೆಗೆ ಹೋಗುತ್ತಿದ್ದಾಗ ತನ್ನ ಸ್ಕೂಟರ್‌ನಲ್ಲಿ ಲಿಫ್ಟ್ ನೀಡಿದ್ದ ಆರೋಪಿ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಲಾಗಿದೆ.
ಇದನ್ನು ಓದಿದ್ದೀರಾ? ಮಗಳು ಕಾಣೆಯಾಗಿದ್ದಾಳೆಂದು ಅಪಹರಣ ದೂರು ನೀಡಿದ್ದ ತಂದೆ; ಆತನಿಂದಲೇ ಮಗಳ ಮೇಲೆ ಲೈಂಗಿಕ ದೌರ್ಜನ್ಯ
“ಆರೋಪಿಯು ಸ್ಕೂಟರ್ ಚಲಾಯಿಸುತ್ತಿದ್ದಾಗ ಬಾಲಕಿಯನ್ನು ಅನುಚಿತವಾಗಿ ಸ್ಪರ್ಶಿಸಿದ್ದಾನೆ. ಬಾಲಕಿ ಆತನಿಂದ ತಪ್ಪಿಸಿಕೊಳ್ಳಲು ಚಲಿಸುತ್ತಿದ್ದ ಸ್ಕೂಟರ್‌ನಿಂದ ಜಿಗಿದಿದ್ದಾಳೆ” ಎಂದು ಎಸ್‌ಪಿ ಹೇಳಿದರು.
ದೂರು ದಾಖಲಾದ ನಂತರ, ಪೊಲೀಸರು ತನಿಖೆ ನಡೆಸಿದ್ದು ಇಟಾನಗರದ ಶಾಲಾ ಮತ್ತು ಕಾಲೇಜು ವಿದ್ಯಾರ್ಥಿನಿಯರನ್ನು ಈ ಆರೋಪಿ ಗುರಿಯಾಗಿಸಿಕೊಂಡಿದ್ದ ಎಂಬ ಮಾಹಿತಿ ಬಹಿರಂಗವಾಗಿದೆ. ಈಗಾಗಲೇ ಆರೋಪಿ ಹಲವು ವಿದ್ಯಾರ್ಥಿನಿಯರಿಗೆ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ ಎಂಬುದು ತನಿಖೆಯಿಂದ ತಿಳಿದುಬಂದಿದೆ.
ಇದನ್ನು ಓದಿದ್ದೀರಾ? ಇಬ್ಬರು ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ; ಶಾಲಾ ವ್ಯಾನ್ ಚಾಲಕನ ಬಂಧನ
ಸದ್ಯ ಒಟ್ಟು 7 ವಿದ್ಯಾರ್ಥಿನಿಯರಿಗೆ ಲೈಂಗಿಕ ದೌರ್ಜನ್ಯ ನಡೆಸಿರುವುದು ತನಿಖೆಯಿಂದ ತಿಳಿದುಬಂದಿದೆ. ಈ ಪೈಕಿ ನಾಲ್ವರು ಶಾಲಾ ವಿದ್ಯಾರ್ಥಿನಿಯರಾಗಿದ್ದು ಉಳಿದ ನಾಲ್ವರು ಕಾಲೇಜು ವಿದ್ಯಾರ್ಥಿನಿಯರಾಗಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ ರೋಹಿತ್ ರಾಜ್‌ಬೀರ್ ಸಿಂಗ್ ತಿಳಿಸಿದ್ದಾರೆ.
ಇನ್ನು ಆರೋಪಿಯು ತನ್ನ ಅಪರಾಧವನ್ನು ಒಪ್ಪಿಕೊಂಡಿದ್ದು, ಇನ್ನೂ ಹಲವು ವಿದ್ಯಾರ್ಥಿಗಳಿಗೆ ಲೈಂಗಿಕ ದೌರ್ಜನ್ಯ ನಡೆಸಿರುವ ಶಂಕೆಯಿದೆ. ಈ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.
