ಅಬಕಾರಿ ನೀತಿ ಪ್ರಕರಣ: ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಅರವಿಂದ್ ಕೇಜ್ರಿವಾಲ್

Date:

ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಮತ್ತು ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಅಬಕಾರಿ ನೀತಿ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ಅಬಕಾರಿ ನೀತಿ ಪ್ರಕರಣದಲ್ಲಿ ತಮ್ಮನ್ನು ಖುಲಾಸೆಗೊಳಿಸಿದ ವಿಚಾರಣಾ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಸಿಬಿಐ ದೆಹಲಿ ಹೈಕೋರ್ಟ್‌ನಲ್ಲಿ ಸಲ್ಲಿಸಿದ ಮೇಲ್ಮನವಿಯನ್ನು, ಹೈಕೋರ್ಟ್‌ನ ನಿರ್ದಿಷ್ಟ ಪೀಠದಿಂದ ಬೇರೆ ಪೀಠಕ್ಕೆ ವರ್ಗಾಯಿಸುವಂತೆ ಕೋರಿ ಅರವಿಂದ್ ಕೇಜ್ರಿವಾಲ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ

- Advertisement -

ಫೆಬ್ರವರಿ 27ರಂದು ದೆಹಲಿ ರೌಸ್ ಅವೆನ್ಯೂ ಕೋರ್ಟ್, ಅಬಕಾರಿ ನೀತಿ ಪ್ರಕರಣದಲ್ಲಿ ಕೇಜ್ರಿವಾಲ್ ಮತ್ತು ಇತರರನ್ನು ಖುಲಾಸೆಗೊಳಿಸಿತ್ತು. ಈ ಆದೇಶದ ವಿರುದ್ಧ ಸಿಬಿಐ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದು, ನ್ಯಾಯಮೂರ್ತಿ ಶರ್ಮಾ ಅವರ ಪೀಠವು ಈ ಪ್ರಕರಣವನ್ನು ವಿಚಾರಣೆ ನಡೆಸುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ಇದನ್ನು ಓದಿದ್ದೀರಾ? ದೆಹಲಿ ಅಬಕಾರಿ ನೀತಿ ಪ್ರಕರಣ | ಎಎಪಿಯನ್ನು ಆರೋಪಿಯನ್ನಾಗಿ ಮಾಡುತ್ತೇವೆಂದ ಇಡಿ

ಆದರೆ ನ್ಯಾಯಮೂರ್ತಿ ಶರ್ಮಾ ಅವರ ಪೀಠವು ನಿಷ್ಪಕ್ಷಪಾತವಾಗಿ ವಿಚಾರಣೆ ನಡೆಸುವುದಿಲ್ಲ ಎಂಬ ಆತಂಕ ವ್ಯಕ್ತಪಡಿಸಿ, ಕೇಜ್ರಿವಾಲ್ ಮತ್ತು ಮನೀಶ್ ಸಿಸೋಡಿಯಾ ಅವರು ಪ್ರಕರಣ ವರ್ಗಾವಣೆಗೆ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಿಗೆ ಮನವಿ ಮಾಡಿದ್ದರು. ಆದರೆ ಈ ಮನವಿಯನ್ನು ತಿರಸ್ಕರಿಸಲಾಗಿದೆ.

ಹೈಕೋರ್ಟ್ ತಮ್ಮ ಮನವಿಯನ್ನು ತಿರಸ್ಕರಿಸಿದ ಕಾರಣ ಅರವಿಂದ್ ಕೇಜ್ರಿವಾಲ್ ಮತ್ತು ಮನೀಶ್ ಸಿಸೋಡಿಯಾ ಅವರು ಪ್ರಕರಣ ವರ್ಗಾವಣೆ ಮತ್ತು ಸಿಬಿಐ ಸಲ್ಲಿಸಿರುವ ಮೇಲ್ಮನವಿಯನ್ನು ವಿರೋಧಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.

ಏನಿದು ಅಬಕಾರಿ ನೀತಿ ಪ್ರಕರಣ?

ದೆಹಲಿ ಸರ್ಕಾರವು ಮದ್ಯ ಮಾರಾಟವನ್ನು ಸಂಪೂರ್ಣವಾಗಿ ಖಾಸಗೀಕರಣಗೊಳಿಸಲು ಅಬಕಾರಿ ನೀತಿಯನ್ನು ಜಾರಿಗೆ ತಂದಿತ್ತು. ಈ ನೀತಿ ಅಡಿಯಲ್ಲಿ ಸರ್ಕಾರಿ ಮದ್ಯದ ಮಳಿಗೆಗಳನ್ನು ಮುಚ್ಚಿ, ಖಾಸಗಿ ಸಂಸ್ಥೆಗಳಿಗೆ ಪರವಾನಗಿ ನೀಡಲು ಮುಂದಾಗಿತ್ತು. ಆದರೆ ಈ ನೀತಿಯನ್ನು ರೂಪಿಸುವಾಗ ಮತ್ತು ಜಾರಿಗೆ ತರುವಾಗ ಕೆಲವು ಮದ್ಯದ ಉದ್ಯಮಿಗಳಿಗೆ ಅನುಕೂಲ ಮಾಡಿಕೊಡಲು ಅಕ್ರಮ ಎಸಗಲಾಗಿದೆ ಮತ್ತು ಪ್ರತಿಯಾಗಿ ಲಂಚ ಪಡೆಯಲಾಗಿದೆ ಎಂಬುದು ಸಿಬಿಐ, ಇಡಿ ಆರೋಪವಾಗಿದೆ.

ಈ ಪ್ರಕರಣದಲ್ಲಿ ಆಮ್ ಆದ್ಮಿ ಪಕ್ಷದ ನಾಯಕರಾದ ಅರವಿಂದ್ ಕೇಜ್ರಿವಾಲ್, ಮನೀಶ್ ಸಿಸೋಡಿಯಾ ಮತ್ತು ಸಂಜಯ್ ಸಿಂಗ್ ಸೇರಿದಂತೆ ಹಲವರು ಬಂಧನಕ್ಕೊಳಗಾಗಿದ್ದರು. ಫೆಬ್ರವರಿಯಲ್ಲಿ ಕೋರ್ಟ್ ಈ ಪ್ರಕರಣದಲ್ಲಿ ಕೇಜ್ರಿವಾಲ್ ಮತ್ತು ಇತರ 22 ಮಂದಿಯನ್ನು ಖುಲಾಸೆಗೊಳಿಸಿದೆ. ಆದರೆ ಈ ತೀರ್ಪನ್ನು ಪ್ರಶ್ನಿಸಿ ಸಿಬಿಐ ಈಗ ಹೈಕೋರ್ಟ್ ಮೊರೆ ಹೋಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶೇಖ್‌ ಹಸೀನಾ ಪಕ್ಷದ 7 ನಾಯಕರಿಗೆ ಮರಣದಂಡನೆ

ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್‌ ಹಸೀನಾ ಅವರ ಅವಾಮಿ ಲೀಗ್‌ ಪಕ್ಷದ...

ವಂದೇ ಮಾತರಂ ಚರಣಗಳ ಮೊಟಕು: ರಾಜ್ಯ ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್​ಗೆ ಅರ್ಜಿ

ವಂದೇ ಮಾತರಂ ಗೀತೆಯ ಕೆಲವು ಚರಣಗಳನ್ನು ಮಾತ್ರ ಹಾಡುವಂತೆ ರಾಜ್ಯ ಸರ್ಕಾರ...

ರಷ್ಯಾದಿಂದ ತೈಲ ಖರೀದಿಸುತ್ತಿರುವ ಭಾರತಕ್ಕೆ ಅಮೆರಿಕದ ಶೇ.100ರಷ್ಟು ಸುಂಕದ ಬೆದರಿಕೆ

ರಷ್ಯಾ ವಿರುದ್ಧದ ನಿರ್ಬಂಧಗಳ ಮಸೂದೆಗೆ ತಿದ್ದುಪಡಿ ತಂದು, ಭಾರತ ಸೇರಿದಂತೆ ಹಲವು...

ಸಂಜೆ ಮಳೆಗೆ ಬೆಂಗಳೂರು ತತ್ತರ: ಟ್ರಾಫಿಕ್‌ನಲ್ಲಿ ಸಿಲುಕಿದ ಜನರು, 11 ಜಿಲ್ಲೆಗಳಲ್ಲಿ ಭಾರಿ ಮಳೆ ಎಚ್ಚರಿಕೆ

ಬೆಂಗಳೂರಿನಲ್ಲಿ ಸಂಜೆಯಾಗುತ್ತಿದ್ದಂತೆ ದಿಢೀರನೆ ಶುರುವಾದ ಭಾರೀ ಮಳೆಯಿಂದಾಗಿ ಸಿಲಿಕಾನ್ ಸಿಟಿಯ ಜನಜೀವನ...