ರಾಮಮಂದಿರ ಲೂಟಿ; ಯಾರನ್ನು ರಕ್ಷಿಸಲಾಗುತ್ತಿದೆ: ಪ್ರಧಾನಿ ಮೋದಿಗೆ ಕೇಜ್ರಿವಾಲ್ ಪ್ರಶ್ನೆ

Date:

ಅಯೋಧ್ಯೆಯ ರಾಮಮಂದಿರದಲ್ಲಿ ನಡೆದ ದೇಣಿಗೆ ದುರುಪಯೋಗ ಪ್ರಕರಣದಲ್ಲಿ ಪ್ರಬಲ ವ್ಯಕ್ತಿಗಳನ್ನು ರಕ್ಷಿಸಿ, ಬಡಪಾಯಿಗಳನ್ನು ಮಾತ್ರ ಬಂಧಿಸಲಾಗಿದೆ. ಅಷ್ಟಕ್ಕೂ ರಾಮಮಂದಿರ ಲೂಟಿ ಪ್ರಕರಣದಲ್ಲಿ ಸರ್ಕಾರ ಯಾರನ್ನು ರಕ್ಷಿಸುತ್ತಿರುವುದು ಎಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಎಎಪಿ ಸಂಚಾಲಕ ಅರವಿಂದ್ ಕೇಜ್ರಿವಾಲ್ ಪ್ರಶ್ನಿಸಿದ್ದಾರೆ.

- Advertisement -

ಈ ಬಗ್ಗೆ ಗುರುವಾರ ದೆಹಲಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಕೇಜ್ರಿವಾಲ್ ಅವರು, “ಭೂ ಖರೀದಿ, ದೇವಾಲಯ ನಿರ್ಮಾಣ ಮತ್ತು ಭಕ್ತರ ದೇಣಿಗೆ ನಿರ್ವಹಣೆಯಲ್ಲಿ ಭ್ರಷ್ಟಾಚಾರ ನಡೆದಿದೆ. ಇಷ್ಟೆಲ್ಲ ನಡೆದಿದ್ದರೂ ಪ್ರಧಾನಿ ಮೋದಿ ಅವರಿಗೆ ಮಾತ್ರ ಈ ಬಗ್ಗೆ ತಿಳಿದಿರಲಿಲ್ಲ ಎಂಬುದನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ” ಎಂದು ಅನುಮಾನ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ಇದನ್ನೂ ಓದಿ: ರಾಮಮಂದಿರ ಲೂಟಿ | ಎಎಪಿಯೇ ನಿಜವಾದ ಸನಾತನ ಪಕ್ಷ: ಅರವಿಂದ್ ಕೇಜ್ರಿವಾಲ್

“ರಾಮಮಂದಿರ ಟ್ರಸ್ಟ್ ಪದಾಧಿಕಾರಿಗಳನ್ನು ಪ್ರಧಾನಿಯೇ ಆಯ್ಕೆ ಮಾಡಿಕೊಂಡಿರುವುದು. ಕೇಂದ್ರ ಗೃಹ ಸಚಿವಾಲಯದ ಅಧಿಕಾರಿಯೂ ಟ್ರಸ್ಟ್‌ನ ಭಾಗವಾಗಿದ್ದಾರೆ. ಹಾಗಿದ್ದಾಗ ಮೋದಿ ಈ ಕಳ್ಳತನವನ್ನು ತಡೆಯಲು ಕ್ರಮ ಯಾಕೆ ಕೈಗೊಂಡಿಲ್ಲ” ಎಂದು ಪ್ರಶ್ನಿಸಿದರು.

“ಎಂಟು ಮಂದಿಯನ್ನು ಬಂಧಿಸಿ ನಮ್ಮನ್ನು ಮೋಸಗೊಳಿಸಲಾಗುತ್ತಿದೆ. ನಿಜವಾದ ಅಪರಾಧಿಗಳು ಬೇರೆಯವರೇ ಇದ್ದಾರೆ. ಈ ಎಂಟು ಮಂದಿ ಕೇವಲ ಕೈಗೊಂಬೆಗಳು. ಪ್ರಧಾನಿ ಮೋದಿ ಅವರು ಯಾರನ್ನು ಉಳಿಸುತ್ತಿದ್ದಾರೆ ಮತ್ತು ಯಾಕೆ ಉಳಿಸುತ್ತಿದ್ದಾರೆ ಎಂದು ಪ್ರಶ್ನಿಸಲು ನಾನು ಬಯಸುತ್ತೇನೆ” ಎಂದು ಕೇಜ್ರಿವಾಲ್ ಹೇಳಿದರು.

ಇನ್ನು ಉತ್ತರ ಪ್ರದೇಶ ಮುಖ್ಯಮಂತ್ರಿ ಆದಿತ್ಯನಾಥ್ ಅವರ ವಿರುದ್ಧ ವಾಗ್ದಾಳಿ ನಡೆಸಿದ ದೆಹಲಿ ಮಾಜಿ ಮುಖ್ಯಮಂತ್ರಿ ಕೇಜ್ರಿವಾಲ್, “ಭಕ್ತರ ದೇಣಿಗೆಯನ್ನು ಕದಿಯುವ ಮತ್ತು ಕೋಟ್ಯಂತರ ಜನರ ಭಾವನೆಗಳಿಗೆ ನೋವುಂಟು ಮಾಡಿದ ಆರೋಪ ಹೊತ್ತಿರುವವರ ವಿರುದ್ಧ ಬುಲ್ಡೋಜರ್‌ಗಳನ್ನು ಏಕೆ ಬಳಸುತ್ತಿಲ್ಲ” ಎಂದು ಪ್ರಶ್ನಿಸಿದ್ದಾರೆ.

ರಾಮಮಂದಿರದಲ್ಲಿ ನಡೆದ ಹಗರಣವು ಸದ್ಯ ರಾಷ್ಟ್ರೀಯ ರಾಜಕೀಯದಲ್ಲಿ ತೀವ್ರ ಚರ್ಚೆಗೆ ಎಡೆಮಾಡಿಕೊಟ್ಟಿದೆ. ರಾಮಮಂದಿರವು ಸಂಪೂರ್ಣವಾಗಿ ಆರ್‌ಎಸ್‌ಎಸ್‌, ಬಿಜೆಪಿ, ಸಂಘಪರಿವಾರದ ನಿರ್ವಹಣೆಯಲ್ಲಿದ್ದವು. ಹಾಗಿದ್ದಾಗ ಅಲ್ಲೇ ಭಕ್ತರ ದೇಣಿಗೆ ದುರುಪಯೋಗವಾಗಿರುವುದು ಬಿಜೆಪಿಯ ವಿರುದ್ಧ ವಿಪಕ್ಷಗಳು ಪ್ರಹಾರ ಮಾಡಲು ಅಸ್ತ್ರ ಸಿಕ್ಕಿದ್ದಂತಾಗಿದೆ. ಈ ಹಿಂದೆಯೂ ರಾಮಮಂದಿರ ವಿಚಾರದಲ್ಲಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದ ಅರವಿಂದ್ ಕೇಜ್ರಿವಾಲ್ ನಿಜವಾದ ಸನಾತನ ಪಕ್ಷ ಎಎಪಿ ಎಂದು ಹೇಳಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಷ್ಯನ್ ಗೇಮ್ಸ್: 4 ದಶಕಗಳ ಬಳಿಕ ಮಹಿಳಾ ಹಾಕಿಯಲ್ಲಿ ಭಾರತಕ್ಕೆ ಒಲಿದ ಸುವರ್ಣ ಪದಕ

ಜಪಾನಿನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ ಭಾರತೀಯ ಮಹಿಳಾ ಹಾಕಿ...

ಬಾಗಲಕೋಟೆ | ಗಾಂಧಿ ಜಯಂತಿ ನಿಮಿತ್ತ ಕಾಂಗ್ರೆಸ್‌ನಿಂದ ಸ್ವಚ್ಛತಾ ಅಭಿಯಾನ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಜಯಂತಿ ಅಂಗವಾಗಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ...

ಧರ್ಮಸ್ಥಳದ ಸಾವಿನ ಪ್ರಮಾಣದಲ್ಲಿ ವ್ಯತ್ಯಾಸ; ನಿಜ ಪತ್ತೆಗೆ ಎಸ್‌ಐಟಿಗೆ ಸರ್ಕಾರದಿಂದ ಪೂರಕ ಬೆಂಬಲ ಅಗತ್ಯ: ಮಹಿಳಾ ಆಯೋಗದ ಅಧ್ಯಕ್ಷೆ

ಧರ್ಮಸ್ಥಳ ಅಸಹಜ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಸಾವುಗಳು...

ಅಮೆರಿಕದ ಗುಪ್ತಚರರಿಗೇ ಸುಳಿವು ನೀಡದೆ ಉಪಗ್ರಹ ಹೊಡೆದುರುಳಿಸಿದ್ದ ಭಾರತದ ಕ್ಷಿಪಣಿ

ದಶಕಗಳ ಬಳಿಕ, 2019ರಲ್ಲಿ 'ಮಿಷನ್ ಶಕ್ತಿ' ಕಾರ್ಯಾಚರಣೆಯ ಮೂಲಕ ಉಪಗ್ರಹ...