ಮಧ್ಯಂತರ ಜಾಮೀನು 7 ದಿನ ವಿಸ್ತರಿಸಲು ಕೋರಿ ಸುಪ್ರೀಂಗೆ ಕೇಜ್ರಿವಾಲ್ ಅರ್ಜಿ

Date:

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ತಮಗೆ ಲಭ್ಯವಾಗಿರುವ ಮಧ್ಯಂತರ ಜಾಮೀನು ಏಳು ದಿನಗಳ ಕಾಲ ವಿಸ್ತರಿಸುವಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಗಂಭೀರ ಆರೋಗ್ಯ ಸಮಸ್ಯೆಯನ್ನು ಉಲ್ಲೇಖಿಸಿ ಕೇಜ್ರಿವಾಲ್ ಜಾಮೀನು ವಿಸ್ತರಣೆ ಕೋರಿದ್ದಾರೆ. ಕೇಜ್ರಿವಾಲ್ 7 ಕೆಜಿ ತೂಕ ಕಳೆದುಕೊಂಡಿದ್ದು, ಕೀಟೋನ್ ಮಟ್ಟ ಏರಿಕೆಯಾಗಿದೆ. ಈ ಕಾರಣದಿಂಆದಾಗಿ ಪಿಇಟಿ-ಸಿಟಿ ಸ್ಕ್ಯಾನ್ ಸೇರಿದಂತೆ ವೈದ್ಯಕೀಯ ಪರೀಕ್ಷೆಗಳ ಅಗತ್ಯವಿದೆ ಎಂದು ಕೇಜ್ರಿವಾಲ್ ಹೇಳಿದ್ದಾರೆ.

ಲೋಕಸಭೆ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಲು ಅನುಕೂಲವಾಗುವಂತೆ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್ ಈ ಹಿಂದೆ ಜೂನ್ 1ರವರೆಗೆ ಮಧ್ಯಂತರ ಜಾಮೀನು ನೀಡಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಇದನ್ನು ಓದಿದ್ದೀರಾ?  ಜೈಲಿಗೆ ವಾಪಸ್ ಹೋಗವುದಿಲ್ಲವೆನ್ನುವುದು ಕೇಜ್ರಿವಾಲ್ ಊಹೆ: ಸುಪ್ರೀಂ ಕೋರ್ಟ್

ಇನ್ನು ಮ್ಯಾಕ್ಸ್ ಆಸ್ಪತ್ರೆಯ ವೈದ್ಯಕೀಯ ತಂಡ ಈಗಾಗಲೇ ಕೇಜ್ರಿವಾಲ್ ಅವರ ಪ್ರಾಥಮಿಕ ಪರೀಕ್ಷೆಗಳನ್ನು ನಡೆಸಿದೆ. ಈ ಪರೀಕ್ಷೆಗಳು ಕೇಜ್ರಿವಾಲ್ ಆರೋಗ್ಯದ ಮೇಲೆ ನಿಗಾ ವಹಿಸಲು ಅಗತ್ಯವಾಗಿದೆ ಎಂದು ಮುಖ್ಯಮಂತ್ರಿಯವರ ಕಾನೂನು ಸಲಹೆಗಾರರು ಹೇಳಿದ್ದಾರೆ. ಹಾಗೆಯೇ ಅಗತ್ಯ ವೈದ್ಯಕೀಯ ಚಿಕಿತ್ಸೆ ಪಡೆಯಲು ಜಾಮೀನು ವಿಸ್ತರಿಸುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ.

ಇನ್ನು ಇತ್ತೀಚೆಗೆ ಅರವಿಂದ್ ಕೇಜ್ರಿವಾಲ್ ಅವರು ಲೋಕಸಭಾ ಚುನಾವಣೆಯಲ್ಲಿ ಎಎಪಿಗೆ ಮತ ನೀಡಿದರೆ ನಾನು ಮತ್ತೆ ಜೈಲಿಗೆ ವಾಪಸ್‌ ಹೋಗುವುದಿಲ್ಲ ಎಂಬ ಹೇಳಿಕೆ ನೀಡಿದ್ದರು. ಈ ಹೇಳಿಕೆ ವಿರುದ್ಧ ಜಾರಿ ನಿರ್ದೇಶನಾಲಯ ಸಲ್ಲಿಸಿದ್ದ ಅರ್ಜಿಯನ್ನು ತಳ್ಳಿ ಹಾಕಿರುವ ಸುಪ್ರೀಂ ಕೋರ್ಟ್, ಇದು ಜಾಮೀನು ನಿಯಮಗಳನ್ನು ಉಲ್ಲಂಘಿಸುವುದಿಲ್ಲ ಎಂದು ತಿಳಿಸಿದೆ.

ಇದನ್ನು ಓದಿದ್ದೀರಾ? ಮುಂದಿನ ವರ್ಷ ಮೋದಿ ನಿವೃತ್ತಿ, ಅಮಿತ್ ಶಾ ಪ್ರಧಾನಿ ಎಂದ ಕೇಜ್ರಿವಾಲ್!

ಕೇಜ್ರಿವಾಲ್‌ ಅವರ ಹೇಳಿಕೆ ಅವರ ವೈಯಕ್ತಿಕ ಅಭಿಪ್ರಾಯ, ಊಹೆ. ಈ ಬಗ್ಗೆ ನಾವೇನು ಹೇಳುವುದಿಲ್ಲ. ಕೇಜ್ರಿವಾಲ್ ಜೂನ್‌ 2ರಂದು ನ್ಯಾಯಾಲಯಕ್ಕೆ ಶರಣಾಗಬೇಕು ಎಂಬ ನಮ್ಮ ಆದೇಶ ಸ್ಪಷ್ಟವಾಗಿದೆ. ಕಾನೂನಿನ ಅನ್ವಯದಂತೆ ಕೋರ್ಟ್ ನಿರ್ಧಾರ ಕೈಗೊಂಡಿದೆ ಎಂದು ಜಾರಿ ನಿರ್ದೇಶನಾಲಯ ಪರ ವಕೀಲರಿಗೆ ಕೋರ್ಟ್ ತಿಳಿಸಿತು.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

18ನೇ ಲೋಕಸಭೆ | ಸಂಸದರಾಗಿ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಕರ್ನಾಟಕದ ಕೇಂದ್ರ ಸಚಿವರು

ಕೇಂದ್ರ ಸಚಿವರಾಗಿ ನೇಮಕಗೊಂಡಿರುವ ರಾಜ್ಯದ ಸಂಸದರಾದ ಹೆಚ್.ಡಿ ಕುಮಾರಸ್ವಾಮಿ, ಪ್ರಲ್ಹಾದ್ ಜೋಶಿ,...

ರಕ್ತದೊತ್ತಡ, ಸಕ್ಕರೆ ಪ್ರಮಾಣ ಇಳಿಕೆ; ಆದರೆ ಅನಿರ್ದಿಷ್ಟಾವಧಿ ಉಪವಾಸ ಮುಂದುವರಿಸುತ್ತೇನೆ: ಅತಿಶಿ

ರಕ್ತದೊತ್ತಡ, ಸಕ್ಕರೆ ಪ್ರಮಾಣ ಇಳಿಕೆಯಾಗುತ್ತಿದೆ, ಆದರೆ ದೆಹಲಿಯ 28 ಲಕ್ಷ ಜನರಿಗೆ...

ಭರ್ತೃಹರಿ ಮಹತಾಬ್ ಲೋಕಸಭೆಯ ಹಂಗಾಮಿ ಸ್ಪೀಕರ್ ಆಗಿ ಪ್ರಮಾಣ ವಚನ: ವಿಪಕ್ಷಗಳ ವಿರೋಧ

ವಿಪಕ್ಷಗಳ ತೀವ್ರ ವಿರೋಧದ ನಡುವೆ ಬಿಜೆಪಿ ಸಂಸದ ಭರ್ತೃಹರಿ ಮಹತಾಬ್‌ ಅವರು...

ತಮಿಳುನಾಡು ಕಳ್ಳಭಟ್ಟಿ ಸಾರಾಯಿ ದುರಂತ ಅಣ್ಣಾಮಲೈ ಪಿತೂರಿ: ಡಿಎಂಕೆ ನಾಯಕ ಆರೋಪ

ತಮಿಳುನಾಡಿನ ಕಲ್ಲಾಕುರಿಚಿಯಲ್ಲಿ ನಡೆದ ಕಳ್ಳಭಟ್ಟಿ ಸಾರಾಯಿ ದುರಂತದಲ್ಲಿ ಸಾವಿಗೆ ಬಿಜೆಪಿಯೇ ಹೊಣೆ,...