ದೆಹಲಿ ಅಬಕಾರಿ ನೀತಿಯ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಗೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ನೀಡಿದೆ.
ಕೇಜ್ರಿವಾಲ್ ಅವರಿಗೆ 90 ದಿನದ ನಂತರ ಜಾಮೀನು ದೊರೆತಿದೆ. ಸುಪ್ರೀಂ ಕೋರ್ಟ್‌ನಿಂದ ಮಧ್ಯಂತರ ಜಾಮೀನು ಪಡೆದರೂ ಕೇಜ್ರಿವಾಲ್‌ಗೆ ಬಿಡುಗಡೆ ಭಾಗ್ಯವಿಲ್ಲ. ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಸಿಬಿಐ ಬಂಧಿಸಿರುವುದರಿಂದ ಅವರು ತಿಹಾರ್ ಜೈಲಿನಲ್ಲಿ ಉಳಿಯಬೇಕಾಗಿದೆ.
ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ದೀಪಂಕರ್ ದತ್ತಾ ಅವರನ್ನೊಳಗೊಂಡ ಸುಪ್ರೀಂ ಕೋರ್ಟ್‌ನ ದ್ವಿಸದಸ್ಯ ಪೀಠವು ಮೇ 17 ರಂದು ಕೇಜ್ರಿವಾಲ್ ಅವರ ಮನವಿಯ ತೀರ್ಪನ್ನು ಕಾಯ್ದಿರಿಸಿತ್ತು.
ಸುಪ್ರೀಂ ಪೀಠವು ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕೇಜ್ರಿವಾಲ್ ಅವರ ಬಂಧನ ಪ್ರಶ್ನಿಸಿ ಮಾಡಿದ ಮನವಿಯ ಬಗ್ಗೆ ಈ ವರ್ಷದ ಏಪ್ರಿಲ್‌ನಲ್ಲಿ ಜಾರಿ ನಿರ್ದೇಶನಾಲಯದಿಂದ ಪ್ರತಿಕ್ರಿಯೆ ಕೋರಿತ್ತು.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ರಾಮನಗರ ಜಿಲ್ಲೆ ಹೆಸರು ಬದಲಾವಣೆ ಯಾರಿಗಾಗಿ, ಏತಕ್ಕಾಗಿ?
ಪ್ರಕರಣದಲ್ಲಿ ತನ್ನ ಬಂಧನವನ್ನು ಎತ್ತಿಹಿಡಿದ ದೆಹಲಿ ಹೈಕೋರ್ಟ್‌ನ ಏಪ್ರಿಲ್ 9 ರ ಆದೇಶವನ್ನು ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥರು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು.
ಏತನ್ಮಧ್ಯೆ, ಸೆಪ್ಟೆಂಬರ್ 9 ರಂದು ಇ.ಡಿ ತಮಗೆ ನೀಡಲಾದ ಸಮನ್ಸ್‌ಗಳನ್ನು ಪ್ರಶ್ನಿಸಿ ಕೇಜ್ರಿವಾಲ್ ಅವರ ಅರ್ಜಿಯನ್ನು ವಿಚಾರಣೆಗೆ ದೆಹಲಿ ಹೈಕೋರ್ಟ್ ಗುರುವಾರ(ಜುಲೈ 11) ಪಟ್ಟಿ ಮಾಡಿದೆ. ನ್ಯಾಯಮೂರ್ತಿ ಪ್ರತಿಬಾ ಎಂ ಸಿಂಗ್ ನೇತೃತ್ವದ ಪೀಠವು ಸಲ್ಲಿಸಿದ ಉತ್ತರಕ್ಕೆ ಮರುಪರಿಶೀಲನೆ ಸಲ್ಲಿಸಲು ಎಎಪಿ ನಾಯಕರಿಗೆ ನಾಲ್ಕು ವಾರಗಳ ಕಾಲಾವಕಾಶ ನೀಡಿದೆ.
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇ.ಡಿ ಮಾರ್ಚ್ 21 ರಂದು ಕೇಜ್ರಿವಾಲ್ ಅವರನ್ನು ಬಂಧಿಸಿತ್ತು. ಜೂನ್ 20 ರಂದು, 1 ಲಕ್ಷ ರೂಪಾಯಿಗಳ ವೈಯಕ್ತಿಕ ಬಾಂಡ್ ಮೇಲೆ ಇಲ್ಲಿನ ವಿಚಾರಣಾ ನ್ಯಾಯಾಲಯವು ಅವರಿಗೆ ಜಾಮೀನು ನೀಡಿತು. ಆದಾಗ್ಯೂ, ಇ.ಡಿ ಮರುದಿನ ದೆಹಲಿ ಹೈಕೋರ್ಟ್‌ಗೆ ಮನವಿ ಸಲ್ಲಿಸಿದ ನಂತರ ಜಾಮೀನು ಆದೇಶವನ್ನು ರದ್ದುಗೊಳಿಸಲಾಗಿತ್ತು.
