57 ದಿನದ ಬಳಿಕ ಜೈಲಿನಿಂದ ಹೊರಬಂದ ಕೇಜ್ರಿವಾಲ್ : ಆಪ್ ಕಾರ್ಯಕರ್ತರಿಂದ ಸಂಭ್ರಮಾಚರಣೆ

Date:

Advertisements

ಅಬಕಾರಿ ನೀತಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ದಿಲ್ಲಿ ಮುಖ್ಯಮಂತ್ರಿ, ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ್ ಕೇಜ್ರಿವಾಲ್ ಇಂದು ಮಧ್ಯಂತರ ಜಾಮೀನು ದೊರೆತ ಹಿನ್ನೆಲೆಯಲ್ಲಿ, 57 ದಿನಗಳ ನಂತರ ತಿಹಾರ್‌ ಜೈಲಿನಿಂದ ಬಿಡುಗಡೆಯಾಗಿ ಹೊರಬಂದರು.

ಕಳೆದ ಮಾರ್ಚ್‌ 21ರಂದು ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದ್ದರು. ಜೈಲಿನ ಆವರಣದಲ್ಲಿ ಸೇರಿದ್ದ ನೂರಾರು ಎಎಪಿ ಕಾರ್ಯಕರ್ತರು, ಮುಖಂಡರು ಜೈಲು ಆವರಣದಲ್ಲಿ ನೆರೆದು ತಮ್ಮ ನಾಯಕನನ್ನು ಸ್ವಾಗತಿಸಿದರು.

ಈ ವೇಳೆ ನೆರೆದಿದ್ದವರನ್ನು ಉದ್ದೇಶಿಸಿ ಮಾತನಾಡಿದ ಕೇಜ್ರಿವಾಲ್, “ನಾನು ಆದಷ್ಟು ಬೇಗ ಬರುತ್ತೇನೆ ಎಂದು ನಿಮ್ಮಲ್ಲಿ ಹೇಳಿದ್ದೆ. ಅದೇ ರೀತಿ ಬಂದಿದ್ದೇನೆ. ನಿಮ್ಮ ನಡುವೆ ಈಗ ಬಂದಿರುವುದು ನನಗೆ ಖುಷಿ ತಂದಿದೆ. ಸುಪ್ರೀಂ ಕೋರ್ಟಿಗೂ ಧನ್ಯವಾದ ಸಲ್ಲಿಸುತ್ತೇನೆ” ಎಂದು ಹೇಳಿದರು.

Advertisements

“ಮೊದಲನೆಯದಾಗಿ ನಾನು ಹನುಮಾನ್ ದೇವರ ಪಾದಗಳಿಗೆ ನಮಸ್ಕರಿಸುತ್ತೇನೆ. ಹನುಮಾನ್ ಜೀ ಅವರ ಆಶೀರ್ವಾದದಿಂದಾಗಿ ನಾನು ನಿಮ್ಮೆಲ್ಲರ ನಡುವೆ ಇದ್ದೇನೆ. ದೇಶವನ್ನು ಸರ್ವಾಧಿಕಾರದಿಂದ ರಕ್ಷಿಸಲು ನಾವೆಲ್ಲರೂ ಒಗ್ಗೂಡಬೇಕಾಗಿದೆ” ಎಂದು ಹೇಳಿದರು.

“ನಾನು ನನ್ನ ದೇಹ, ಮನಸ್ಸು ಮತ್ತು ಹಣದೊಂದಿಗೆ ದೇಶದಲ್ಲಿನ ಸರ್ವಾಧಿಕಾರದ ವಿರುದ್ಧ ಹೋರಾಡುತ್ತಿದ್ದೇನೆ. 140 ಕೋಟಿ ಜನರೂ ಸರ್ವಾಧಿಕಾರದ ವಿರುದ್ಧ ಹೋರಾಡಬೇಕಾಗುತ್ತದೆ. ನಾಳೆ ಬೆಳಗ್ಗೆ 11 ಗಂಟೆಗೆ ಕನ್ನಾಟ್‌ನಲ್ಲಿರುವ ಹನುಮಾನ್ ದೇವಸ್ಥಾನಕ್ಕೆ ತೆರಳಿ ಆಶೀರ್ವಾದ ಪಡೆದು ಮಧ್ಯಾಹ್ನ 1 ಗಂಟೆಗೆ ಪಕ್ಷದ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಲಿದ್ದೇನೆ” ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಹೇಳಿಕೆ ನೀಡಿದ್ದಾರೆ.

ಅರವಿಂದ ಕೇಜ್ರಿವಾಲ್‌ ಅವರ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್‌ ವಿಭಾಗೀಯ ಪೀಠ, ಜೂನ್‌ 1ರವರೆಗೆ ಮಧ್ಯಂತರ ಜಾಮೀನು ನೀಡಿ ಆದೇಶಿಸಿತ್ತು. ಜೂನ್‌ 2ರಂದು ಮತ್ತೆ ಜೈಲು ಅಧಿಕಾರಿಗಳ ಮುಂದೆ ಶರಣಾಗಲು ಕೋರ್ಟ್‌ ಆದೇಶ ನೀಡಿದೆ.

ಜಸ್ಟಿಸ್‌ ಖನ್ನಾ ಮತ್ತು ದೀಪಾಂಕರ್‌ ದತ್ತ ಅವರನ್ನೊಳಗೊಂಡ ವಿಭಾಗೀಯ ಪೀಠ, ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೆ ಒಳಗಾಗಿರುವ ಅರವಿಂದ್‌ ಕೇಜ್ರಿವಾಲ್‌ ಅವರ ಜಾಮೀನು ಅರ್ಜಿಯ ವಿಚಾರಣೆ ನಡೆಸಿ ತೀರ್ಪು ನೀಡಿತ್ತು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸರ್ಕಾರದಿಂದ ನಷ್ಟ ಸರಿದೂಗಿಸಲಾಗದು, ರೈತರೇ ಕಷ್ಟಕ್ಕೆ ಒಗ್ಗಿಕೊಳ್ಳಬೇಕು: ಬಿಜೆಪಿ ನಾಯಕನ ಹೇಳಿಕೆಗೆ ತೀವ್ರ ಆಕ್ರೋಶ

ಇತ್ತೀಚಿಗೆ ಆದ ಅತಿವೃಷ್ಟಿಯಿಂದ ರೈತರಿಗೆ ಆಗಿರುವ ನಷ್ಟಕ್ಕೆ ಸರ್ಕಾರ ಪರಿಹಾರ ನೀಡಲು...

ಏನಿದು ಅನಿಲ್ ಅಂಬಾನಿ ಬ್ಯಾಂಕ್ ವಂಚನೆ? ಕ್ರಮ ಕೈಗೊಳ್ಳುತ್ತಾರ ಮೋದಿ?

ತನ್ನನ್ನು ತಾನು ದಿವಾಳಿ ಎಂದು ಘೋಷಿಸಿಕೊಂಡಿರುವ ಭಾರತದ ಭಾರೀ ಶ್ರೀಮಂತ ಉದ್ಯಮಿ...

ತೆಲಂಗಾಣ | ಅಂತರ್ಜಾತಿ ವಿವಾಹದ ಕಾರಣಕ್ಕೆ ಸಾಮಾಜಿಕ ಬಹಿಷ್ಕಾರ

ಅಂತರ್ಜಾತಿ ವಿವಾಹವಾದ ಕಾರಣಕ್ಕಾಗಿ ಕುಟುಂಬವೊಂದಕ್ಕೆ ಸಾಮಾಜಿಕ ಬಹಿಷ್ಕಾರ ಹಾಕಿದ ಪ್ರಕರಣ ತೆಲಂಗಾಣದ...

Download Eedina App Android / iOS

X