ಅಬಕಾರಿ ನೀತಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ದಿಲ್ಲಿ ಮುಖ್ಯಮಂತ್ರಿ, ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ್ ಕೇಜ್ರಿವಾಲ್ ಇಂದು ಮಧ್ಯಂತರ ಜಾಮೀನು ದೊರೆತ ಹಿನ್ನೆಲೆಯಲ್ಲಿ, 57 ದಿನಗಳ ನಂತರ ತಿಹಾರ್ ಜೈಲಿನಿಂದ ಬಿಡುಗಡೆಯಾಗಿ ಹೊರಬಂದರು.
ಕಳೆದ ಮಾರ್ಚ್ 21ರಂದು ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದ್ದರು. ಜೈಲಿನ ಆವರಣದಲ್ಲಿ ಸೇರಿದ್ದ ನೂರಾರು ಎಎಪಿ ಕಾರ್ಯಕರ್ತರು, ಮುಖಂಡರು ಜೈಲು ಆವರಣದಲ್ಲಿ ನೆರೆದು ತಮ್ಮ ನಾಯಕನನ್ನು ಸ್ವಾಗತಿಸಿದರು.
तानाशाही का अंत करने बब्बर शेर आ गया🔥#ModiCantStopKejriwal #SatyamevJayte pic.twitter.com/563xgbYWFE
— AAP (@AamAadmiParty) May 10, 2024
ಈ ವೇಳೆ ನೆರೆದಿದ್ದವರನ್ನು ಉದ್ದೇಶಿಸಿ ಮಾತನಾಡಿದ ಕೇಜ್ರಿವಾಲ್, “ನಾನು ಆದಷ್ಟು ಬೇಗ ಬರುತ್ತೇನೆ ಎಂದು ನಿಮ್ಮಲ್ಲಿ ಹೇಳಿದ್ದೆ. ಅದೇ ರೀತಿ ಬಂದಿದ್ದೇನೆ. ನಿಮ್ಮ ನಡುವೆ ಈಗ ಬಂದಿರುವುದು ನನಗೆ ಖುಷಿ ತಂದಿದೆ. ಸುಪ್ರೀಂ ಕೋರ್ಟಿಗೂ ಧನ್ಯವಾದ ಸಲ್ಲಿಸುತ್ತೇನೆ” ಎಂದು ಹೇಳಿದರು.
“ಮೊದಲನೆಯದಾಗಿ ನಾನು ಹನುಮಾನ್ ದೇವರ ಪಾದಗಳಿಗೆ ನಮಸ್ಕರಿಸುತ್ತೇನೆ. ಹನುಮಾನ್ ಜೀ ಅವರ ಆಶೀರ್ವಾದದಿಂದಾಗಿ ನಾನು ನಿಮ್ಮೆಲ್ಲರ ನಡುವೆ ಇದ್ದೇನೆ. ದೇಶವನ್ನು ಸರ್ವಾಧಿಕಾರದಿಂದ ರಕ್ಷಿಸಲು ನಾವೆಲ್ಲರೂ ಒಗ್ಗೂಡಬೇಕಾಗಿದೆ” ಎಂದು ಹೇಳಿದರು.
बब्बर शेर की दहाड़🔥
मैंने कहा था मैं जल्दी आऊंगा, आ गया।
सबसे पहले मैं हनुमान जी के चरणों में वंदना करना चाहता हूं, हनुमान जी के आशीर्वाद से आप सबके बीच हूँ
हम सबको मिलकर तानाशाही से देश को बचाना है, मैं तन मन धन से लड़ रहा हूं और तानाशाही से संघर्ष कर रहा हूं 140 करोड़ लोगों… pic.twitter.com/k074JFQT7J
— AAP (@AamAadmiParty) May 10, 2024
“ನಾನು ನನ್ನ ದೇಹ, ಮನಸ್ಸು ಮತ್ತು ಹಣದೊಂದಿಗೆ ದೇಶದಲ್ಲಿನ ಸರ್ವಾಧಿಕಾರದ ವಿರುದ್ಧ ಹೋರಾಡುತ್ತಿದ್ದೇನೆ. 140 ಕೋಟಿ ಜನರೂ ಸರ್ವಾಧಿಕಾರದ ವಿರುದ್ಧ ಹೋರಾಡಬೇಕಾಗುತ್ತದೆ. ನಾಳೆ ಬೆಳಗ್ಗೆ 11 ಗಂಟೆಗೆ ಕನ್ನಾಟ್‌ನಲ್ಲಿರುವ ಹನುಮಾನ್ ದೇವಸ್ಥಾನಕ್ಕೆ ತೆರಳಿ ಆಶೀರ್ವಾದ ಪಡೆದು ಮಧ್ಯಾಹ್ನ 1 ಗಂಟೆಗೆ ಪಕ್ಷದ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಲಿದ್ದೇನೆ” ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಹೇಳಿಕೆ ನೀಡಿದ್ದಾರೆ.
ಅರವಿಂದ ಕೇಜ್ರಿವಾಲ್ ಅವರ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್ ವಿಭಾಗೀಯ ಪೀಠ, ಜೂನ್ 1ರವರೆಗೆ ಮಧ್ಯಂತರ ಜಾಮೀನು ನೀಡಿ ಆದೇಶಿಸಿತ್ತು. ಜೂನ್ 2ರಂದು ಮತ್ತೆ ಜೈಲು ಅಧಿಕಾರಿಗಳ ಮುಂದೆ ಶರಣಾಗಲು ಕೋರ್ಟ್ ಆದೇಶ ನೀಡಿದೆ.
ಜಸ್ಟಿಸ್ ಖನ್ನಾ ಮತ್ತು ದೀಪಾಂಕರ್ ದತ್ತ ಅವರನ್ನೊಳಗೊಂಡ ವಿಭಾಗೀಯ ಪೀಠ, ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೆ ಒಳಗಾಗಿರುವ ಅರವಿಂದ್ ಕೇಜ್ರಿವಾಲ್ ಅವರ ಜಾಮೀನು ಅರ್ಜಿಯ ವಿಚಾರಣೆ ನಡೆಸಿ ತೀರ್ಪು ನೀಡಿತ್ತು.
