ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ತಮಗೆ ಲಭ್ಯವಾಗಿರುವ ಮಧ್ಯಂತರ ಜಾಮೀನು ಏಳು ದಿನಗಳ ಕಾಲ ವಿಸ್ತರಿಸುವಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.
ಗಂಭೀರ ಆರೋಗ್ಯ ಸಮಸ್ಯೆಯನ್ನು ಉಲ್ಲೇಖಿಸಿ ಕೇಜ್ರಿವಾಲ್ ಜಾಮೀನು ವಿಸ್ತರಣೆ ಕೋರಿದ್ದಾರೆ. ಕೇಜ್ರಿವಾಲ್ 7 ಕೆಜಿ ತೂಕ ಕಳೆದುಕೊಂಡಿದ್ದು, ಕೀಟೋನ್ ಮಟ್ಟ ಏರಿಕೆಯಾಗಿದೆ. ಈ ಕಾರಣದಿಂಆದಾಗಿ ಪಿಇಟಿ-ಸಿಟಿ ಸ್ಕ್ಯಾನ್ ಸೇರಿದಂತೆ ವೈದ್ಯಕೀಯ ಪರೀಕ್ಷೆಗಳ ಅಗತ್ಯವಿದೆ ಎಂದು ಕೇಜ್ರಿವಾಲ್ ಹೇಳಿದ್ದಾರೆ.
Delhi CM Arvind Kejriwal files a petition in the Supreme Court, seeking an extension of his interim bail by 7 days. Delhi CM Kejriwal has to undergo PET-CT scan and other tests. Kejriwal asked for 7 days to get the investigation done: Aam Aadmi Party
— ANI (@ANI) May 27, 2024
ಲೋಕಸಭೆ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಲು ಅನುಕೂಲವಾಗುವಂತೆ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್ ಈ ಹಿಂದೆ ಜೂನ್ 1ರವರೆಗೆ ಮಧ್ಯಂತರ ಜಾಮೀನು ನೀಡಿದೆ.
ಇದನ್ನು ಓದಿದ್ದೀರಾ? ಜೈಲಿಗೆ ವಾಪಸ್ ಹೋಗವುದಿಲ್ಲವೆನ್ನುವುದು ಕೇಜ್ರಿವಾಲ್ ಊಹೆ: ಸುಪ್ರೀಂ ಕೋರ್ಟ್
ಇನ್ನು ಮ್ಯಾಕ್ಸ್ ಆಸ್ಪತ್ರೆಯ ವೈದ್ಯಕೀಯ ತಂಡ ಈಗಾಗಲೇ ಕೇಜ್ರಿವಾಲ್ ಅವರ ಪ್ರಾಥಮಿಕ ಪರೀಕ್ಷೆಗಳನ್ನು ನಡೆಸಿದೆ. ಈ ಪರೀಕ್ಷೆಗಳು ಕೇಜ್ರಿವಾಲ್ ಆರೋಗ್ಯದ ಮೇಲೆ ನಿಗಾ ವಹಿಸಲು ಅಗತ್ಯವಾಗಿದೆ ಎಂದು ಮುಖ್ಯಮಂತ್ರಿಯವರ ಕಾನೂನು ಸಲಹೆಗಾರರು ಹೇಳಿದ್ದಾರೆ. ಹಾಗೆಯೇ ಅಗತ್ಯ ವೈದ್ಯಕೀಯ ಚಿಕಿತ್ಸೆ ಪಡೆಯಲು ಜಾಮೀನು ವಿಸ್ತರಿಸುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ.
ಇನ್ನು ಇತ್ತೀಚೆಗೆ ಅರವಿಂದ್ ಕೇಜ್ರಿವಾಲ್ ಅವರು ಲೋಕಸಭಾ ಚುನಾವಣೆಯಲ್ಲಿ ಎಎಪಿಗೆ ಮತ ನೀಡಿದರೆ ನಾನು ಮತ್ತೆ ಜೈಲಿಗೆ ವಾಪಸ್ ಹೋಗುವುದಿಲ್ಲ ಎಂಬ ಹೇಳಿಕೆ ನೀಡಿದ್ದರು. ಈ ಹೇಳಿಕೆ ವಿರುದ್ಧ ಜಾರಿ ನಿರ್ದೇಶನಾಲಯ ಸಲ್ಲಿಸಿದ್ದ ಅರ್ಜಿಯನ್ನು ತಳ್ಳಿ ಹಾಕಿರುವ ಸುಪ್ರೀಂ ಕೋರ್ಟ್, ಇದು ಜಾಮೀನು ನಿಯಮಗಳನ್ನು ಉಲ್ಲಂಘಿಸುವುದಿಲ್ಲ ಎಂದು ತಿಳಿಸಿದೆ.
ಇದನ್ನು ಓದಿದ್ದೀರಾ? ಮುಂದಿನ ವರ್ಷ ಮೋದಿ ನಿವೃತ್ತಿ, ಅಮಿತ್ ಶಾ ಪ್ರಧಾನಿ ಎಂದ ಕೇಜ್ರಿವಾಲ್!
ಕೇಜ್ರಿವಾಲ್ ಅವರ ಹೇಳಿಕೆ ಅವರ ವೈಯಕ್ತಿಕ ಅಭಿಪ್ರಾಯ, ಊಹೆ. ಈ ಬಗ್ಗೆ ನಾವೇನು ಹೇಳುವುದಿಲ್ಲ. ಕೇಜ್ರಿವಾಲ್ ಜೂನ್ 2ರಂದು ನ್ಯಾಯಾಲಯಕ್ಕೆ ಶರಣಾಗಬೇಕು ಎಂಬ ನಮ್ಮ ಆದೇಶ ಸ್ಪಷ್ಟವಾಗಿದೆ. ಕಾನೂನಿನ ಅನ್ವಯದಂತೆ ಕೋರ್ಟ್ ನಿರ್ಧಾರ ಕೈಗೊಂಡಿದೆ ಎಂದು ಜಾರಿ ನಿರ್ದೇಶನಾಲಯ ಪರ ವಕೀಲರಿಗೆ ಕೋರ್ಟ್ ತಿಳಿಸಿತು.