ಬಿಜೆಪಿಗೆ ಸೇರುವಂತೆ ಒತ್ತಾಯ; ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಆರೋಪ

Date:

ತಮ್ಮನ್ನು ಬಿಜೆಪಿಗೆ ಸೇರುವಂತೆ ಒತ್ತಾಯಿಸಲಾಗುತ್ತಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಆರೋಪಿಸಿದ್ದಾರೆ. ಎಎಪಿ ಶಾಸಕರನ್ನು ಖರೀದಿಸುತ್ತಿದ್ದಾರೆ ಎಂಬ ಆರೋಪಕ್ಕೆ ತನಿಖೆ ನಡೆಸುತ್ತಿರುವ ಸಂದರ್ಭದಲ್ಲಿಯೇ ದೆಹಲಿ ಸಿಎಂ ಈ ಹೇಳಿಕೆ ನೀಡಿದ್ದಾರೆ.

- Advertisement -

ದೆಹಲಿಯ ರೋಹಿಣಿಯಲ್ಲಿನ ಶಾಲೆಯೊಂದರ ಅಡಿಗಲ್ಲು ಕಾರ್ಯಕ್ರಮದಲ್ಲಿ ಮಾತನಾಡಿದ ಕೇಜ್ರಿವಾಲ್, “ಅವರು ನಮ್ಮ ವಿರುದ್ಧ ಯಾವುದೇ ಪಿತೂರಿ ನಡೆಸಬಹುದು;ನಾನು ದೃಢವಾಗಿ ನಿಂತಿದ್ದೇನೆ. ನಾನು ಯಾವುದೇ ಕಾರಣಕ್ಕೂ ಬಗ್ಗುವುದಿಲ್ಲ. ಅವರು ನನ್ನನ್ನು ಬಿಜೆಪಿ ಸೇರುವಂತೆ ಕೇಳುತ್ತಿದ್ದಾರೆ. ನಂತರ ಅವರು ನನ್ನನ್ನು ಒಂಟಿಯಾಗಿ ಮಾಡುತ್ತಾರೆ. ನಾನು ಯಾವುದೇ ಕಾರಣಕ್ಕೂ ಎಂದಿಗೂ ಬಿಜೆಪಿ ಸೇರುವುದಿಲ್ಲ ಎಂದು ಅವರಿಗೆ ಹೇಳಿದ್ದೇನೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಬಜೆಟ್‌ನಲ್ಲಿ ದೆಹಲಿಯ ಶಾಲೆಗಳಿಗೆ ಹಾಗೂ ಆಸ್ಪತ್ರೆಗಳಿಗೆ ಕೇವಲ ಶೇ.4 ರಷ್ಟು ಹಣ ನೀಡಿದೆ. ತಮ್ಮ ಸರ್ಕಾರ ಪ್ರತಿ ವರ್ಷದ ಬಜೆಟ್‌ನಲ್ಲಿ ಶೇ.40 ರಷ್ಟು ಹಣ ವ್ಯಯಿಸುತ್ತಿದ್ದೇವೆ” ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕೇಂದ್ರದ ತಾರತಮ್ಯ ನೀತಿಯನ್ನು ಪ್ರಶ್ನಿಸುವುದು ತಪ್ಪೇ?

“ಇಂದು ಎಲ್ಲ ತನಿಖಾ ಸಂಸ್ಥೆಗಳು ನಮ್ಮ ಹಿಂದೆ ಬಿದ್ದಿವೆ. ಉತ್ತಮ ಶಾಲೆಗಳನ್ನು ಕಟ್ಟಿಸಿದ್ದೆ ಮನೀಶ್ ಸಿಸೋಡಿಯಾ ಅವರ ತಪ್ಪಾಗಿದೆ. ಉತ್ತಮ ಆಸ್ಪತ್ರೆಗಳು ಹಾಗೂ ಮೊಹಲ್ಲಾ ಕ್ಲಿನಿಕ್‌ಗಳನ್ನು ನಿರ್ಮಿಸಿದ್ದೆ ಸತ್ಯೇಂದ್ರ ಜೈನ್ ತಪ್ಪಾಗಿದೆ. ಸಿಸೋಡಿಯಾ ಉತ್ತಮ ಗುಣಮಟ್ಟದ ಶಾಲೆಗಳನ್ನು ನಿರ್ಮಿಸದಿದ್ದರೆ ಅವರು ಬಂಧನವಾಗುತ್ತಿರಲಿಲ್ಲ. ಅವರು ಎಲ್ಲ ರೀತಿಯ ಪಿತೂರಿಗಳನ್ನು ನಡೆಸುತ್ತಿದ್ದಾರೆ. ಆದರೆ ಯಾವ ಕಾರಣಕ್ಕೂ ತಡೆಯಲು ಸಾಧ್ಯವಿಲ್ಲ” ಎಂದು ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಕೇಜ್ರಿವಾಲ್ ಅವರ ಶಾಸಕರ ಕುದುರೆ ವ್ಯಾಪಾರ ಹೇಳಿಕೆಯ ನಂತರ ಎಎಪಿ ಸಚಿವೆ ಅತೀಶಿ ಅವರ ಮನೆಗೆ ಶಾಸಕರ ಖರೀದಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ನೊಟೀಸ್ ನೀಡಿದ್ದಾರೆ. ಪೊಲೀಸರು ಆಗಮಿಸಿದ ಸಂದರ್ಭದಲ್ಲಿ ಅತೀಶಿ ಮನೆಯಲ್ಲಿರಲಿಲ್ಲ. ಸುತ್ತೋಲೆಯನ್ನು ಸಚಿವರ ಅಧಿಕಾರಿಗೆ ನೀಡಲಾಗಿದೆ. ಫೆ.5ರೊಳಗೆ ಘಟನೆಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡುವಂತೆ ನೊಟೀಸ್‌ನಲ್ಲಿ ತಿಳಿಸಲಾಗಿದೆ.

ದೆಹಲಿಯ ಅಪರಾಧ ದಳದ ಅಧಿಕಾರಿಗಳು ಮುಖ್ಯಮಂತ್ರಿ ಕೇಜ್ರಿವಾಲ್ ಅವರಿಗೂ ನೊಟೀಸ್ ನೀಡಿ ಮೂರು ದಿನಗಳೊಳಗೆ ಶಾಸಕರ ಕುದುರೆ ವ್ಯಾಪಾರಕ್ಕೆ ಸಂಬಂಧಿಸಿದಂತೆ ಉತ್ತರ ನೀಡುವಂತೆ ಸೂಚಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...

ವಾಹನ ದಟ್ಟಣೆಯ ಸುಳಿಯಲ್ಲಿ ಮನಾಲಿ; ಪ್ರವಾಸೋದ್ಯಮದ ಒತ್ತಡಕ್ಕೆ ನಲುಗುತ್ತಿವೆಯೇ ಬೆಟ್ಟಗಳು?

ಮುಂಗಾರು ಮಳೆ ಕಡಿಮೆಯಾಗುತ್ತಿದ್ದಂತೆ ಹಿಮಾಚಲ ಪ್ರದೇಶದ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಆಗಮನ...