ಹೈಕೋರ್ಟ್‌ನಿಂದ ಜಾಮೀನಿಗೆ ತಡೆ: ಸುಪ್ರೀಂ ಮೊರೆ ಹೋದ ಕೇಜ್ರಿವಾಲ್

Date:

ದೆಹಲಿ ಹೈಕೋರ್ಟ್ ತಮ್ಮ ಜಾಮೀನಿಗೆ ತಡೆ ನೀಡಿರುವುದನ್ನು ಪ್ರಶ್ನಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್ ಅವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.

- Advertisement -

ಕೇಜ್ರಿವಾಲ್ ಅವರು ತಿಹಾರ್ ಜೈಲಿನಿಂದ ಹೊರಬರುವ ಕೆಲವೇ ಗಂಟೆಗಳ ಮೊದಲು ಜಾರಿ ನಿರ್ದೇಶನಾಲಯ ಜಾಮೀನು ಆದೇಶವನ್ನು ಕೋರ್ಟ್​ನಲ್ಲಿ ಪ್ರಶ್ನಿಸಿತ್ತು. ನ್ಯಾಯಮೂರ್ತಿಗಳಾದ ಸುಧೀರ್ ಕುಮಾರ್ ಜೈನ್ ಮತ್ತು ರವೀಂದರ್ ದುಡೇಜಾ ಅವರ ಪೀಠದ ಮುಂದೆ ತುರ್ತು ವಿಚಾರಣೆಗಾಗಿ ವಿಚಾರಣಾ ನ್ಯಾಯಾಲಯದ ಜಾಮೀನು ಆದೇಶವನ್ನು ಪ್ರಶ್ನಿಸಿ, ಇ.ಡಿ ತನ್ನ ಅರ್ಜಿಯನ್ನು ಉಲ್ಲೇಖಿಸಿತ್ತು. ಅರ್ಜಿಯ ವಿಚಾರಣೆ ನಡೆಸುವವರೆಗೂ ವಿಚಾರಣಾ ನ್ಯಾಯಾಲಯದ ಆದೇಶದ ಪ್ರಕಾರ ಕ್ರಮ ಕೈಗೊಳ್ಳುವುದಿಲ್ಲ ಎಂದು ಹೈಕೋರ್ಟ್ ಕೇಜ್ರಿವಾಲ್ ಅವರ ಜಾಮೀನಿಗೆ ತಡೆ ನೀಡಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಈ ಸುದ್ದಿ ಓದಿದ್ದೀರಾ? ಅಬಕಾರಿ ನೀತಿ ಪ್ರಕರಣ| ಅರವಿಂದ್ ಕೇಜ್ರಿವಾಲ್ ಬಿಡುಗಡೆಗೆ ದೆಹಲಿ ಹೈಕೋರ್ಟ್ ತಡೆ

ಅಬಕಾರಿ ನೀತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕೇಜ್ರಿವಾಲ್‌ಗೆ ರೂಸ್ ಅವೆನ್ಯೂ ಕೋರ್ಟ್ ಜಾಮೀನು ನೀಡಿತ್ತು. ವಿಶೇಷ ನ್ಯಾಯಮೂರ್ತಿಗಳಾದ ನಿಯಾಯ್ ಬಿಂದು ಅವರು 1 ಲಕ್ಷ ಬಾಂಡ್ ಮೇಲೆ ಅವರಿಗೆ ಜಾಮೀನು ನೀಡಿದ್ದರು. ಜಾಮೀನು ಕೋರಿ ಕೇಜ್ರಿವಾಲ್‌ ಸಲ್ಲಿಸಿದ್ದ ಅರ್ಜಿಯ ಕುರಿತು ಪ್ರಾಸಿಕ್ಯೂಷನ್‌ ಮತ್ತು ವಕೀಲರ ವಾದವನ್ನು ಆಲಿಸಿದ ಬಳಿಕ ನ್ಯಾಯಾಧೀಶರು ಆದೇಶ ನೀಡಿದ್ದರು.

ಲೋಕಸಭೆ ಚುನಾವಣೆ ಪ್ರಚಾರಕ್ಕಾಗಿ ಸುಪ್ರೀಂ ಕೋರ್ಟ್‌ 21 ದಿನಗಳ ಮಧ್ಯಂತರ ಜಾಮೀನು ನೀಡಿತ್ತು. ಮಧ್ಯಂತರ ಜಾಮೀನು ಅವಧಿ ಮುಗಿದ ನಂತರ  ಜೂನ್​ 2ರಂದು ತಿಹಾರ್ ಜೈಲಿನಲ್ಲಿ ಕೇಜ್ರಿವಾಲ್​ ಶರಣಾಗಿದ್ದರು. ದೆಹಲಿ ಅಬಕಾರಿ ನೀತಿಯನ್ನು ರೂಪಿಸುವಾಗ ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ಇ.ಡಿ ಕೇಜ್ರಿವಾಲ್ ಅವರನ್ನು ಬಂಧಿಸಿತು. ಕೇಜ್ರಿವಾಲ್ ಅವರು ಎಎಪಿಯ ಸಂಚಾಲಕರಾಗಿದ್ದರಿಂದ ಗೋವಾದಲ್ಲಿ ಪಕ್ಷದ ಪ್ರಚಾರಕ್ಕಾಗಿ ಮದ್ಯ ಮಾರಾಟಗಾರರಿಂದ ಪಡೆದ ಹಣವನ್ನು ಬಳಸಲಾಗಿದೆ ಎಂದು ಇ.ಡಿ ಆರೋಪಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬಳಿಕ ಬಂಧನವಾಗಿದ್ದ ಕಾಂಗ್ರೆಸ್‌ ಅಭ್ಯರ್ಥಿ ಪ್ರಧಾನ್‌ಗೆ ಮಧ್ಯಂತರ ಜಾಮೀನು

2007ರ ನಂದಿಗ್ರಾಮ್ ಭೂಸ್ವಾಧೀನ ವಿರೋಧಿ ಹೋರಾಟಕ್ಕೆ ಸಂಬಂಧಿಸಿದ ಕೊಲೆ ಪ್ರಕರಣಗಳಲ್ಲಿ ಆರೋಪಿಯಾಗಿ...

1929ರ ಸೈಮನ್ ವಿರುದ್ಧದ ಹೋರಾಟದಂತೆ ‘SIR ಗೋ ಬ್ಯಾಕ್’ ಆಂದೋಲನ ನಡೆಯಬೇಕು: ಸಿಎಂ ರೇವಂತ್ ರೆಡ್ಡಿ ಕರೆ

ಮತದಾರರ ಪಟ್ಟಿಯ ಮೇಲೆ ಮೋದಿ-ಶಾ ಜೋಡಿ ಮತ್ತು ಗ್ಯಾನೇಶ್‌ ಕುಮಾರ್‌ ನಡೆಸುತ್ತಿರುವ...

‘ನಥಿಂಗ್ ನೈಸ್’: ಸಿಎಂ ವಿರುದ್ಧ ಎಚ್.ಡಿ. ಕುಮಾರಸ್ವಾಮಿ ಭೂಕಬಳಿಕೆ ಆರೋಪ

ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ...

ಅಮೇಥಿ ಸೋಲಿನ ಬಳಿಕ ಯುಪಿ ರಾಜ್ಯಸಭೆ ರೇಸ್‌ನಲ್ಲಿ ಸ್ಮೃತಿ ಇರಾನಿ; ಸಂಭಾವ್ಯ ಪಟ್ಟಿಯಲ್ಲಿ ಯಾರ್ಯಾರಿದ್ದಾರೆ?

ಉತ್ತರ ಪ್ರದೇಶದಿಂದ ಅಕ್ಟೋಬರ್ 16ರಂದು ನಡೆಯಲಿರುವ 10 ರಾಜ್ಯಸಭಾ ಸ್ಥಾನಗಳ ಚುನಾವಣೆಗೆ...