ಕೇಜ್ರೀವಾಲ್, ಪುತ್ರಿಗೆ ಜೀವಬೆದರಿಕೆ: ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನಿಂದ 7 ಕೋಟಿ ರೂ.ಗೆ ಬೇಡಿಕೆ

Date:

ದೆಹಲಿಯ ಮಾಜಿ ಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರೀವಾಲ್ ಮತ್ತು ಅವರ ಪುತ್ರಿಗೆ ಅಪರಿಚಿತರಿಂದ ಕೊಲೆ ಬೆದರಿಕೆ ಕರೆ ಬಂದಿದೆ. ಕುಖ್ಯಾತ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಹೆಸರಿನಲ್ಲಿ ಈ ಜೀವಬೆದರಿಕೆ ಹಾಕಲಾಗಿದ್ದು, ಬರೋಬ್ಬರಿ 7 ಕೋಟಿ ರೂಪಾಯಿ ನೀಡುವಂತೆ ದುಷ್ಕರ್ಮಿಗಳು ಬೇಡಿಕೆ ಇಟ್ಟಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

- Advertisement -

​ದೆಹಲಿಯ ತಿಲಕ್ ನಗರ ಕ್ಷೇತ್ರದ ಎಎಪಿ ಶಾಸಕ ಜರ್ನೈಲ್ ಸಿಂಗ್ ಅವರಿಗೆ ಅಪರಿಚಿತ ವ್ಯಕ್ತಿಯೊಬ್ಬ ಕರೆ ಹಾಗೂ ವಾಟ್ಸ್‌ಆ್ಯಪ್ ಸಂದೇಶ ಕಳುಹಿಸಿದ್ದಾನೆ. ತಾನು ವಿದೇಶದಲ್ಲಿ ನೆಲೆಸಿರುವ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಸಕ್ರಿಯ ಸದಸ್ಯ ಎಂದು ಹೇಳಿಕೊಂಡಿರುವ ಆತ, ಕೇಜ್ರಿವಾಲ್ ಕುಟುಂಬವನ್ನು ಗುರಿಯಾಗಿಸಿ ಈ ದುಷ್ಕೃತ್ಯಕ್ಕೆ ಮುಂದಾಗಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಎಸ್‌ಐಆರ್‌ | ಪ್ರಜಾಪ್ರಭುತ್ವದ ಕಾವಲುಗಾರನಿಗೆ ʼಕನ್ನಡಕʼ ಬೇಕಿದೆ…

ತನ್ನ ನಿಷ್ಪಕ್ಷಪಾತ ಧೋರಣೆಯಿಂದಾಗಿ ಅತ್ಯುನ್ನತ ಗೌರವಕ್ಕೆ ಪಾತ್ರವಾಗಿದ್ದ ಚುನಾವಣೆ ಅಯೋಗ ಇಂದು ತನ್ನ ನಿಷ್ಪಕ್ಷಪಾತತೆಯನ್ನೇ ಜನ ಪರೀಕ್ಷೆಗೆ ಒಡ್ಡಿಕೊಂಡಿದೆ. ಆಯೋಗದ ನಿರ್ಣಯಗಳನ್ನು ಅನುಮಾನಿಸಿ ಬೀದಿ ಹೋರಾಟಗಳು, ಹರತಾಳಗಳು ಭುಗಿಲೆದ್ದಿವೆ. ಇಷ್ಟಕ್ಕೆ, ನಿಲ್ಲದೆ ಮುಖ್ಯ...

ಟ್ರಂಪ್‌ಗೆ ಮುಖಭಂಗ, ಯುರೋಪಿನಲ್ಲಿ ಆತಂಕ; ಜಗತ್ತಿನಲ್ಲಿ ಬದಲಾಗುತ್ತಿರುವ ಬಲಪಂಥೀಯ...

2026ರ ಅಮೆರಿಕ ಮತ್ತು ಬ್ರೆಜಿಲ್‌ನ ಚುನಾವಣಾ ಫಲಿತಾಂಶಗಳು ಜಾಗತಿಕ ಮಟ್ಟದಲ್ಲಿ ರಾಜಕೀಯ ಒಲವಿನ ಬದಲಾವಣೆಯನ್ನು ದೃಢಪಡಿಸಿವೆ. ಡೆಮಾಕ್ರಟರು ಸಾಧಿಸಿದ 255 ಹೌಸ್ ಮತ್ತು 54 ಸೆನೆಟ್ ಸ್ಥಾನಗಳ ಜಯ, ಹಾಗೂ ಬ್ರೆಜಿಲ್‌ನಲ್ಲಿನ ಅಧಿಕಾರ...

ಹೆಣ್ಣು-ಹಣ-ಚಾರಣ ಹಗರಣ: ಜಾಗತಿಕ ಚಿಪ್ ಸಾಮ್ರಾಜ್ಯದಲ್ಲಿ ಅಲ್ಲೋಲ ಕಲ್ಲೋಲ...

ಚಿಪ್ ಸಾಮ್ರಾಜ್ಯದ ಸಿಇಒ ಸುತ್ತ ಹೆಣೆದುಕೊಂಡಿರುವ ವಿವಾಹೇತರ ಸಂಬಂಧ, ಚೀನಿ ಚಾರಣ ಜಾಲ ಮತ್ತು ಭದ್ರತಾ ಆರೋಪಗಳು ಜಾಗತಿಕ ಮಾರುಕಟ್ಟೆಯನ್ನು ಅಲ್ಲೋಲ ಕಲ್ಲೋಲಗೊಳಿಸಿವೆ. ತಂತ್ರಜ್ಞಾನ ದೈತ್ಯರ ಒಳಸುಳಿಗಳೇನು? ಭಾರತದ ಡಿಜಿಟಲ್ ಹಾಗೂ ಸೆಮಿಕಂಡಕ್ಟರ್...

​ಈ ಗಂಭೀರ ವಿಚಾರದ ಬಗ್ಗೆ ನವೆಂಬರ್ 6ರಂದು ಪಂಜಾಬ್‌ನ ಮೊಹಾಲಿಯಲ್ಲಿ ಜರ್ನೈಲ್ ಸಿಂಗ್ ಅವರು ಪೊಲೀಸರಿಗೆ ಅಧಿಕೃತ ದೂರು ನೀಡಿದ್ದಾರೆ. 7 ಕೋಟಿ ರೂಪಾಯಿ ಹಣವನ್ನು ಕೂಡಲೇ ನೀಡದಿದ್ದರೆ ಅರವಿಂದ್ ಕೇಜ್ರಿವಾಲ್ ಹಾಗೂ ಅವರ ಪುತ್ರಿ ಹರ್ಷಿತಾ ಕೇಜ್ರಿವಾಲ್ ಅವರನ್ನು ಹತ್ಯೆ ಮಾಡುವುದಾಗಿ ಕರೆಯಲ್ಲಿ ಎಚ್ಚರಿಸಲಾಗಿದೆ ಎಂದು ಅವರು ತಮ್ಮ ದೂರಿನಲ್ಲಿ ಸವಿವರವಾಗಿ ಉಲ್ಲೇಖಿಸಿದ್ದಾರೆ.

​ಶಾಸಕರು ನೀಡಿದ ದೂರಿನ ಆಧಾರದ ಮೇಲೆ ಮೊಹಾಲಿ ಪೊಲೀಸರು ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್) ಹಾಗೂ ಮಾಹಿತಿ ತಂತ್ರಜ್ಞಾನ (ಐಟಿ) ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಪ್ರಕರಣದ ತನಿಖೆಯ ಸಂಪೂರ್ಣ ಜವಾಬ್ದಾರಿಯನ್ನು ಸೈಬರ್ ಕ್ರೈಮ್ ವಿಭಾಗದ ಅಧಿಕಾರಿ ಸುನಿಲ್ ಕುಮಾರ್ ಅವರಿಗೆ ವಹಿಸಲಾಗಿದ್ದು, ಆರೋಪಿಗಳ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

​ಬೆದರಿಕೆ ಹಾಕಲು ಬಳಸಲಾದ ಮೊಬೈಲ್ ಸಂಖ್ಯೆಯ ಕರೆ ವಿವರಗಳು (ಕಾಲ್ ರೆಕಾರ್ಡ್ಸ್), ಇಂಟರ್ನೆಟ್ ಪ್ರೋಟೋಕಾಲ್ (ಐಪಿ) ಲಾಗ್‌ಗಳು ಹಾಗೂ ಲೊಕೇಶನ್ ಡೇಟಾವನ್ನು ತನಿಖಾಧಿಕಾರಿಗಳು ತೀವ್ರವಾಗಿ ಪರಿಶೀಲಿಸುತ್ತಿದ್ದಾರೆ. ಈ ಆತಂಕಕಾರಿ ಬೆಳವಣಿಗೆಯ ಬೆನ್ನಲ್ಲೇ, ಅರವಿಂದ್ ಕೇಜ್ರೀವಾಲ್ ಮತ್ತು ಅವರ ಕುಟುಂಬಕ್ಕೆ ಸೂಕ್ತ ಹಾಗೂ ಬಿಗಿ ಭದ್ರತೆ ಒದಗಿಸುವಂತೆ ಶಾಸಕ ಜರ್ನೈಲ್ ಸಿಂಗ್ ಸರ್ಕಾರವನ್ನು ಒತ್ತಾಯಿಸಿದ್ದಾರೆ.

​ಪಂಜಾಬ್‌ನಲ್ಲಿ ಪ್ರಸ್ತುತ ಭಗವಂತ್ ಮಾನ್ ನೇತೃತ್ವದ ಎಎಪಿ ಸರ್ಕಾರವಿದ್ದು, ಇನ್ನು ಕೆಲವೇ ತಿಂಗಳುಗಳಲ್ಲಿ ವಿಧಾನಸಭೆ ಚುನಾವಣೆ ಎದುರಾಗಲಿದೆ. ಜೈಲಿನಲ್ಲಿರುವ ಬಿಷ್ಣೋಯ್, ವಿದೇಶದಲ್ಲಿರುವ ಗೋಲ್ಡಿ ಬ್ರಾರ್ ಹಾಗೂ ಇತರರ ಜೊತೆಗೂಡಿ ದೇಶಾದ್ಯಂತ ಇಂತಹ ಸುಲಿಗೆ, ಶೂಟೌಟ್ ಕೃತ್ಯಗಳನ್ನು ನಡೆಸುತ್ತಿದ್ದಾನೆ ಎಂದು ಎನ್‌ಐಎ ತಿಳಿಸಿತ್ತು. ಇದೀಗ ದೆಹಲಿಯ ಮಾಜಿ ಸಿಎಂಗೆ ಬೆದರಿಕೆ ಬಂದಿರುವುದು ತೀವ್ರ ಸಂಚಲನ ಮೂಡಿಸಿದೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕರ್ನಾಟಕದ ಬಡವರ ಜೀವನಾಡಿ: ಸಾರ್ವಕಾಲಿಕ ದಾಖಲೆ ದರ ದಾಟಿದ ಜೋಳ

​ಉತ್ತರ ಕರ್ನಾಟಕದ ಜನತೆಯ ಜೀವನಾಡಿ ಹಾಗೂ ದೈನಂದಿನ ಪ್ರಧಾನ ಆಹಾರವಾಗಿರುವ ಜೋಳದ...

ಏರ್‌ ಇಂಡಿಯಾ ವಿಮಾನಕ್ಕೆ ಹುಸಿ ಹೈಜಾಕ್ ಬೆದರಿಕೆ: ಪ್ರಯಾಣಿಕನ ಬಂಧನ

ಕೋಲ್ಕತ್ತಾದಿಂದ ಮುಂಬೈಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ (AI 2772) ಹುಸಿ...

5ನೇ ದಿನಕ್ಕೆ ಕಾಲಿಟ್ಟ ರೈತರ ಪ್ರತಿಭಟನೆ, ಹೋರಾಟದ ಸ್ಥಳದಲ್ಲೇ ವಾಸ್ತವ್ಯ

ಬಾಗಲಕೋಟೆ ಜಿಲ್ಲೆ ಮುಧೋಳ ತಾಲ್ಲೂಕಿನಲ್ಲಿ ಕಬ್ಬು ಬೆಳೆಗಾರರ ಪ್ರತಿಭಟನೆ 5ನೇ ದಿನಕ್ಕೆ...

ಹಿರಿಯೂರು ಉಪಚುನಾವಣೆ- ಕಾಂಗ್ರೆಸ್ ವಿರುದ್ಧ NDA ಅಭ್ಯರ್ಥಿ ಹೂಡಲು ಕುಮಾರಸ್ವಾಮಿ ಒಲವು

ರಾಜ್ಯ ರಾಜಕೀಯದಲ್ಲಿ ಭಾರಿ ಕುತೂಹಲ ಕೆರಳಿಸಿರುವ ಚಿತ್ರದುರ್ಗದ ಹಿರಿಯೂರು ವಿಧಾನಸಭಾ ಕ್ಷೇತ್ರದ...